< ಜ್ಞಾನೋಕ್ತಿಗಳು 17 >

1 ವ್ಯಾಜ್ಯದ ಮನೆಯಲ್ಲಿ ತುಂಬಿದ ಔತಣಕ್ಕಿಂತಲೂ, ಸಮಾಧಾನದ ಒಣತುತ್ತೇ ಮೇಲು.
Melhor é um bocado secco, e com elle a tranquillidade, do que a casa cheia de victimas, com contenda.
2 ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರಮಾಡುವನು, ಮನೆಮಕ್ಕಳೊಂದಿಗೆ ಬಾಧ್ಯತೆಯನ್ನು ಹೊಂದುವನು.
O servo prudente dominará sobre o filho que faz envergonhar; e entre os irmãos repartirá a herança.
3 ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.
O crisol é para a prata, e o forno para o oiro; mas o Senhor prova os corações.
4 ಕೆಡುಕನು ಕೆಟ್ಟ ತುಟಿಗಳನ್ನು ಗಮನಿಸುವನು, ಸುಳ್ಳುಗಾರನು ನಾಶನದ ನಾಲಿಗೆಗೆ ಕಿವಿಗೊಡುವನು.
O malfazejo attenta para o labio iniquo: o mentiroso inclina os ouvidos á lingua maligna.
5 ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.
O que escarnece do pobre insulta ao que o creou: o que se alegra da calamidade não ficará innocente.
6 ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ, ತಂದೆತಾಯಿಗಳು ಮಕ್ಕಳಿಗೆ ಭೂಷಣ.
Corôa dos velhos são os filhos dos filhos; e a gloria dos filhos são seus paes.
7 ಉತ್ತಮವಾದ ಮಾತು ಮೂರ್ಖನಿಗೆ ಅಯುಕ್ತ, ಸುಳ್ಳುಮಾತು ಉತ್ತಮನಿಗೆ ಮತ್ತೂ ಅಯುಕ್ತ.
Não convem ao tolo o labio excellente: quanto menos ao principe o labio mentiroso.
8 ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ.
Pedra preciosa é o presente aos olhos dos que o recebem; para onde quer que se volver, servirá de proveito.
9 ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು, ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.
O que encobre a transgressão busca a amizade, mas o que renova a coisa, separa os maiores amigos.
10 ೧೦ ಮಂದಮತಿಗೆ ನೂರು ಪೆಟ್ಟು ಹೊಡೆಯುವುದಕ್ಕಿಂತಲೂ, ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ.
Mais profundamente entra a reprehensão no prudente, do que cem açoites no tolo.
11 ೧೧ ದುರಾತ್ಮನಿಗೆ ದಂಗೆಯ ಮೇಲೆಯೇ ಮನಸ್ಸು, ಕ್ರೂರದೂತನು ಅವನನ್ನು ಆಕ್ರಮಿಸುವನು.
Na verdade o rebelde não busca senão o mal, mas mensageiro cruel se enviará contra elle.
12 ೧೨ ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು.
Encontre-se com o homem a ursa roubada dos filhos; mas não o louco na sua estulticia.
13 ೧೩ ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡು ತಪ್ಪದು.
Quanto áquelle que torna mal por bem, não se apartará o mal da sua casa.
14 ೧೪ ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.
Como o que solta as aguas, é o principio da contenda, pelo que, antes que sejas envolto, deixa a porfia.
15 ೧೫ ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.
O que justifica ao impio, e condemna ao justo, ambos são abominaveis ao Senhor, tanto um como o outro.
16 ೧೬ ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.
De que serviria o preço na mão do tolo para comprar a sabedoria, visto que não tem entendimento?
17 ೧೭ ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.
Em todo o tempo ama o amigo; e para a angustia nasce o irmão.
18 ೧೮ ನೆರೆಯವನಿಗಾಗಿ ಪ್ರಮಾಣಮಾಡಿ ಹೊಣೆಯಾದವನು ಬುದ್ಧಿಹೀನನೇ ಸರಿ.
O homem falto d'entendimento dá a mão, ficando por fiador diante do seu companheiro.
19 ೧೯ ಪಾಪಪ್ರಿಯನು ಕಲಹಪ್ರಿಯ, ಸೊಕ್ಕಿನಿಂದ ಮಾತನಾಡುವವನು ಕೇಡು ಬರಮಾಡಿಕೊಳ್ಳುವನು.
O que ama a contenda ama a transgressão; o que alça a sua porta busca a ruina.
20 ೨೦ ವಕ್ರ ಹೃದಯನು ಶುಭವನ್ನು ಪಡೆಯನು, ಕೆಟ್ಟ ನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು.
O perverso de coração nunca achará o bem; e o que tem a lingua dobre virá a cair no mal
21 ೨೧ ಮೂರ್ಖನನ್ನು ಹೆತ್ತವರಿಗೆ ವ್ಯಥೆ, ಮೂರ್ಖನ ತಂದೆಗೆ ವ್ಯಸನ.
O que gera a um tolo para a sua tristeza o faz; e o pae do insensato não se alegrará.
22 ೨೨ ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ.
O coração alegre serve de bom remedio, mas o espirito abatido virá a seccar os ossos.
23 ೨೩ ದುಷ್ಟನು ಲಂಚವನ್ನು ಗುಪ್ತವಾಗಿ ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುವನು.
O impio tomará o presente do seio, para perverter as veredas da justiça.
24 ೨೪ ವಿವೇಕಿಗೆ ಜ್ಞಾನವೇ ಗುರಿಯಾಗಿರುವುದು, ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವುದು.
No rosto do entendido se vê a sabedoria, porém os olhos do louco estão nas extremidades da terra.
25 ೨೫ ಜ್ಞಾನಹೀನನಾದ ಮಗನು ತಂದೆಗೆ ಕಿರಿಕಿರಿ, ತಾಯಿಗೆ ಕರಕರೆ.
O filho insensato é tristeza para seu pae, e amargura para a que o pariu.
26 ೨೬ ಶಿಷ್ಟನಿಗೆ ದಂಡನೆ ಯುಕ್ತವಲ್ಲ, ಧರ್ಮಿಷ್ಠನಿಗೆ ಪೆಟ್ಟು ಅಧರ್ಮ.
Não é bom tambem pôr pena ao justo, nem que firam os principes ao que obra justamente.
27 ೨೭ ಮಿತವಾಗಿ ಮಾತನಾಡುವವನು ಜ್ಞಾನಿ, ಶಾಂತಾತ್ಮನು ವಿವೇಕಿ.
Retem as suas palavras o que possue o conhecimento, e o homem d'entendimento é de precioso espirito.
28 ೨೮ ಮೂಢನು ಕೂಡ ಸುಮ್ಮನಿದ್ದರೆ ಜ್ಞಾನಿಯೆಂತಲೂ, ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು.
Até o tolo, quando se cala, será reputado por sabio; e o que cerrar os seus labios por entendido.

< ಜ್ಞಾನೋಕ್ತಿಗಳು 17 >