< ಜ್ಞಾನೋಕ್ತಿಗಳು 10 >
1 ೧ ಜ್ಞಾನಿಯಾದ ಮಗನಿಂದ ತಂದೆಗೆ ಆನಂದ, ಅಜ್ಞಾನಿಯಾದ ಮಗನಿಂದ ತಾಯಿಗೆ ದುಃಖ.
The proverbs of Solomon. A wise son makes a glad father; but a foolish son brings grief to his mother.
2 ೨ ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು.
Treasures of wickedness profit nothing, but righteousness delivers from death.
3 ೩ ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.
The LORD will not allow the soul of the righteous to go hungry, but he thrusts away the desire of the wicked.
4 ೪ ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ.
He becomes poor who works with a lazy hand, but the hand of the diligent brings wealth.
5 ೫ ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು, ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.
He who gathers in summer is a wise son, but he who sleeps during the harvest is a son who causes shame.
6 ೬ ಶಿಷ್ಟನ ತಲೆ ಆಶೀರ್ವಾದದ ನೆಲೆ, ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ.
Blessings are on the head of the righteous, but violence covers the mouth of the wicked.
7 ೭ ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.
The memory of the righteous is blessed, but the name of the wicked will rot.
8 ೮ ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು.
The wise in heart accept commandments, but a chattering fool will fall.
9 ೯ ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.
He who walks blamelessly walks surely, but he who perverts his ways will be found out.
10 ೧೦ ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು.
The one who winks with the eye causes trouble, but the one who boldly rebukes makes peace.
11 ೧೧ ಶಿಷ್ಟನ ಬಾಯಿ ಜೀವದ ಬುಗ್ಗೆ, ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ.
The mouth of the righteous is a spring of life, but violence covers the mouth of the wicked.
12 ೧೨ ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.
Hatred stirs up strife, but love covers all wrongs.
13 ೧೩ ವಿವೇಕಿಯ ತುಟಿಗಳಿಂದ ಜ್ಞಾನ, ಬುದ್ಧಿಹೀನನ ಬೆನ್ನಿಗೆ ಬೆತ್ತ.
Wisdom is found on the lips of him who has discernment, but a rod is for the back of him who is void of understanding.
14 ೧೪ ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವುದಿಲ್ಲ, ಮೂರ್ಖನ ಭಾಷಣ ನಾಶನಕ್ಕೆ ಸಮೀಪ.
Wise men lay up knowledge, but the mouth of the foolish is near ruin.
15 ೧೫ ಐಶ್ವರ್ಯವಂತನಿಗೆ ಐಶ್ವರ್ಯವು ಬಲವಾದ ಕೋಟೆ, ಬಡವನಿಗೆ ಅವನ ಬಡತನವೇ ನಾಶನ.
The rich man's wealth is his strong city. The destruction of the poor is their poverty.
16 ೧೬ ಶಿಷ್ಟನ ದುಡಿತ ಜೀವಾಸ್ಪದ, ದುಷ್ಟನ ಆದಾಯ ಪಾಪಾಸ್ಪದ.
The labor of the righteous leads to life. The increase of the wicked leads to sin.
17 ೧೭ ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.
He is in the way of life who heeds correction, but he who forsakes reproof leads others astray.
18 ೧೮ ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ.
He who hides hatred has lying lips. He who utters a slander is a fool.
19 ೧೯ ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ.
In the multitude of words there is no lack of disobedience, but he who restrains his lips does wisely.
20 ೨೦ ಶಿಷ್ಟರ ನಾಲಿಗೆ ಚೊಕ್ಕ ಬೆಳ್ಳಿ, ದುಷ್ಟನ ಹೃದಯ ಮೌಲ್ಯವಿಲ್ಲದ್ದು.
The tongue of the righteous is like choice silver. The heart of the wicked is of little worth.
21 ೨೧ ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.
The lips of the righteous feed many, but the foolish die for lack of understanding.
22 ೨೨ ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.
The LORD's blessing brings wealth, and he adds no trouble to it.
23 ೨೩ ಅವಿವೇಕಿಗೆ ಕುಯುಕ್ತಿ ವಿನೋದ ವಿವೇಕಿಗೆ ಜ್ಞಾನ ವಿನೋದ.
It is a fool's pleasure to do wickedness, but wisdom is a man of understanding's pleasure.
24 ೨೪ ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವುದು, ಶಿಷ್ಟನಿಗೆ ಇಷ್ಟವು ಲಭಿಸುವುದು.
What the wicked fear, will overtake them, but the desire of the righteous will be granted.
25 ೨೫ ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.
When the whirlwind passes, the wicked is no more; but the righteous stand firm forever.
26 ೨೬ ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆ.
As vinegar to the teeth, and as smoke to the eyes, so is the sluggard to those who send him.
27 ೨೭ ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ, ದುಷ್ಟರ ವರ್ಷಗಳು ಅಲ್ಪ.
The fear of the LORD prolongs days, but the years of the wicked shall be shortened.
28 ೨೮ ಶಿಷ್ಟನ ನಂಬಿಕೆಗೆ ಆನಂದವು ಫಲ, ದುಷ್ಟನ ನಿರೀಕ್ಷೆ ನಿಷ್ಫಲ.
The prospect of the righteous is joy, but the hope of the wicked will perish.
29 ೨೯ ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ.
The way of the LORD is a stronghold to the upright, but it is a destruction to evildoers.
30 ೩೦ ಶಿಷ್ಟರು ಎಂದಿಗೂ ಕದಲರು, ದುಷ್ಟರು ದೇಶದಲ್ಲಿ ನಿಲ್ಲರು.
The righteous will never be removed, but the wicked will not dwell in the land.
31 ೩೧ ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು.
The mouth of the righteous brings forth wisdom, but the perverse tongue will be cut off.
32 ೩೨ ಶಿಷ್ಟನ ತುಟಿಯಲ್ಲಿ ಹಿತವಚನ, ದುಷ್ಟನ ಬಾಯಲ್ಲಿ ನೀಚವಚನ.
The lips of the righteous know what is acceptable, but the mouth of the wicked is perverse.