< ಫಿಲೆಮೋನನಿಗೆ ಬರೆದ ಪತ್ರಿಕೆ 1 >

1 ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ, ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆ ಸೇವಕನೂ ಆಗಿರುವ ಫಿಲೆಮೋನನೆಂಬ ನಿನಗೂ,
Павло, в’язень Христа Ісуса, та брат Тимофій. Улюбленому Филимонові, який працює з нами [для Христа],
2 ಮತ್ತು ಸಹೋದರಿಯಾದ ಅಪ್ಫಿಯಳಿಗೂ, ನಮ್ಮ ಸಹ ಹೋರಾಟಗಾರನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ಬರೆಯುವುದೇನಂದರೆ:
Апфії, нашій улюбленій сестрі, й Архипові, нашому соратнику, а також церкві, яка [збирається] у вашому домі.
3 ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಆಗಲಿ.
Благодать вам і мир від Бога, Отця нашого, і Господа Ісуса Христа.
4 ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ ನಂಬಿಕೆ, ಪ್ರೀತಿ ಹಾಗೂ ದೇವಜನರ ಮೇಲಿರುವ ನಿನ್ನ ಪ್ರೀತಿಯನ್ನು ಕುರಿತು ಕೇಳಿದ್ದರಿಂದ,
Я завжди дякую моєму Богові, коли згадую про тебе у своїх молитвах,
5 ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ನೆನಪು ಮಾಡಿಕೊಂಡು ನಾನು ದೇವರಿಗೆ ಸ್ತೋತ್ರವನ್ನು ಸಲ್ಲಿಸುತ್ತೇನೆ, ನಿನಗಾಗಿ ವಿಜ್ಞಾಪನೆ ಮಾಡುತ್ತೇನೆ.
бо я чую про твою віру й любов до Господа Ісуса та до всіх святих.
6 ಕ್ರಿಸ್ತನಲ್ಲಿ ನಮಗೆ ದೊರಕಿರುವ ಎಲ್ಲಾ ಸುವರಗಳನ್ನು ಕುರಿತು ನೀನು ತಿಳಿವಳಿಕೆಯನ್ನು ಹೊಂದುತ್ತಿರುವೆ. ಕ್ರಿಸ್ತ ನಂಬಿಕೆಯಲ್ಲಿರುವ ನಿನ್ನ ಅನ್ಯೋನ್ಯತೆಯೂ ಕ್ರಿಸ್ತನಿಗೆ ಅತಿಯಾದ ಮಹಿಮೆಯನ್ನು ಉಂಟುಮಾಡಬೇಕೆಂದು ಪ್ರಾರ್ಥಿಸುತ್ತೇನೆ.
[Молюся], щоб спільність твоєї віри була діяльною в пізнанні всього доброго, що є в нас у Христі.
7 ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು.
Я мав велику радість та підбадьорення через твою любов, бо тобою, брате, були заспокоєні серця святих.
8 ವೃದ್ಧನೂ, ಈಗ ಕ್ರಿಸ್ತಯೇಸುವಿನ ನಿಮಿತ್ತ ಸೆರೆಯಾಳಾಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿಮಿತ್ತ ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ.
Хоча в Христі я маю повну сміливість наказувати, що тобі слід робити,
9 ನೀನು ಯುಕ್ತವಾದದ್ದನ್ನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ನನಗೆ ಕ್ರಿಸ್ತನಲ್ಲಿ ಪೂರ್ಣ ಅಧಿಕಾರವಿದ್ದರೂ ಹಾಗೆ ಆಜ್ಞಾಪಿಸದೇ
проте я краще проситиму тебе в ім’я любові. Я, Павло, старець, а тепер і в’язень Христа Ісуса,
10 ೧೦ ನಾನು ಸೆರೆಯಲ್ಲಿ ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.
благаю тебе за мого сина, якому я став батьком у в’язниці, за Онисима.
11 ೧೧ ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.
Раніше він не приносив тобі користі, але тепер корисний і для тебе, і для мене.
12 ೧೨ ನನಗೆ ಪ್ರಾಣ ಪ್ರಿಯನಂತಿರುವ ಅವನನ್ನು ನಿನ್ನ ಬಳಿಗೆ ಕಳುಹಿಸಿ ಕೊಡುತ್ತಿದ್ದೇನೆ.
Я відсилаю його до тебе, наче власне серце.
13 ೧೩ ನಾನು ಸುವಾರ್ತೆಯ ನಿಮಿತ್ತ ಸೆರೆಮನೆಯಲ್ಲಿರುವಾಗ ನನಗೆ ಉಪಚಾರಮಾಡುವಂತೆ ನಿನಗೆ ಬದಲಾಗಿ ಅವನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಬೇಕೆಂದು ಆಲೋಚಿಸಿದ್ದೆನು.
Я хотів би тримати його біля себе, щоб він замість тебе допомагав мені, поки я у в’язниці за Добру Звістку.
14 ೧೪ ಆದರೆ ನಿನ್ನ ಉಪಕಾರವು ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವುದಕ್ಕೂ ನನಗೆ ಇಷ್ಟವಿಲ್ಲ.
Але я не хотів робити нічого без твоєї згоди, щоби твоє добре діло було не вимушеним, а добровільним.
