< ಜ್ಞಾನೋಕ್ತಿಗಳು 18 >

1 ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು.
לְֽ֭תַאֲוָה יְבַקֵּ֣שׁ נִפְרָ֑ד בְּכָל־תּ֝וּשִׁיָּ֗ה יִתְגַּלָּֽע׃
2 ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ.
לֹֽא־יַחְפֹּ֣ץ כְּ֭סִיל בִּתְבוּנָ֑ה כִּ֝֗י אִֽם־בְּהִתְגַּלּ֥וֹת לִבּֽוֹ׃
3 ದುರಾಚಾರವಿದ್ದಲ್ಲಿ ತಾತ್ಸಾರ; ಅವಮಾನವಿದ್ದಲ್ಲಿ ಧಿಕ್ಕಾರ.
בְּֽבוֹא־רָ֭שָׁע בָּ֣א גַם־בּ֑וּז וְֽעִם־קָל֥וֹן חֶרְפָּֽה׃
4 ಸತ್ಪುರುಷನ ನುಡಿಯು ಆಳವಾದ ನೀರು, ಜ್ಞಾನದ ಬುಗ್ಗೆ, ಹರಿಯುವ ತೊರೆ.
מַ֣יִם עֲ֭מֻקִּים דִּבְרֵ֣י פִי־אִ֑ישׁ נַ֥חַל נֹ֝בֵ֗עַ מְק֣וֹר חָכְמָֽה׃
5 ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ.
שְׂאֵ֣ת פְּנֵי־רָשָׁ֣ע לֹא־ט֑וֹב לְהַטּ֥וֹת צַ֝דִּ֗יק בַּמִּשְׁפָּֽט׃
6 ಜ್ಞಾನಹೀನನ ತುಟಿಗಳು ಜಗಳವನ್ನು ಉಂಟುಮಾಡುತ್ತವೆ, ಅವನ ಬಾಯಿ ಪೆಟ್ಟುತಿನ್ನುವುದಕ್ಕೆ ಕೂಗಿಕೊಳ್ಳುತ್ತದೆ.
שִׂפְתֵ֣י כְ֭סִיל יָבֹ֣אֽוּ בְרִ֑יב וּ֝פִ֗יו לְֽמַהֲלֻמ֥וֹת יִקְרָֽא׃
7 ಜ್ಞಾನಹೀನನಿಗೆ ಬಾಯಿ ನಾಶ, ತುಟಿಗಳು ಪಾಶ.
פִּֽי־כְ֭סִיל מְחִתָּה־ל֑וֹ וּ֝שְׂפָתָ֗יו מוֹקֵ֥שׁ נַפְשֽׁוֹ׃
8 ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಹೊಟ್ಟೆಯೊಳಕ್ಕೇ ಇಳಿಯುವವು.
דִּבְרֵ֣י נִ֭רְגָּן כְּמִֽתְלַהֲמִ֑ים וְ֝הֵ֗ם יָרְד֥וּ חַדְרֵי־בָֽטֶן׃
9 ಕೆಲಸಗಳ್ಳನು ಕೆಡುಕನಿಗೆ ತಮ್ಮ.
גַּ֭ם מִתְרַפֶּ֣ה בִמְלַאכְתּ֑וֹ אָ֥ח ה֝֗וּא לְבַ֣עַל מַשְׁחִֽית׃
10 ೧೦ ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.
מִגְדַּל־עֹ֭ז שֵׁ֣ם יְהוָ֑ה בּֽוֹ־יָר֖וּץ צַדִּ֣יק וְנִשְׂגָּֽב׃
11 ೧೧ ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು, ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ.
ה֣וֹן עָ֭שִׁיר קִרְיַ֣ת עֻזּ֑וֹ וּכְחוֹמָ֥ה נִ֝שְׂגָּבָ֗ה בְּמַשְׂכִּיתֽוֹ׃
12 ೧೨ ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.
לִפְנֵי־שֶׁ֭בֶר יִגְבַּ֣הּ לֵב־אִ֑ישׁ וְלִפְנֵ֖י כָב֣וֹד עֲנָוָֽה׃
13 ೧೩ ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.
מֵשִׁ֣יב דָּ֭בָר בְּטֶ֣רֶם יִשְׁמָ֑ע אִוֶּ֥לֶת הִיא־ל֝֗וֹ וּכְלִמָּֽה׃
14 ೧೪ ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು, ಆತ್ಮವೇ ನೊಂದರೆ ಸಹಿಸುವವರು ಯಾರು?
רֽוּחַ־אִ֭ישׁ יְכַלְכֵּ֣ל מַחֲלֵ֑הוּ וְר֥וּחַ נְ֝כֵאָ֗ה מִ֣י יִשָּׂאֶֽנָּה׃
15 ೧೫ ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು.
לֵ֣ב נָ֭בוֹן יִקְנֶה־דָּ֑עַת וְאֹ֥זֶן חֲ֝כָמִ֗ים תְּבַקֶּשׁ־דָּֽעַת׃
16 ೧೬ ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.
מַתָּ֣ן אָ֭דָם יַרְחִ֣יב ל֑וֹ וְלִפְנֵ֖י גְדֹלִ֣ים יַנְחֶֽנּוּ׃
17 ೧೭ ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು, ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವುದು.
צַדִּ֣יק הָרִאשׁ֣וֹן בְּרִיב֑וֹ וּבָֽא רֵ֝עֵ֗הוּ וַחֲקָרֽוֹ׃
18 ೧೮ ಚೀಟು ಹಾಕುವುದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವುದು.
מִ֭דְיָנִים יַשְׁבִּ֣ית הַגּוֹרָ֑ל וּבֵ֖ין עֲצוּמִ֣ים יַפְרִֽיד׃
19 ೧೯ ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.
אָ֗ח נִפְשָׁ֥ע מִקִּרְיַת־עֹ֑ז וּ֝מִדְיָנִ֗ים כִּבְרִ֥יחַ אַרְמֽוֹן׃
20 ೨೦ ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು, ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು.
מִפְּרִ֣י פִי־אִ֭ישׁ תִּשְׂבַּ֣ע בִּטְנ֑וֹ תְּבוּאַ֖ת שְׂפָתָ֣יו יִשְׂבָּֽע׃
21 ೨೧ ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,
מָ֣וֶת וְ֭חַיִּים בְּיַד־לָשׁ֑וֹן וְ֝אֹהֲבֶ֗יהָ יֹאכַ֥ל פִּרְיָֽהּ׃
22 ೨೨ ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.
מָצָ֣א אִ֭שָּׁה מָ֣צָא ט֑וֹב וַיָּ֥פֶק רָ֝צ֗וֹן מֵיְהוָֽה׃
23 ೨೩ ಬಡವನು ಬಿನ್ನೈಸುವನು, ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.
תַּחֲנוּנִ֥ים יְדַבֶּר־רָ֑שׁ וְ֝עָשִׁ֗יר יַעֲנֶ֥ה עַזּֽוֹת׃
24 ೨೪ ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.
אִ֣ישׁ רֵ֭עִים לְהִתְרֹעֵ֑עַ וְיֵ֥שׁ אֹ֝הֵ֗ב דָּבֵ֥ק מֵאָֽח׃

< ಜ್ಞಾನೋಕ್ತಿಗಳು 18 >