< ಜ್ಞಾನೋಕ್ತಿಗಳು 11 >

1 ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ.
מֹאזְנֵ֣י מִ֭רְמָה תּוֹעֲבַ֣ת יְהוָ֑ה וְאֶ֖בֶן שְׁלֵמָ֣ה רְצוֹנֽוֹ׃
2 ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ, ದೀನತೆಯಲ್ಲಿ ಸುಜ್ಞಾನ.
בָּֽא־זָ֭דוֹן וַיָּבֹ֣א קָל֑וֹן וְֽאֶת־צְנוּעִ֥ים חָכְמָֽה׃
3 ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ, ವಂಚಕರಿಗೆ ವಕ್ರತೆಯು ನಾಶನ.
תֻּמַּ֣ת יְשָׁרִ֣ים תַּנְחֵ֑ם וְסֶ֖לֶף בּוֹגְדִ֣ים ושדם׃
4 ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.
לֹא־יוֹעִ֣יל ה֭וֹן בְּי֣וֹם עֶבְרָ֑ה וּ֝צְדָקָ֗ה תַּצִּ֥יל מִמָּֽוֶת׃
5 ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು.
צִדְקַ֣ת תָּ֭מִים תְּיַשֵּׁ֣ר דַּרְכּ֑וֹ וּ֝בְרִשְׁעָת֗וֹ יִפֹּ֥ל רָשָֽׁע׃
6 ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.
צִדְקַ֣ת יְ֭שָׁרִים תַּצִּילֵ֑ם וּ֝בְהַוַּ֗ת בֹּגְדִ֥ים יִלָּכֵֽדוּ׃
7 ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು, ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು.
בְּמ֤וֹת אָדָ֣ם רָ֭שָׁע תֹּאבַ֣ד תִּקְוָ֑ה וְתוֹחֶ֖לֶת אוֹנִ֣ים אָבָֽדָה׃
8 ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.
צַ֭דִּיק מִצָּרָ֣ה נֶחֱלָ֑ץ וַיָּבֹ֖א רָשָׁ֣ע תַּחְתָּֽיו׃
9 ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು, ಶಿಷ್ಟನು ತಿಳಿವಳಿಕೆಯಿಂದ ಉದ್ಧಾರವಾಗುವನು.
בְּפֶ֗ה חָ֭נֵף יַשְׁחִ֣ת רֵעֵ֑הוּ וּ֝בְדַ֗עַת צַדִּיקִ֥ים יֵחָלֵֽצוּ׃
10 ೧೦ ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ.
בְּט֣וּב צַ֭דִּיקִים תַּעֲלֹ֣ץ קִרְיָ֑ה וּבַאֲבֹ֖ד רְשָׁעִ֣ים רִנָּֽה׃
11 ೧೧ ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಉನ್ನತಿಗೆ ಬರುವುದು, ಕೆಟ್ಟವರ ಬಾಯಿಂದ ಕೆಡವಲ್ಪಡುವುದು.
בְּבִרְכַּ֣ת יְ֭שָׁרִים תָּר֣וּם קָ֑רֶת וּבְפִ֥י רְ֝שָׁעִ֗ים תֵּהָרֵֽס׃
12 ೧೨ ನೆರೆಯವನನ್ನು ಹೀನೈಸುವವನು ಬುದ್ಧಿಹೀನನು, ವಿವೇಕಿಯು ಮೌನವಾಗಿರುವನು.
בָּז־לְרֵעֵ֥הוּ חֲסַר־לֵ֑ב וְאִ֖ישׁ תְּבוּנ֣וֹת יַחֲרִֽישׁ׃
13 ೧೩ ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ನಂಬಿಗಸ್ತನು ಸಂಗತಿಗಳನ್ನು ಗುಪ್ತವಾಗಿಡುವನು.
הוֹלֵ֣ךְ רָ֭כִיל מְגַלֶּה־סּ֑וֹד וְנֶאֱמַן־ר֝֗וּחַ מְכַסֶּ֥ה דָבָֽר׃
14 ೧೪ ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದು ಹೋಗುವುದು, ಬಹು ಮಂದಿ ಸಮಾಲೋಚಕರು ಇರುವಲ್ಲಿ ಸಂರಕ್ಷಣೆ ಇರುವುದು.
