< ಜ್ಞಾನೋಕ್ತಿಗಳು 14 >

1 ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ನಾಶಮಾಡುವಳು.
Мудрая жена устроит дом свой, а глупая разрушит его своими руками.
2 ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು, ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು.
Идущий прямым путем боится Господа; но чьи пути кривы, тот небрежет о Нем.
3 ಮೂರ್ಖನ ಮಾತುಗಳು ಅವನ ಬೆನ್ನಿಗೆ ಬೆತ್ತ, ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು.
В устах глупого - бич гордости; уста же мудрых охраняют их.
4 ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ, ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಾಗುವುದು.
Где нет волов, там ясли пусты; а много прибыли от силы волов.
5 ಸತ್ಯಸಾಕ್ಷಿಯು ಸುಳ್ಳಾಡನು, ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.
Верный свидетель не лжет, а свидетель ложный наговорит много лжи.
6 ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು.
Распутный ищет мудрости, и не находит; а для разумного знание легко.
7 ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳಿವಳಿಕೆಯನ್ನೂ ಕಾಣಲಾರೆ.
Отойди от человека глупого, у которого ты не замечаешь разумных уст.
8 ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.
Мудрость разумного - знание пути своего, глупость же безрассудных - заблуждение.
9 ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವುದು, ಯಥಾರ್ಥವಂತರಲ್ಲಿ (ದೇವರ) ದಯೆಯಿರುವುದು.
Глупые смеются над грехом, а посреди праведных - благоволение.
10 ೧೦ ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು, ಅವನ ಆನಂದದಲ್ಲಿಯೂ ಬೇರೆಯವರು ಪಾಲುಗಾರರಾಗುವುದಿಲ್ಲ.
Сердце знает горе души своей, и в радость его не вмешается чужой.
11 ೧೧ ದುಷ್ಟರ ಮನೆಗೆ ನಾಶನ, ಶಿಷ್ಟರ ಗುಡಾರಕ್ಕೆ ಏಳಿಗೆ.
Дом беззаконных разорится, а жилище праведных процветет.
12 ೧೨ ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.
Есть пути, которые кажутся человеку прямыми; но конец их - путь к смерти.
13 ೧೩ ನಗುವವನಿಗೂ ಮನೋವ್ಯಥೆಯುಂಟು, ಉಲ್ಲಾಸದ ಅಂತ್ಯವು ವ್ಯಾಕುಲವೇ.
И при смехе иногда болит сердце, и концом радости бывает печаль.
14 ೧೪ ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.
Человек с развращенным сердцем насытится от путей своих, и добрый - от своих.
15 ೧೫ ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
Глупый верит всякому слову, благоразумный же внимателен к путям своим.
16 ೧೬ ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.
Мудрый боится и удаляется от зла, а глупый раздражителен и самонадеян.
17 ೧೭ ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.
Вспыльчивый может сделать глупость; но человек, умышленно делающий зло, ненавистен.
18 ೧೮ ಮೂರ್ಖರಿಗೆ ಮೂರ್ಖತನವೇ ಸ್ವತ್ತು, ಜಾಣರಿಗೆ ಜ್ಞಾನವೇ ಕಿರೀಟ.
Невежды получают в удел себе глупость, а благоразумные увенчаются знанием.
19 ೧೯ ಕೆಟ್ಟವರು ಒಳ್ಳೆಯವರಿಗೆ ಬಾಗುವರು, ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು.
Преклонятся злые пред добрыми и нечестивые - у ворот праведника.
20 ೨೦ ಬಡವನು ನೆರೆಯವನಿಗೂ ಅಸಹ್ಯ, ಧನವಂತನಿಗೆ ಬಹು ಜನ ಮಿತ್ರರು.
Бедный ненавидим бывает даже близким своим, а у богатого много друзей.
21 ೨೧ ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.
Кто презирает ближнего своего, тот грешит; а кто милосерд к бедным, тот блажен.
22 ೨೨ ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.
Не заблуждаются ли умышляющие зло? не знают милости и верности делающие зло; но милость и верность у благомыслящих.
23 ೨೩ ಶ್ರಮೆಯಿಂದ ಸಮೃದ್ಧಿ, ಹರಟೆಯಿಂದ ಕೊರತೆ.
От всякого труда есть прибыль, а от пустословия только ущерб.
24 ೨೪ ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.
Венец мудрых - богатство их, а глупость невежд глупость и есть.
25 ೨೫ ಸತ್ಯಸಾಕ್ಷಿಯು ಪ್ರಾಣರಕ್ಷಕ, ಸುಳ್ಳುಸಾಕ್ಷಿಯು ವಂಚಕ.
Верный свидетель спасает души, а лживый наговорит много лжи.
26 ೨೬ ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.
В страхе пред Господом - надежда твердая, и сынам Своим Он прибежище.
27 ೨೭ ಯೆಹೋವನ ಭಯ ಜೀವದ ಬುಗ್ಗೆ, ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ.
Страх Господень - источник жизни, удаляющий от сетей смерти.
28 ೨೮ ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ.
Во множестве народа - величие царя, а при малолюдстве народа беда государю.
29 ೨೯ ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.
У терпеливого человека много разума, а раздражительный выказывает глупость.
30 ೩೦ ಶಾಂತಗುಣವು ದೇಹಕ್ಕೆ ಜೀವಾಧಾರವು, ಕ್ರೋಧವು ಎಲುಬಿಗೆ ಕ್ಷಯವು.
Кроткое сердце - жизнь для тела, а зависть - гниль для костей.
31 ೩೧ ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.
Кто теснит бедного, тот хулит Творца его; чтущий же Его благотворит нуждающемуся.
32 ೩೨ ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.
За зло свое нечестивый будет отвергнут, а праведный и при смерти своей имеет надежду.
33 ೩೩ ವಿವೇಕಿಯ ಹೃದಯ ಜ್ಞಾನಾಶ್ರಯ, ಜ್ಞಾನಹೀನನ ಹೃದಯದಲ್ಲಿ ಅದು ಕಾಣದು.
Мудрость почиет в сердце разумного, и среди глупых дает знать о себе.
34 ೩೪ ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.
Праведность возвышает народ, а беззаконие - бесчестие народов.
35 ೩೫ ಜಾಣನಾದ ಸೇವಕನಿಗೆ ರಾಜನ ಕೃಪೆ, ಮಾನಗೇಡಿಗೆ ರಾಜನ ರೌದ್ರ.
Благоволение царя - к рабу разумному, а гнев его против того, кто позорит его.

< ಜ್ಞಾನೋಕ್ತಿಗಳು 14 >