< ಅರಣ್ಯಕಾಂಡ 1 >

1 ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಯೆಹೋವನು ಮೋಶೆಯ ಸಂಗಡ ಹೀಗೆ ಮಾತನಾಡಿದನು,
וַיְדַבֵּ֨ר יְהוָ֧ה אֶל־מֹשֶׁ֛ה בְּמִדְבַּ֥ר סִינַ֖י בְּאֹ֣הֶל מוֹעֵ֑ד בְּאֶחָד֩ לַחֹ֨דֶשׁ הַשֵּׁנִ֜י בַּשָּׁנָ֣ה הַשֵּׁנִ֗ית לְצֵאתָ֛ם מֵאֶ֥רֶץ מִצְרַ֖יִם לֵאמֹֽר׃
2 “ಇಸ್ರಾಯೇಲರ ಸರ್ವಸಮೂಹದ ಗಂಡಸರನ್ನು ಗೋತ್ರದ ಕುಟುಂಬಗಳ ಪ್ರಕಾರ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು.
שְׂא֗וּ אֶת־רֹאשׁ֙ כָּל־עֲדַ֣ת בְּנֵֽי־יִשְׂרָאֵ֔ל לְמִשְׁפְּחֹתָ֖ם לְבֵ֣ית אֲבֹתָ֑ם בְּמִסְפַּ֣ר שֵׁמ֔וֹת כָּל־זָכָ֖ר לְגֻלְגְּלֹתָֽם׃
3 ಇಸ್ರಾಯೇಲರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರನ್ನು ಸೈನ್ಯಸೈನ್ಯವಾಗಿ ನೀನೂ ಆರೋನನೂ ಲೆಕ್ಕಹಾಕಬೇಕು.
מִבֶּ֨ן עֶשְׂרִ֤ים שָׁנָה֙ וָמַ֔עְלָה כָּל־יֹצֵ֥א צָבָ֖א בְּיִשְׂרָאֵ֑ל תִּפְקְד֥וּ אֹתָ֛ם לְצִבְאֹתָ֖ם אַתָּ֥ה וְאַהֲרֹֽן׃
4 ಈ ಕೆಲಸಕ್ಕಾಗಿ ಕುಲದಲ್ಲಿ ಆಯಾ ಕುಲದ ಒಂದೊಂದು ಮುಖ್ಯಸ್ಥನಾಗಿರುವ ಒಬ್ಬೊಬ್ಬ ಸಹಾಯಕನಿರಬೇಕು ಹಾಗೂ ತನ್ನ ಕುಲಕ್ಕಾಗಿ ಹೋರಾಡುವ ಜನರನ್ನು ಮುಖ್ಯಸ್ಥನು ಮುನ್ನಡೆಸಬೇಕು.
וְאִתְּכֶ֣ם יִהְי֔וּ אִ֥ישׁ אִ֖ישׁ לַמַּטֶּ֑ה אִ֛ישׁ רֹ֥אשׁ לְבֵית־אֲבֹתָ֖יו הֽוּא׃
5 ನಿಮಗೆ ಸಹಾಯಮಾಡಬೇಕಾದ ಪುರುಷರು ಯಾರಾರೆಂದರೆ: ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್,
וְאֵ֙לֶּה֙ שְׁמ֣וֹת הָֽאֲנָשִׁ֔ים אֲשֶׁ֥ר יַֽעַמְד֖וּ אִתְּכֶ֑ם לִרְאוּבֵ֕ן אֱלִיצ֖וּר בֶּן־שְׁדֵיאֽוּר׃
6 ಸಿಮೆಯೋನ್ ಕುಲದಿಂದ ಚೂರೀಷದ್ದೈಯ ಮಗನಾದ ಶೆಲುಮೀಯೇಲ್,
לְשִׁמְע֕וֹן שְׁלֻמִיאֵ֖ל בֶּן־צוּרִֽישַׁדָּֽי׃
7 ಯೆಹೂದ ಕುಲದಿಂದ ಅಮ್ಮೀನಾದಾಬನ ಮಗನಾದ ನಹಶೋನ್,
לִֽיהוּדָ֕ה נַחְשׁ֖וֹן בֶּן־עַמִּינָדָֽב׃
8 ಇಸ್ಸಾಕಾರ್ ಕುಲದಿಂದ ಚೂವಾರನ ಮಗನಾದ ನೆತನೇಲ್,
לְיִ֨שָּׂשכָ֔ר נְתַנְאֵ֖ל בֶּן־צוּעָֽר׃
9 ಜೆಬುಲೂನ್ ಕುಲದಿಂದ ಹೇಲೋನನ ಮಗನಾದ ಎಲೀಯಾಬ್,
לִזְבוּלֻ֕ן אֱלִיאָ֖ב בֶּן־חֵלֹֽן׃
