< ಅರಣ್ಯಕಾಂಡ 7 >
1 ೧ ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ, ಅದರ ಸಾಮಾನುಗಳನ್ನೂ, ಯಜ್ಞವೇದಿಯನ್ನೂ ಮತ್ತು ಯಜ್ಞವೇದಿಯ ಉಪಕರಣಗಳನ್ನೂ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು.
Toen Moses gereed was gekomen met het oprichten van de tabernakel, en hem, met al wat er bij hoorde, had gezalfd en gewijd, en eveneens het altaar met heel zijn toebehoren had gezalfd en gewijd,
2 ೨ ಆ ದಿನದಲ್ಲಿ ಇಸ್ರಾಯೇಲರ ಪ್ರಧಾನ ಪುರುಷರು ಅಂದರೆ ಗೋತ್ರದ ಪ್ರಮುಖರು, ಕುಲಾಧಿಪತಿಗಳು, ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು.
kwamen de aanvoerders van Israël naderbij. Het waren de familie- en stamhoofden, die over de gemonsterden stonden.
3 ೩ ಅವರು ಆರು ಕಮಾನು ಬಂಡಿಯನ್ನೂ ಮತ್ತು ಹನ್ನೆರಡು ಎತ್ತುಗಳನ್ನೂ ಯೆಹೋವನ ಸನ್ನಿಧಿಗೆ ಕಾಣಿಕೆಯಾಗಿ ತಂದರು. ನಾಯಕರಾದ ಇಬ್ಬರಿಬ್ಬರೂ ಒಂದು ಕಮಾನು ಬಂಡಿಯನ್ನೂ, ಪ್ರತಿ ನಾಯಕನು ಒಂದು ಜೋಡಿ ಎತ್ತನ್ನೂ, ದೇವದರ್ಶನ ಗುಡಾರದ ಮುಂದೆ ತಂದರು. ಹೀಗೆ ಆರು ಜೊತೆ ಬಂಡಿ ಆರು ಜೊತೆ ಎತ್ತುಗಳನ್ನು ತಂದು ಅರ್ಪಿಸಿದರು.
Zij brachten als hun gaven voor het aanschijn van Jahweh zes overdekte wagens en twaalf runderen; twee aanvoerders telkens één wagen en ieder één rund. Toen zij ze voor de tabernakel hadden gebracht,
4 ೪ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
sprak Jahweh tot Moses:
5 ೫ “ನೀನು ಇವರ ಕೈಯಿಂದ ಈ ಕಾಣಿಕೆಯ ವಸ್ತುಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಸೇವೆಗಾಗಿ ಉಪಯೋಗಿಸು. ಕಾಣಿಕೆಯನ್ನು ಲೇವಿಯರಿಗೆ ಅವರವರ ಕೆಲಸಕ್ಕೆ ತಕ್ಕ ಹಾಗೆ ಕೊಡಬೇಕು” ಎಂದು ಆಜ್ಞಾಪಿಸಿದನು.
Neem ze van hen aan; ze moeten voor de dienst van de openbaringstent worden bestemd, en ge moet ze aan de Levieten geven, naar gelang ieder ze voor zijn werk nodig heeft.
6 ೬ ಮೋಶೆ ಆ ಬಂಡಿಗಳನ್ನೂ ಮತ್ತು ಎತ್ತುಗಳನ್ನೂ ತೆಗೆದುಕೊಂಡು ಲೇವಿಯರಿಗೆ ಕೊಟ್ಟನು.
Moses nam dus de wagens en de runderen aan, en gaf ze aan de Levieten.
7 ೭ ಅವನು ಗೇರ್ಷೋನ್ಯ ಸಂತಾನದವರಿಗೆ ಅವರ ಕೆಲಸಕ್ಕೆ ತಕ್ಕ ಹಾಗೆ ಎರಡು ಬಂಡಿಗಳನ್ನು, ಮತ್ತು ಎರಡು ಜೋಡಿ ಎತ್ತುಗಳನ್ನು ಕೊಟ್ಟನು.
