< ಜ್ಞಾನೋಕ್ತಿಗಳು 10 >

1 ಜ್ಞಾನಿಯಾದ ಮಗನಿಂದ ತಂದೆಗೆ ಆನಂದ, ಅಜ್ಞಾನಿಯಾದ ಮಗನಿಂದ ತಾಯಿಗೆ ದುಃಖ.
Las sentencias de Salomón. EL hijo sabio alegra al padre; y el hijo necio es tristeza de su madre.
2 ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು.
Los tesoros de maldad no serán de provecho: mas la justicia libra de muerte.
3 ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.
Jehová no dejará hambrear el alma del justo: mas la iniquidad lanzará á los impíos.
4 ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ.
La mano negligente hace pobre: mas la mano de los diligentes enriquece.
5 ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು, ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.
El que recoge en el estío es hombre entendido: el que duerme en el tiempo de la siega es hombre afrentoso.
6 ಶಿಷ್ಟನ ತಲೆ ಆಶೀರ್ವಾದದ ನೆಲೆ, ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ.
Bendiciones sobre la cabeza del justo: mas violencia cubrirá la boca de los impíos.
7 ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.
La memoria del justo será bendita: mas el nombre de los impíos se pudrirá.
8 ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು.
El sabio de corazón recibirá los mandamientos: mas el loco de labios caerá.
9 ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.
El que camina en integridad, anda confiado: mas el que pervierte sus caminos, será quebrantado.
10 ೧೦ ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು.
El que guiña del ojo acarrea tristeza; y el loco de labios será castigado.
11 ೧೧ ಶಿಷ್ಟನ ಬಾಯಿ ಜೀವದ ಬುಗ್ಗೆ, ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ.
Vena de vida es la boca del justo: mas violencia cubrirá la boca de los impíos.
12 ೧೨ ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.
El odio despierta rencillas: mas la caridad cubrirá todas las faltas.
13 ೧೩ ವಿವೇಕಿಯ ತುಟಿಗಳಿಂದ ಜ್ಞಾನ, ಬುದ್ಧಿಹೀನನ ಬೆನ್ನಿಗೆ ಬೆತ್ತ.
En los labios del prudente se halla sabiduría: y vara á las espaldas del falto de cordura.
14 ೧೪ ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವುದಿಲ್ಲ, ಮೂರ್ಖನ ಭಾಷಣ ನಾಶನಕ್ಕೆ ಸಮೀಪ.
Los sabios guardan la sabiduría: mas la boca del loco es calamidad cercana.
15 ೧೫ ಐಶ್ವರ್ಯವಂತನಿಗೆ ಐಶ್ವರ್ಯವು ಬಲವಾದ ಕೋಟೆ, ಬಡವನಿಗೆ ಅವನ ಬಡತನವೇ ನಾಶನ.
Las riquezas del rico son su ciudad fuerte; y el desmayo de los pobres es su pobreza.
16 ೧೬ ಶಿಷ್ಟನ ದುಡಿತ ಜೀವಾಸ್ಪದ, ದುಷ್ಟನ ಆದಾಯ ಪಾಪಾಸ್ಪದ.
La obra del justo [es] para vida; mas el fruto del impío [es] para pecado.
17 ೧೭ ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.
Camino á la vida es guardar la corrección: mas el que deja la reprensión, yerra.
18 ೧೮ ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ.
El que encubre el odio es de labios mentirosos; y el que echa mala fama es necio.
19 ೧೯ ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ.
En las muchas palabras no falta pecado: mas el que refrena sus labios es prudente.
20 ೨೦ ಶಿಷ್ಟರ ನಾಲಿಗೆ ಚೊಕ್ಕ ಬೆಳ್ಳಿ, ದುಷ್ಟನ ಹೃದಯ ಮೌಲ್ಯವಿಲ್ಲದ್ದು.
Plata escogida es la lengua del justo: mas el entendimiento de los impíos es como nada.
21 ೨೧ ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.
Los labios del justo apacientan á muchos: mas los necios por falta de entendimiento mueren.
22 ೨೨ ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.
La bendición de Jehová es la que enriquece, y no añade tristeza con ella.
23 ೨೩ ಅವಿವೇಕಿಗೆ ಕುಯುಕ್ತಿ ವಿನೋದ ವಿವೇಕಿಗೆ ಜ್ಞಾನ ವಿನೋದ.
Hacer abominación es como risa al insensato: mas el hombre entendido sabe.
24 ೨೪ ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವುದು, ಶಿಷ್ಟನಿಗೆ ಇಷ್ಟವು ಲಭಿಸುವುದು.
Lo que el impío teme, eso le vendrá: mas á los justos les será dado lo que desean.
25 ೨೫ ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.
Como pasa el torbellino, así el malo no permanece: mas el justo, fundado para siempre.
26 ೨೬ ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆ.
Como el vinagre á los dientes, y como el humo á los ojos, así es el perezoso á los que lo envían.
27 ೨೭ ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ, ದುಷ್ಟರ ವರ್ಷಗಳು ಅಲ್ಪ.
El temor de Jehová aumentará los días: mas los años de los impíos serán acortados.
28 ೨೮ ಶಿಷ್ಟನ ನಂಬಿಕೆಗೆ ಆನಂದವು ಫಲ, ದುಷ್ಟನ ನಿರೀಕ್ಷೆ ನಿಷ್ಫಲ.
La esperanza de los justos [es] alegría; mas la esperanza de los impíos perecerá.
29 ೨೯ ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ.
Fortaleza es al perfecto el camino de Jehová: mas espanto es á los que obran maldad.
30 ೩೦ ಶಿಷ್ಟರು ಎಂದಿಗೂ ಕದಲರು, ದುಷ್ಟರು ದೇಶದಲ್ಲಿ ನಿಲ್ಲರು.
El justo eternalmente no será removido: mas los impíos no habitarán la tierra.
31 ೩೧ ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು.
La boca del justo producirá sabiduría: mas la lengua perversa será cortada.
32 ೩೨ ಶಿಷ್ಟನ ತುಟಿಯಲ್ಲಿ ಹಿತವಚನ, ದುಷ್ಟನ ಬಾಯಲ್ಲಿ ನೀಚವಚನ.
Los labios del justo conocerán lo que agrada: mas la boca de los impíos [habla] perversidades.

< ಜ್ಞಾನೋಕ್ತಿಗಳು 10 >