< ಅರಣ್ಯಕಾಂಡ 5 >

1 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
上主訓示梅瑟說:「
2 “ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.
你命以色列子民把患任何癩病、任何淋病及所有為死屍沾染不潔的人送出營外,
3 ಅಂಥವರು ಗಂಡಸರೇ ಆಗಲಿ ಅಥವಾ ಹೆಂಗಸರೇ ಆಗಲಿ, ಅವರೆಲ್ಲರನ್ನೂ ಪಾಳೆಯದಿಂದ ಹೊರಗೆಹಾಕಬೇಕು. ನಾನೇ ಅವರ ಪಾಳೆಯದಲ್ಲಿ ವಾಸವಾಗಿರುವುದರಿಂದ ಅವರು ಅದನ್ನು ಅಪವಿತ್ರ ಮಾಡಬಾರದು.”
不論男女,都應送到營外去,免得我住在他們中的營幕沾染不潔。」
4 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಹಾಗೆಯೇ ಮಾಡಿದರು. ಇಸ್ರಾಯೇಲರು ಯೆಹೋವನಿಗೆ ವಿಧೇಯರಾಗಿ ಅಶುದ್ಧರಾದವರನ್ನೆಲ್ಲಾ ಪಾಳೆಯದಿಂದ ಹೊರಗೆ ಕಳುಹಿಸಿದರು.
以色列子民就如此做了,將他們送到營外;上主怎樣吩咐了梅瑟,以色列子民就怎樣做了。
5 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
上主訓示梅瑟說:
6 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ,
「你訓令以色列子民:不論男女,對近人作了什麼不義的事,因此得罪上主而自覺有罪,
7 ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು. ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಸೇರಿಸಿ ಕೊಡಬೇಕು.
他該承認自己所作的不義,除賠償全部損失外,還應另加五分之一給他所害的人。
8 “ಆದರೆ ದಂಡವನ್ನು ತೆಗೆದುಕೊಳ್ಳುವವನು ಮೃತನಾಗಿ ಅವನ ಸಂಬಂಧಿಕರು ಯಾರೂ ಇಲ್ಲದಿದ್ದರೆ, ಆ ದ್ರವ್ಯವು ಯೆಹೋವನಿಗೆ ಸೇರಬೇಕು. ಆ ದ್ರವ್ಯ ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತದ ಟಗರು ಈ ಎರಡೂ ಯಾಜಕನಿಗೆ ಸೇರಬೇಕು.
若此人沒有近親可向他賠償,這賠償就歸上主,屬於司祭。此外尚應獻一贖罪的公綿羊,為自己贖罪。
9 ಇಸ್ರಾಯೇಲರು ಪರಿಶುದ್ಧವಾದ ವಸ್ತುಗಳಿಂದ ಪ್ರತ್ಯೇಕಿಸಿ ತರುವ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು.
以色列子民在奉獻的各種聖物中,凡是給司祭的獻儀,即歸於司祭。
10 ೧೦ ಪ್ರತಿ ಮನುಷ್ಯನು ಯೆಹೋವನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದು ಒಪ್ಪಿಸುತ್ತಾನೋ ಅದು ಆ ಯಾಜಕನದ್ದಾಗಿರುತ್ತದೆ.”
每人所奉獻的聖物,應歸自己;但人給與司祭的,應歸於司祭。」
11 ೧೧ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
上主訓示梅瑟說:「
12 ೧೨ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ‘ಯಾರ ಹೆಂಡತಿ ತಪ್ಪು ದಾರಿ ಹಿಡಿದು ಗಂಡನಿಗೆ ಅಪನಂಬಿಗಸ್ತಳಾಗಿ,
你告訴以色列子民說:若某人的妻子背離丈夫,
13 ೧೩ ಯಾರ ಕೈಗೆ ಸಿಕ್ಕದೆಯೂ ಸಾಕ್ಷಿ ಇಲ್ಲದೆಯೂ ರಹಸ್ಯವಾಗಿಯೇ ಪರಪುರುಷನೊಡನೆ ಸಂಗಮಿಸಿ ಗಂಡನಿಗೆ ದ್ರೋಹಿಯಾಗಿ ಅಶುದ್ಧಳಾದ ಸಂದರ್ಭದಲ್ಲಿ,
對他不忠,瞞著丈夫讓人與她同睡交媾,在暗中玷污了自己,又沒有見證,也沒有被捉住,
14 ೧೪ ಅಥವಾ ಅವಳು ಹಾಗೆ ಮಾಡದೆ ಅಶುದ್ಧಳಾಗದ ಸಂದರ್ಭದಲ್ಲಿಯೂ, ಆಕೆಯು ಕೆಟ್ಟುಹೋದಳೆಂಬ ಸಂಶಯ ಗಂಡನಿಗೆ ಬಂದರೆ,
若丈夫心生疑忌,疑忌他的妻子受了玷污;或者心生疑忌疑忌他的妻子,但她實在沒有受玷污;
15 ೧೫ ಆಗ ಅವನು ಮಾಡಬೇಕಾದದ್ದೇನೆಂದರೆ, ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು ಮತ್ತು ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಮತ್ತು ಪಾಪವನ್ನು ಹೊರಪಡಿಸುವುದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದುದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.
