< ಓಬದ್ಯನು 1 >

1 ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ”
חֲז֖וֹן עֹֽבַדְיָ֑ה כֹּֽה־אָמַר֩ אֲדֹנָ֨י יְהוִ֜ה לֶאֱד֗וֹם שְׁמוּעָ֨ה שָׁמַ֜עְנוּ מֵאֵ֤ת יְהוָה֙ וְצִיר֙ בַּגּוֹיִ֣ם שֻׁלָּ֔ח ק֛וּמוּ וְנָק֥וּמָה עָלֶיהָ לַמִּלְחָמָֽה׃
2 ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿ ಮಾಡಿದ್ದೇನೆ. ನೀನು ಬಹಳವಾಗಿ ತಾತ್ಸಾರಕ್ಕೆ ಗುರಿಯಾಗಿರುವಿ.
הִנֵּ֥ה קָטֹ֛ן נְתַתִּ֖יךָ בַּגּוֹיִ֑ם בָּז֥וּי אַתָּ֖ה מְאֹֽד׃
3 ಉನ್ನತ ಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ, ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು? ಎಂದುಕೊಳ್ಳುವ ಜನರೇ, ನಿಮ್ಮ ಹೃದಯದ ಒಣ ಹೆಮ್ಮೆಯು ನಿಮ್ಮನ್ನು ಮೋಸಗೊಳಿಸಿದೆ.
זְד֤וֹן לִבְּךָ֙ הִשִּׁיאֶ֔ךָ שֹׁכְנִ֥י בְחַגְוֵי־סֶּ֖לַע מְר֣וֹם שִׁבְתּ֑וֹ אֹמֵ֣ר בְּלִבּ֔וֹ מִ֥י יוֹרִדֵ֖נִי אָֽרֶץ׃
4 ನೀನು ಹದ್ದಿನಂತೆ ಮೇಲಕ್ಕೆ ಏರಿದರೂ, ನಿನ್ನ ಗೂಡು ನಕ್ಷತ್ರ ಮಂಡಲದಲ್ಲಿ ನೆಲೆಗೊಂಡಿದ್ದರೂ, ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು. ಇದು ಯೆಹೋವನ ನುಡಿ.
אִם־תַּגְבִּ֣יהַּ כַּנֶּ֔שֶׁר וְאִם־בֵּ֥ין כּֽוֹכָבִ֖ים שִׂ֣ים קִנֶּ֑ךָ מִשָּׁ֥ם אוֹרִֽידְךָ֖ נְאֻם־יְהוָֽה׃
5 ಕಳ್ಳರು ನಿನ್ನಲ್ಲಿ ನುಗ್ಗಿದರೆ, ರಾತ್ರಿ ವೇಳೆಯಲ್ಲಿ ಪಂಜುಗಳ್ಳರು ನಿನ್ನ ಮೇಲೆ ಬಿದ್ದರೆ, ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುವರಲ್ಲವೇ? ಆಹಾ! ನೀನು ಎಷ್ಟು ಭಂಗಪಟ್ಟಿದ್ದೀ! ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ, ಹಕ್ಕಲನ್ನು ಉಳಿಸುವುದಿಲ್ಲವೋ?
אִם־גַּנָּבִ֤ים בָּאֽוּ־לְךָ֙ אִם־שׁ֣וֹדְדֵי לַ֔יְלָה אֵ֣יךְ נִדְמֵ֔יתָה הֲל֥וֹא יִגְנְב֖וּ דַּיָּ֑ם אִם־בֹּֽצְרִים֙ בָּ֣אוּ לָ֔ךְ הֲל֖וֹא יַשְׁאִ֥ירוּ עֹלֵלֽוֹת׃
6 ಏಸಾವನ ಆಸ್ತಿಯು ಸಂಪೂರ್ಣ ನಾಶವಾಗಿ ಅದರ ನಿಧಿನಿಕ್ಷೇಪಗಳು ಸಂಪೂರ್ಣವಾಗಿ ಸೂರೆಯಾಗಿದ್ದು ಹೇಗೆ?
אֵ֚יךְ נֶחְפְּשׂ֣וּ עֵשָׂ֔ו נִבְע֖וּ מַצְפֻּנָֽיו׃
7 ನಿನ್ನ ಮಿತ್ರ ಮಂಡಲಿಯವರೆಲ್ಲರೂ ನಿನ್ನನ್ನು ನಿನ್ನ ಮೇರೆಯ ಆಚೆಗೆ ತಳ್ಳಿಬಿಟ್ಟಿದ್ದಾರೆ, ನಿನ್ನ ಆಪ್ತರು ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ವಿವೇಕವಿಲ್ಲದೆ ನಿನಗೆ ಉರುಲೊಡ್ಡಿದ್ದಾರೆ.
