< ಜ್ಞಾನೋಕ್ತಿಗಳು 18 >
1 ೧ ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು.
A man seeketh, for satisfaction, going his own way, through all safe counsel, he breaketh.
2 ೨ ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ.
A dullard, delighteth not, in understanding, in nothing save the exposing of his own heart.
3 ೩ ದುರಾಚಾರವಿದ್ದಲ್ಲಿ ತಾತ್ಸಾರ; ಅವಮಾನವಿದ್ದಲ್ಲಿ ಧಿಕ್ಕಾರ.
When the lawless man cometh in, then cometh also contempt, and, with shame, reproach.
4 ೪ ಸತ್ಪುರುಷನ ನುಡಿಯು ಆಳವಾದ ನೀರು, ಜ್ಞಾನದ ಬುಗ್ಗೆ, ಹರಿಯುವ ತೊರೆ.
Deep waters, are the words of a man’s mouth, —a bubbling brook, the well-spring of wisdom.
5 ೫ ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ.
To prefer a lawless man, is not good, thrusting away the righteous, in judgment.
6 ೬ ಜ್ಞಾನಹೀನನ ತುಟಿಗಳು ಜಗಳವನ್ನು ಉಂಟುಮಾಡುತ್ತವೆ, ಅವನ ಬಾಯಿ ಪೆಟ್ಟುತಿನ್ನುವುದಕ್ಕೆ ಕೂಗಿಕೊಳ್ಳುತ್ತದೆ.
the lips of a dullard, enter into contention, and his mouth, for blows, crieth out.
7 ೭ ಜ್ಞಾನಹೀನನಿಗೆ ಬಾಯಿ ನಾಶ, ತುಟಿಗಳು ಪಾಶ.
The mouth of a dullard, is his ruin, and, his lips, are a snare to his soul.
8 ೮ ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಹೊಟ್ಟೆಯೊಳಕ್ಕೇ ಇಳಿಯುವವು.
the words of a tattler, are dainties, they, therefore go down into the chambers of the inner man.
9 ೯ ಕೆಲಸಗಳ್ಳನು ಕೆಡುಕನಿಗೆ ತಮ್ಮ.
Surely he that is slothful in his work, brother, is he to a master at laying waste.
10 ೧೦ ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.
A tower of strength, is the Name of Yahweh, thereinto, runneth the righteous, and is safe.
11 ೧೧ ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು, ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ.
The substance of a rich man, is his strong city, and like a high wall, in his imagination.
12 ೧೨ ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.
Before grievous injury, a man’s heart is haughty, and, before honour, is humility.
13 ೧೩ ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.
He that answereth before he heareth, a folly, it is to him, and, a reproach.
14 ೧೪ ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು, ಆತ್ಮವೇ ನೊಂದರೆ ಸಹಿಸುವವರು ಯಾರು?
The spirit of a man, sustaineth his sickness, but, a dejected spirit, who can bear it?
15 ೧೫ ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು.
the heart of the intelligent, acquireth knowledge, yea, the ear of the wise, seeketh knowledge.
16 ೧೬ ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.
The gift of a man, maketh room for him, and, before great men, setteth him down.
17 ೧೭ ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು, ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವುದು.
Righteous is he that is first in his own cause, then cometh his neighbour, and thoroughly searcheth him.
18 ೧೮ ಚೀಟು ಹಾಕುವುದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವುದು.
The lot causeth, contentions, to cease, and, the mighty, it parteth.
19 ೧೯ ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.
A brother estranged, [is worse] than a strong city, —and, contentions, are as the bar of a citadel.
20 ೨೦ ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು, ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು.
Of the fruit of a man’s mouth, shall his inmost mind be satisfied, with the product of his lips, shall he be satisfied.
21 ೨೧ ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,
Death and life, are in the power of the tongue, and, its friends, shall eat its fruits.
22 ೨೨ ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.
Who hath found a wife, hath found a blessing, and hath obtained favour from Yahweh.
23 ೨೩ ಬಡವನು ಬಿನ್ನೈಸುವನು, ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.
Supplications, doth the poor man utter, but, the rich, answereth fiercely.
24 ೨೪ ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.
A man having [many] friends, shall come to ruin, but there is a loving one, who sticketh closer than a brother.