< ಜ್ಞಾನೋಕ್ತಿಗಳು 20 >
1 ೧ ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.
Wino [jest] szydercą, mocny trunek – wrzaskliwy, a każdy, kto zostaje zwiedziony przez nie, jest niemądry.
2 ೨ ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.
Strach, [który budzi] król, jest jak ryk lwa; kto go rozgniewa, grzeszy przeciwko swojej duszy.
3 ೩ ವ್ಯಾಜ್ಯಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು, ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.
Zaprzestać sporu jest zaszczytem dla człowieka, ale [każdy] głupiec się w niego wdaje.
4 ೪ ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?
Leniwy nie orze z powodu zimna; dlatego będzie żebrać we żniwa, ale nic nie [otrzyma].
5 ೫ ಮನುಷ್ಯನ ಹೃದಯಸಂಕಲ್ಪವು ಆಳವಾದ ಬಾವಿಯ ನೀರು. ಆದರೆ ವಿವೇಕಿಯು ಅದನ್ನು ಸೇದಬಲ್ಲನು.
Rada w sercu człowieka jest jak głęboka woda, lecz człowiek roztropny zaczerpnie jej.
6 ೬ ಸ್ನೇಹಿತರೆಂದು ಹೇಳಿಕೊಳ್ಳುವವರು ಬಹಳ ಜನರು, ನಂಬಿಗಸ್ತನಾದ ಸ್ನೇಹಿತನು ಎಲ್ಲಿ ಸಿಕ್ಕುವನು?
Większość ludzi przechwala się swoją dobrocią, ale wiernego człowieka któż znajdzie?
7 ೭ ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು, ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.
Sprawiedliwy postępuje uczciwie, błogosławione [są] po nim jego dzieci.
8 ೮ ರಾಜನು ನ್ಯಾಯಾಸನಾರೂಢನಾಗಿ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.
Król siedzący na swoim sędziowskim tronie rozprasza swoimi oczami wszelkie zło.
9 ೯ “ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ” ಎಂದು ಯಾರು ಹೇಳಬಲ್ಲರು?
Któż może powiedzieć: Oczyściłem swoje serce, jestem czysty od swego grzechu?
10 ೧೦ ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು, ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ.
Dwojakie odważniki i dwojaka miara – obydwa budzą odrazę w PANU.
11 ೧೧ ಒಬ್ಬ ಹುಡುಗನಾದರೂ ಶುದ್ಧವೂ, ಸತ್ಯವೂ ಆದ ನಡತೆಯಿಂದಲೇ, ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು.
Nawet dziecko poznaje się po uczynkach, czy jego czyn jest czysty i prawy.
12 ೧೨ ಕೇಳುವ ಕಿವಿ, ನೋಡುವ ಕಣ್ಣು, ಇವೆರಡನ್ನೂ ಯೆಹೋವನು ನಿರ್ಮಿಸಿದ್ದಾನೆ.
Ucho, które słyszy, i oko, które widzi, oba uczynił PAN.
13 ೧೩ ನಿದ್ರಾನಿರತನಾಗಿರಬೇಡ! ಬಡವನಾದೀಯೆ, ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.
Nie kochaj spania, byś nie zubożał; otwórz oczy, a nasycisz się chlebem.
14 ೧೪ ಕೊಳ್ಳುವವನು, “ಚೆನ್ನಾಗಿಲ್ಲ, ಚೆನ್ನಾಗಿಲ್ಲ” ಎಂದು ಹೇಳುತ್ತಾನೆ, ಕೊಂಡುಕೊಂಡು ಹೋಗಿ ಹೆಚ್ಚಳಪಡುತ್ತಾನೆ.
[To] liche, [to] liche, mówi kupujący, ale chwali się, gdy odchodzi.
15 ೧೫ ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯವಾದ ಆಭರಣ.
Istnieje złoto i obfitość pereł, ale wargi rozumne są kosztownym klejnotem.