בְּאֵ֣ין תַּ֭חְבֻּלוֹת יִפָּל־עָ֑ם וּ֝תְשׁוּעָ֗ה בְּרֹ֣ב יוֹעֵֽץ׃
15 ೧೫ ಅನ್ಯನ ಸಾಲಕ್ಕೆ ಹೊಣೆಯಾದರೆ ಹಾನಿ, ಅಪರಿಚಿತನ ಹೊಣೆಗೆ ದೂರವಾದರೆ ನಿರ್ಭಯ.
רַע־יֵ֭רוֹעַ כִּי־עָ֣רַב זָ֑ר וְשֹׂנֵ֖א תֹקְעִ֣ים בּוֹטֵֽחַ׃
16 ೧೬ ದಯಾಳುವಾದ ಹೆಂಗಸು ಗೌರವವನ್ನು ಪಡೆಯುವಳು, ಬಲಾತ್ಕಾರಿಗಳು ಧನವನ್ನು ಮಾತ್ರ ಕೂಡಿಸಿಕೊಳ್ಳುವರು.
אֵֽשֶׁת־חֵ֭ן תִּתְמֹ֣ךְ כָּב֑וֹד וְ֝עָרִיצִ֗ים יִתְמְכוּ־עֹֽשֶׁר ׃
17 ೧೭ ದಯಾಪರನಿಗೆ ಉಪಕಾರವಾಗುವುದು, ಕ್ರೂರನು ತನ್ನ ಶರೀರವನ್ನು ಹಿಂಸಿಸುವನು.
גֹּמֵ֣ל נַ֭פְשׁוֹ אִ֣ישׁ חָ֑סֶד וְעֹכֵ֥ר שְׁ֝אֵר֗וֹ אַכְזָרִֽי׃
18 ೧೮ ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿತ್ತುವವನು ಲಾಭವನ್ನು ಪಡೆಯುವನು.
רָשָׁ֗ע עֹשֶׂ֥ה פְעֻלַּת־שָׁ֑קֶר וְזֹרֵ֥עַ צְ֝דָקָ֗ה שֶׂ֣כֶר אֱמֶֽת׃
19 ೧೯ ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.
כֵּן־צְדָקָ֥ה לְחַיִּ֑ים וּמְרַדֵּ֖ף רָעָ֣ה לְמוֹתֽוֹ׃
20 ೨೦ ವಕ್ರಹೃದಯರು ಯೆಹೋವನಿಗೆ ಅಸಹ್ಯರು, ಸನ್ಮಾರ್ಗಿಗಳು ಆತನ ದಯೆಗೆ ಪಾತ್ರರು.
תּוֹעֲבַ֣ת יְ֭הוָה עִקְּשֵׁי־לֵ֑ב וּ֝רְצוֹנ֗וֹ תְּמִ֣ימֵי דָֽרֶךְ׃
21 ೨೧ ದುಷ್ಟನಿಗೆ ದಂಡನೆ ಖಂಡಿತ, ಶಿಷ್ಟವಂಶಕ್ಕೆ ರಕ್ಷಣೆ.
יָ֣ד לְ֭יָד לֹא־יִנָּ֣קֶה רָּ֑ע וְזֶ֖רַע צַדִּיקִ֣ים נִמְלָֽט׃
22 ೨೨ ಹಂದಿಯ ಮೂಗಿಗೆ ಚಿನ್ನದ ಮೂಗುತಿಯು ಹೇಗೋ, ಅವಿವೇಕಳಿಗೆ ಸೌಂದರ್ಯವು ಹಾಗೆ.
נֶ֣זֶם זָ֭הָב בְּאַ֣ף חֲזִ֑יר אִשָּׁ֥ה יָ֝פָ֗ה וְסָ֣רַת טָֽעַם׃
23 ೨೩ ಸಜ್ಜನರ ಆಶೆಯು ಮಂಗಳಾಸ್ಪದ, ದುರ್ಜನರ ನಿರೀಕ್ಷೆಯು ರೋಷಾಸ್ಪದ.
