< ಅರಣ್ಯಕಾಂಡ 8 >
1 ೧ ಯೆಹೋವನು ಮೋಶೆಯ ಸಂಗಡ ಮಾತನಾಡಿ, ಹೇಳಿದ್ದೇನೆಂದರೆ:
और ख़ुदावन्द ने मूसा से कहा कि;
2 ೨ “ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದನು.
“हारून से कह, जब तू चराग़ों को रोशन करे तो सातों चराग़ों की रोशनी शमा'दान के सामने हो।”
3 ೩ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು. ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಆ ದೀಪಗಳನ್ನು ಕ್ರಮವಾಗಿ ಇಟ್ಟನು.
चुनाँचे हारून ने ऐसा ही किया, उसने चराग़ों को इस तरह जलाया कि शमा'दान के सामने रोशनी पड़े, जैसा ख़ुदावन्द ने मूसा को हुक्म दिया था।
4 ೪ ದೀಪಸ್ತಂಭವೂ, ಅದರ ಬುಡದ ಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿತ್ತು. ಯೆಹೋವನು ತೋರಿಸಿದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದನು.
और शमा'दान की बनावट ऐसी थी कि वह पाये से लेकर फूलों तक गढ़े हुए सोने का बना हुआ था। जो नमूना ख़ुदावन्द ने मूसा को दिखाया उसी के मुवाफ़िक उसने शमा'दान को बनाया।
5 ೫ ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
और ख़ुदावन्द ने मूसा से कहा कि
6 ೬ “ನೀನು ಇಸ್ರಾಯೇಲರಿಂದ ಲೇವಿಯರನ್ನು ಪ್ರತ್ಯೇಕಿಸಿ ಶುದ್ಧೀಕರಿಸಿಬೇಕು.
“लावियों को बनी — इस्राईल से अलग करके उनको पाक कर।
7 ೭ ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗೆಂದರೆ: ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮುಕಿಸಬೇಕು. ಅವರು ಸರ್ವಾಂಗ ಕ್ಷೌರಮಾಡಿಸಿಕೊಳ್ಳಲಿ. ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.
और उनको पाक करने के लिए उनके साथ यह करना, कि ख़ता का पानी लेकर उन पर छिड़कना; फिर वह अपने सारे जिस्म पर उस्तरा फिरवाएँ, और अपने कपड़े धोएँ, और अपने को साफ़ करें।
8 ೮ ತರುವಾಯ ಅವರು ಸರ್ವಾಂಗಹೊಮಕ್ಕಾಗಿ ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯ ಅಂದರೆ ಎಣ್ಣೆ ಬೆರೆಸಿದ ಗೋದಿಯ ಹಿಟ್ಟನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಹೋರಿಯನ್ನು ತೆಗೆದುಕೊಳ್ಳಬೇಕು.
तब वह एक बछड़ा और उसके साथ की नज़्र की क़ुर्बानी के लिए तेल मिला हुआ मैदा लें, और तू ख़ता की क़ुर्बानी के लिए एक दूसरा बछड़ा भी लेना।
9 ೯ ಆಗ ನೀನು ಲೇವಿಯರನ್ನು ದೇವದರ್ಶನ ಗುಡಾರದ ಮುಂದೆ ಕರೆದುಕೊಂಡು ಬಂದು ಇಸ್ರಾಯೇಲರ ಸಮೂಹವನ್ನೆಲ್ಲಾ ಕೂಡಿಸಬೇಕು.
और तू लावियों को ख़ेमा — ए — इजितमा'अ के आगे हाज़िर करना और बनी — इस्राईल की सारी जमा'अत को जमा' करना।
10 ೧೦ ಲೇವಿಯರನ್ನು ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಿದಾಗ, ಇಸ್ರಾಯೇಲರು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.
फिर लावियों को ख़ुदावन्द के आगे लाना, तब बनी — इस्राईल अपने — अपने हाथ लावियों पर रख्खें।
11 ೧೧ ಲೇವಿಯರು ಯೆಹೋವನ ಸೇವಾಕಾರ್ಯವನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲರ ನಿಮಿತ್ತ ಅವರನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.
और हारून लावियों की बनी — इस्राईल की तरफ़ से हिलाने की क़ुर्बानी के लिए ख़ुदावन्द के सामने पेश करे, ताकि वह ख़ुदावन्द की ख़िदमत करने पर रहें।
12 ೧೨ “ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ನಂತರ ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ, ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಬೇಕು. ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.