עַֽד־הַגְּב֣וּל שִׁלְּח֗וּךָ כֹּ֚ל אַנְשֵׁ֣י בְרִיתֶ֔ךָ הִשִּׁיא֛וּךָ יָכְל֥וּ לְךָ֖ אַנְשֵׁ֣י שְׁלֹמֶ֑ךָ לַחְמְךָ֗ יָשִׂ֤ימוּ מָזוֹר֙ תַּחְתֶּ֔יךָ אֵ֥ין תְּבוּנָ֖ה בּֽוֹ׃
8 ಯೆಹೋವನು ಇಂತೆನ್ನುತ್ತಾನೆ. “ಆ ದಿನದಲ್ಲಿ ನಾನು ಎದೋಮಿನೊಳಗೆ ಜ್ಞಾನಿಗಳನ್ನು ಅಳಿಸದೇ ಬಿಡುವೆನೋ,” ಏಸಾವನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೇ ಇರುವೆನೇ?
הֲל֛וֹא בַּיּ֥וֹם הַה֖וּא נְאֻם יְהוָ֑ה וְהַאֲבַדְתִּ֤י חֲכָמִים֙ מֵֽאֱד֔וֹם וּתְבוּנָ֖ה מֵהַ֥ר עֵשָֽׂו׃
9 ತೇಮಾನ್ ಪಟ್ಟಣವೇ, ನಿನ್ನ ಶೂರರು ಧೈರ್ಯಗೆಟ್ಟು ಎಲ್ಲರೂ ಹತರಾಗಿ ಏಸಾವನ ಪರ್ವತದೊಳಗೆ ನಿರ್ಮೂಲರಾಗುವರು.
וְחַתּ֥וּ גִבּוֹרֶ֖יךָ תֵּימָ֑ן לְמַ֧עַן יִכָּֽרֶת־אִ֛ישׁ מֵהַ֥ר עֵשָׂ֖ו מִקָּֽטֶל׃
10 ೧೦ ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿಮಿತ್ತ ಅವಮಾನವು ನಿನ್ನನ್ನು ಕವಿಯುವುದು. ನಿತ್ಯನಾಶನಕ್ಕೆ ಗುರಿಯಾಗುವಿ.
מֵחֲמַ֛ס אָחִ֥יךָ יַעֲקֹ֖ב תְּכַסְּךָ֣ בוּשָׁ֑ה וְנִכְרַ֖תָּ לְעוֹלָֽם׃
11 ೧೧ ಅನ್ಯರು ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ, ಮ್ಲೇಚ್ಛರು ಅವನ ಪುರದ್ವಾರಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಲ್ಲಿ ನೀನು ಅವನಿಗೆ ಸಹಾಯ ಮಾಡದೆ ಸುಮ್ಮನೆ ನಿಂತಿದ್ದೆ. ನೀನೂ ಅವರಂತೆ ನಿನ್ನ ತಮ್ಮನಿಗೆ ಒಬ್ಬ ಶತ್ರುವಿನಂತೆ ಕಂಡುಬಂದಿ.
בְּיוֹם֙ עֲמָֽדְךָ֣ מִנֶּ֔גֶד בְּי֛וֹם שְׁב֥וֹת זָרִ֖ים חֵיל֑וֹ וְנָכְרִ֞ים בָּ֣אוּ שְׁעָרָ֗יו וְעַל־יְרוּשָׁלִַ֙ם֙ יַדּ֣וּ גוֹרָ֔ל גַּם־אַתָּ֖ה כְּאַחַ֥ד מֵהֶֽם׃
12 ೧೨ ನಿನ್ನ ತಮ್ಮನ ದುರ್ದಿನದಲ್ಲಿ ಅವನ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು. ಯೆಹೂದ್ಯರ ನಾಶನದ ದಿನದಲ್ಲಿ ಹಿಗ್ಗಬಾರದಾಗಿತ್ತು. ಅವರ ಇಕ್ಕಟ್ಟಿನ ವೇಳೆಯಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು.
