< ಜ್ಞಾನೋಕ್ತಿಗಳು 15 >
1 ೧ ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.
溫和的回答,平息忿怒;激昂的言語,使人動怒。
2 ೨ ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.
智慧者的舌,廣傳智慧;愚昧人的口,吐露愚昧。
3 ೩ ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು.
上主的眼目,處處都在;善人和惡人,他都監視。
4 ೪ ಸಂತೈಸುವ ನಾಲಿಗೆ ಜೀವವೃಕ್ಷವು, ಬಲತ್ಕರಿಸುವ ನಾಲಿಗೆ ಮನಮುರಿಯುವುದು.
撫慰的言辭,有如生命樹;刻薄的言語,能刺傷人心。
5 ೫ ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು, ಗದರಿಕೆಯನ್ನು ಗಮನಿಸುವವನು ಜಾಣನು.
愚蠢的人,輕視父親的管教;遵守規勸的,為人必精明。
6 ೬ ಶಿಷ್ಟನ ಮನೆಯಲ್ಲಿ ದೊಡ್ಡ ನಿಧಿ, ದುಷ್ಟನ ಆದಾಯವು ನಷ್ಟಕ್ಕೆ ದಾರಿ.
在義人家裏,財產豐富;惡人的收入,必遭毀滅。
7 ೭ ಜ್ಞಾನಿಗಳ ತುಟಿಗಳು ತಿಳಿವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವುದೇ ಇಲ್ಲ.
智慧人的唇,散播智識;愚昧人的心,實不可靠。
8 ೮ ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.
上主厭惡惡人的祭獻,卻喜悅正直人的祈禱。
9 ೯ ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ, ಧರ್ಮಾಸಕ್ತನು ಆತನಿಗೆ ಪ್ರಿಯ.
上主厭惡惡人的道路,卻喜愛追求正義的人。
10 ೧೦ ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು.
離棄正道的,必遭嚴罰;憎恨規勸的,只有死亡。
11 ೧೧ ಪಾತಾಳವೂ, ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಆತನಿಗೆ ಮತ್ತೂ ಸ್ಪಷ್ಟ. (Sheol )
陰府和冥域,都明擺在上主面前,何況世人的心懷! (Sheol )
12 ೧೨ ಧರ್ಮನಿಂದಕನು ಗದರಿಕೆಯನ್ನು ಕೇಳನು, ಜ್ಞಾನಿಗಳ ಸಂಗಡ ಸೇರನು.
輕狂者不愛受人指責,也不願與智慧人往來。
13 ೧೩ ಹರ್ಷ ಹೃದಯದಿಂದ ಹಸನ್ಮುಖ, ಮನೋವ್ಯಥೆಯಿಂದ ಆತ್ಮಭಂಗ.
心中愉快,使面容煥發;心中悲傷,精神即頹喪。
14 ೧೪ ವಿವೇಕಿಯ ಹೃದಯ ತಿಳಿವಳಿಕೆಯನ್ನು ಹುಡುಕುವುದು, ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವುದು.
明達人的心,尋求智識;愚昧人的口,飽食昏愚。
15 ೧೫ ದೀನನ ದಿನಗಳೆಲ್ಲಾ ದುಃಖಭರಿತ, ಹರ್ಷಹೃದಯನಿಗೆ ನಿತ್ಯವೂ ಔತಣ.
心情憂傷的,日日困坐愁城;心胸暢快的,時時如享喜宴。
16 ೧೬ ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು.
少有財寶而敬畏上主,勝於富有財寶而諸多煩惱。
17 ೧೭ ದ್ವೇಷವಿರುವಲ್ಲಿ ಮೃಷ್ಟಾನ್ನಕ್ಕಿಂತಲೂ, ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ.
有情吃蔬菜,勝於無情食肥牛。
18 ೧೮ ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.