Twee wagens en vier runderen gaf hij aan de zonen van Gersjon, naar verhouding tot hun werk.
8 ೮ ಮೆರಾರೀ ಸಂತಾನದವರಿಗೆ ಅವರ ಕೆಲಸಕ್ಕೆ ತಕ್ಕ ಹಾಗೆ ನಾಲ್ಕು ಬಂಡಿಗಳನ್ನು ಮತ್ತು ನಾಲ್ಕು ಜೋಡಿ ಎತ್ತುಗಳನ್ನು ಮಹಾಯಾಜಕನಾದ ಆರೋನನ ಮಗನಾದ ಈತಾಮಾರನ ಕೈಗೆ ಒಪ್ಪಿಸಿದರು.
Vier wagens en acht runderen gaf hij, naar verhouding tot hun werk, aan de zonen van Merari, die onder Itamar, den zoon van den priester Aäron stonden.
9 ೯ ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ. ಏಕೆಂದರೆ ಅವರು ದೇವದರ್ಶನ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು.
Aan de zonen van Kehat gaf hij er geen, omdat zij de heilige zaken, die hun waren toevertrouwd, op hun schouders moesten dragen.
10 ೧೦ ಮೋಶೆಯು ಯಜ್ಞವೇದಿಯನ್ನು ಅಭಿಷೇಕಿಸಿದ ದಿನದಲ್ಲಿ, ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.
Toen de aanvoerders ook hun wijdingsgave voor het altaar wilden brengen op de dag, dat het gezalfd werd, en hun gaven voor het altaar wilden plaatsen,
11 ೧೧ ಆಗ ಯೆಹೋವನು ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿಯು ತನಗೆ ನೇಮಕವಾದ ದಿನದಲ್ಲಿ ಯಜ್ಞವೇದಿಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಬೇಕು” ಎಂದು ಆಜ್ಞಾಪಿಸಿದನು.
sprak Jahweh tot Moses: Laat iedere aanvoerder op een afzonderlijke dag zijn gave brengen voor de wijding van het altaar.
12 ೧೨ ಮೊದಲನೆಯ ದಿನದಲ್ಲಿ ಕಾಣಿಕೆಯನ್ನು ಅರ್ಪಿಸಿದವನು ಯೆಹೂದ ಕುಲಾಧಿಪತಿಯಾದ ಅಮ್ಮೀನಾದಾಬನ ಮಗನಾದ ನಹಶೋನ.
Op de eerste dag bracht Naässon, de zoon van Amminadab uit de stam van Juda, zijn gave.
13 ೧೩ ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ. ಎಪ್ಪತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
Zijn geschenk bestond uit een zilveren schotel ter waarde van honderd dertig sikkels, en een zilveren schaal van zeventig sikkels volgens het heilig gewicht, beide gevuld met meelbloem, met olie aangemaakt, voor een spijsoffer;
14 ೧೪ ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
uit een schaaltje van tien gouden sikkels gevuld met wierook;
15 ೧೫ ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕೊಟ್ಟನು.
uit een jongen stier, een ram, een eenjarig lam voor een brandoffer,
16 ೧೬ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
een geitebok voor een zondeoffer,
17 ೧೭ ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು, ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀನಾದಾಬನ ಮಗನಾದ ನಹಶೋನನು ಸಮರ್ಪಿಸಿದ ಕಾಣಿಕೆಗಳು ಇವೇ.
en twee runderen, vijf rammen, vijf bokken, vijf eenjarige lammeren voor een vredeoffer. Dit was het geschenk van Naässon, den zoon van Amminadab.
18 ೧೮ ಎರಡನೆಯ ದಿನದಲ್ಲಿ ಇಸ್ಸಾಕಾರ್ ಕುಲಾಧಿಪತಿಯೂ ಚೂವಾರನ ಮಗನೂ ಆದ ನೆತನೇಲನು ಕಾಣಿಕೆಯನ್ನು ಸಮರ್ಪಿಸಿದನು.
