< ಅರಣ್ಯಕಾಂಡ 9 >
1 ೧ ಇಸ್ರಾಯೇಲರು ಐಗುಪ್ತ ದೇಶವನ್ನು ಬಿಟ್ಟುಬಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನಲ್ಲಿ, ಸೀನಾಯಿ ಅರಣ್ಯದಲ್ಲಿ ಯೆಹೋವನು ಮೋಶೆಗೆ,
Yehova anayankhula ndi Mose mʼchipululu cha Sinai pa mwezi woyamba wa chaka chachiwiri atatuluka mu Igupto, nati,
2 ೨ “ಇಸ್ರಾಯೇಲರು ಪಸ್ಕಹಬ್ಬ ಆಚರಿಸಲು ನೇಮಕವಾದ ಕಾಲದಲ್ಲಿ ಆಚರಿಸಲು ಹೇಳು.
“Aisraeli azichita Paska pa nthawi yake yoyikika.
3 ೩ ನಾನು ನೇಮಿಸಿದ ಆಜ್ಞಾವಿಧಿಗಳ ಪ್ರಕಾರ ನೇಮಕವಾದ ಕಾಲದಲ್ಲಿಯೇ ಅಂದರೆ ಈ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ನೀವು ಅದನ್ನು ಆಚರಿಸಬೇಕು” ಎಂದು ಹೇಳಿದನು.
Muzichita Paska pa nthawi yake yoyikika, madzulo a tsiku la 14 la mwezi uno, potsata malamulo ndi malangizo ake.”
4 ೪ ಆದಕಾರಣ ಮೋಶೆ ಇಸ್ರಾಯೇಲರಿಗೆ, ನೀವು ಪಸ್ಕಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಿದನು.
Choncho Mose anawuza Aisraeli kuti azichita Paska,
5 ೫ ಹಾಗೆಯೇ ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಪಸ್ಕಹಬ್ಬವನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಎಲ್ಲವನ್ನು ಇಸ್ರಾಯೇಲರು ಮಾಡಿದರು.
ndipo anachitadi Paskayo mʼchipululu cha Sinai madzulo a tsiku la 14 la mwezi woyamba. Aisraeli anachita zonse monga momwe Yehova analamulira Mose.
6 ೬ ಆದರೆ ಕೆಲವು ಜನರಿಗೆ ಮನುಷ್ಯನ ಶವಸೋಂಕು ಇದ್ದುದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗದೆ ಮೋಶೆ ಮತ್ತು ಆರೋನರ ಬಳಿಗೆ ಬಂದರು.
Koma ena a iwo sanathe kuchita nawo Paska pa tsiku limenelo chifukwa anali odetsedwa chifukwa chokhudza mtembo. Choncho anabwera kwa Mose ndi Aaroni tsiku lomwelo,
7 ೭ ಈ ಜನರು ಮೋಶೆಗೆ “ಮನುಷ್ಯನ ಶವಸೋಂಕಿದರಿಂದ ನಾವು ಅಶುದ್ಧರಾದೆವು. ನಾವು ಉಳಿದ ಇಸ್ರಾಯೇಲರೊಡನೆ ನೇಮಕವಾದ ಕಾಲದಲ್ಲಿ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವುದಕ್ಕೆ ಅಪ್ಪಣೆಯಿಲ್ಲವೋ?” ಎಂದು ಕೇಳಿದರು.
ndipo anawuza Moseyo kuti, “Ife tadetsedwa chifukwa cha mtembo wa munthu. Nʼchifukwa chiyani taletsedwa kupereka nsembe kwa Yehova pamodzi ndi Aisraeli ena pa nthawi yake?”
8 ೮ ಅದಕ್ಕೆ ಮೋಶೆ ಅವರಿಗೆ, “ಸ್ವಲ್ಪ ಕಾದುಕೊಂಡಿರಿ. ನಿಮ್ಮ ವಿಷಯದಲ್ಲಿ ಯೆಹೋವನು ಏನು ಅಪ್ಪಣೆಮಾಡುವನೋ ನಾನು ವಿಚಾರಿಸುತ್ತೇನೆ” ಎಂದು ಹೇಳಿದನು.
