< ಫಿಲಿಪ್ಪಿಯವರಿಗೆ ಬರೆದ ಪತ್ರಿಕೆ 3 >
1 ೧ ಕಡೆಯದಾಗಿ ನನ್ನ ಸಹೋದರರೇ, ಕರ್ತನಲ್ಲಿ ಸಂತೋಷಪಡಿರಿ. ಮೊದಲು ತಿಳಿಸಿದ ಅದೇ ಮಾತುಗಳನ್ನು ಪುನಃ ನಿಮಗೆ ಬರೆಯುವುದಕ್ಕೆ ನನಗೇನೂ ಬೇಸರವಿಲ್ಲ, ಅವುಗಳು ನಿಮ್ಮನ್ನು ಭದ್ರಪಡಿಸುವವು.
hē bhrātaraḥ, śēṣē vadāmi yūyaṁ prabhāvānandata| punaḥ punarēkasya vacō lēkhanaṁ mama klēśadaṁ nahi yuṣmadarthañca bhramanāśakaṁ bhavati|
2 ೨ ಆ ನಾಯಿಗಳಿಗೆ ಎಚ್ಚರವಾಗಿರಿ, ದುಷ್ಕರ್ಮಿಗಳಿಗೆ ಎಚ್ಚರಿಕೆಯಾಗಿರಿ. ಸುನ್ನತಿಯೆಂದು ಹೇಳಿಕೊಂಡು ಅಂಗಚ್ಛೇದನ ಮಾಡುವವರಿಂದ ಎಚ್ಚರಿಕೆಯಾಗಿರಿ.
yūyaṁ kukkurēbhyaḥ sāvadhānā bhavata duṣkarmmakāribhyaḥ sāvadhānā bhavata chinnamūlēbhyō lōkēbhyaśca sāvadhānā bhavata|
3 ೩ ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.
vayamēva chinnatvacō lōkā yatō vayam ātmanēśvaraṁ sēvāmahē khrīṣṭēna yīśunā ślāghāmahē śarīrēṇa ca pragalbhatāṁ na kurvvāmahē|
4 ೪ ನಾನಾದರೋ ಶರೀರಸಂಬಂಧವಾದವುಗಳಲ್ಲಿ ಭರವಸವಿಡುವುದಕ್ಕೂ ಆಸ್ಪದವಿದೆ. ಬೇರೆ ಯಾವನಾದರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಡಬಹುದೆಂದು ಯೋಚಿಸುವುದಾದರೆ ನಾನು ಅವನಿಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.
kintu śarīrē mama pragalbhatāyāḥ kāraṇaṁ vidyatē, kaścid yadi śarīrēṇa pragalbhatāṁ cikīrṣati tarhi tasmād api mama pragalbhatāyā gurutaraṁ kāraṇaṁ vidyatē|
5 ೫ ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು, ಬೆನ್ಯಾಮೀನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು, ಧರ್ಮಶಾಸ್ತ್ರಗಳ ದೃಷ್ಟಿಯಿಂದ ನೋಡಿದರೆ ನಾನು ಫರಿಸಾಯನು,
yatō'ham aṣṭamadivasē tvakchēdaprāpta isrāyēlvaṁśīyō binyāmīnagōṣṭhīya ibrikulajāta ibriyō vyavasthācaraṇē phirūśī
6 ೬ ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.
dharmmōtsāhakāraṇāt samitērupadravakārī vyavasthātō labhyē puṇyē cānindanīyaḥ|
7 ೭ ಆದರೆ, ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
kintu mama yadyat labhyam āsīt tat sarvvam ahaṁ khrīṣṭasyānurōdhāt kṣatim amanyē|
8 ೮ ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.
kiñcādhunāpyahaṁ matprabhōḥ khrīṣṭasya yīśō rjñānasyōtkr̥ṣṭatāṁ buddhvā tat sarvvaṁ kṣatiṁ manyē|
9 ೯ ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.
yatō hētōrahaṁ yat khrīṣṭaṁ labhēya vyavasthātō jātaṁ svakīyapuṇyañca na dhārayan kintu khrīṣṭē viśvasanāt labhyaṁ yat puṇyam īśvarēṇa viśvāsaṁ dr̥ṣṭvā dīyatē tadēva dhārayan yat khrīṣṭē vidyēya tadarthaṁ tasyānurōdhāt sarvvēṣāṁ kṣatiṁ svīkr̥tya tāni sarvvāṇyavakarāniva manyē|
10 ೧೦ ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ.
yatō hētōrahaṁ khrīṣṭaṁ tasya punarutthitē rguṇaṁ tasya duḥkhānāṁ bhāgitvañca jñātvā tasya mr̥tyōrākr̥tiñca gr̥hītvā
11 ೧೧ ಹೀಗಾದರೆ ಸತ್ತವರಲ್ಲಿ ಕೆಲವರಿಗೆ ಆಗುವ ಪುನರುತ್ಥಾನದ ಅನುಭವ ನನಗೂ ಆದೀತು.