Op de tweede dag bracht Netanel, de zoon van Soear, de vorst van Issakar, zijn gave.
19 ೧೯ ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯು; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
Het geschenk, dat hij bracht, bestond uit een zilveren schotel van honderd dertig sikkels, en een zilveren schaal van zeventig sikkels volgens het heilig gewicht, beide gevuld met meelbloem, met olie aangemaakt, voor een spijsoffer;
20 ೨೦ ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
uit een schaaltje van tien gouden sikkels gevuld met wierook;
21 ೨೧ ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
uit een jongen stier, een ram, een eenjarig lam voor een brandoffer,
22 ೨೨ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
een geitebok voor een zondeoffer,
23 ೨೩ ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಚೂವಾರನ ಮಗನಾದ ನೆತನೇಲನು ಸಮರ್ಪಿಸಿದ ಕಾಣಿಕೆಗಳು ಇವೇ.
en twee runderen, vijf rammen, vijf bokken, vijf eenjarige lammeren voor een vredeoffer. Dit was het geschenk van Netanel, den zoon van Soear.
24 ೨೪ ಮೂರನೆಯ ದಿನದಲ್ಲಿ ಜೆಬುಲೂನ್ ಕುಲಾಧಿಪತಿಯೂ, ಹೇಲೋನನ ಮಗನೂ ಆದ ಎಲೀಯಾಬನು ಕಾಣಿಕೆಯನ್ನು ಸಮರ್ಪಿಸಿದನು.
Op de derde dag de vorst van de zonen van Zabulon, Eliab, de zoon van Chelon.
25 ೨೫ ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;
Zijn geschenk bestond uit een zilveren schotel van honderd dertig sikkels, en een zilveren schaal van zeventig sikkels volgens het heilig gewicht, beide gevuld met meelbloem, met olie aangemaakt, voor een spijsoffer;
26 ೨೬ ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
uit een schaaltje van tien gouden sikkels gevuld met wierook;
27 ೨೭ ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
uit een jongen stier, een ram, een eenjarig lam voor een brandoffer,
28 ೨೮ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
een geitebok voor een zondeoffer,
29 ೨೯ ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಹೇಲೋನನ ಮಗನಾದ ಎಲೀಯಾಬನು ಸಮರ್ಪಿಸಿದ ಕಾಣಿಕೆಗಳು ಇವೇ.
en twee runderen, vijf rammen, vijf bokken, vijf eenjarige lammeren voor een vredeoffer. Dit was het geschenk van Eliab, den zoon van Chelon.
30 ೩೦ ನಾಲ್ಕನೆಯ ದಿನದಲ್ಲಿ ರೂಬೇನ್ ಕುಲಾಧಿಪತಿಯೂ, ಶೆದೇಯೂರನ ಮಗನೂ ಆದ ಎಲೀಚೂರನು ಕಾಣಿಕೆಯನ್ನು ಸಮರ್ಪಿಸಿದನು.
Op de vierde dag de vorst van de zonen van Ruben, Elisoer, de zoon van Sjedeoer.
31 ೩೧ ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
Zijn geschenk bestond uit een zilveren schotel van honderd dertig sikkels, en een zilveren schaal van zeventig sikkels volgens het heilig gewicht, beide gevuld met meelbloem, met olie aangemaakt, voor een spijsoffer;
32 ೩೨ ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
uit een schaaltje van tien gouden sikkels gevuld met wierook;
33 ೩೩ ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
uit een jongen stier, een ram, een eenjarig lam voor een brandoffer,
34 ೩೪ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
een geitebok voor een zondeoffer,
35 ೩೫ ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಶೆದೇಯೂರನ ಮಗನಾದ ಎಲೀಚೂರನು ಸಮರ್ಪಿಸಿದ ಕಾಣಿಕೆಗಳು ಇವೇ.
en twee runderen, vijf rammen, vijf bokken, vijf eenjarige lammeren voor een vredeoffer. Dit was het geschenk van Elisoer, den zoon van Sjedeoer.