10 ೧೦ ಯೋಸೇಫನ ವಂಶದವರಲ್ಲಿ: ಎಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ, ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್,
לִבְנֵ֣י יוֹסֵ֔ף לְאֶפְרַ֕יִם אֱלִישָׁמָ֖ע בֶּן־עַמִּיה֑וּד לִמְנַשֶּׁ֕ה גַּמְלִיאֵ֖ל בֶּן־פְּדָהצֽוּר׃
11 ೧೧ ಬೆನ್ಯಾಮೀನ್ ಕುಲದಿಂದ ಗಿದ್ಯೋನಿಯ ಮಗನಾದ ಅಬೀದಾನ್,
לְבִ֨נְיָמִ֔ן אֲבִידָ֖ן בֶּן־גִּדְעֹנִֽי׃
12 ೧೨ ದಾನ್ ಕುಲದಿಂದ ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್,
לְדָ֕ן אֲחִיעֶ֖זֶר בֶּן־עַמִּֽישַׁדָּֽי׃
13 ೧೩ ಆಶೇರ್ ಕುಲದಿಂದ ಒಕ್ರಾನನ ಮಗನಾದ ಪಗೀಯೇಲ್,
לְאָשֵׁ֕ר פַּגְעִיאֵ֖ל בֶּן־עָכְרָֽן׃
14 ೧೪ ಗಾದ್ ಕುಲದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್,
לְגָ֕ד אֶלְיָסָ֖ף בֶּן־דְּעוּאֵֽל׃
15 ೧೫ ನಫ್ತಾಲಿ ಕುಲದಿಂದ ಏನಾನನ ಮಗನಾದ ಅಹೀರ.”
לְנַ֨פְתָּלִ֔י אֲחִירַ֖ע בֶּן־עֵינָֽן׃
16 ೧೬ ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಕುಲಗಳಲ್ಲಿ ಪ್ರಧಾನಪುರುಷರು ಹಾಗೂ ಇಸ್ರಾಯೇಲಿನ ಕುಲಗಳ ಪ್ರಮುಖರು.
אֵ֚לֶּה קריאי הָעֵדָ֔ה נְשִׂיאֵ֖י מַטּ֣וֹת אֲבוֹתָ֑ם רָאשֵׁ֛י אַלְפֵ֥י יִשְׂרָאֵ֖ל הֵֽם׃
17 ೧೭ ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆಯು ಮತ್ತು ಆರೋನನು ಆರಿಸಿಕೊಂಡರು.
וַיִּקַּ֥ח מֹשֶׁ֖ה וְאַהֲרֹ֑ן אֵ֚ת הָאֲנָשִׁ֣ים הָאֵ֔לֶּה אֲשֶׁ֥ר נִקְּב֖וּ בְּשֵׁמֽוֹת׃
18 ೧೮ ಅವರು ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಇಪ್ಪತ್ತು ವರ್ಷ ಹಾಗೂ ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮತಮ್ಮ ವಂಶಾವಳಿಯನ್ನು ಬರೆಯಿಸಿಕೊಂಡರು.
וְאֵ֨ת כָּל־הָעֵדָ֜ה הִקְהִ֗ילוּ בְּאֶחָד֙ לַחֹ֣דֶשׁ הַשֵּׁנִ֔י וַיִּתְיַֽלְד֥וּ עַל־מִשְׁפְּחֹתָ֖ם לְבֵ֣ית אֲבֹתָ֑ם בְּמִסְפַּ֣ר שֵׁמ֗וֹת מִבֶּ֨ן עֶשְׂרִ֥ים שָׁנָ֛ה וָמַ֖עְלָה לְגֻלְגְּלֹתָֽם׃
19 ೧೯ ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿ ಮೊಟ್ಟಮೊದಲು ಜನಗಣತಿ ಪ್ರಾರಂಭಿಸಿದನು.