תַּאֲוַ֣ת צַדִּיקִ֣ים אַךְ־ט֑וֹב תִּקְוַ֖ת רְשָׁעִ֣ים עֶבְרָֽה׃
24 ೨೪ ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.
יֵ֣שׁ מְ֭פַזֵּר וְנוֹסָ֥ף ע֑וֹד וְחוֹשֵׂ֥ךְ מִ֝יֹּ֗שֶׁר אַךְ־לְמַחְסֽוֹר׃
25 ೨೫ ಉದಾರಿಯು ಪುಷ್ಟನಾಗುವನು, ನೀರು ಹಾಯಿಸುವವನಿಗೆ ನೀರು ಸಿಕ್ಕುವುದು.
נֶֽפֶשׁ־בְּרָכָ֥ה תְדֻשָּׁ֑ן וּ֝מַרְוֶ֗ה גַּם־ה֥וּא יוֹרֶֽא׃
26 ೨೬ ಧಾನ್ಯವನ್ನು ಬಿಗಿಹಿಡಿಯುವವನ ಮೇಲೆ ಜನರ ಶಾಪ, ಮಾರುವವನ ತಲೆಯ ಮೇಲೆ ಆಶೀರ್ವಾದ.
מֹ֣נֵֽעַ בָּ֭ר יִקְּבֻ֣הוּ לְא֑וֹם וּ֝בְרָכָ֗ה לְרֹ֣אשׁ מַשְׁבִּֽיר׃
27 ೨೭ ಧರ್ಮಕ್ಕೆ ಆತುರಪಡುವವನಿಗೆ ದಯೆ, ಕೇಡನ್ನು ಹುಡುಕುವವನಿಗೆ ಕೇಡೇ.
שֹׁ֣חֵֽר ט֭וֹב יְבַקֵּ֣שׁ רָצ֑וֹן וְדֹרֵ֖שׁ רָעָ֣ה תְבוֹאֶֽנּוּ׃
28 ೨೮ ಧನವನ್ನೇ ನಂಬಿದವನು ಬಿದ್ದುಹೋಗುವನು, ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.
בּוֹטֵ֣חַ בְּ֭עָשְׁרוֹ ה֣וּא יִפֹּ֑ל וְ֝כֶעָלֶ֗ה צַדִּיקִ֥ים יִפְרָֽחוּ׃
29 ೨೯ ತನ್ನ ಕುಟುಂಬವನ್ನು ಬಾಧಿಸುವವನಿಗೆ ಗಾಳಿಯೇ ಗಂಟು, ಮೂರ್ಖನು ಜ್ಞಾನವಂತನ ಅಧೀನದಲ್ಲಿ ಬಿದ್ದಿರುವನು;
עוֹכֵ֣ר בֵּ֭יתוֹ יִנְחַל־ר֑וּחַ וְעֶ֥בֶד אֱ֝וִ֗יל לַחֲכַם־לֵֽב׃
30 ೩೦ ಧರ್ಮಾತ್ಮನ ಫಲ ಜೀವವೃಕ್ಷ, ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.
פְּֽרִי־צַ֭דִּיק עֵ֣ץ חַיִּ֑ים וְלֹקֵ֖חַ נְפָשׂ֣וֹת חָכָֽם׃
31 ೩೧ ಶಿಷ್ಟನು ಭೂಮಿಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ, ದುಷ್ಟನೂ, ಪಾಪಿಯೂ ದಂಡನೆಯನ್ನು ಅನುಭವಿಸುವರು ಎಂದು ಹೇಳಬೇಕಾಗಿಲ್ಲ.
הֵ֣ן צַ֭דִּיק בָּאָ֣רֶץ יְשֻׁלָּ֑ם אַ֝֗ף כִּֽי־רָשָׁ֥ע וְחוֹטֵֽא׃

< ಜ್ಞಾನೋಕ್ತಿಗಳು 11 >