< ಜ್ಞಾನೋಕ್ತಿಗಳು 1 >
1 ೧ ಇಸ್ರಾಯೇಲರ ಅರಸನಾಗಿದ್ದ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು.
দাউদের ছেলে, ইস্রায়েলের রাজা শলোমনের হিতোপদেশ:
2 ೨ ಇವುಗಳಿಂದ ಜನರು ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದು, ಬುದ್ಧಿವಾದಗಳನ್ನು ಗ್ರಹಿಸಿಕೊಳ್ಳುವರು.
প্রজ্ঞা ও শিক্ষা অর্জনের জন্য; অন্তর্দৃষ্টিমূলক কথা বোঝার জন্য;
3 ೩ ಅವರು ವಿವೇಕಮಾರ್ಗದಲ್ಲಿ ಅಂದರೆ ನೀತಿ, ನ್ಯಾಯ ಮತ್ತು ಧರ್ಮಮಾರ್ಗಗಳಲ್ಲಿ ಶಿಕ್ಷಿತರಾಗುವರು.
বিচক্ষণ ব্যবহারের সম্বন্ধে শিক্ষালাভের জন্য, যা কিছু যথার্থ, ন্যায্য ও সুন্দর, তা করার জন্য;
4 ೪ ಈ ನುಡಿಗಳು ಮೂಢರಿಗೆ ಜಾಣತನವನ್ನೂ, ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು.
অনভিজ্ঞ মানুষদের দূরদর্শিতা, অল্পবয়স্কদের জ্ঞান ও বিচক্ষণতা দানের জন্য—
5 ೫ ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.
জ্ঞানবানেরা শুনুক ও তাদের জ্ঞান বৃদ্ধি হোক, এবং বিচক্ষণেরা পথনির্দেশনা লাভ করুক—
6 ೬ ಇವು ಗಾದೆ, ಸಾಮ್ಯ, ಜ್ಞಾನಿಗಳ ನುಡಿ ಮತ್ತು ಒಗಟುಗಳನ್ನು ತಿಳಿಯಲು ಸಾಧನವಾಗಿವೆ.
যেন তারা নীতিবচন ও দৃষ্টান্ত, জ্ঞানবানদের বাণী ও হেঁয়ালি বুঝতে পারে।
7 ೭ ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
সদাপ্রভুর ভয় প্রজ্ঞার আরম্ভ, কিন্তু মূর্খেরা প্রজ্ঞা ও শিক্ষা তুচ্ছ করে।
8 ೮ ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.
হে আমার বাছা, তোমার বাবার উপদেশ শোনো, আর তোমার মায়ের শিক্ষা ত্যাগ কোরো না।
9 ೯ ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ, ಕೊರಳಿಗೆ ಹಾರದಂತಿರುವುದು.
এগুলি এক ফুলমালা হয়ে তোমার মাথার শোভা বাড়াবে ও এক হার হয়ে তোমার গলাকে সাজিয়ে তুলবে।
10 ೧೦ ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇ ಬೇಡ.
হে আমার বাছা, পাপীরা যদি তোমাকে প্রলুব্ধ করে, তুমি তাদের কথায় সম্মত হোয়ো না।
11 ೧೧ ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ.
তারা যদি বলে, “আমাদের সঙ্গে এসো; নির্দোষের রক্তপাত করার জন্য আমরা ওৎ পেতে থাকি, কয়েকটি নিরীহ মানুষকে মারার জন্য ঘাপটি মেরে থাকি;
12 ೧೨ ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ. (Sheol )
কবরের মতো আমরা ওদের জীবন্ত গ্রাস করি, ও মৃত্যুর খাদে পড়া মানুষের মতো তাদের পুরোপুরি গ্রাস করি; (Sheol )
13 ೧೩ ಸಕಲವಿಧವಾದ ಅಮೂಲ್ಯ ಸಂಪತ್ತನ್ನು ಕಂಡುಹಿಡಿದು, ಕೊಳ್ಳೆಮಾಡಿ ನಮ್ಮ ಮನೆಗಳಲ್ಲಿ ತುಂಬಿಕೊಳ್ಳೋಣ.
আমরা সব ধরনের মূল্যবান সামগ্রী পাব ও লুন্ঠিত দ্রব্যে আমাদের বাড়িগুলি ভরিয়ে তুলব;
14 ೧೪ ನಮ್ಮ ಸಂಗಡ ಚೀಟು ಹಾಕು; ನಮ್ಮೆಲ್ಲರ ಹಣದ ಚೀಲ ಒಂದೇ ಆಗಿರಲಿ” ಎಂದು ಹೇಳಿದರೆ,
আমাদের সঙ্গে গুটিকাপাতের দান চালো; আমরা সবাই লুটের অর্থ ভাগাভাগি করে নেব”—
15 ೧೫ ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ.
হে আমার বাছা, তাদের সঙ্গে যেয়ো না, তাদের পথে পা বাড়িয়ো না;
16 ೧೬ ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.
কারণ তাদের পা মন্দের দিকে ধেয়ে যায়, তারা রক্তপাত করার জন্য দ্রুতগতিতে দৌড়ায়।
17 ೧೭ ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವುದು ವ್ಯರ್ಥ.
যেখানে প্রত্যেকটি পাখি দেখতে পায় সেখানে জাল পাতার কোনো অর্থই হয় না!
18 ೧೮ ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ.