כַּאֲשֶׁ֛ר צִוָּ֥ה יְהוָ֖ה אֶת־מֹשֶׁ֑ה וַֽיִּפְקְדֵ֖ם בְּמִדְבַּ֥ר סִינָֽי׃ פ
20 ೨೦ ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.
וַיִּהְי֤וּ בְנֵֽי־רְאוּבֵן֙ בְּכֹ֣ר יִשְׂרָאֵ֔ל תּוֹלְדֹתָ֥ם לְמִשְׁפְּחֹתָ֖ם לְבֵ֣ית אֲבֹתָ֑ם בְּמִסְפַּ֤ר שֵׁמוֹת֙ לְגֻלְגְּלֹתָ֔ם כָּל־זָכָ֗ר מִבֶּ֨ן עֶשְׂרִ֤ים שָׁנָה֙ וָמַ֔עְלָה כֹּ֖ל יֹצֵ֥א צָבָֽא׃
21 ೨೧ ರೂಬೇನನ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 46,500 ಮಂದಿ.
פְּקֻדֵיהֶ֖ם לְמַטֵּ֣ה רְאוּבֵ֑ן שִׁשָּׁ֧ה וְאַרְבָּעִ֛ים אֶ֖לֶף וַחֲמֵ֥שׁ מֵאֽוֹת׃ פ
22 ೨೨ ಸಿಮೆಯೋನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
לִבְנֵ֣י שִׁמְע֔וֹן תּוֹלְדֹתָ֥ם לְמִשְׁפְּחֹתָ֖ם לְבֵ֣ית אֲבֹתָ֑ם פְּקֻדָ֗יו בְּמִסְפַּ֤ר שֵׁמוֹת֙ לְגֻלְגְּלֹתָ֔ם כָּל־זָכָ֗ר מִבֶּ֨ן עֶשְׂרִ֤ים שָׁנָה֙ וָמַ֔עְלָה כֹּ֖ל יֹצֵ֥א צָבָֽא׃
23 ೨೩ ಸಿಮೆಯೋನನ ಗೋತ್ರದಲ್ಲಿ ಎಣಿಕೆಯಾದ ಗಂಡಸರು - 59,300 ಮಂದಿ.
פְּקֻדֵיהֶ֖ם לְמַטֵּ֣ה שִׁמְע֑וֹן תִּשְׁעָ֧ה וַחֲמִשִּׁ֛ים אֶ֖לֶף וּשְׁלֹ֥שׁ מֵאֽוֹת׃ פ
24 ೨೪ ಗಾದ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.
לִבְנֵ֣י גָ֔ד תּוֹלְדֹתָ֥ם לְמִשְׁפְּחֹתָ֖ם לְבֵ֣ית אֲבֹתָ֑ם בְּמִסְפַּ֣ר שֵׁמ֗וֹת מִבֶּ֨ן עֶשְׂרִ֤ים שָׁנָה֙ וָמַ֔עְלָה כֹּ֖ל יֹצֵ֥א צָבָֽא׃
25 ೨೫ ಗಾದ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 45,650 ಮಂದಿ.
פְּקֻדֵיהֶ֖ם לְמַטֵּ֣ה גָ֑ד חֲמִשָּׁ֤ה וְאַרְבָּעִים֙ אֶ֔לֶף וְשֵׁ֥שׁ מֵא֖וֹת וַחֲמִשִּֽׁים׃ פ
26 ೨೬ ಯೆಹೂದ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
לִבְנֵ֣י יְהוּדָ֔ה תּוֹלְדֹתָ֥ם לְמִשְׁפְּחֹתָ֖ם לְבֵ֣ית אֲבֹתָ֑ם בְּמִסְפַּ֣ר שֵׁמֹ֗ת מִבֶּ֨ן עֶשְׂרִ֤ים שָׁנָה֙ וָמַ֔עְלָה כֹּ֖ל יֹצֵ֥א צָבָֽא׃
27 ೨೭ ಯೆಹೂದ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 74,600 ಮಂದಿ.