וְאַל־תֵּ֤רֶא בְיוֹם־אָחִ֙יךָ֙ בְּי֣וֹם נָכְר֔וֹ וְאַל־תִּשְׂמַ֥ח לִבְנֵֽי־יְהוּדָ֖ה בְּי֣וֹם אָבְדָ֑ם וְאַל־תַּגְדֵּ֥ל פִּ֖יךָ בְּי֥וֹם צָרָֽה׃
13 ೧೩ ನನ್ನ ಜನರ ವಿಪತ್ಕಾಲದಲ್ಲಿ ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಾಗಿತ್ತು, ಅವರ ವಿಪತ್ಕಾಲದಲ್ಲಿ ಅವರ ಕೇಡಿಗೆ ನಿನ್ನಂಥವನ ಕಣ್ಣು ಅರಳಬಾರದಾಗಿತ್ತು. ಅವರ ವಿಪತ್ಕಾಲದಲ್ಲಿ ಅವರ ಆಸ್ತಿಯ ಮೇಲೆ ನೀನು ಕೈಹಾಕಬಾರದಾಗಿತ್ತು.
אַל־תָּב֤וֹא בְשַֽׁעַר־עַמִּי֙ בְּי֣וֹם אֵידָ֔ם אַל־תֵּ֧רֶא גַם־אַתָּ֛ה בְּרָעָת֖וֹ בְּי֣וֹם אֵיד֑וֹ וְאַל־תִּשְׁלַ֥חְנָה בְחֵיל֖וֹ בְּי֥וֹם אֵידֽוֹ׃
14 ೧೪ ನೀನು ಮರಣದಿಂದ ಓಡಿಹೋಗುವವರನ್ನು ಹಿಡಿದು ಕೊಲ್ಲುವುದಕ್ಕೆ ಅವರ ಮಾರ್ಗಗಳಲ್ಲಿ ನಿಂತು ಅವರನ್ನು ಸಂಹರಿಸಿದೆ. ಆ ಇಕ್ಕಟ್ಟಿನ ವೇಳೆಯಲ್ಲಿ ಪ್ರಾಣ ಉಳಿಸಿಕೊಂಡವರನ್ನು ಹಿಡಿದು ಶತ್ರುಗಳಿಗೆ ಒಪ್ಪಿಸಿಕೊಟ್ಟೆ.
וְאַֽל־תַּעֲמֹד֙ עַל־הַפֶּ֔רֶק לְהַכְרִ֖ית אֶת־פְּלִיטָ֑יו וְאַל־תַּסְגֵּ֥ר שְׂרִידָ֖יו בְּי֥וֹם צָרָֽה׃
15 ೧೫ ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ. ಎದೋಮೇ, ನೀನು ಮಾಡಿದ್ದೇ ನಿನಗಾಗುವುದು. ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವುದು.
כִּֽי־קָר֥וֹב יוֹם־יְהוָ֖ה עַל־כָּל־הַגּוֹיִ֑ם כַּאֲשֶׁ֤ר עָשִׂ֙יתָ֙ יֵעָ֣שֶׂה לָּ֔ךְ גְּמֻלְךָ֖ יָשׁ֥וּב בְּרֹאשֶֽׁךָ׃
16 ೧೬ ನನ್ನ ಜನರೇ, ನೀವು ನನ್ನ ಪವಿತ್ರಪರ್ವತದಲ್ಲಿ ನನ್ನ ದಂಡನೆಯ ಕಹಿ ಪಾನಮಾಡಿದ್ದಿರಿ. ನಿಮ್ಮ ಸುತ್ತಲಿರುವ ಸಕಲ ಜನಾಂಗಗಳೂ ಹೀಗೆ ನಿತ್ಯವಾಗಿ ಪಾನಮಾಡುವವು. ಹೌದು ಆ ರಾಜ್ಯಗಳು ಹೀಗೆ ಕುಡಿದು ಕಬಳಿಸಿ ಅಸ್ತಿತ್ವದಲ್ಲಿ ಇಲ್ಲದಂತೆ ಆಗುವವು.
כִּ֗י כַּֽאֲשֶׁ֤ר שְׁתִיתֶם֙ עַל־הַ֣ר קָדְשִׁ֔י יִשְׁתּ֥וּ כָֽל־הַגּוֹיִ֖ם תָּמִ֑יד וְשָׁת֣וּ וְלָע֔וּ וְהָי֖וּ כְּל֥וֹא הָיֽוּ׃
17 ೧೭ ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು.