易怒的人,常引起爭端;含忍的人,卻平息爭論。
19 ೧೯ ಸೋಮಾರಿಯ ಮಾರ್ಗ ಮುಳ್ಳುಬೇಲಿ, ಯಥಾರ್ಥವಂತನ ಮಾರ್ಗ ರಾಜಮಾರ್ಗ.
懶惰人的道路,有如荊棘籬笆;正直人的行徑,卻是康莊大道。
20 ೨೦ ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು, ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.
智慧的兒子,是父親的喜樂;只有愚昧人,輕視自己的母親。
21 ೨೧ ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು, ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು.
無知的人,以愚昧為樂;明智的人,卻直道而行。
22 ೨೨ ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು.
缺乏考慮,計劃必要失敗;謀士眾多,策略方克有成。
23 ೨೩ ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ! ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ!
應對得當,自覺快慰;言語適時,何其舒暢!
24 ೨೪ ಜೀವದ ಮಾರ್ಗವು ವಿವೇಕಿಯನ್ನು ಮೇಲಕ್ಕೆತ್ತುವುದು; ಅದು ಅವನನ್ನು ಪಾತಾಳದಿಂದ ತಪ್ಪಿಸುವುದು. (Sheol )
生命之路使明智人向上,為此他能避免向下的陰府。 (Sheol )
25 ೨೫ ಯೆಹೋವನು ಗರ್ವಿಷ್ಠನ ಮನೆಯನ್ನು ಕೆಡವಿಬಿಡುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು.
上主將拆毀驕傲人的房屋,卻要堅定寡婦的地界。
26 ೨೬ ಕುಯುಕ್ತಿಯು ಯೆಹೋವನಿಗೆ ಅಸಹ್ಯ, ನಯನುಡಿಯು ಆತನಿಗೆ ಪ್ರಿಯ.
邪惡的陰謀,為上主所憎惡;溫良的言語,卻為他所喜悅。
27 ೨೭ ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.
貪求財貨的,困擾自己的家庭;憎惡饋贈的,生活必能安定。
28 ೨೮ ಶಿಷ್ಟನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ, ದುಷ್ಟನ ಬಾಯಿ ಕೆಟ್ಟದ್ದನ್ನು ಕಾರುತ್ತದೆ.
義人的心,只默思善事;惡人的口,只吐露惡語。
29 ೨೯ ಯೆಹೋವನು ದುಷ್ಟರಿಗೆ ದೂರ, ಶಿಷ್ಟರ ಬಿನ್ನಹಕ್ಕೆ ಹತ್ತಿರ.
上主遠離惡人,卻俯聽義人的祈禱。
30 ೩೦ ಹಸನ್ಮುಖ ಹೃದಯಕ್ಕೆ ಆನಂದ, ಶುಭಸಮಾಚಾರ ದೇಹಕ್ಕೆ ಆರೋಗ್ಯ.
晶瑩的目光,使人心曠神怡;美好的訊息,使人筋骨壯健。
31 ೩೧ ಜೀವಪ್ರದವಾದ ಗದರಿಕೆಗೆ ಕಿವಿಗೊಡುವವನು, ಜ್ಞಾನಿಗಳ ನಡುವೆ ನೆಲೆಗೊಳ್ಳುವನು.
喜聽有益生命勸戒的人,必得列於智慧人的中間。
32 ೩೨ ಶಿಕ್ಷೆಯನ್ನು ತಿರಸ್ಕರಿಸುವವನು ತನ್ನನ್ನೇ ನಿರಾಕರಿಸಿಕೊಳ್ಳುವನು, ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.
避免教導的,是作賤自己;聽從規勸的,必獲得機智。
33 ೩೩ ಯೆಹೋವನ ಭಯವೇ ಜ್ಞಾನೋಪದೇಶ, ಗೌರವಕ್ಕೆ ಮೊದಲು ವಿನಯ.
敬畏上主,是智慧的導師;謙卑自下,是榮耀的先聲。