פְּקֻדֵיהֶ֖ם לְמַטֵּ֣ה יְהוּדָ֑ה אַרְבָּעָ֧ה וְשִׁבְעִ֛ים אֶ֖לֶף וְשֵׁ֥שׁ מֵאֽוֹת׃ פ
28 ೨೮ ಇಸ್ಸಾಕಾರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
לִבְנֵ֣י יִשָּׂשכָ֔ר תּוֹלְדֹתָ֥ם לְמִשְׁפְּחֹתָ֖ם לְבֵ֣ית אֲבֹתָ֑ם בְּמִסְפַּ֣ר שֵׁמֹ֗ת מִבֶּ֨ן עֶשְׂרִ֤ים שָׁנָה֙ וָמַ֔עְלָה כֹּ֖ל יֹצֵ֥א צָבָֽא׃
29 ೨೯ ಇಸ್ಸಾಕಾರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 54,400 ಮಂದಿ.
פְּקֻדֵיהֶ֖ם לְמַטֵּ֣ה יִשָּׂשכָ֑ר אַרְבָּעָ֧ה וַחֲמִשִּׁ֛ים אֶ֖לֶף וְאַרְבַּ֥ע מֵאֽוֹת׃ פ
30 ೩೦ ಜೆಬುಲೂನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
לִבְנֵ֣י זְבוּלֻ֔ן תּוֹלְדֹתָ֥ם לְמִשְׁפְּחֹתָ֖ם לְבֵ֣ית אֲבֹתָ֑ם בְּמִסְפַּ֣ר שֵׁמֹ֗ת מִבֶּ֨ן עֶשְׂרִ֤ים שָׁנָה֙ וָמַ֔עְלָה כֹּ֖ל יֹצֵ֥א צָבָֽא׃
31 ೩೧ ಜೆಬುಲೂನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 57,400 ಮಂದಿ.
פְּקֻדֵיהֶ֖ם לְמַטֵּ֣ה זְבוּלֻ֑ן שִׁבְעָ֧ה וַחֲמִשִּׁ֛ים אֶ֖לֶף וְאַרְבַּ֥ע מֵאֽוֹת׃ פ
32 ೩೨ ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
לִבְנֵ֤י יוֹסֵף֙ לִבְנֵ֣י אֶפְרַ֔יִם תּוֹלְדֹתָ֥ם לְמִשְׁפְּחֹתָ֖ם לְבֵ֣ית אֲבֹתָ֑ם בְּמִסְפַּ֣ר שֵׁמֹ֗ת מִבֶּ֨ן עֶשְׂרִ֤ים שָׁנָה֙ וָמַ֔עְלָה כֹּ֖ל יֹצֵ֥א צָבָֽא׃
33 ೩೩ ಎಫ್ರಾಯೀಮ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 40,500 ಮಂದಿ.
פְּקֻדֵיהֶ֖ם לְמַטֵּ֣ה אֶפְרָ֑יִם אַרְבָּעִ֥ים אֶ֖לֶף וַחֲמֵ֥שׁ מֵאֽוֹת׃ פ
34 ೩೪ ಮನಸ್ಸೆ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
לִבְנֵ֣י מְנַשֶּׁ֔ה תּוֹלְדֹתָ֥ם לְמִשְׁפְּחֹתָ֖ם לְבֵ֣ית אֲבֹתָ֑ם בְּמִסְפַּ֣ר שֵׁמ֗וֹת מִבֶּ֨ן עֶשְׂרִ֤ים שָׁנָה֙ וָמַ֔עְלָה כֹּ֖ל יֹצֵ֥א צָבָֽא׃
35 ೩೫ ಮನಸ್ಸೆ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 32,200 ಮಂದಿ.
פְּקֻדֵיהֶ֖ם לְמַטֵּ֣ה מְנַשֶּׁ֑ה שְׁנַ֧יִם וּשְׁלֹשִׁ֛ים אֶ֖לֶף וּמָאתָֽיִם׃ פ
36 ೩೬ ಬೆನ್ಯಾಮೀನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
לִבְנֵ֣י בִנְיָמִ֔ן תּוֹלְדֹתָ֥ם לְמִשְׁפְּחֹתָ֖ם לְבֵ֣ית אֲבֹתָ֑ם בְּמִסְפַּ֣ר שֵׁמֹ֗ת מִבֶּ֨ן עֶשְׂרִ֤ים שָׁנָה֙ וָמַ֔עְלָה כֹּ֖ל יֹצֵ֥א צָבָֽא׃
37 ೩೭ ಬೆನ್ಯಾಮೀನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 35,400 ಮಂದಿ.