yēna kēnacit prakārēṇa mr̥tānāṁ punarutthitiṁ prāptuṁ yatē|
12 ೧೨ ಇಷ್ಟರೊಳಗೆ ನಾನಿದೆಲ್ಲವನ್ನೂ ಪಡಕೊಂಡು ಪರಿಪೂರ್ಣತೆಗೆ ಬಂದವನೆಂದು ಹೇಳುವುದಿಲ್ಲ. ಆದರೆ ನಾನು ಯಾವುದನ್ನು ಹೊಂದುವುದಕ್ಕಾಗಿ ಕ್ರಿಸ್ತ ಯೇಸುವು ನನ್ನನ್ನು ಹಿಡಿದುಕೊಂಡನೋ ಅದನ್ನು ಹೊಂದುವುದಕ್ಕೋಸ್ಕರ ಪ್ರಯತ್ನಿಸುತ್ತಾ ಇದ್ದೇನೆ.
mayā tat sarvvam adhunā prāpi siddhatā vālambhi tannahi kintu yadartham ahaṁ khrīṣṭēna dhāritastad dhārayituṁ dhāvāmi|
13 ೧೩ ಸಹೋದರರೇ, ನಾನಂತೂ ಪಡೆದುಕೊಂಡವನೆಂದು ನನ್ನನ್ನು ಈ ವರೆಗೂ ಎಣಿಸಿಕೊಳ್ಳುವುದಿಲ್ಲ. ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವುದಕ್ಕಾಗಿ ಎದೆಬೊಗ್ಗಿದವನಾಗಿ,
hē bhrātaraḥ, mayā tad dhāritam iti na manyatē kintvētadaikamātraṁ vadāmi yāni paścāt sthitāni tāni vismr̥tyāham agrasthitānyuddiśya
14 ೧೪ ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ.
pūrṇayatnēna lakṣyaṁ prati dhāvan khrīṣṭayīśunōrddhvāt mām āhvayata īśvarāt jētr̥paṇaṁ prāptuṁ cēṣṭē|
15 ೧೫ ನಮ್ಮಲ್ಲಿ ಪ್ರವೀಣರಾದವರೆಲ್ಲರೂ ಈ ವಿಷಯದಲ್ಲಿ ಇದೇ ಅಭಿಪ್ರಾಯವುಳ್ಳವರಾಗಿರಿ. ಮತ್ತು ಯಾವುದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನು ದೇವರು ನಿಮಗೆ ತೋರಿಸಿಕೊಡುವನು.
asmākaṁ madhyē yē siddhāstaiḥ sarvvaistadēva bhāvyatāṁ, yadi ca kañcana viṣayam adhi yuṣmākam aparō bhāvō bhavati tarhīśvarastamapi yuṣmākaṁ prati prakāśayiṣyati|
16 ೧೬ ಅಂತೂ, ನಾವು ಯಾವ ಸೂತ್ರವನ್ನನುಸರಿಸಿ ಇಲ್ಲಿಯ ವರೆಗೆ ಬಂದೆವೋ ಅದನ್ನೇ ಅನುಸರಿಸಿ ನಡೆಯೋಣ.
kintu vayaṁ yadyad avagatā āsmastatrāsmābhirēkō vidhirācaritavya ēkabhāvai rbhavitavyañca|
17 ೧೭ ಸಹೋದರರೇ, ನೀವೆಲ್ಲರು ನನ್ನೊಂದಿಗೆ ಸೇರಿ ನನ್ನನ್ನು ಅನುಸರಿಸುವವರಾಗಿರಿ ಮತ್ತು ನಾವು ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.
hē bhrātaraḥ, yūyaṁ mamānugāminō bhavata vayañca yādr̥gācaraṇasya nidarśanasvarūpā bhavāmastādr̥gācāriṇō lōkān ālōkayadhvaṁ|
18 ೧೮ ಯಾಕೆಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ. ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
yatō'nēkē vipathē caranti tē ca khrīṣṭasya kruśasya śatrava iti purā mayā punaḥ punaḥ kathitam adhunāpi rudatā mayā kathyatē|
19 ೧೯ ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.
tēṣāṁ śēṣadaśā sarvvanāśa udaraścēśvarō lajjā ca ślāghā pr̥thivyāñca lagnaṁ manaḥ|
20 ೨೦ ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.
kintvasmākaṁ janapadaḥ svargē vidyatē tasmāccāgamiṣyantaṁ trātāraṁ prabhuṁ yīśukhrīṣṭaṁ vayaṁ pratīkṣāmahē|
21 ೨೧ ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.
sa ca yayā śaktyā sarvvāṇyēva svasya vaśīkarttuṁ pārayati tayāsmākam adhamaṁ śarīraṁ rūpāntarīkr̥tya svakīyatējōmayaśarīrasya samākāraṁ kariṣyati|