36 ೩೬ ಐದನೆಯ ದಿನದಲ್ಲಿ ಸಿಮೆಯೋನ್ ಕುಲಾಧಿಪತಿಯೂ, ಚೂರೀಷದ್ದೈಯ ಮಗನೂ ಆದ ಶೆಲುಮೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.
Op de vijfde dag de vorst van de zonen van Simeon, Sjeloemiël, de zoon van Soerisjaddai.
37 ೩೭ ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
Zijn geschenk bestond uit een zilveren schotel van honderd dertig sikkels, en een zilveren schaal van zeventig sikkels volgens het heilig gewicht, beide gevuld met meelbloem, met olie aangemaakt, voor een spijsoffer;
38 ೩೮ ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿ ಸಮರ್ಪಿಸಿದನು.
uit een schaaltje van tien gouden sikkels gevuld met wierook;
39 ೩೯ ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
uit een jongen stier, een ram, een eenjarig lam voor een brandoffer,
40 ೪೦ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
een geitebok voor een zondeoffer,
41 ೪೧ ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಚೂರೀಷದ್ದೈಯ ಮಗನಾದ ಶೆಲುಮೀಯೇಲನು ಸಮರ್ಪಿಸಿದ ಕಾಣಿಕೆಗಳು ಇವೇ.
en twee runderen, vijf rammen, vijf bokken, vijf eenjarige lammeren voor een vredeoffer. Dit was het geschenk van Sjeloemiël, den zoon van Soerisjaddai.
42 ೪೨ ಆರನೆಯ ದಿನದಲ್ಲಿ ಗಾದ್ ಕುಲಾಧಿಪತಿಯೂ, ದೆಗೂವೇಲನ ಮಗನೂ ಆದ ಎಲ್ಯಾಸಾಫನು ಕಾಣಿಕೆಯನ್ನು ಸಮರ್ಪಿಸಿದನು.
Op de zesde dag de vorst van de zonen van Gad, Eljasaf, de zoon van Deoeël.
43 ೪೩ ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕಲ್ ತೂಕದ ಒಂದು ಬೆಳ್ಳಿಯ ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
Zijn geschenk bestond uit een zilveren schotel van honderd dertig sikkels, en een zilveren schaal van zeventig sikkels volgens het heilig gewicht, beide gevuld met meelbloem, met olie aangemaakt, voor een spijsoffer;
44 ೪೪ ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
uit een schaaltje van tien gouden sikkels gevuld met wierook;
45 ೪೫ ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
uit een jongen stier, een ram, een eenjarig lam voor een brandoffer,
46 ೪೬ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
een geitebok voor een zondeoffer,
47 ೪೭ ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು, ದೆಗೂವೇಲನ ಮಗನಾದ ಎಲ್ಯಾಸಾಫನು ಸಮರ್ಪಿಸಿದ ಕಾಣಿಕೆಗಳು ಇವೇ.
en twee runderen, vijf rammen, vijf bokken, vijf eenjarige lammeren voor een vredeoffer. Dit was het geschenk van Eljasaf, den zoon van Deoeël.
48 ೪೮ ಏಳನೆಯ ದಿನದಲ್ಲಿ ಎಫ್ರಾಯೀಮ್ ಕುಲಾಧಿಪತಿಯೂ, ಅಮ್ಮೀಹೂದನ ಮಗನೂ ಆದ ಎಲೀಷಾಮನು ಕಾಣಿಕೆಯನ್ನು ಸಮರ್ಪಿಸಿದನು.
Op de zevende dag de vorst van de zonen van Efraïm, Elisjama, de zoon van Ammihoed.
