< ಜ್ಞಾನೋಕ್ತಿಗಳು 21 >

1 ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.
TUHAN berkuasa mengarahkan hati raja sesuai kehendak-Nya, seperti petani mengatur arah pengairan di sawahnya.
2 ನರನ ನಡತೆಯು ಸ್ವಂತ ದೃಷ್ಟಿಗೆ ಸರಿಯಾಗಿ ಕಾಣುತ್ತವೆ, ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.
Setiap orang menganggap pilihan hidupnya baik, tetapi TUHANlah yang mengetahui dan menilai maksud hatinya.
3 ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.
TUHAN lebih berkenan pada cara hidup yang adil dan benar daripada kurban persembahan.
4 ಗರ್ವದ ದೃಷ್ಟಿ, ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ.
Sombong dan suka merendahkan orang lain— kedua sifat itu selalu membawa orang ke dalam kejahatan.
5 ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, ಆತುರಪಡುವವರಿಗೆಲ್ಲಾ ಕೊರತೆಯೇ.
Rencana yang baik disertai kerja keras menghasilkan keuntungan. Bertindak terburu-buru tanpa pikir panjang menghasilkan kemiskinan.
6 ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ.
Kekayaan yang diperoleh dengan tidak jujur akan cepat menguap dan mengantarkan pemiliknya pada kebinasaan.
7 ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವುದು.
Orang jahat tidak mau berbuat benar, dan kelakuan jahat mereka kelak menghancurkan dirinya sendiri.
8 ದೋಷಿಯ ದಾರಿ ಡೊಂಕು; ಶುದ್ಧನ ನಡತೆ ಸರಳ.
Orang yang menyembunyikan dosa hidup berliku-liku, tetapi orang yang jujur hidupnya lurus dan benar.
9 ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
Lebih baik hidup sendirian di kamar yang sempit daripada tinggal di rumah besar bersama istri yang suka bertengkar.
10 ೧೦ ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು ನೆರೆಯವನಿಗೂ ದಯೆತೋರಿಸನು.
Orang jahat selalu mencari kesempatan untuk menyakiti dan tak punya belas kasihan kepada siapa pun, bahkan temannya sendiri.
11 ೧೧ ಧರ್ಮನಿಂದಕನಿಗೆ ದಂಡನೆಯಾದರೆ ನೋಡಿದ ಮೂಢನೂ ಜ್ಞಾನವನ್ನು ಪಡೆಯುವನು, ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳಿವಳಿಕೆಯನ್ನು ಹೊಂದುವನು.
Bila orang yang suka menghina dihajar, maka orang yang tak berpengalaman dapat mengambil pelajaran. Bila orang bijak ditegur, dia akan semakin bijak.
12 ೧೨ ನೀತಿಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆ ತಂದು, ಅಧರ್ಮಿಗಳನ್ನು ಕೆಡವಿ ಅವರನ್ನು ಕೇಡಿಗೆ ತಳ್ಳುವನು.
Allah Yang Mahaadil mengetahui segalanya, bahkan yang paling tersembunyi dalam kehidupan orang jahat, dan Dia akan menghancurkan mereka.
13 ೧೩ ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.
Siapa yang tidak mau mendengar seruan orang miskin, kelak dia sendiri tidak akan didengar pada waktu berteriak minta tolong.
14 ೧೪ ಗುಪ್ತ ಬಹುಮಾನವು ಕೋಪವನ್ನಾರಿಸುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು.
Amarah seseorang dapat diredakan dengan memberi hadiah kepadanya secara empat mata.
15 ೧೫ ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ, ಕೆಡುಕರಿಗೆ ಕೇಡು.
Ketika keadilan ditegakkan, orang benar bersukacita, tetapi orang jahat ketakutan.
16 ೧೬ ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ.
Orang yang tidak menggunakan akal sehatnya akan segera terkumpul bersama orang-orang bebal lain yang sudah lebih dulu mati!
17 ೧೭ ಭೋಗಾಸಕ್ತನು ಕೊರತೆಪಡುವನು, ದ್ರಾಕ್ಷಾರಸವನ್ನು ಮತ್ತು ಸುಗಂಧ ತೈಲವನ್ನು ಆಶಿಸುವವನು ನಿರ್ಭಾಗ್ಯನಾಗುವನು.
