< ಜ್ಞಾನೋಕ್ತಿಗಳು 13 >
1 ೧ ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು, ಧರ್ಮನಿಂದಕನೋ ಗದರಿಕೆಯನ್ನು ಕೇಳನು.
১জ্ঞানবান ছেলে বাবার শাসন মানে, কিন্তু ব্যঙ্গকারী ভর্ত্সনা শোনে না।
2 ೨ ಬಾಯಿಯ ಫಲವಾಗಿ ಮನುಷ್ಯನು ಸುಖವನ್ನು ಅನುಭವಿಸುವನು, ಬಲಾತ್ಕಾರವೇ ದ್ರೋಹಿಗಳ ಕೋರಿಕೆ.
২মানুষ নিজের মুখের ফলের মাধ্যমে ভালো জিনিস ভোগ করে; কিন্তু বিশ্বাসঘাতকদের অভিলাষ উত্পীড়ন ভোগ করে।
3 ೩ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ, ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.
৩যে মুখ সাবধানে রাখে, সে প্রাণ রক্ষা করে; যে ঠোঁট বড় করে খুলে দেয়, তার সর্বনাশ হয়।
4 ೪ ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.
৪অলসের অভিলাষ লালসা করে, কিছুই পায় না; কিন্তু পরিশ্রমীদের অভিলাষ প্রচুর পরিমাণে সন্তুষ্ট হয়।
5 ೫ ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಅದನ್ನು ಮಾಡಲಾರನು, ದುಷ್ಟನ ನಡತೆಯು ಹೇಸಿಕೆಗೂ, ನಾಚಿಕೆಗೂ ಆಸ್ಪದ.
৫ধার্মিক মিথ্যা কথা ঘৃণা করে; কিন্তু দুষ্ট লোক আপত্তিকর, সে লজ্জা সৃষ্টি করে।
6 ೬ ಧರ್ಮವು ನಿರ್ದೋಷಿಯನ್ನು ಕಾಯುವುದು, ಅಧರ್ಮವು ದೋಷಿಯನ್ನು ಕೆಡವಿಬಿಡುವುದು.
৬ধার্ম্মিকতা সততাকে রক্ষা করে; কিন্তু দুষ্ট তার পাপের জন্য নিপাতিত হয়।
7 ೭ ಒಬ್ಬನು ಧನವನ್ನು ಸಂಗ್ರಹಿಸಿದರೂ, ಏನೂ ಇಲ್ಲದ ದರಿದ್ರನ ಹಾಗೆ ವರ್ತಿಸುತ್ತಾನೆ, ಮತ್ತೊಬ್ಬನು ಧನವನ್ನೆಲ್ಲಾ ವೆಚ್ಚಮಾಡಿ ಬಡವನಾದರೂ, ಬಹು ಐಶ್ವರ್ಯವಂತನ ಹಾಗೆ ವರ್ತಿಸುತ್ತಾನೆ.
৭কেউ নিজেকে ধনবান দেখায়, কিন্তু তার কিছুই নেই; কেউ বা নিজেকে গরিব দেখায়, কিন্তু তার মহাধন আছে।
8 ೮ ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಕ್ರಯ, ಬಡವನಿಗೆ ಯಾವ ಬೆದರಿಕೆಯೂ ಇಲ್ಲ.
৮মানুষের ধন তার প্রাণের প্রায়শ্চিত্ত; কিন্তু গরিব লোক ধমক শোনে না।
9 ೯ ಶಿಷ್ಟರ ಬೆಳಕು ಬೆಳಗುವುದು, ದುಷ್ಟರ ದೀಪವು ಆರುವುದು.
৯ধার্ম্মিকের আলো আনন্দ করে; কিন্তু দুষ্টদের প্রদীপ নিভে যায়।
10 ೧೦ ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.
১০অহঙ্কারে কেবল বিবাদ সৃষ্টি হয়; কিন্তু যারা পরামর্শ মানে, প্রজ্ঞা তাদের সঙ্গে।
11 ೧೧ ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.
১১অনেক অসারতায় অর্জন করা ধন ক্ষয় পায়; কিন্তু যে ব্যক্তি হাতের মাধ্যমে কাজ করে সঞ্চয় করে, সে অনেক পায়।
12 ೧೨ ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವುದು, ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.