49 ೪೯ ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
Zijn geschenk bestond uit een zilveren schotel van honderd dertig sikkels, en een zilveren schaal van zeventig sikkels volgens het heilig gewicht, beide gevuld met meelbloem, met olie aangemaakt, voor een spijsoffer;
50 ೫೦ ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
uit een schaaltje van tien gouden sikkels gevuld met wierook;
51 ೫೧ ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
uit een jongen stier, een ram, een eenjarig lam voor een brandoffer,
52 ೫೨ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
een geitebok voor een zondeoffer,
53 ೫೩ ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀಹೂದನ ಮಗನಾದ ಎಲೀಷಾಮನು ಸಮರ್ಪಿಸಿದ ಕಾಣಿಕೆಗಳು ಇವೇ.
en twee runderen, vijf rammen, vijf bokken, vijf eenjarige lammeren voor een vredeoffer. Dit was het geschenk van Elisjama, den zoon van Ammihoed.
54 ೫೪ ಎಂಟನೆಯ ದಿನದಲ್ಲಿ ಮನಸ್ಸೆ ಕುಲಾಧಿಪತಿಯೂ, ಪೆದಾಚೂರನ ಮಗನೂ ಆದ ಗಮ್ಲೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.
Op de achtste dag de vorst van de zonen van Manasse, Gamliël, de zoon van Pedasoer.
55 ೫೫ ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
Zijn geschenk bestond uit een zilveren schotel van honderd dertig sikkels, en een zilveren schaal van zeventig sikkels volgens het heilig gewicht, beide gevuld met meelbloem, met olie aangemaakt, voor een spijsoffer;
56 ೫೬ ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
uit een schaaltje van tien gouden sikkels gevuld met wierook;
57 ೫೭ ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
uit een jongen stier, een ram, een eenjarig lam voor een brandoffer,
58 ೫೮ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
een geitebok voor een zondeoffer,
59 ೫೯ ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು.
en twee runderen, vijf rammen, vijf bokken, vijf eenjarige lammeren voor een vredeoffer. Dit was het geschenk van Gamliël, den zoon van Pedasoer.
60 ೬೦ ಒಂಭತ್ತನೆಯ ದಿನದಲ್ಲಿ ಬೆನ್ಯಾಮೀನ್ ಕುಲಾಧಿಪತಿಯೂ ಗಿದ್ಯೋನಿಯ ಮಗನೂ ಆದ ಅಬೀದಾನನು ಕಾಣಿಕೆಯನ್ನು ಸಮರ್ಪಿಸಿದನು.
Op de negende dag de vorst van de zonen van Benjamin, Abidan, de zoon van Gidoni.
61 ೬೧ ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
Zijn geschenk bestond uit een zilveren schotel van honderd dertig sikkels en een zilveren schaal van zeventig sikkels volgens het heilig gewicht, beide gevuld met meelbloem, met olie aangemaakt, voor een spijsoffer;
62 ೬೨ ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
uit een schaaltje van tien gouden sikkels gevuld met wierook;
63 ೬೩ ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
uit een jongen stier, een ram, een eenjarig lam voor een brandoffer,
64 ೬೪ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
een geitebok voor een zondeoffer,
65 ೬೫ ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಗಿದ್ಯೋನಿಯ ಮಗನಾದ ಅಬೀದಾನನು ಕಾಣಿಕೆಯಾಗಿ ಸಮರ್ಪಿಸಿದ ಕಾಣಿಕೆಗಳು ಇವೇ.
en twee runderen, vijf rammen, vijf bokken, vijf eenjarige lammeren voor een vredeoffer. Dit was het geschenk van Abidan, den zoon van Gidoni.
66 ೬೬ ಹತ್ತನೆಯ ದಿನದಲ್ಲಿ ದಾನ್ ಕುಲಾಧಿಪತಿಯೂ ಅಮ್ಮೀಷದ್ದೈಯ ಮಗನೂ ಆದ ಅಹೀಗೆಜೆರನು ಕಾಣಿಕೆಯನ್ನು ಸಮರ್ಪಿಸಿದನು.
Op de tiende dag de vorst van de zonen van Dan, Achiézer, de zoon van Ammisjaddai.
