< ಜ್ಞಾನೋಕ್ತಿಗಳು 19 >
1 ೧ ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ.
१जो निर्धन खराई से चलता है, वह उस मूर्ख से उत्तम है जो टेढ़ी बातें बोलता है।
2 ೨ ತಿಳಿವಳಿಕೆಯಿಲ್ಲದೆ ಕೋರುವುದು ಯುಕ್ತವಲ್ಲ, ದುಡುಕುವ ಕಾಲು ದಾರಿತಪ್ಪುವುದು.
२मनुष्य का ज्ञानरहित रहना अच्छा नहीं, और जो उतावली से दौड़ता है वह चूक जाता है।
3 ೩ ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು, ಯೆಹೋವನ ಮೇಲೆ ಕುದಿಯುವನು.
३मूर्खता के कारण मनुष्य का मार्ग टेढ़ा होता है, और वह मन ही मन यहोवा से चिढ़ने लगता है।
4 ೪ ಭಾಗ್ಯವಂತನಿಗೆ ಬಹು ಮಂದಿ ಸ್ನೇಹಿತರು, ಬಡವನಿಗೆ ಇದ್ದ ಸ್ನೇಹಿತನೂ ದೂರವಾಗುವನು.
४धनी के तो बहुत मित्र हो जाते हैं, परन्तु कंगाल के मित्र उससे अलग हो जाते हैं।
5 ೫ ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.
५झूठा साक्षी निर्दोष नहीं ठहरता, और जो झूठ बोला करता है, वह न बचेगा।
6 ೬ ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು, ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ.
६उदार मनुष्य को बहुत से लोग मना लेते हैं, और दानी पुरुष का मित्र सब कोई बनता है।
7 ೭ ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು, ಹೌದು, ಮಿತ್ರರೂ ಅವನಿಗೆ ದೂರವಾಗುವರು. ಅವರ ಬರೀ ಮಾತುಗಳನ್ನು ನಂಬಿ ಹಿಂಬಾಲಿಸಿದರೆ ಏನೂ ಸಿಕ್ಕದು.
७जब निर्धन के सब भाई उससे बैर रखते हैं, तो निश्चय है कि उसके मित्र उससे दूर हो जाएँ। वह बातें करते हुए उनका पीछा करता है, परन्तु उनको नहीं पाता।
8 ೮ ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು, ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.
८जो बुद्धि प्राप्त करता, वह अपने प्राण को प्रेमी ठहराता है; और जो समझ को रखे रहता है उसका कल्याण होता है।
9 ೯ ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.
९झूठा साक्षी निर्दोष नहीं ठहरता, और जो झूठ बोला करता है, वह नाश होता है।
10 ೧೦ ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ, ದಾಸನಿಗೆ ದೊರೆಗಳ ಮೇಲಣ ದೊರೆತನ ಯುಕ್ತವಲ್ಲ.
१०जब सुख में रहना मूर्ख को नहीं फबता, तो हाकिमों पर दास का प्रभुता करना कैसे फबे!
11 ೧೧ ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ.
११जो मनुष्य बुद्धि से चलता है वह विलम्ब से क्रोध करता है, और अपराध को भुलाना उसको शोभा देता है।
12 ೧೨ ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.
१२राजा का क्रोध सिंह की गर्जन के समान है, परन्तु उसकी प्रसन्नता घास पर की ओस के तुल्य होती है।
13 ೧೩ ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಜಗಳವಾಡುವ ಹೆಂಡತಿಯು ತಟತಟನೆ ತೊಟ್ಟಿಕ್ಕುವ ಹನಿ.
१३मूर्ख पुत्र पिता के लिये विपत्ति है, और झगड़ालू पत्नी सदा टपकने वाले जल के समान हैं।
14 ೧೪ ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.
१४घर और धन पुरखाओं के भाग से, परन्तु बुद्धिमती पत्नी यहोवा ही से मिलती है।
15 ೧೫ ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.
१५आलस से भारी नींद आ जाती है, और जो प्राणी ढिलाई से काम करता, वह भूखा ही रहता है।
16 ೧೬ ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.
१६जो आज्ञा को मानता, वह अपने प्राण की रक्षा करता है, परन्तु जो अपने चाल चलन के विषय में निश्चिन्त रहता है, वह मर जाता है।
17 ೧೭ ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
१७जो कंगाल पर अनुग्रह करता है, वह यहोवा को उधार देता है, और वह अपने इस काम का प्रतिफल पाएगा।
18 ೧೮ ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ,
१८जब तक आशा है तब तक अपने पुत्र की ताड़ना कर, जान बूझकर उसको मार न डाल।
19 ೧೯ ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು.
१९जो बड़ा क्रोधी है, उसे दण्ड उठाने दे; क्योंकि यदि तू उसे बचाए, तो बारम्बार बचाना पड़ेगा।
20 ೨೦ ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.
२०सम्मति को सुन ले, और शिक्षा को ग्रहण कर, ताकि तू अपने अन्तकाल में बुद्धिमान ठहरे।
21 ೨೧ ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.
२१मनुष्य के मन में बहुत सी कल्पनाएँ होती हैं, परन्तु जो युक्ति यहोवा करता है, वही स्थिर रहती है।
22 ೨೨ ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, ಬಡವನಾಗಿರುವುದು ಉತ್ತಮ.
२२मनुष्य में निष्ठा सर्वोत्तम गुण है, और निर्धन जन झूठ बोलनेवाले से बेहतर है।
23 ೨೩ ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.
२३यहोवा का भय मानने से जीवन बढ़ता है; और उसका भय माननेवाला ठिकाना पाकर सुखी रहता है; उस पर विपत्ति नहीं पड़ने की।
24 ೨೪ ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರಕ್ಕೆ ತರಲಾರನು.
२४आलसी अपना हाथ थाली में डालता है, परन्तु अपने मुँह तक कौर नहीं उठाता।
25 ೨೫ ಧರ್ಮನಿಂದಕನಿಗೆ ಪೆಟ್ಟುಹೊಡೆ, ನೋಡಿದ ಅವಿವೇಕಿ ಜಾಣನಾಗುವನು, ವಿವೇಕಿಯನ್ನು ಗದರಿಸು, ತಾನೇ ತಿಳಿವಳಿಕೆಯನ್ನು ಗ್ರಹಿಸುವನು.
२५ठट्ठा करनेवाले को मार, इससे भोला मनुष्य समझदार हो जाएगा; और समझवाले को डाँट, तब वह अधिक ज्ञान पाएगा।
26 ೨೬ ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು, ನಾಚಿಕೆಯನ್ನು ಮತ್ತು ಅವಮಾನವನ್ನು ಉಂಟುಮಾಡುವನು.
२६जो पुत्र अपने बाप को उजाड़ता, और अपनी माँ को भगा देता है, वह अपमान और लज्जा का कारण होगा।
27 ೨೭ ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, ಉಪದೇಶ ಕೇಳುವುದನ್ನೇ ಬಿಟ್ಟುಬಿಡು.
२७हे मेरे पुत्र, यदि तू शिक्षा को सुनना छोड़ दे, तो तू ज्ञान की बातों से भटक जाएगा।
28 ೨೮ ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು, ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವುದು.
२८अधर्मी साक्षी न्याय को उपहास में उड़ाता है, और दुष्ट लोग अनर्थ काम निगल लेते हैं।
29 ೨೯ ಧರ್ಮನಿಂದಕರಿಗೆ ದಂಡನೆಯ ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ.
२९ठट्ठा करनेवालों के लिये दण्ड ठहराया जाता है, और मूर्खों की पीठ के लिये कोड़े हैं।