פְּקֻדֵיהֶ֖ם לְמַטֵּ֣ה בִנְיָמִ֑ן חֲמִשָּׁ֧ה וּשְׁלֹשִׁ֛ים אֶ֖לֶף וְאַרְבַּ֥ע מֵאֽוֹת׃ פ
38 ೩೮ ದಾನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
לִבְנֵ֣י דָ֔ן תּוֹלְדֹתָ֥ם לְמִשְׁפְּחֹתָ֖ם לְבֵ֣ית אֲבֹתָ֑ם בְּמִסְפַּ֣ר שֵׁמֹ֗ת מִבֶּ֨ן עֶשְׂרִ֤ים שָׁנָה֙ וָמַ֔עְלָה כֹּ֖ל יֹצֵ֥א צָבָֽא׃
39 ೩೯ ದಾನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 62,700 ಮಂದಿ.
פְּקֻדֵיהֶ֖ם לְמַטֵּ֣ה דָ֑ן שְׁנַ֧יִם וְשִׁשִּׁ֛ים אֶ֖לֶף וּשְׁבַ֥ע מֵאֽוֹת׃ פ
40 ೪೦ ಆಶೇರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
לִבְנֵ֣י אָשֵׁ֔ר תּוֹלְדֹתָ֥ם לְמִשְׁפְּחֹתָ֖ם לְבֵ֣ית אֲבֹתָ֑ם בְּמִסְפַּ֣ר שֵׁמֹ֗ת מִבֶּ֨ן עֶשְׂרִ֤ים שָׁנָה֙ וָמַ֔עְלָה כֹּ֖ל יֹצֵ֥א צָבָֽא׃
41 ೪೧ ಆಶೇರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 41,500 ಮಂದಿ.
פְּקֻדֵיהֶ֖ם לְמַטֵּ֣ה אָשֵׁ֑ר אֶחָ֧ד וְאַרְבָּעִ֛ים אֶ֖לֶף וַחֲמֵ֥שׁ מֵאֽוֹת׃ פ
42 ೪೨ ನಫ್ತಾಲಿ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
בְּנֵ֣י נַפְתָּלִ֔י תּוֹלְדֹתָ֥ם לְמִשְׁפְּחֹתָ֖ם לְבֵ֣ית אֲבֹתָ֑ם בְּמִסְפַּ֣ר שֵׁמֹ֗ת מִבֶּ֨ן עֶשְׂרִ֤ים שָׁנָה֙ וָמַ֔עְלָה כֹּ֖ל יֹצֵ֥א צָבָֽא׃
43 ೪೩ ನಫ್ತಾಲಿ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 53,400 ಮಂದಿ.
פְּקֻדֵיהֶ֖ם לְמַטֵּ֣ה נַפְתָּלִ֑י שְׁלֹשָׁ֧ה וַחֲמִשִּׁ֛ים אֶ֖לֶף וְאַרְבַּ֥ע מֵאֽוֹת׃ פ
44 ೪೪ ಮೋಶೆ, ಆರೋನನೂ ಮತ್ತು ಇಸ್ರಾಯೇಲಿನ ಹನ್ನೆರಡು ಕುಲಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ.
אֵ֣לֶּה הַפְּקֻדִ֡ים אֲשֶׁר֩ פָּקַ֨ד מֹשֶׁ֤ה וְאַהֲרֹן֙ וּנְשִׂיאֵ֣י יִשְׂרָאֵ֔ל שְׁנֵ֥ים עָשָׂ֖ר אִ֑ישׁ אִישׁ־אֶחָ֥ד לְבֵית־אֲבֹתָ֖יו הָיֽוּ׃
45 ೪೫ ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಾಗಿದ್ದು ಸೈನಿಕರಾಗಿ ಹೊರಡತಕ್ಕವರನ್ನು ಲೆಕ್ಕಿಸಿದರು.
וַיִּֽהְי֛וּ כָּל־פְּקוּדֵ֥י בְנֵֽי־יִשְׂרָאֵ֖ל לְבֵ֣ית אֲבֹתָ֑ם מִבֶּ֨ן עֶשְׂרִ֤ים שָׁנָה֙ וָמַ֔עְלָה כָּל־יֹצֵ֥א צָבָ֖א בְּיִשְׂרָאֵֽל׃
46 ೪೬ ಗಂಡಸರ ಒಟ್ಟು ಸಂಖ್ಯೆ - 6,03,550 ಮಂದಿ.
