< ಜ್ಞಾನೋಕ್ತಿಗಳು 20 >

1 ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.
לֵץ הַיַּיִן הֹמֶה שֵׁכָר וְכׇל־שֹׁגֶה בּוֹ לֹא יֶחְכָּֽם׃
2 ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.
נַהַם כַּכְּפִיר אֵימַת מֶלֶךְ מִתְעַבְּרוֹ חוֹטֵא נַפְשֽׁוֹ׃
3 ವ್ಯಾಜ್ಯಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು, ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.
כָּבוֹד לָאִישׁ שֶׁבֶת מֵרִיב וְכׇל־אֱוִיל יִתְגַּלָּֽע׃
4 ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?
מֵחֹרֶף עָצֵל לֹא־יַחֲרֹשׁ (ישאל) [וְשָׁאַל] בַּקָּצִיר וָאָֽיִן׃
5 ಮನುಷ್ಯನ ಹೃದಯಸಂಕಲ್ಪವು ಆಳವಾದ ಬಾವಿಯ ನೀರು. ಆದರೆ ವಿವೇಕಿಯು ಅದನ್ನು ಸೇದಬಲ್ಲನು.
מַיִם עֲמֻקִּים עֵצָה בְלֶב־אִישׁ וְאִישׁ תְּבוּנָה יִדְלֶֽנָּה׃
6 ಸ್ನೇಹಿತರೆಂದು ಹೇಳಿಕೊಳ್ಳುವವರು ಬಹಳ ಜನರು, ನಂಬಿಗಸ್ತನಾದ ಸ್ನೇಹಿತನು ಎಲ್ಲಿ ಸಿಕ್ಕುವನು?
רׇב־אָדָם יִקְרָא אִישׁ חַסְדּוֹ וְאִישׁ אֱמוּנִים מִי יִמְצָֽא׃
7 ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು, ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.
מִתְהַלֵּךְ בְּתֻמּוֹ צַדִּיק אַשְׁרֵי בָנָיו אַחֲרָֽיו׃
8 ರಾಜನು ನ್ಯಾಯಾಸನಾರೂಢನಾಗಿ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.
מֶלֶךְ יוֹשֵׁב עַל־כִּסֵּא־דִין מְזָרֶה בְעֵינָיו כׇּל־רָֽע׃
9 “ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ” ಎಂದು ಯಾರು ಹೇಳಬಲ್ಲರು?
מִֽי־יֹאמַר זִכִּיתִי לִבִּי טָהַרְתִּי מֵחַטָּאתִֽי׃
10 ೧೦ ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು, ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ.
אֶבֶן וָאֶבֶן אֵיפָה וְאֵיפָה תּוֹעֲבַת יְהֹוָה גַּם־שְׁנֵיהֶֽם׃
11 ೧೧ ಒಬ್ಬ ಹುಡುಗನಾದರೂ ಶುದ್ಧವೂ, ಸತ್ಯವೂ ಆದ ನಡತೆಯಿಂದಲೇ, ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು.
גַּם בְּמַעֲלָלָיו יִתְנַכֶּר־נָעַר אִם־זַךְ וְאִם־יָשָׁר פׇּעֳלֽוֹ׃
12 ೧೨ ಕೇಳುವ ಕಿವಿ, ನೋಡುವ ಕಣ್ಣು, ಇವೆರಡನ್ನೂ ಯೆಹೋವನು ನಿರ್ಮಿಸಿದ್ದಾನೆ.
אֹזֶן שֹׁמַעַת וְעַיִן רֹאָה יְהֹוָה עָשָׂה גַם־שְׁנֵיהֶֽם׃
13 ೧೩ ನಿದ್ರಾನಿರತನಾಗಿರಬೇಡ! ಬಡವನಾದೀಯೆ, ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.
אַל־תֶּאֱהַב שֵׁנָה פֶּן־תִּוָּרֵשׁ פְּקַח עֵינֶיךָ שְֽׂבַֽע־לָֽחֶם׃
14 ೧೪ ಕೊಳ್ಳುವವನು, “ಚೆನ್ನಾಗಿಲ್ಲ, ಚೆನ್ನಾಗಿಲ್ಲ” ಎಂದು ಹೇಳುತ್ತಾನೆ, ಕೊಂಡುಕೊಂಡು ಹೋಗಿ ಹೆಚ್ಚಳಪಡುತ್ತಾನೆ.
רַע רַע יֹאמַר הַקּוֹנֶה וְאֹזֵל לוֹ אָז יִתְהַלָּֽל׃
15 ೧೫ ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯವಾದ ಆಭರಣ.
יֵשׁ זָהָב וְרׇב־פְּנִינִים וּכְלִי יְקָר שִׂפְתֵי־דָֽעַת׃
16 ೧೬ ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆ ಮಾಡಿಕೋ.
