< ಜ್ಞಾನೋಕ್ತಿಗಳು 16 >

1 ಹೃದಯದ ಸಂಕಲ್ಪವು ಮನುಷ್ಯನ ವಶವು, ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವುದು.
to/for man plan heart and from LORD answer tongue
2 ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧವಾಗಿದೆ, ಯೆಹೋವನು ಅಂತರಂಗವನ್ನೇ ಪರೀಕ್ಷಿಸುವನು.
all way: conduct man pure in/on/with eye his and to measure spirit LORD
3 ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ, ನಿನ್ನ ಉದ್ದೇಶಗಳು ಸಫಲವಾಗುವವು.
to roll to(wards) LORD deed: work your and to establish: establish plot your
4 ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ.
all to work LORD to/for answer his and also wicked to/for day distress: harm
5 ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ, ಅವರಿಗೆ ದಂಡನೆ ಖಂಡಿತ.
abomination LORD all high heart hand: certainly to/for hand: certainly not to clear
6 ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.
in/on/with kindness and truth: faithful to atone iniquity: crime and in/on/with fear LORD to turn aside: depart from bad: evil
7 ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.
in/on/with to accept LORD way: conduct man also enemy his to ally with him
8 ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ, ನ್ಯಾಯದಿಂದ ಕೂಡಿಸಿದ ಅಲ್ಪ ಧನವೇ ಲೇಸು.
pleasant little in/on/with righteousness from abundance produce in/on/with not justice
9 ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.
heart man to devise: devise way: journey his and LORD to establish: establish step his
10 ೧೦ ರಾಜನ ತುಟಿಗಳಲ್ಲಿ ದೈವೋಕ್ತಿ, ನ್ಯಾಯತೀರಿಸುವುದರಲ್ಲಿ ಅವನ ಬಾಯಿ ತಪ್ಪಿಹೋಗದು.
divination upon lips king in/on/with justice: judgement not be unfaithful lip his
11 ೧೧ ನ್ಯಾಯದ ಅಳತೆ ಮತ್ತು ತಕ್ಕಡಿಗಳು ಯೆಹೋವನ ಏರ್ಪಾಡು, ಚೀಲದಲ್ಲಿನ ತೂಕದಕಲ್ಲುಗಳೆಲ್ಲಾ ಆತನ ಕೈಕೆಲಸವೇ.
balance and balance justice to/for LORD deed his all stone: weight purse
12 ೧೨ ರಾಜರು ಸಿಂಹಾಸನಕ್ಕೆ ಧರ್ಮವೇ ಆಧಾರವೆಂದು ತಿಳಿದು, ಅಧರ್ಮವನ್ನಾಚರಿಸಲು ಅಸಹ್ಯಪಡುವರು.
abomination king to make: do wickedness for in/on/with righteousness to establish: establish throne
13 ೧೩ ರಾಜರು ಸತ್ಯದ ತುಟಿಗಳನ್ನು ಮೆಚ್ಚುವರು, ಯಥಾರ್ಥವಾದಿಯನ್ನು ಪ್ರೀತಿಸುವರು.
acceptance king lips righteousness and to speak: speak upright to love: lover
14 ೧೪ ರಾಜನ ಕೋಪ ಮೃತ್ಯುವಿನ ದೂತ, ಜಾಣನು ಅದನ್ನು ಶಮನಪಡಿಸುವನು.
rage king messenger death and man wise to atone her
15 ೧೫ ಪ್ರಭುವಿನ ಮುಖಪ್ರಸನ್ನತೆ ಜೀವ, ಆತನ ದಯೆ ಮುಂಗಾರುಮುಗಿಲು.
in/on/with light face king life and acceptance his like/as cloud spring rain
16 ೧೬ ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.
to buy wisdom what? pleasant from gold and to buy understanding to choose from silver: money
17 ೧೭ ಸತ್ಯವಂತನ ರಾಜಮಾರ್ಗ ಹಾನಿಗೆ ದೂರ, ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು.
highway upright to turn aside: depart from bad: evil to keep: guard soul: life his to watch way: conduct his
18 ೧೮ ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.
to/for face: before breaking pride and to/for face: before stumbling height spirit
19 ೧೯ ಸೊಕ್ಕಿನವರ ಸಂಗಡ ಸೂರೆಯನ್ನು ಹಂಚಿಕೊಳ್ಳುವುದಕ್ಕಿಂತಲೂ, ದೀನರ ಸಂಗಡ ದೈನ್ಯದಿಂದಿರುವುದು ವಾಸಿ.