15 ೧೫ ಅವನು ಸ್ವಲ್ಪಕಾಲ ನಿನ್ನಿಂದ ದೂರವಾಗಿಹೋದದ್ದು ಬಹುಶಃ ನೀನು ಅವನನ್ನು ನಿರಂತರವಾಗಿ ಸೇರಿಸಿಕೊಳ್ಳುವುದಕ್ಕಾಗಿಯೇ ಇರಬಹುದು; (aiōnios g166)
Можливо, для того він і відлучався ненадовго щоб ти його отримав назавжди, (aiōnios g166)
16 ೧೬ ಇನ್ನು ಮೇಲೆ ಅವನು ದಾಸನಂತಾಗಿರದೆ ದಾಸನಿಗಿಂತ ಮಿಗಿಲಾಗಿ ಉತ್ತಮವಾದ ಪ್ರಿಯ ಸಹೋದರನಂತಾಗಬೇಕು. ಅವನು ನನಗೆ ಬಹಳ ಪ್ರಿಯನಾಗಿರುವಲ್ಲಿ ನಿನಗೆ ಲೋಕದ ಪ್ರಕಾರವಾಗಿಯೂ, ಕರ್ತನ ಸಂಬಂಧದಲ್ಲಿಯೂ ಇನ್ನೂ ಹೆಚ್ಚು ಪ್ರಿಯನಾಗಿರುವನಲ್ಲವೇ?
але вже не як раба, а краще за раба – як улюбленого брата. Він є дорогий для мене, але ще дорожчий для тебе як людина і як [брат] у Господі.
17 ೧೭ ನೀನು ನನ್ನನ್ನು ಜೊತೆಗಾರನೆಂದು ಭಾವಿಸುವುದಾದರೆ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ.
Тож, якщо ти вважаєш мене другом, прийми його, як [прийняв би] мене.
18 ೧೮ ಆದರೆ ಅವನಿಂದ ನಿನಗೆ ಏನಾದರೂ ನಷ್ಟವಾಗಿದ್ದರೆ ಅಥವಾ ಅವನು ನಿನಗೆ ಸಾಲವೇನಾದರೂ ತೀರಿಸಬೇಕಾಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು.
Якщо він чимось скривдив тебе або щось тобі винен, зарахуй це мені.
19 ೧೯ ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನಗೆ ಹೊಣೆಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕೇ?
Я, Павло, написав це власноруч: я поверну [його борг], не кажучи вже про те, що ти і самого себе винен мені.
20 ೨೦ ಹೌದು, ಸಹೋದರನೇ, ಕರ್ತನಲ್ಲಿ ನಿನ್ನಿಂದ ನನಗೆ ಪ್ರಯೋಜನವಾಗುವಂತೆ ಮಾಡು. ಕ್ರಿಸ್ತನಲ್ಲಿ ನನ್ನ ಹೃದಯವನ್ನು ಉಲ್ಲಾಸಗೊಳಿಸು.
Так, брате, я бажаю мати якусь користь від тебе в Господі, заспокой моє серце в Христі.
21 ೨೧ ನಿನ್ನ ವಿಧೇಯತೆಯಲ್ಲಿ ಭರವಸೆವುಳ್ಳವನಾಗಿ ಈ ಪತ್ರಿಕೆಯನ್ನು ನಿನಗೆ ಬರೆದಿದ್ದೇನೆ. ನಾನು ಹೇಳುವುದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುತ್ತಿ ಎಂದು ನನಗೆ ಗೊತ್ತಿದೆ.
Впевнений у твоїй покорі, я пишу тобі, знаючи, що ти зробиш навіть більше, ніж я прошу.
22 ೨೨ ಇದಲ್ಲದೆ ದೇವರು ನಿಮ್ಮ ಪ್ರಾರ್ಥನೆಗಳನ್ನು ಕೇಳಿ ನಾನು ನಿಮ್ಮ ಬಳಿಗೆ ಬರುವುದಕ್ಕೆ ಕೃಪೆ ಮಾಡುವನೆಂಬ ನಿರೀಕ್ಷೆ ನನಗುಂಟು. ಆದಕಾರಣ ನಾನು ಉಳಿದುಕೊಳ್ಳಲು ಒಂದು ಕೊಠಡಿಯನ್ನು ಸಿದ್ಧಪಡಿಸು.
Також підготуй для мене кімнату, бо я сподіваюся, що завдяки вашим молитвам повернуся до вас.
23 ೨೩ ಕ್ರಿಸ್ತಯೇಸುವಿನ ನಿಮಿತ್ತವಾಗಿ ನನ್ನ ಜೊತೆ ಸೆರೆಯವನಾದ ಎಪಫ್ರನೂ ನಿನಗೆ ವಂದನೆ ತಿಳಿಸುತ್ತಾನೆ.
Епафрас, ув’язнений зі мною у Христі Ісусі, вітає тебе,
24 ೨೪ ನನ್ನ ಜೊತೆಗೆಲಸದವರಾದ ಮಾರ್ಕ, ಅರಿಸ್ತಾರ್ಕ, ದೇಮ, ಲೂಕ ಇವರೆಲ್ಲರೂ ನಿನಗೆ ವಂದನೆ ತಿಳಿಸಿದ್ದಾರೆ.
[а також] Марк, Аристарх, Димас і Лука, з якими працюємо разом [для Христа].
25 ೨೫ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
[Нехай] благодать Господа Ісуса Христа буде з вашим духом.

< ಫಿಲೆಮೋನನಿಗೆ ಬರೆದ ಪತ್ರಿಕೆ 1 >