16 ೧೬ ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆ ಮಾಡಿಕೋ.
Zabierz szatę tego, [który ręczył] za obcego, a od tego, [który ręczył] za cudzą kobietę, zabierz zastaw.
17 ೧೭ ಮೋಸದಿಂದ ಸಿಕ್ಕಿದ ಆಹಾರವು ಮನುಷ್ಯನಿಗೆ ರುಚಿ, ಆ ಮೇಲೆ ಅವನ ಬಾಯಿ ಮರಳಿನಿಂದ ತುಂಬುವುದು.
Chleb oszustwa smakuje człowiekowi, ale potem jego usta będą napełnione piaskiem.
18 ೧೮ ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.
Zamysły są utwierdzone dzięki radzie, a wojnę prowadź z rozwagą.
19 ೧೯ ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.
Plotkarz zdradza tajemnice; dlatego nie zadawaj się z tym, który pochlebia wargami.
20 ೨೦ ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು, ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು.
Kto złorzeczy swemu ojcu albo matce, tego pochodnia zgaśnie w gęstych ciemnościach.
21 ೨೧ ಮೊದಲು ಬೇಗನೆ ಬಾಚಿಕೊಂಡ ಸ್ವತ್ತು, ಕೊನೆಯಲ್ಲಿ ಕಳೆದು ಹೋಗುವುದು.
Dziedzictwo prędko nabyte na początku nie będzie błogosławione na końcu.
22 ೨೨ ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು.
Nie mów: Odpłacę złem. Czekaj na PANA, a wybawi cię.
23 ೨೩ ತೂಕದ ಕಲ್ಲನ್ನು ಹೆಚ್ಚಿಸುವುದು, ತಗ್ಗಿಸುವುದು ಯೆಹೋವನಿಗೆ ಅಸಹ್ಯ, ಮೋಸದ ತಕ್ಕಡಿ ಒಳ್ಳೆಯದಲ್ಲ.
Dwojakie odważniki budzą odrazę w PANU, a fałszywa waga nie jest dobra.
24 ೨೪ ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ, ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು?
Od PANA pochodzą drogi człowieka; jakże może człowiek zrozumieć własną drogę?
25 ೨೫ “ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.
Sidłem dla człowieka jest pożreć to, co święte, i zastanowić się dopiero po złożeniu ślubów.
26 ೨೬ ಜ್ಞಾನಿಯಾದ ಅರಸನು ದುಷ್ಟರ ಮೇಲೆ ಕಣದ ಗುಂಡನ್ನು ಉರುಳಿಸಿ, ಅವರನ್ನು ತೂರಿಬಿಡುವನು.
Mądry król rozprasza niegodziwych i wywiera na nich zemstę.
27 ೨೭ ಮನುಷ್ಯನ ಆತ್ಮವು ಯೆಹೋವನ ದೀಪವಾಗಿದೆ, ಅದು ಅಂತರಂಗವನ್ನೆಲ್ಲಾ ಶೋಧಿಸುತ್ತದೆ.
Duch człowieka [jest] pochodnią PANA, [która] bada wszystkie skrytości wnętrza.
28 ೨೮ ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು, ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ.
Miłosierdzie i prawda strzegą króla, a jego tron oparty jest na miłosierdziu.
29 ೨೯ ಯುವಕರಿಗೆ ಬಲವು ಭೂಷಣ, ಮುದುಕರಿಗೆ ನರೆಯು ಒಡವೆ.
Chlubą młodzieńców jest ich siła, a ozdobą starców – sędziwość.
30 ೩೦ ಗಾಯಮಾಡುವ ಪೆಟ್ಟುಗಳು ಕೆಟ್ಟದ್ದನ್ನು ತೊಳೆದುಬಿಡುವುದು, ಏಟುಗಳು ಅಂತರಂಗವನ್ನು ಶುದ್ಧಿಮಾಡುವುದು.
Siność ran oczyszcza zło, a razy – głębię wnętrza.