וַיִּֽהְיוּ֙ כָּל־הַפְּקֻדִ֔ים שֵׁשׁ־מֵא֥וֹת אֶ֖לֶף וּשְׁלֹ֣שֶׁת אֲלָפִ֑ים וַחֲמֵ֥שׁ מֵא֖וֹת וַחֲמִשִּֽׁים׃
47 ೪೭ ಆದರೆ ಅವರೊಡನೆ ಲೇವಿ ಕುಲದ ಕುಟುಂಬಗಳು ಲೆಕ್ಕಿಸಲ್ಪಡಲಿಲ್ಲ.
וְהַלְוִיִּ֖ם לְמַטֵּ֣ה אֲבֹתָ֑ם לֹ֥א הָתְפָּקְד֖וּ בְּתוֹכָֽם׃ פ
48 ೪೮ ಏಕೆಂದರೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,
וַיְדַבֵּ֥ר יְהוָ֖ה אֶל־מֹשֶׁ֥ה לֵּאמֹֽר׃
49 ೪೯ “ನೀನು ಇಸ್ರಾಯೇಲರನ್ನು ಎಣಿಸುವಾಗ ಲೇವಿ ಕುಲದವರನ್ನು ಎಣಿಸಬಾರದು.
אַ֣ךְ אֶת־מַטֵּ֤ה לֵוִי֙ לֹ֣א תִפְקֹ֔ד וְאֶת־רֹאשָׁ֖ם לֹ֣א תִשָּׂ֑א בְּת֖וֹךְ בְּנֵ֥י יִשְׂרָאֵֽל׃
50 ೫೦ ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
וְאַתָּ֡ה הַפְקֵ֣ד אֶת־הַלְוִיִּם֩ עַל־מִשְׁכַּ֨ן הָעֵדֻ֜ת וְעַ֣ל כָּל־כֵּלָיו֮ וְעַ֣ל כָּל־אֲשֶׁר־לוֹ֒ הֵ֜מָּה יִשְׂא֤וּ אֶת־הַמִּשְׁכָּן֙ וְאֶת־כָּל־כֵּלָ֔יו וְהֵ֖ם יְשָׁרְתֻ֑הוּ וְסָבִ֥יב לַמִּשְׁכָּ֖ן יַחֲנֽוּ׃
51 ೫೧ ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.
וּבִנְסֹ֣עַ הַמִּשְׁכָּ֗ן יוֹרִ֤ידוּ אֹתוֹ֙ הַלְוִיִּ֔ם וּבַחֲנֹת֙ הַמִּשְׁכָּ֔ן יָקִ֥ימוּ אֹת֖וֹ הַלְוִיִּ֑ם וְהַזָּ֥ר הַקָּרֵ֖ב יוּמָֽת׃
52 ೫೨ ಇಸ್ರಾಯೇಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.
וְחָנ֖וּ בְּנֵ֣י יִשְׂרָאֵ֑ל אִ֧ישׁ עַֽל־מַחֲנֵ֛הוּ וְאִ֥ישׁ עַל־דִּגְל֖וֹ לְצִבְאֹתָֽם׃
53 ೫೩ ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”
וְהַלְוִיִּ֞ם יַחֲנ֤וּ סָבִיב֙ לְמִשְׁכַּ֣ן הָעֵדֻ֔ת וְלֹֽא־יִהְיֶ֣ה קֶ֔צֶף עַל־עֲדַ֖ת בְּנֵ֣י יִשְׂרָאֵ֑ל וְשָׁמְרוּ֙ הַלְוִיִּ֔ם אֶת־מִשְׁמֶ֖רֶת מִשְׁכַּ֥ן הָעֵדֽוּת׃
54 ೫೪ ಇಸ್ರಾಯೇಲರು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು.
וַֽיַּעֲשׂ֖וּ בְּנֵ֣י יִשְׂרָאֵ֑ל כְּ֠כֹל אֲשֶׁ֨ר צִוָּ֧ה יְהוָ֛ה אֶת־מֹשֶׁ֖ה כֵּ֥ן עָשֽׂוּ׃ פ

< ಅರಣ್ಯಕಾಂಡ 1 >