फिर लावी अपने — अपने हाथ बछड़ों के सिरों पर रख्खें, और तू एक को ख़ता की क़ुर्बानी और दूसरे को सोख़्तनी क़ुर्बानी के लिए ख़ुदावन्द के सामने पेश करना, ताकि लावियों के वास्ते कफ़्फ़ारा दिया जाए।
13 ೧೩ ನೀನು ಆರೋನನ ಮತ್ತು ಅವನ ಮಕ್ಕಳ ಮುಂದೆ ಲೇವಿಯರನ್ನು ನಿಲ್ಲಿಸಿ ಅವರನ್ನು ನೈವೇದ್ಯದಂತೆ ಯೆಹೋವನಿಗೆ ಸಮರ್ಪಿಸಬೇಕು.
फिर तू लावियों को हारून और उसके बेटों के आगे खड़ा करना और उनको हिलाने की क़ुर्बानी के लिए ख़ुदावन्द के सामने पेश करना।
14 ೧೪ ಹೀಗೆ ನೀನು ಲೇವಿಯರನ್ನು ಇಸ್ರಾಯೇಲರಿಂದ ಪ್ರತ್ಯೇಕಿಸಿದಾಗ ಅವರು ನನ್ನ ಸೊತ್ತಾಗುವರು.
“यूँ तू लावियों को बनी — इस्राईल से अलग करना और लावी मेरे ही ठहरेंगे।
15 ೧೫ “ಅದಾದ ನಂತರ ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ನೀನು ಅವರನ್ನು ಶುದ್ಧೀಕರಿಸಿ ನೈವೇದ್ಯದಂತೆ ಸಮರ್ಪಿಸಬೇಕು.
इसके बाद लावी ख़ेमा — ए — इजितमा'अ की ख़िदमत के लिए अन्दर आया करें, इसलिए तू उनको पाक कर और हिलाने की क़ुर्बानी के लिए उनको पेश करना।
16 ೧೬ ಇಸ್ರಾಯೇಲರಲ್ಲಿ ಇವರು ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಇಸ್ರಾಯೇಲರಲ್ಲಿ ಚೊಚ್ಚಲ ಮಕ್ಕಳಿಗೆ ಬದಲಾಗಿ ನಾನು ಲೇವಿಯರನ್ನು ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ.
इसलिए कि वह सब बनी — इस्राईल में से मुझे बिल्कुल दे दिए गए हैं, क्यूँकि मैंने इन ही को उन सभों के बदले जो इस्राईलियों में पहलौठी के बच्चे हैं, अपने लिए ले लिया है।
17 ೧೭ ಇಸ್ರಾಯೇಲರಲ್ಲಿರುವ ಚೊಚ್ಚಲಾದ ಮನುಷ್ಯರೂ ಪಶುಗಳೂ ಎಲ್ಲಾ ನನ್ನ ಸ್ವಂತ ಸೊತ್ತು. ಐಗುಪ್ತ ದೇಶದಲ್ಲಿದ್ದ ಚೊಚ್ಚಲಾದುದನ್ನು ನಾನು ಸಂಹರಿಸಿದಾಗ ಇಸ್ರಾಯೇಲರ ಚೊಚ್ಚಲಾದುದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನು.
इसलिए कि बनी — इस्राईल के सब पहलौठे, क्या इंसान क्या हैवान मेरे हैं, मैंने जिस दिन मुल्क — ए — मिस्र के पहलौठों को मारा उसी दिन उनको अपने लिए पाक किया।
18 ೧೮ ನಾನು ಇಸ್ರಾಯೇಲರ ಚೊಚ್ಚಲಮಕ್ಕಳಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ.
और बनी — इस्राईल के सब पहलौठों के बदले मैंने लावियों को ले लिया है।
19 ೧೯ ಇಸ್ರಾಯೇಲರಿಗಾಗಿ ದೇವದರ್ಶನ ಗುಡಾರದ ಸೇವಾಕಾರ್ಯವನ್ನು ನಡಿಸುವುದಕ್ಕೂ ದೋಷಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಹೀಗಿರುವುದರಿಂದ ಇಸ್ರಾಯೇಲರು ದೇವಾಲಯದ ಹತ್ತಿರಕ್ಕೆ ಬಂದಾಗ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”
और मैंने बनी — इस्राईल में से लावियों को लेकर उनको हारून और उसके बेटों को 'अता किया है, ताकि वह ख़ेमा — ए — इजितमा'अ में बनी — इस्राईल की जगह ख़िदमत करें और बनी — इस्राईल के लिए कफ़्फ़ारा दिया करें; ताकि जब बनी — इस्राईल हैकल के नज़दीक आएँ तो उनमें कोई वबा न फैले।”
20 ೨೦ ಯೆಹೋವನು ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆ, ಆರೋನರೂ ಮತ್ತು ಇಸ್ರಾಯೇಲರ ಸಮೂಹದವರೆಲ್ಲರೂ ಮಾಡಿದರು.