pleasant to abase spirit with (poor *Q(K)*) from to divide spoil with proud
20 ೨೦ ದೇವರ ವಾಕ್ಯವನ್ನು ಸ್ಮರಿಸುವವನು ಸುಕ್ಷೇಮವನ್ನು ಪಡೆಯುವನು, ಯೆಹೋವನಲ್ಲಿ ಭರವಸವಿಡುವವನು ಭಾಗ್ಯವಂತನು.
be prudent upon word to find good and to trust in/on/with LORD blessed he
21 ೨೧ ಜ್ಞಾನಹೃದಯರಿಗೆ ಜಾಣರೆಂಬ ಬಿರುದು ಬರುವುದು, ಸವಿತುಟಿಯಿಂದ ಉಪದೇಶ ಶಕ್ತಿಯು ಹೆಚ್ಚುವುದು.
to/for wise heart to call: call to to understand and sweetness lip: words to add teaching
22 ೨೨ ವಿವೇಕಿಗೆ ವಿವೇಕವೇ ಜೀವದ ಬುಗ್ಗೆ, ಮೂರ್ಖನಿಗೆ ಮೂರ್ಖತನವೇ ದಂಡನೆ.
fountain life understanding master: owning his and discipline fool(ish) folly
23 ೨೩ ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು.
heart wise be prudent lip: word his and upon lips his to add teaching
24 ೨೪ ಸವಿನುಡಿಯು ಜೇನುಕೊಡ, ಅದು ಆತ್ಮಕ್ಕೆ ಸಿಹಿ, ಎಲುಬಿಗೆ ಕ್ಷೇಮ.
honeycomb honey word pleasantness sweet to/for soul and healing to/for bone: body
25 ೨೫ ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು, ಕಟ್ಟಕಡೆಗೆ ಅದು ಮರಣಮಾರ್ಗವೇ.
there way: conduct upright to/for face of man and end her way: conduct death
26 ೨೬ ದುಡಿಯುವವನಿಗೆ ಅವನ ಹೊಟ್ಟೆಯೇ ದುಡಿಯುವಂತೆ ಮಾಡುವುದು, ದುಡಿಯಲಿಕ್ಕೆ ಅವನ ಬಾಯೇ ಅವನನ್ನು ಒತ್ತಾಯ ಮಾಡುವುದು.
soul: appetite labour(er) to toil to/for him for to crave upon him lip his
27 ೨೭ ನೀಚನು ಕೇಡೆಂಬ ಕುಣಿಯನ್ನು ತೋಡುತ್ತಾನೆ, ಅವನ ಮಾತುಗಳು ಬೆಂಕಿಯ ಉರಿಯಂತಿದೆ.
man Belial: worthless to pierce distress: evil and upon (lip: words his *Q(K)*) like/as fire burning
28 ೨೮ ತುಂಟನು ಜಗಳ ಬಿತ್ತುತ್ತಾನೆ, ಚಾಡಿಕೋರನು ಮಿತ್ರರನ್ನು ಅಗಲಿಸುತ್ತಾನೆ.
man perversity to send: depart strife and to grumble to separate tame
29 ೨೯ ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುವನು.
man violence to entice neighbor his and to go: take him in/on/with way: conduct not pleasant
30 ೩೦ ಕಣ್ಣನ್ನು ಮುಚ್ಚಿಕೊಳ್ಳುವವನು ಕುಯುಕ್ತಿಯನ್ನು ಕಲ್ಪಿಸುವನು, ತುಟಿಯನ್ನು ಕಚ್ಚುವವನು ಕೇಡನ್ನು ಸಾಧಿಸುವನು.
to shut eye his to/for to devise: devise perversity to wink lips his to end: decides distress: evil
31 ೩೧ ನರೆಗೂದಲೇ ಸುಂದರ ಕಿರೀಟವು, ಅದು ಧರ್ಮಮಾರ್ಗದಲ್ಲಿ ದೊರಕುವುದು.
crown beauty greyheaded in/on/with way: conduct righteousness to find
32 ೩೨ ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.
pleasant slow face: anger from mighty man and to rule in/on/with spirit his from to capture city
33 ೩೩ ಮಡಲಿನಲ್ಲಿ ಚೀಟು ಹಾಕಬಹುದು, ಅದರ ತೀರ್ಪು ಯೆಹೋವನದೇ.
in/on/with bosom: lap to cast [obj] [the] allotted and from LORD all justice: judgement his

< ಜ್ಞಾನೋಕ್ತಿಗಳು 16 >