67 ೬೭ ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
Zijn geschenk bestond uit een zilveren schotel van honderd dertig sikkels, en een zilveren schaal van zeventig sikkels volgens het heilig gewicht, beide gevuld met meelbloem, met olie aangemaakt, voor een spijsoffer;
68 ೬೮ ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
uit een schaaltje van tien gouden sikkels gevuld met wierook;
69 ೬೯ ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
uit een jongen stier, een ram, een eenjarig lam voor een brandoffer,
70 ೭೦ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
een geitebok voor een zondeoffer,
71 ೭೧ ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು ಸಮರ್ಪಿಸಿದ ಕಾಣಿಕೆಗಳು ಇವೇ.
en twee runderen, vijf rammen, vijf bokken, vijf eenjarige lammeren voor een vredeoffer. Dit was het geschenk van Achiézer, den zoon van Ammisjaddai.
72 ೭೨ ಹನ್ನೊಂದನೆಯ ದಿನದಲ್ಲಿ ಆಶೇರ್ ಕುಲಾಧಿಪತಿಯೂ ಒಕ್ರಾನನ ಮಗನೂ ಆದ ಪಗೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.
Op de elfde dag de vorst van de zonen van Aser, Pagiël, de zoon van Okran.
73 ೭೩ ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯೂ, ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
Zijn geschenk bestond uit een zilveren schotel van honderd dertig sikkels, en een zilveren schaal van zeventig sikkels volgens het heilig gewicht, beide gevuld met meelbloem, met olie aangemaakt, voor een spijsoffer;
74 ೭೪ ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
uit een schaaltje van tien gouden sikkels gevuld met wierook;
75 ೭೫ ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
uit een jongen stier, een ram, een eenjarig lam voor een brandoffer,
76 ೭೬ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
een geitebok voor een zondeoffer,
77 ೭೭ ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು.
en twee runderen, vijf rammen, vijf bokken, vijf eenjarige lammeren voor een vredeoffer. Dit was het geschenk van Pagiël, den zoon van Okran.
78 ೭೮ ಹನ್ನೆರಡನೆಯ ದಿನದಲ್ಲಿ ನಫ್ತಾಲಿ ಕುಲಾಧಿಪತಿಯೂ ಏನಾನನ ಮಗನೂ ಆದ ಅಹೀರನು ಕಾಣಿಕೆಯನ್ನು ಸಮರ್ಪಿಸಿದನು.
Op de twaalfde dag de vorst van de zonen van Neftali, Achira, de zoon van Enan.
79 ೭೯ ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
Zijn geschenk bestond uit een zilveren schotel van honderd dertig sikkels, en een zilveren schaal van zeventig sikkels volgens het heilig gewicht, beide gevuld met meelbloem, met olie aangemaakt, voor een spijsoffer;
80 ೮೦ ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.
uit een schaaltje van tien gouden sikkels gevuld met wierook;
81 ೮೧ ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
uit een jongen stier, een ram, een eenjarig lam voor een brandoffer,
82 ೮೨ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
een geitebok voor een zondeoffer,
83 ೮೩ ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು.
en twee runderen, vijf rammen, vijf bokken, vijf eenjarige lammeren voor een vredeoffer. Dit was het geschenk van Achira, den zoon van Enan.
84 ೮೪ ಯಜ್ಞವೇದಿ ಅಭಿಷೇಕಿಸಲ್ಪಟ್ಟ ದಿನದಲ್ಲಿ ಇಸ್ರಾಯೇಲರ ಕುಲಾಧಿಪತಿಗಳು, ಅದರ ಪ್ರತಿಷ್ಠೆಗಾಗಿ ಕೊಟ್ಟ ಕಾಣಿಕೆಗಳು ಒಟ್ಟಾಗಿ 12 ಬೆಳ್ಳಿಯ ತಟ್ಟೆಗಳು, 12 ಬೆಳ್ಳಿಯ ಬಟ್ಟಲುಗಳು, 12 ಚಿನ್ನದ ಧೂಪಾರತಿಗಳು.