לְֽקַח־בִּגְדוֹ כִּי־עָרַב זָר וּבְעַד (נכרים) [נׇכְרִיָּה] חַבְלֵֽהוּ׃
17 ೧೭ ಮೋಸದಿಂದ ಸಿಕ್ಕಿದ ಆಹಾರವು ಮನುಷ್ಯನಿಗೆ ರುಚಿ, ಆ ಮೇಲೆ ಅವನ ಬಾಯಿ ಮರಳಿನಿಂದ ತುಂಬುವುದು.
עָרֵב לָאִישׁ לֶחֶם שָׁקֶר וְאַחַר יִמָּֽלֵא־פִיהוּ חָצָֽץ׃
18 ೧೮ ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.
מַחֲשָׁבוֹת בְּעֵצָה תִכּוֹן וּבְתַחְבֻּלוֹת עֲשֵׂה מִלְחָמָֽה׃
19 ೧೯ ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.
גּֽוֹלֶה־סּוֹד הוֹלֵךְ רָכִיל וּלְפֹתֶה שְׂפָתָיו לֹא תִתְעָרָֽב׃
20 ೨೦ ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು, ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು.
מְקַלֵּל אָבִיו וְאִמּוֹ יִֽדְעַךְ נֵרוֹ (באישון) [בֶּאֱשׁוּן] חֹֽשֶׁךְ׃
21 ೨೧ ಮೊದಲು ಬೇಗನೆ ಬಾಚಿಕೊಂಡ ಸ್ವತ್ತು, ಕೊನೆಯಲ್ಲಿ ಕಳೆದು ಹೋಗುವುದು.
נַחֲלָה (מבחלת) [מְבֹהֶלֶת] בָּרִאשׁוֹנָה וְאַחֲרִיתָהּ לֹא תְבֹרָֽךְ׃
22 ೨೨ ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು.
אַל־תֹּאמַר אֲשַׁלְּמָה־רָע קַוֵּה לַיהֹוָה וְיֹשַֽׁע לָֽךְ׃
23 ೨೩ ತೂಕದ ಕಲ್ಲನ್ನು ಹೆಚ್ಚಿಸುವುದು, ತಗ್ಗಿಸುವುದು ಯೆಹೋವನಿಗೆ ಅಸಹ್ಯ, ಮೋಸದ ತಕ್ಕಡಿ ಒಳ್ಳೆಯದಲ್ಲ.
תּוֹעֲבַת יְהֹוָה אֶבֶן וָאָבֶן וּמֹאזְנֵי מִרְמָה לֹא־טֽוֹב׃
24 ೨೪ ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ, ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು?
מֵיְהֹוָה מִצְעֲדֵי־גָבֶר וְאָדָם מַה־יָּבִין דַּרְכּֽוֹ׃
25 ೨೫ “ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.
מוֹקֵשׁ אָדָם יָלַע קֹדֶשׁ וְאַחַר נְדָרִים לְבַקֵּֽר׃
26 ೨೬ ಜ್ಞಾನಿಯಾದ ಅರಸನು ದುಷ್ಟರ ಮೇಲೆ ಕಣದ ಗುಂಡನ್ನು ಉರುಳಿಸಿ, ಅವರನ್ನು ತೂರಿಬಿಡುವನು.
מְזָרֶה רְשָׁעִים מֶלֶךְ חָכָם וַיָּשֶׁב עֲלֵיהֶם אוֹפָֽן׃
27 ೨೭ ಮನುಷ್ಯನ ಆತ್ಮವು ಯೆಹೋವನ ದೀಪವಾಗಿದೆ, ಅದು ಅಂತರಂಗವನ್ನೆಲ್ಲಾ ಶೋಧಿಸುತ್ತದೆ.
נֵר יְהֹוָה נִשְׁמַת אָדָם חֹפֵשׂ כׇּל־חַדְרֵי־בָֽטֶן׃
28 ೨೮ ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು, ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ.
חֶסֶד וֶֽאֱמֶת יִצְּרוּ־מֶלֶךְ וְסָעַד בַּחֶסֶד כִּסְאֽוֹ׃
29 ೨೯ ಯುವಕರಿಗೆ ಬಲವು ಭೂಷಣ, ಮುದುಕರಿಗೆ ನರೆಯು ಒಡವೆ.
תִּפְאֶרֶת בַּחוּרִים כֹּחָם וַהֲדַר זְקֵנִים שֵׂיבָֽה׃
30 ೩೦ ಗಾಯಮಾಡುವ ಪೆಟ್ಟುಗಳು ಕೆಟ್ಟದ್ದನ್ನು ತೊಳೆದುಬಿಡುವುದು, ಏಟುಗಳು ಅಂತರಂಗವನ್ನು ಶುದ್ಧಿಮಾಡುವುದು.
חַבֻּרוֹת פֶּצַע (תמריק) [תַּמְרוּק] בְּרָע וּמַכּוֹת חַדְרֵי־בָֽטֶן׃

< ಜ್ಞಾನೋಕ್ತಿಗಳು 20 >