चुनाँचे मूसा और हारून और बनी — इस्राईल की सारी जमा'अत ने लावियों से ऐसा ही किया; जो कुछ ख़ुदावन्द ने लावियों के बारे में मूसा को हुक्म दिया था, वैसा ही बनी — इस्राईल ने उनके साथ किया।
21 ೨೧ ಲೇವಿಯರು ತಮ್ಮನ್ನು ಶುದ್ಧಪಡಿಸಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಆರೋನನು ಅವರನ್ನು ನೈವೇದ್ಯದಂತೆ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ, ಅವರನ್ನು ಶುದ್ಧೀಕರಿಸುವುದಕ್ಕಾಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.
और लावियों ने अपने आप को गुनाह से पाक करके अपने कपड़े धोए, और हारून ने उनको हिलाने की क़ुर्बानी के लिए ख़ुदावन्द के सामने पेश करा, और हारून ने उनकी तरफ़ से कफ़्फ़ारा दिया ताकि वह पाक हो जाएँ।
22 ೨೨ ಆ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ಆರಂಭಿಸಿದರು. ಅವರ ವಿಷಯದಲ್ಲಿ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
इसके बाद लावी अपनी ख़िदमत बजा लाने को हारून और उसके बेटों के सामने ख़ेमा — ए — इजितमा'अ में जाने लगे। इसलिए जैसा ख़ुदावन्द ने लावियों के बारे में मूसा को हुक्म दिया था उन्होंने वैसा ही उनके साथ किया।
23 ೨೩ ಪುನಃ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
फिर ख़ुदावन्द ने मूसा से कहा,
24 ೨೪ “ಲೇವಿಯರು ಅನುಸರಿಸಬೇಕಾದ ಪದ್ಧತಿ ಏನೆಂದರೆ: ಇಪ್ಪತ್ತೈದು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರು ದೇವದರ್ಶನ ಗುಡಾರದ ಸೇವಮಂಡಳಿಗೆ ಸೇರಬೇಕು.
“लावियों के मुत'अल्लिक़ जो बात है वह यह है, कि पच्चीस बरस से लेकर उससे ऊपर — ऊपर की उम्र में वह ख़ेमा — ए — इजितमा'अ की ख़िदमत के काम के लिए अन्दर हाज़िर हुआ करें।
25 ೨೫ ಅವರು ಐವತ್ತು ವರ್ಷದವರಾದ ನಂತರ ಆ ಮಂಡಳಿಯನ್ನು ಬಿಟ್ಟು ದೇವಾಲಯದ ಸೇವಾಕಾರ್ಯದಿಂದ ಬಿಡುಗಡೆಯಾಗುವರು.
और जब पचास बरस के हों तो फिर उस काम के लिए न आएँ और न ख़िदमत करें,
26 ೨೬ ಅಂಥವರು ತಮ್ಮ ಸ್ವಕುಲದವರ ಜೊತೆಯಲ್ಲಿ ದೇವದರ್ಶನ ಗುಡಾರವನ್ನು ಕಾಯುವ ಸೇವೆಯನ್ನು ಮಾಡಬಹುದೇ ಹೊರತು ಅವರಿಂದ ಬೇರೆ ಸೇವಾಕಾರ್ಯವನ್ನು ಮಾಡಿಸಬಾರದು. ಲೇವಿಯರು ಕಾಪಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ಅವರಿಗೆ ನೇಮಿಸಬೇಕು.”
बल्कि ख़ेमा — ए — इजितमा'अ में अपने भाइयों के साथ निगहबानी के काम में मशग़ूल हों, और कोई ख़िदमत न करें। लावियों को जो — जो काम सौंपे जाएँ उनके मुत'अल्लिक़ तू उनसे ऐसा ही करना।”