וּבְהַ֥ר צִיּ֛וֹן תִּהְיֶ֥ה פְלֵיטָ֖ה וְהָ֣יָה קֹ֑דֶשׁ וְיָֽרְשׁוּ֙ בֵּ֣ית יַֽעֲקֹ֔ב אֵ֖ת מוֹרָֽשֵׁיהֶם׃
18 ೧೮ ಯಾಕೋಬನವಂಶ ಅಗ್ನಿಯಾಗಿಯೂ, ಯೋಸೇಫನ ವಂಶ ಜ್ವಾಲೆಯಾಗಿಯೂ, ಇವೆರಡೂ ಸೇರಿ ಕೊಳೆಯಂತೆ ಇರುವ ಏಸಾವನ ವಂಶವನ್ನು ಧಗಧಗನೆ ದಹಿಸಿ ಭಸ್ಮ ಮಾಡುವವು. ಏಸಾವನ ವಂಶದವರಲ್ಲಿ ಯಾರೂ ಉಳಿಯರು, ಇದು ಯೆಹೋವನೇ ನುಡಿದಿದ್ದಾನೆ.
וְהָיָה֩ בֵית־יַעֲקֹ֨ב אֵ֜שׁ וּבֵ֧ית יוֹסֵ֣ף לֶהָבָ֗ה וּבֵ֤ית עֵשָׂו֙ לְקַ֔שׁ וְדָלְק֥וּ בָהֶ֖ם וַאֲכָל֑וּם וְלֹֽא־יִֽהְיֶ֤ה שָׂרִיד֙ לְבֵ֣ית עֵשָׂ֔ו כִּ֥י יְהוָ֖ה דִּבֵּֽר׃
19 ೧೯ ಆಗ ದಕ್ಷಿಣ ಪ್ರಾಂತ್ಯದವರು ಏಸಾವಿನ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವರು, ಇಳಕಲಿನ ಪ್ರದೇಶದವರು ಫಿಲಿಷ್ಟಿಯರನ್ನೂ, ಎಫ್ರಾಯೀಮಿನ ಭೂಮಿಯನ್ನೂ ಮತ್ತು ಸಮಾರ್ಯದ ನೆಲವನ್ನೂ ವಶಮಾಡಿಕೊಳ್ಳುವರು. ಬೆನ್ಯಾಮೀನಿನವರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.
וְיָרְשׁ֨וּ הַנֶּ֜גֶב אֶת־הַ֣ר עֵשָׂ֗ו וְהַשְּׁפֵלָה֙ אֶת־פְּלִשְׁתִּ֔ים וְיָרְשׁוּ֙ אֶת־שְׂדֵ֣ה אֶפְרַ֔יִם וְאֵ֖ת שְׂדֵ֣ה שֹׁמְר֑וֹן וּבִנְיָמִ֖ן אֶת־הַגִּלְעָֽד׃
20 ೨೦ ಸೆರೆಹೋಗಿರುವ ಆ ದಂಡಿನ ಇಸ್ರಾಯೇಲರು ಕಾನಾನ್ಯರ ದೇಶವನ್ನು ಚಾರೆಪತಿನವರೆಗೆ ತಮ್ಮದಾಗಿ ಮಾಡಿಕೊಳ್ಳುವರು. ಸೆಫಾರ ದಿನದಲ್ಲಿ ಸೆರೆಯಾಗಿ ಹೋಗಿರುವ ಯೆರೂಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.
וְגָלֻ֣ת הַֽחֵל־הַ֠זֶּה לִבְנֵ֨י יִשְׂרָאֵ֤ל אֲשֶֽׁר־כְּנַעֲנִים֙ עַד־צָ֣רְפַ֔ת וְגָלֻ֥ת יְרוּשָׁלִַ֖ם אֲשֶׁ֣ר בִּסְפָרַ֑ד יִֽרְשׁ֕וּ אֵ֖ת עָרֵ֥י הַנֶּֽגֶב׃
21 ೨೧ ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು.
וְעָל֤וּ מֽוֹשִׁעִים֙ בְּהַ֣ר צִיּ֔וֹן לִשְׁפֹּ֖ט אֶת־הַ֣ר עֵשָׂ֑ו וְהָיְתָ֥ה לַֽיהוָ֖ה הַמְּלוּכָֽה׃

< ಓಬದ್ಯನು 1 >