এইসব লোক নিজেদের রক্তপাত করার জন্যই ওৎ পেতে থাকে; তারা শুধু নিজেদের মারার জন্যই ঘাপটি মেরে থাকে!
19 ೧೯ ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು.
বাঁকা পথে যারা ধন উপার্জন করতে চায় তাদের সবার এই গতিই হয়; যারা সেই ধন পায় তাদের প্রাণ সেই ধন ছিনিয়ে নেয়।
20 ೨೦ ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ, ಚೌಕಗಳಲ್ಲಿ ಧ್ವನಿಮಾಡುತ್ತಾಳೆ.
পথে পথে প্রজ্ঞা চিৎকার করে বেড়ায়, প্রকাশ্য চকে সে তার সুর চড়ায়;
21 ೨೧ ಪೇಟೆಯ ಮುಖ್ಯಸ್ಥಾನದಲ್ಲಿ ಆಕೆ ಕೂಗುತ್ತಾಳೆ, ಊರ ಬಾಗಿಲಿನಲ್ಲಿ ಆಕೆಯು ನುಡಿಯುವುದೇನೆಂದರೆ,
প্রাচীরের মাথায় উঠে সে ডাক ছাড়ে, নগরের প্রবেশদ্বারে দাঁড়িয়ে সে বক্তৃতা দেয়:
22 ೨೨ “ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?
“তোমরা যারা অনভিজ্ঞ মানুষ, আর কত দিন তোমরা তোমাদের সরলতা ভালোবাসবে? আর কত দিন ঠাট্টা-বিদ্রুপকারীরা ঠাট্টা করে আনন্দ পাবে ও মূর্খেরা জ্ঞানকে ঘৃণা করবে?
23 ೨೩ ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.
আমার ভর্ৎসনা দ্বারা অনুতপ্ত হও! তখন আমি তোমাদের কাছে আমার ভাবনাচিন্তা ঢেলে দেব, আমি তোমাদের কাছে আমার শিক্ষামালা জ্ঞাত করব।
24 ೨೪ ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ;
কিন্তু যখন আমি ডাকলাম তোমরা সে ডাক প্রত্যাখ্যান করেছ, ও আমি হাত বাড়িয়ে দেওয়া সত্ত্বেও কেউ মনোযোগ দাওনি,
25 ೨೫ ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ, ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ.
যেহেতু তোমরা আমার সব পরামর্শ উপেক্ষা করেছ ও আমার ভর্ৎসনা শুনতে চাওনি,
26 ೨೬ ಆದಕಾರಣ ಬಿರುಗಾಳಿಯಂತೆ ಅಪಾಯವೂ, ತುಫಾನಿನಂತೆ ಆಪತ್ತೂ ಬಂದು, ನಿಮಗೆ ಶ್ರಮಸಂಕಟಗಳು ಸಂಭವಿಸುವಾಗ
তাই বিপর্যয় যখন তোমাদের আঘাত করবে তখন আমি হাসব; চরম দুর্দশা যখন তোমাদের নাগাল ধরে ফেলবে তখন আমি বিদ্রুপ করব—
27 ೨೭ ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯ ಮಾಡುವೆನು.
চরম দুর্দশা যখন ঝড়ের মতো তোমাদের নাগাল ধরে ফেলবে, বিপর্যয় যখন ঘূর্ণিঝড়ের মতো তোমাদের উপরে ধেয়ে আসবে, মর্মান্তিক যন্ত্রণা ও দুঃখকষ্ট যখন তোমাদের আচ্ছন্ন করবে।
28 ೨೮ ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.
“তখন তারা আমাকে ডাকবে কিন্তু আমি উত্তর দেব না; তারা আমার খোঁজ করবে কিন্তু আমায় খুঁজে পাবে না,
29 ೨೯ ಯಾಕೆಂದರೆ ಅವರು ಯೆಹೋವನ ಭಯಭಕ್ತಿಗೆ ಮನಸ್ಸು ಕೊಡದೆ ತಿಳಿವಳಿಕೆಯನ್ನು ಹಗೆಮಾಡಿದರು.
যেহেতু তারা জ্ঞানকে ঘৃণা করেছে ও সদাপ্রভুকে ভয় করতে চায়নি।
30 ೩೦ ನನ್ನ ಬೋಧನೆಯನ್ನು ಕೇಳಲೊಲ್ಲದೆ, ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು.
যেহেতু তারা আমার পরামর্শ নিতে চায়নি ও আমার ভর্ৎসনা পদদলিত করেছে,
31 ೩೧ ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.
তাই তারা নিজেদের আচরণের ফলভোগ করবে ও তাদের ষড়যন্ত্রের ফলে পরিপূর্ণ হয়ে যাবে।
32 ೩೨ ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.
কারণ অনভিজ্ঞ লোকদের খামখেয়ালীপনাই তাদের হত্যা করবে, ও মূর্খদের আত্মপ্রসাদই তাদের ধ্বংস করবে;
33 ೩೩ ನನ್ನ ಮಾತಿಗೆ ಕಿವಿಗೊಡುವವನಾದರೋ ಸುರಕ್ಷಿತನಾಗಿದ್ದು, ಯಾವ ಕೇಡಿಗೂ ಭಯಪಡದೆ ನೆಮ್ಮದಿಯಾಗಿ ಬಾಳುವನು” ಎಂಬುದೇ.
কিন্তু যে আমার কথা শোনে সে নিরাপদে বেঁচে থাকবে ও অনিষ্টের ভয় না করে স্বচ্ছন্দে থাকবে।”