Orang yang senang berfoya-foya akan jatuh miskin. Orang yang suka mabuk-mabukan dan bermewah-mewah tidak akan pernah kaya.
18 ೧೮ ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ, ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡಾಗುವರು.
Karena TUHAN menjaga orang jujur, kejahatan yang direncanakan orang jahat kepada orang jujur justru menimpa dirinya sendiri.
19 ೧೯ ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ, ಕಾಡಿನ ವಾಸವೇ ಲೇಸು.
Lebih baik hidup sendirian di padang belantara daripada tinggal di rumah bersama istri yang suka bertengkar dan mengomel.
20 ೨೦ ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.
Orang yang bijak mengatur persediaan harta dan makanan di rumahnya, tetapi orang bodoh tidak mengendalikan diri dan menghabiskan segala miliknya.
21 ೨೧ ನೀತಿ ಮತ್ತು ಕೃಪೆಗಳನ್ನು ಹುಡುಕುವವನು ಜೀವ ಮತ್ತು ಕೀರ್ತಿಗಳನ್ನು ಪಡೆಯುವನು.
Senantiasa lakukanlah apa yang benar dan baik bagi sesama, maka engkau akan panjang umur, hidup sejahtera, dan dihormati.
22 ೨೨ ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಮುತ್ತಿಗೆ ಹಾಕಿ, ಅವರು ನಂಬಿದ್ದ ಬಲವಾದ ಕೋಟೆಯನ್ನು ಕೆಡವಿ ಹಾಕುವನು.
Dengan kebijaksanaannya, orang bijak sanggup merebut kota orang-orang kuat dan meruntuhkan benteng pertahanan yang mereka andalkan.
23 ೨೩ ತನ್ನ ಬಾಯನ್ನೂ, ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು.
Orang yang berbicara dengan hati-hati menjauhkan dirinya dari masalah.
24 ೨೪ “ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.
Orang yang angkuh, tinggi hati, besar mulut, dan selalu meremehkan orang, panggillah dia si sombong.
25 ೨೫ ಸೋಮಾರಿಯ ಆಶೆಯು ಅವನನ್ನು ಕೊಲ್ಲುವುದು, ಅವನ ಕೈಗಳು ದುಡಿಯಲಾರವು.
Keinginan si pemalas terbawa sampai mati sebab dia tidak mau bekerja.
26 ೨೬ ಧರ್ಮಿಯು ಹಿಂತೆಗೆಯದೆ ಕೊಡುವನು, ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು.
Orang yang serakah selalu menginginkan lebih untuk dirinya sendiri, tetapi orang benar suka memberi dengan limpah.
27 ೨೭ ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ.
TUHAN jijik melihat kurban dari orang yang jahat, apalagi jika dipersembahkan dengan maksud jahat.
28 ೨೮ ಸುಳ್ಳು ಸಾಕ್ಷಿಯು ಅಳಿದುಹೋಗುವುದು, ಕೇಳಿದ್ದನ್ನೇ ಹೇಳುವವನ ಸಾಕ್ಷಿಯು ಶಾಶ್ವತವಾಗಿರುವುದು.
Saksi yang berdusta akan dibinasakan, tetapi perkataan dari saksi yang dapat dipercaya akan diperhatikan dan diingat.
29 ೨೯ ದುಷ್ಟನ ಮುಖದಲ್ಲಿ ಲಜ್ಜೆಯಿಲ್ಲ, ಸತ್ಯವಂತನು ತನ್ನ ನಡತೆಯನ್ನು ಸರಿಪಡಿಸಿಕೊಳ್ಳುತ್ತಿರುವನು.
Orang jahat berlagak berani, tetapi orang jujur mengatur langkahnya dengan benar.
30 ೩೦ ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.
Tidak ada kebijaksanaan, pengertian, dan rancangan manusia yang sanggup melebihi hikmat TUHAN.
31 ೩೧ ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.
Pasukan raja mempersiapkan semua kuda dan kereta untuk bertempur, tetapi TUHANlah yang menentukan kemenangan.

< ಜ್ಞಾನೋಕ್ತಿಗಳು 21 >