Dit was dus de wijdingsgave der aanvoerders van Israël voor het altaar op de dag, dat het gezalfd werd: twaalf zilveren schotels, twaalf zilveren schalen, twaalf gouden schaaltjes.
85 ೮೫ ಒಂದೊಂದು ಬೆಳ್ಳಿಯ ತಟ್ಟೆಯು 120 ಶೆಕೆಲ್ ತೂಕವುಳ್ಳದ್ದು, ಒಂದೊಂದು ಬಟ್ಟಲು 70 ಶೆಕೆಲ್ ತೂಕದ್ದು. ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವಸ್ಥಾನದ ನಾಣ್ಯ ತೂಕದ ಪ್ರಕಾರ 2,400 ಶೆಕೆಲ್.
Iedere schotel was honderd dertig zilveren sikkels waard, iedere schaal zeventig; al het zilver der vaten bedroeg vier en twintig honderd sikkels volgens het heilig gewicht.
86 ೮೬ ಧೂಪದ್ರವ್ಯ ತುಂಬಿದ್ದ ಒಂದೊಂದು ಚಿನ್ನದ ಧೂಪಾರತಿಯ ತೂಕವು ದೇವಸ್ಥಾನದ ನಾಣ್ಯ ತೂಕದ ಪ್ರಕಾರ ಹತ್ತು ಶೆಕೆಲ್ ಮೇರೆಗೆ ಇರುವುದರಿಂದ ಆ ಹನ್ನೆರಡು ಧೂಪಾರತಿಗಳ ಚಿನ್ನವು ಒಟ್ಟಾಗಿ 120 ಶೆಕೆಲ್.
Twaalf gouden schaaltjes met wierook gevuld, ieder van tien gouden sikkels volgens het heilig gewicht, al het goud van die schaaltjes bedroeg honderd twintig gouden sikkels.
87 ೮೭ ಸರ್ವಾಂಗಹೋಮಕ್ಕಾಗಿ ಕೊಟ್ಟ ಒಟ್ಟು ಪಶುಗಳು: 12 ಹೋರಿಗಳು, 12 ಟಗರುಗಳು, ಒಂದು ವರ್ಷದ 12 ಕುರಿಗಳು ಇವುಗಳೊಂದಿಗೆ ಸಮರ್ಪಿಸಬೇಕಾದ ಧಾನ್ಯದ್ರವ್ಯವನ್ನೂ ಕೊಟ್ಟರು. ದೋಷಪರಿಹಾರಕ ಯಜ್ಞಕ್ಕಾಗಿ ಕೊಟ್ಟದ್ದು 12 ಹೋತಗಳು.
Het rundvee voor het brandoffer bedroeg in het geheel twaalf jonge stieren, twaalf rammen, en twaalf eenjarige lammeren, met de daarbij horende spijsoffers. Voor het zondeoffer bedroeg het twaalf geitebokken.
88 ೮೮ ಸಮಾಧಾನಯಜ್ಞಕ್ಕಾಗಿ ಕೊಟ್ಟ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ 60 ಕುರಿಗಳು, ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ.
Het rundvee voor het vredeoffer bedroeg in het geheel vier en twintig stieren, zestig rammen, zestig bokken en zestig eenjarige lammeren. Dit was de wijdingsgave voor het altaar, nadat het gezalfd was.
89 ೮೯ ಮೋಶೆ ಯೆಹೋವನ ಸಂಗಡ ಮಾತನಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತನಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಯೆಹೋವನು ಮೋಶೆಯ ಸಂಗಡ ಮಾತನಾಡಿದನು.
Wanneer Moses de openbaringstent binnentrad, om met Jahweh te spreken, hoorde hij de stem, die tot hem sprak, boven het verzoendeksel op de Verbondsark tussen de beide cherubs. Zo sprak Hij tot hem.