১২আশার বিলম্ব হৃদয়ের পীড়াজনক; কিন্তু আকাঙ্খার পূর্ণতা জীবনবৃক্ষ।
13 ೧೩ ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು, ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸಫಲವನ್ನು ಹೊಂದುವನು.
১৩যে বাক্য তুচ্ছ করে, সে নিজের সর্বনাশ ঘটায়; যে সম্মানের আজ্ঞা মানে, সে পুরষ্কার পায়।
14 ೧೪ ಜ್ಞಾನಿಯ ಬೋಧನೆ ಜೀವದ ಬುಗ್ಗೆ, ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು.
১৪জ্ঞানবানের শিক্ষা জীবনের ঝরনা, তা মৃত্যুর ফাঁদ থেকে দূরে যাবার পথ।
15 ೧೫ ಸುಬುದ್ಧಿಯು ದಯಾಸ್ಪದವು, ದ್ರೋಹಿಯ ಮಾರ್ಗವು ನಾಶಕರ.
১৫সুবুদ্ধি অনুগ্রহজনক, কিন্তু বিশ্বাসঘাতকদের পথ অন্তহীন।
16 ೧೬ ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು, ಮೂಢನು ತನ್ನ ಮೂರ್ಖತನವನ್ನು ತೋರ್ಪಡಿಸುವನು.
১৬যে কেউ সতর্ক, সে জ্ঞানের সঙ্গে কাজ করে; কিন্তু নির্বোধ তার মূর্খতা প্রদর্শন করে।
17 ೧೭ ಕೆಟ್ಟ ದೂತನು ಕೇಡಿಗೆ ಬೀಳುವನು, ನಂಬಿಗಸ್ತನಾದ ರಾಯಭಾರಿಯು ಕ್ಷೇಮದಾಯಕನು.
১৭দুষ্ট দূত বিপদে পড়ে, কিন্তু বিশ্বস্ত দূত পুনর্মিলন আনে।
18 ೧೮ ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ, ಗದರಿಕೆಯನ್ನು ಗಮನಿಸುವವನಿಗೆ ಮಾನ.
১৮যে শাসন অমান্য করে, সে দরিদ্রতা ও লজ্জা পায়; কিন্তু যে সংশোধন শেখে, সে সম্মানিত হয়।
19 ೧೯ ಇಷ್ಟಸಿದ್ಧಿ ಮನಸ್ಸಿಗೆ ಸಿಹಿ, ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ.
১৯প্রাণে মধুর আকাঙ্খার উপলব্ধি হয়; কিন্তু মন্দ থেকে সরে যাওয়া নির্বোধদের ঘৃণিত।
20 ೨೦ ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.
২০জ্ঞানীদের সঙ্গে চল, জ্ঞানী হবে; কিন্তু যে নির্বোধদের বন্ধু, সে অপকার ভোগ করবে।
21 ೨೧ ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು, ಮಂಗಳವು ಸಜ್ಜನರಿಗೆ ಪ್ರತಿಫಲವಾಗುವುದು.
২১বিপর্যয় পাপীদের পরে দৌড়ায়; কিন্তু ধার্ম্মিকদেরকে ভালোর পুরষ্কার দেওয়া হয়।
22 ೨೨ ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.
২২সৎ লোক তার নাতিদের জন্য উত্তরাধিকার রেখে যায়; কিন্তু পাপীর ধন ধার্ম্মিকের জন্যে সঞ্চিত হয়।
23 ೨೩ ಬಡವರಿಗೆ ಬಂಜರು ಭೂಮಿಯೂ ಬಹು ಬೆಳೆಯನ್ನೀಯುವುದು, ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು.
২৩গরিবদের ভূমির চাষে প্রচুর খাদ্য হয়; কিন্তু অবিচারের দ্বারা তা দূরে সরে যায়।
24 ೨೪ ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು, ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ.
২৪যে শাসন না করে, সে ছেলেকে ঘৃণা করে; কিন্তু যে তাকে ভালবাসে, সে সযত্নে শাসন করে।
25 ೨೫ ಶಿಷ್ಟನು ಹೊಟ್ಟೆತುಂಬಾ ಉಣ್ಣುವನು, ದುಷ್ಟನ ಹೊಟ್ಟೆ ಹಸಿದಿರುವುದು.
২৫ধার্মিক প্রাণের তৃপ্তি পর্যন্ত আহার করে, কিন্তু দুষ্টদের পেট সবদিন ক্ষুর্ধাত থাকে।