< ಜ್ಞಾನೋಕ್ತಿಗಳು 14 >
1 ೧ ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ನಾಶಮಾಡುವಳು.
The wise among women buildeth her house; but the foolish pulleth it down with her own hands.
2 ೨ ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು, ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು.
In his uprightness walketh he that feareth the Lord; but perverse in his ways is he that despiseth him.
3 ೩ ಮೂರ್ಖನ ಮಾತುಗಳು ಅವನ ಬೆನ್ನಿಗೆ ಬೆತ್ತ, ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು.
In the mouth of the foolish is a stick [for his] pride; but the lips of the wise will preserve them.
4 ೪ ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ, ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಾಗುವುದು.
Where no oxen are, is the crib clean; but the abundance of harvests is [only] through the strength of the ox.
5 ೫ ಸತ್ಯಸಾಕ್ಷಿಯು ಸುಳ್ಳಾಡನು, ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.
A faithful witness will not lie; but a false witness constantly uttereth lies.
6 ೬ ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು.
A scorner seeketh wisdom, and there is none; but knowledge is easy to the man of understanding.
7 ೭ ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳಿವಳಿಕೆಯನ್ನೂ ಕಾಣಲಾರೆ.
Go far away from a foolish man, else thou wilt [never] know the lips of knowledge.
8 ೮ ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.
The wisdom of the prudent is to understand his way; but the folly of fools is deceit.
9 ೯ ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವುದು, ಯಥಾರ್ಥವಂತರಲ್ಲಿ (ದೇವರ) ದಯೆಯಿರುವುದು.
The fool maketh a mockery of guilt; but among the upright there is good will.
10 ೧೦ ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು, ಅವನ ಆನಂದದಲ್ಲಿಯೂ ಬೇರೆಯವರು ಪಾಲುಗಾರರಾಗುವುದಿಲ್ಲ.
The heart knoweth its own bitterness; and with its joy can no stranger intermeddle.
11 ೧೧ ದುಷ್ಟರ ಮನೆಗೆ ನಾಶನ, ಶಿಷ್ಟರ ಗುಡಾರಕ್ಕೆ ಏಳಿಗೆ.
The house of the wicked will be destroyed: but the tent of the upright will flourish.
12 ೧೨ ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.
There is many a way which seemeth even before a man; but its end are ways unto death.
13 ೧೩ ನಗುವವನಿಗೂ ಮನೋವ್ಯಥೆಯುಂಟು, ಉಲ್ಲಾಸದ ಅಂತ್ಯವು ವ್ಯಾಕುಲವೇ.
Even in laughter the heart feeleth pain; and at its end joy is sorrow.
14 ೧೪ ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.
The backslider in heart will have enough of his own ways; and from him [departeth] the good men.
15 ೧೫ ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
The simple believeth every word; but the prudent man understandeth his steps.
16 ೧೬ ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.
A wise man is fearful, and departeth from evil; but the fool exciteth himself, and is confident.
17 ೧೭ ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.
He that is soon angry committeth folly; and a man of wicked devices is hated.
18 ೧೮ ಮೂರ್ಖರಿಗೆ ಮೂರ್ಖತನವೇ ಸ್ವತ್ತು, ಜಾಣರಿಗೆ ಜ್ಞಾನವೇ ಕಿರೀಟ.
The simple inherit folly; but the prudent crown themselves with knowledge.
19 ೧೯ ಕೆಟ್ಟವರು ಒಳ್ಳೆಯವರಿಗೆ ಬಾಗುವರು, ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು.
The bad sink down before the good; and the wicked are at the gates of the righteous.
20 ೨೦ ಬಡವನು ನೆರೆಯವನಿಗೂ ಅಸಹ್ಯ, ಧನವಂತನಿಗೆ ಬಹು ಜನ ಮಿತ್ರರು.
Even to his own neighbor is the poor man hateful; but the friends of the rich are many.
21 ೨೧ ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.
He that despiseth his neighbor is a sinner; but he that is gracious to the poor—happiness attend him!
22 ೨೨ ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.
Behold, those who contrive evil are in error; but kindness and truth attend on those who contrive what is good.
23 ೨೩ ಶ್ರಮೆಯಿಂದ ಸಮೃದ್ಧಿ, ಹರಟೆಯಿಂದ ಕೊರತೆ.
In all painful labor there is profit; but mere words of the lips [lead] only to want.
24 ೨೪ ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.
The crown of the wise is their riches; but the folly of fools is [only] folly.
25 ೨೫ ಸತ್ಯಸಾಕ್ಷಿಯು ಪ್ರಾಣರಕ್ಷಕ, ಸುಳ್ಳುಸಾಕ್ಷಿಯು ವಂಚಕ.
A deliverer of souls is the true witness; but a witness of deceit uttereth lies.
26 ೨೬ ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.
In the fear of the Lord is the strong confidence [of man], and unto his children will it be a place of shelter.
27 ೨೭ ಯೆಹೋವನ ಭಯ ಜೀವದ ಬುಗ್ಗೆ, ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ.
The fear of the Lord is the source of life, [teaching] to avoid the snares of death.
28 ೨೮ ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ.
In the multitude of people is the king's glory; but in the want of a population is the downfall of the prince.
29 ೨೯ ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.
He that is slow to anger is of great understanding; but he that is hasty of spirit holdeth up [to view] his folly.
30 ೩೦ ಶಾಂತಗುಣವು ದೇಹಕ್ಕೆ ಜೀವಾಧಾರವು, ಕ್ರೋಧವು ಎಲುಬಿಗೆ ಕ್ಷಯವು.
A sound heart is the life of the body; but jealousy is the rottenness of the bones.
31 ೩೧ ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.
He that oppresseth the poor blasphemeth his Maker; but he that is gracious to the needy honoreth him.
32 ೩೨ ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.
Through his own evil is the wicked thrust down; but even in his death doth the righteous have confidence.
33 ೩೩ ವಿವೇಕಿಯ ಹೃದಯ ಜ್ಞಾನಾಶ್ರಯ, ಜ್ಞಾನಹೀನನ ಹೃದಯದಲ್ಲಿ ಅದು ಕಾಣದು.
In the heart of the man of understanding resteth wisdom: but [the little which is] in the bosom of fools is made known.
34 ೩೪ ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.
Righteousness exalteth a people; but the disgrace of nations is sin.
35 ೩೫ ಜಾಣನಾದ ಸೇವಕನಿಗೆ ರಾಜನ ಕೃಪೆ, ಮಾನಗೇಡಿಗೆ ರಾಜನ ರೌದ್ರ.
The king's favor is bestowed on an intelligent servant; but his wrath is against him that deserveth shame.