< ಜ್ಞಾನೋಕ್ತಿಗಳು 2 >
1 ೧ ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,
내 아들아 네가 만일 나의 말을 받으며 나의 계명을 네게 간직하며
2 ೨ ನಿನ್ನ ಕಿವಿಯನ್ನು ಜ್ಞಾನದ ಕಡೆಗೂ, ಹೃದಯವನ್ನು ವಿವೇಕದ ಕಡೆಗೂ ತಿರುಗಿಸು;
네 귀를 지혜에 기울이며 네 마음을 명철에 두며
3 ೩ ಬುದ್ಧಿಗಾಗಿ ಮೊರೆಯಿಟ್ಟು, ವಿವೇಕಕ್ಕಾಗಿ ಕೂಗಿಕೋ.
지식을 불러 구하며 명철을 얻으려고 소리를 높이며
4 ೪ ಅದನ್ನು ಬೆಳ್ಳಿಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು;
은을 구하는 것 같이 그것을 구하며 감추인 보배를 찾는 것 같이 그것을 찾으면
5 ೫ ಆಗ ನೀನು ಯೆಹೋವನ ಭಯವನ್ನು ಅರಿತು, ದೈವಜ್ಞಾನವನ್ನು ಪಡೆದುಕೊಳ್ಳುವಿ.
여호와 경외하기를 깨달으며 하나님을 알게 되리니
6 ೬ ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.
대저 여호와는 지혜를 주시며 지식과 명철을 그 입에서 내심이며
7 ೭ ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು,
그는 정직한 자를 위하여 완전한 지혜를 예비하시며 행실이 온전한 자에게 방패가 되시나니
8 ೮ ನ್ಯಾಯಮಾರ್ಗವನ್ನು ರಕ್ಷಿಸುತ್ತಾ, ತನ್ನ ಭಕ್ತರ ದಾರಿಯನ್ನು ನೋಡಿಕೊಳ್ಳುವನು.
대저 그는 공평의 길을 보호하시며 그 성도들의 길을 보전하려 하심이니라
9 ೯ ಹೀಗಿರಲು ನೀನು ನೀತಿ, ನ್ಯಾಯ, ಧರ್ಮವನ್ನೂ ಅಂದರೆ ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ.
그런즉 네가 공의와 공평과 정직 곧 모든 선한 길을 깨달을 것이라
10 ೧೦ ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವುದು, ತಿಳಿವಳಿಕೆಯು ನಿನ್ನ ಆತ್ಮಕ್ಕೆ ಹಿತಕರವಾಗಿರುವುದು.
곧 지혜가 네 마음에 들어가며 지식이 네 영혼에 즐겁게 될 것이요
11 ೧೧ ಬುದ್ಧಿಯು ನಿನಗೆ ಕಾವಲಾಗಿರುವುದು, ವಿವೇಕವು ನಿನ್ನನ್ನು ಕಾಪಾಡುವುದು.
근신이 너를 지키며 명철이 너를 보호하여
12 ೧೨ ಇದರಿಂದ ನೀನು ದುರ್ಮಾರ್ಗದಿಂದಲೂ, ಕೆಟ್ಟ ಮಾತನಾಡುವವರಿಂದಲೂ ತಪ್ಪಿಸಿಕೊಳ್ಳುವಿ.
악한 자의 길과 패역을 말하는 자에게서 건져내리라
13 ೧೩ ಅವರಾದರೋ ಕತ್ತಲೆಯ ಮಾರ್ಗಗಳನ್ನು ಹಿಡಿಯಬೇಕೆಂದು, ಧರ್ಮಮಾರ್ಗಗಳನ್ನು ತೊರೆದುಬಿಡುವರು.
이 무리는 정직한 길을 떠나 어두운 길로 행하며
14 ೧೪ ಅವರು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸಿ, ಕೆಟ್ಟವರ ದುಷ್ಟತನದಲ್ಲಿ ಆನಂದಿಸುವರು.
행악하기를 기뻐하며 악인의 패역을 즐거워하나니
15 ೧೫ ಅವರ ಮಾರ್ಗಗಳು ವಕ್ರವಾಗಿವೆ. ಅವರ ನಡತೆಗಳು ದುರ್ನಡತೆಗಳೇ.
그 길은 구부러지고 그 행위는 패역하리라
16 ೧೬ ವಿವೇಕವು ನಿನ್ನನ್ನು ಜಾರಳಿಂದ ಅಂದರೆ ಸವಿಮಾತನಾಡುವ ಪರಸ್ತ್ರೀಯಿಂದ ತಪ್ಪಿಸುವುದು.
지혜가 또 너를 음녀에게서, 말로 호리는 이방 계집에게서 구원하리니
17 ೧೭ ಅವಳು ತನ್ನ ಯೌವನಕಾಲದ ಕಾಂತನನ್ನು ತ್ಯಜಿಸಿ, ತನ್ನ ದೇವರ ಮುಂದೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಟ್ಟಿದ್ದಾಳೆ.
그는 소시의 짝을 버리며 그 하나님의 언약을 잊어버린자라
18 ೧೮ ಅವಳ ಮನೆಯು ಪಾತಾಳಕ್ಕೆ ಇಳಿಯುವ ದಾರಿ, ಅವಳ ಮಾರ್ಗಗಳು ಪ್ರೇತಲೋಕಕ್ಕೆ ಹೋಗುತ್ತವೆ.
그 집은 사망으로, 그 길은 음부로 기울어졌나니
19 ೧೯ ಅವಳ ಬಳಿಗೆ ಹೋಗುವವರು ಯಾರೂ ಹಿಂದಿರುಗುವುದಿಲ್ಲ, ಅವರಿಗೆ ಜೀವದ ಮಾರ್ಗವು ದೊರೆಯುವುದೇ ಇಲ್ಲ.
누구든지 그에게로 가는 자는 돌아오지 못하며 또 생명길을 얻지 못하느니라
20 ೨೦ ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ ವಿವೇಕವು ನಿನ್ನನ್ನು ಪ್ರೇರೇಪಿಸಿ, ನೀತಿವಂತರ ದಾರಿಗಳನ್ನು ಹಿಡಿಯುವ ಹಾಗೆ ಮಾಡುವುದು.
지혜가 너로 선한 자의 길로 행하게 하며 또 의인의 길을 지키게 하리니
21 ೨೧ ಯಥಾರ್ಥವಂತರು ದೇಶದಲ್ಲಿ ಸ್ವತಂತ್ರರಾಗಿರುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿರುವರು.
대저 정직한 자는 땅에 거하며 완전한 자는 땅에 남아 있으리라
22 ೨೨ ದುಷ್ಟರಾದರೋ ದೇಶದೊಳಗಿಂದ ತೆಗೆದುಹಾಕಲ್ಪಡುವರು, ದ್ರೋಹಿಗಳು ನಿರ್ಮೂಲರಾಗುವರು.
그러나 악인은 땅에서 끊어지겠고 궤휼한 자는 땅에서 뽑히리라