Mose anawayankha kuti, “Dikirani mpaka nditamva zimene Yehova walamula zokhudza Inu.”
9 ೯ ಆಗ ಯೆಹೋವನು ಮೋಶೆ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
Ndipo Yehova anawuza Mose kuti,
10 ೧೦ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಶವ ಸೋಂಕಿನಿಂದ ಅಶುದ್ಧರಾದವರೂ ಅಥವಾ ದೂರ ಪ್ರಯಾಣದಲ್ಲಿರುವವರೂ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.’
“Uza Aisraeli kuti, ‘Pamene wina mwa inu kapena zidzukulu zanu adetsedwa chifukwa chokhudza mtembo wa munthu, kapena akakhala pa ulendo, akhoza kuchita nawo Paska ya Yehova.
11 ೧೧ ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪುಗಳ ಸಂಗಡ ಊಟಮಾಡಬೇಕು.
Azichita chikondwererochi madzulo a pa tsiku la 14 la mwezi wachiwiri. Azidya mwana wankhosa wamwamuna pamodzi ndi buledi wopanda yisiti ndi ndiwo zowawa zamasamba.
12 ೧೨ ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು. ಅಂತೂ ಪಸ್ಕಹಬ್ಬದ ವಿಷಯವಾಗಿರುವ ವಿಧಿನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.
Iwo asasiye nyama ina iliyonse mpaka mmawa. Asaswe mafupa aliwonse. Pamene akuchita chikondwerero cha Paska, atsate malangizo onse.
13 ೧೩ ಆದರೆ ಯಾವನಾದರೂ ಶುದ್ಧನಾಗದೆ, ಪ್ರಯಾಣಮಾಡದೆ ಇದ್ದು ಪಸ್ಕಹಬ್ಬವನ್ನು ಆಚರಿಸಲು ತಪ್ಪಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಯೆಹೋವನಿಂದ ನೇಮಿತವಾದ ಯಜ್ಞವನ್ನು ನೇಮಕವಾದ ಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.
Koma ngati munthu wina ali woyeretsedwa ndipo sali pa ulendo koma alephera kuchita Paska, munthu ameneyo achotsedwe pakati pa anthu a mtundu wake chifukwa sanabweretse chopereka cha Yehova pa nthawi yake. Munthu ameneyo adzalangidwa chifukwa cha tchimo lake.
14 ೧೪ “ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಆಜ್ಞಾವಿಧಿಗಳ ಪ್ರಕಾರವೇ ಅದನ್ನು ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ನಿಯಮವಿರಬೇಕು.”
“‘Mlendo amene akukhala pakati panu, nafuna kuchita nawo Paska ya Yehova, achite nawo motsata malamulo ndi malangizo ake. Muzikhala ndi malangizo ofanana a Paska; mbadwa kapena mlendo.’”
15 ೧೫ ಇಸ್ರಾಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿತ್ತು.
Pa tsiku limene anayimika chihema, tenti ya umboni, mtambo unaphimba chihemacho. Kuyambira madzulo mpaka mmawa, mtambo umene unali pamwamba pa chihemacho unkaoneka ngati moto.
16 ೧೬ ನಿತ್ಯವೂ ಹಾಗೆಯೇ ಕಾಣಿಸುತ್ತಿತ್ತು; ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುತ್ತಿತ್ತು.
Zinkachitika motere mosalekeza: mtambo unkakhala pamwamba pa chihema, ndipo usiku unkaoneka ngati moto.
17 ೧೭ ಆ ಮೇಘವು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಾಯೇಲರು ಮುಂದಕ್ಕೆ ಪ್ರಯಾಣಮಾಡುತ್ತಿದ್ದರು. ಆ ಮೇಘವು ಎಲ್ಲಿ ನಿಲ್ಲುವುದೋ ಅಲ್ಲಿ ಇಸ್ರಾಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು.