丈夫就應帶他的妻子到司祭前,為她獻祭,獻十分之一「厄法」的大麥粉,其上不可倒油,也不可加乳香,因為這是因疑忌所獻的素祭,是一回憶罪過的素祭。
16 ೧೬ “‘ಯಾಜಕನು ಅವಳನ್ನು ಕರೆದು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಬೇಕು.
司祭令她前來,站在上主面前;
17 ೧೭ ಯಾಜಕನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.
然後用陶器取些聖水,再由會幕地上取些塵土,放入水內。
18 ೧೮ ಯಾಜಕನು ಆ ಸ್ತ್ರೀಯನ್ನು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಯ ಮೇಲಿರುವ ಮುಸುಕನ್ನು ತೆಗೆದು, ಕೂದಲನ್ನು ಕೆದರಿಸಿ ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿ ಇಟ್ಟು, ಶಾಪವನ್ನುಂಟುಮಾಡುವ ವಿಷಕರವಾದ ಆ ನೀರನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.
司祭叫這女人站在上主面前,鬆開她的頭髮,將回憶的素祭品,即為疑忌所獻的素祭品,放在她的掌上,司祭手內拿著給人招致咒罵的苦水,
19 ೧೯ ಯಾಜಕನೂ ಅವಳಿಂದ ಪ್ರಮಾಣಮಾಡಿಸಿ ಹೀಗೆ ಹೇಳಬೇಕು, “ಒಬ್ಬ ಪರಪುರುಷನ ಸಂಗಮಮಾಡದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೇ ನಿರಪರಾಧಿಯಾಗಿದ್ದರೆ ಶಪಿಸಲ್ಪಟ್ಟ ವಿಷಕರವಾದ ಈ ನೀರು ನಿನಗೆ ಯಾವ ಹಾನಿಯನ್ನು ಮಾಡುವುದಿಲ್ಲ.
然後司祭命那女人起誓,對她說:「若沒有人與你同睡,若你沒有背離丈夫受玷污,願這招致咒罵的苦水於你無害。
20 ೨೦ ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಪರಪುರುಷನೊಡನೆ ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನೊಡನೆ ನೀನು ಸಂಗಮಿಸಿದ್ದರೆ,”
但是,如果你背離了丈夫受了玷污,讓丈夫以外的男人與你同睡,──
21 ೨೧ “ಯೆಹೋವನು ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ, ನಿನ್ನ ಹೊಟ್ಟೆಯು ಉಬ್ಬುವಂತೆ ಮಾಡಿ ನಿನ್ನನ್ನು ನಿನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳನ್ನಾಗಿ ನೇಮಿಸಲಿ.
在此司祭叫那女人以詛咒的誓辭起誓,然後對她說:──願上主使你在你民族中成為可咒罵和詛咒的人,使你大腿萎縮,使你肚腹腫脹,
22 ೨೨ ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆಯು ಉಬ್ಬುವಂತೆ ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿ ಹೋಗುವಂತೆ ಮಾಡುವುದು.” ಅದಕ್ಕೆ ಆ ಸ್ತ್ರೀಯು, “ನಾನು ಅಪರಾಧಿಯಾಗಿದ್ದರೆ ಹಾಗೆಯೇ ಆಗಲಿ” ಎಂದು ಹೇಳಬೇಕು.
