< ಫಿಲಿಪ್ಪಿಯವರಿಗೆ ಬರೆದ ಪತ್ರಿಕೆ 4 >
1 ೧ ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ.
Imri vayi mu wa mi si ya kun mba insin srounmu, nipleirimu, nikon yi bi kyan kri gbangban wu Rji, bison me ni gbakpamu.
2 ೨ ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಿ ಎಂದು ಯುವೊದ್ಯಳನ್ನೂ ಹಾಗೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
Misi bra Afodiya, Misi bra Sintiki, he ni sroun riri ni Rji.
3 ೩ ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.
Misi bra yi, gbugba hi dumu ni yamu jagji zo imba himba. Ishaya mbamba nikon tre Rji, mbamba Kilimas bru ndi hi dun ma, biwa ide mba he na vuvu re.
4 ೪ ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.
He ni sisroun ni mi Rji chachu ni mi lalan he sisroun.
5 ೫ ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ.
Bbri ndi wawu ndi mba to gbengble sroun me. Irji he whewhir ye.
6 ೬ ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.
Na rimri gpi gbugbu'una, bri kpingye bra, ni mi bra, ni gri, bri bra bi ni wo Rji.
7 ೭ ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.
Si sroun Rji, ni ton gban, wa ni tsere sroun ni mrebi ni Almasihu Yesu.
8 ೮ ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.
Ni klekle imri vayi, ikpe wa a jagji, igpe wa atsra kri, kpyiji wa a ndidi ma mba, igpe wa a tsitsri me, ikpyi wa mba, gpan igpe wa ni gji son nye, ikpyi wa mba tre ndidi ni tuma, nda gri he ri mri igpi bi yi wawu.
9 ೯ ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
Ikpyi bi yi wa bi to wa bi kpa wabi wo, wa bi to ni kpamu, te gpi biyi wawu. Rji wa ni nu sisroun ndi he yi wawu
10 ೧೦ ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ.
Mi gri gbugbu'a ni nde Rji tsizan ni klekle bi te ndidi me. wa bi zi yame bi yame ndidi ni fi bi kwugon yiri, bi na fe ton zon ngana.
11 ೧೧ ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ.
Mi na sila wayi ndi yi zo me na. miyafu sroun ni kon iyayen.
12 ೧೨ ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ.
Mi ton kon mi son nimi ya, mito kon mi son tre ni wu, ni mito kon son ni mi Iri ni mi yogi, ni mi gbugbu'u, ni mi wa.
13 ೧೩ ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
Mi iya te gpi wawu nimi wa asi ne sisroun.
14 ೧೪ ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಸಹಭಾಗಿಗಳಾಗಿದ್ದದ್ದು ಒಳ್ಳೆಯದಾಯಿತು.
Ni mi nya wawu bi he ni me.
15 ೧೫ ಫಿಲಿಪ್ಪಿಯವರೇ, ನಾನು ಪ್ರಾರಂಭದಲ್ಲಿ ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ, ಮಕೆದೋನ್ಯದಿಂದ ಹೊರಟುಹೋದಾಗ ಕೊಡುವ, ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಯೂ ನನಗೆ ಬೆಂಬಲಿಸಲ್ಲಿಲ್ಲವೆಂಬುದನ್ನು ನೀವೂ ಬಲ್ಲಿರಿ.
Filibiyawa bi to tun ni mumle bi to tre Rji. iton mi bri Makidoniya Ikilisiya na zo me ni mi iyamu, imba biyi mba.
16 ೧೬ ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವುದಕ್ಕೆ ಸಹಾಯವನ್ನು ಕೊಟ್ಟುಕಳುಹಿಸಿದಿರಲ್ಲಾ.
Ni ton me he ni Tassalonika bi tru zo bi ni mu aza mbu ri.
17 ೧೭ ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.
Mi na la wayi don misi zo bina. Mi tre wayi don kwuci bi wawu
18 ೧೮ ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.
Mi kpa gpi biyi wawu, mihe gpi wawu. Be nei ri mi kpa igpi biyi ni wo Abafraditu wa arji niyi. iye indidi wa wow bi ndidima, wa Rji kpa ni wo mba.
19 ೧೯ ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.
Irji mu nu yi igpi bi wa ni gbugblu yi ni nde Almasihu Yesu.
20 ೨೦ ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್. (aiōn )
Ziza yi gri ndidi wa arji Rji itegbu wa ahe tu ni tsemu aheme (Amin). (aiōn )
21 ೨೧ ಕ್ರಿಸ್ತ ಯೇಸುವಿನಲ್ಲಿರುವ ಪ್ರತಿಯೊಬ್ಬ ಭಕ್ತರಿಗೂ ನನ್ನ ವಂದನೆಯನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.
Chi bi hu Rji wawu ni nde Almasihu Yesu, Imri vayi wa amba he ni me mba chi yi.
22 ೨೨ ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.
Bi hu Rji wawu mba chi yi, bi wa mba he ni kon Kaisar.
23 ೨೩ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ.
Tsitsi u mbaihi Yesu Almasihu ndi sonyi son ni ruhubi ahemen (Amin).