Nthawi ina iliyonse mtambo ukachoka pamwamba pa chihema, Aisraeli ankasamukanso, ndipo paliponse pamene mtambo wayima, Aisraeli ankamangapo misasa.
18 ೧೮ ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲರು ಪ್ರಯಾಣಮಾಡುತ್ತಿದ್ದರು, ಯೆಹೋವನ ಅಪ್ಪಣೆಯನ್ನು ಹೊಂದಿ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುತ್ತಿದ್ದರು.
Aisraeli ankasamuka pamalopo Yehova akawalamula, ndipo ankamanganso misasa Iyeyo akawalamula. Nthawi yonse imene mtambowo wayima pa chihema, ankakhalabe mʼmisasa yawo.
19 ೧೯ ಆ ಮೇಘವು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುವಾಗ ಇಸ್ರಾಯೇಲರು ಯೆಹೋವನ ಸೂಚನೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು.
Mtambowo ukakhala pa chihema nthawi yayitali, Aisraeli ankasungabe lamulo la Yehova ndipo iwo sankasamukanso.
20 ೨೦ ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿನಗಳು ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಯೆಹೋವನ ಆಜ್ಞಾನುಸಾರವಾಗಿ ಅವರು ಇಳಿದುಕೊಳ್ಳುತ್ತಿದ್ದರು. ಯೆಹೋವನ ಆಜ್ಞಾನುಸಾರವಾಗಿ ತಮ್ಮ ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು.
Nthawi zina mtambowo unkakhala pa chihemapo masiku owerengeka. Aisraeli ankamanga misasa molamulidwa ndi Yehova ndipo ankasamukanso molamulidwa ndi Iyeyo.
21 ೨೧ ಕೆಲವು ಸಮಯಗಳಲ್ಲಿ ಮೇಘವು ಸಾಯಂಕಾಲದಿಂದ ಬೆಳಗ್ಗಿನವರೆಗೆ ಇರುತ್ತಿತ್ತು. ಬೆಳಗ್ಗೆ ಅದು ಮೇಲಕ್ಕೆ ಏಳುವಾಗ ಜನರು ಪ್ರಯಾಣಮಾಡುತ್ತಿದ್ದರು. ಕೆಲವು ಸಮಯಗಳಲ್ಲಿ ಅದು ಹಗಲಿರುಳು ನಿಂತಿರುತ್ತಿತ್ತು. ಅದು ಯಾವಾಗ ಮೇಲೇಳುತ್ತಿತ್ತೋ ಆಗ ಜನರು ಹೊರಡುತ್ತಿದ್ದರು.
Nthawi zina mtambo unkakhala kuyambira madzulo mpaka mmawa ndipo unkachoka mmawa mwake, ankasamuka. Kaya ndi masana kapena usiku, pamene mtambo wachoka, ankasamuka.
22 ೨೨ ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವುದು ಎರಡು ದಿನವಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಅಲ್ಲಿಯ ತನಕ ಇಸ್ರಾಯೇಲರು ಪ್ರಯಾಣಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಮೇಘವು ಏಳುವಾಗ ಅವರು ಹೊರಡುತ್ತಿದ್ದರು.
Ngakhale mtambo ukhale pa chihema masiku awiri kapena mwezi kapena chaka, Aisraeli ankakhalabe pa msasa osachoka. Koma ukachoka, ankasamuka.
23 ೨೩ ಯೆಹೋವನ ಆಜ್ಞೆಯ ಪ್ರಕಾರ ಅವರು ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಯೆಹೋವನ ಆಜ್ಞೆಯ ಪ್ರಕಾರವೇ ಅವರು ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು. ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆಯೇ ಅವರು ಯೆಹೋವನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು.
Molamulidwa ndi Yehova ankamanga misasa yawo ndipo ankasamukanso Yehova akawalamula. Ankamvera lamulo la Yehova kudzera mwa Mose.