願這招致咒罵的水進入你的五臟,使你肚腹腫脹,使你大腿萎縮! 」女人答說:「阿們、阿們。」
23 ೨೩ “‘ಇದಲ್ಲದೆ ಯಾಜಕನು ಈ ಶಾಪವಚನಗಳನ್ನು ಸುರುಳಿಯಲ್ಲಿ ಬರೆದು, ವಿಷಕರ ಜಲದಲ್ಲಿ ಆ ಶಾಪವಚನವನ್ನು ತೊಳೆಯಬೇಕು.
隨後司祭將這些咒文寫在紙上,用苦水洗去,
24 ೨೪ ಶಾಪವನ್ನುಂಟುಮಾಡುವ ವಿಷಕರವಾದ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ವಿಷಕರವಾಗುವುದು.
令女人喝這招致咒罵的苦水。這招致咒罵的水一進入她內,就給她帶來苦楚。
25 ೨೫ ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ವ್ಯಭಿಚಾರದ ಸಂಶಯ ಸೂಚಕವಾದ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವನ ಸಮ್ಮುಖದಲ್ಲಿ ನೈವೇದ್ಯಮಾಡಿ ಯಜ್ಞವೇದಿಯ ಹತ್ತಿರ ತರಬೇಕು.
司祭再由這女人的手內,接過為疑忌所獻的素祭祭品,在上主面前行過搖禮後,放在祭壇上;
26 ೨೬ ಆಗ ಯಾಜಕನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಕಾಣಿಕೆಯಿಂದ ಒಂದು ಹಿಡಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಆ ನೀರನ್ನು ಸ್ತ್ರೀಗೆ ಕುಡಿಸಬೇಕು.
再由這素祭祭品內取出一把來作為紀念,放在祭壇上焚燒;以後,纔令女人喝這水。
27 ೨೭ ಅವಳು ಅಶುದ್ಧಳಾಗಿ ಗಂಡನಿಗೆ ದ್ರೋಹಮಾಡಿದವಳಾಗಿದ್ದರೆ ಆ ನೀರನ್ನು ಕುಡಿದ ನಂತರ ಆ ನೀರು ಅವಳೊಳಗೆ ಸೇರಿ ವಿಷವಾಗುವುದರಿಂದ ಅವಳ ಹೊಟ್ಟೆ ಉಬ್ಬುವುದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು. ಆಗ ಆ ಸ್ತ್ರೀಯು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗುವಳು.
司祭命她喝水以後,事必靈驗:如果她受了玷污,對丈夫不忠,這招致咒罵的水一進入她內,就給她帶來苦楚;她的肚腹必腫脹,大腿必萎縮;這女人在她的民族中,必成為可咒罵的人。
28 ೨೮ ಆದರೆ ಆ ಸ್ತ್ರೀಯು ಪರಿಶುದ್ಧಳಾಗಿ ನಿರಪರಾಧಿಯಾದ ಪಕ್ಷಕ್ಕೆ ಯಾವ ಹಾನಿಯನ್ನು ಅನುಭವಿಸದೆ ಸಂತಾನವನ್ನು ಪಡೆಯುವಳು.
但是,如果這女人沒有受玷污,而是貞潔的,就不致受害,反要生育子女。
29 ೨೯ ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾದರೆ ಇಂತಹ ವ್ಯಭಿಚಾರದ ಸಂಶಯವನ್ನು ಪರಿಹರಿಸುವ ನಿಯಮ ಇದೇ.
這是關於疑忌事的法律:幾時一個婦人,背離丈夫,受了玷污;
30 ೩೦ ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯ ಪಟ್ಟರೆ ಅವನು ಅವಳನ್ನು ಯೆಹೋವನ ಸಮ್ಮುಖದಲ್ಲಿ ತಂದು ನಿಲ್ಲಿಸಬೇಕು. ಯಾಜಕನು ಅವಳ ವಿಷಯದಲ್ಲಿ ಈ ವಿಧಿನಿಯಮವನ್ನು ನೆರವೇರಿಸಬೇಕು.
或是一個男人心生疑忌,疑忌自己的妻子,他應帶妻子站在上主面前,司祭應對她執行這法律所規定的一切。
31 ೩೧ ಆಗ ಗಂಡನು ನಿರಪರಾಧಿಯಾಗುವನು. ಆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.’”
如此,男人可免無罪,女人應自負罪債。」

< ಅರಣ್ಯಕಾಂಡ 5 >