< ಜ್ಞಾನೋಕ್ತಿಗಳು 22 >

1 ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ, ಬೆಳ್ಳಿ, ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.
Ŋkɔ nyui didi nyo wu kesinɔnuwo eye ŋudzedzekpɔkpɔ nyo wu klosalo kple sika.
2 ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.
Nu ɖeka siae nàkpɔ le kesinɔtɔ kple ame dahe ŋu: Yehowae nye wo katã Wɔla.
3 ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
Nunyala kpɔ dzɔgbevɔ̃e gbɔna eye wòɣla eɖokui gake bometsila ya yiyim ko wòle eye wòkpea fu ɖe enu.
4 ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.
Ɖokuibɔbɔ kple Yehowavɔvɔ̃ hea kesinɔnu, bubu kple agbe vɛ.
5 ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.
Ŋu kple mɔkawo le ame vɔ̃ɖi la ƒe mɔ dzi, ke ame si dzɔ eƒe luʋɔ ŋuti la, ate ɖa xaa tso wo gbɔ.
6 ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.
He ɖevi ɖe mɔ si wòato la dzi eye ne etsi la, mate ɖa le edzi o.
7 ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.
Kesinɔtɔwo ɖua gã ɖe ame dahewo dzi eye nugbanadola zua dɔla na ame si do nugbana la nɛ.
8 ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.
Ame si ƒã vɔ̃ɖivɔ̃ɖi la axa dzɔgbevɔ̃e, eye woatsrɔ eƒe dɔmedzoe ƒe ameƒoti.
9 ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.
Woayra ame si nyoa dɔ me na amewo elabena emaa eƒe nuɖuɖu kple ame dahewo.
10 ೧೦ ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು.
Nya fewuɖula la do goe eye dzre hã ado go, nenema ke nyahehe kple dzudzu hã awu nu.
11 ೧೧ ಹೃದಯಶುದ್ಧಿಯನ್ನು ಅಪೇಕ್ಷಿಸುವ ಮತ್ತು ಸವಿಮಾತನಾಡುವ ಮನುಷ್ಯನಿಗೆ ರಾಜನ ಸ್ನೇಹವು ದೊರೆಯುವುದು.
Ame si lɔ̃ dzi dzadzɛ kple nuƒoƒo si me nya dzetowo le la, eyae fia la adze xɔ̃e.
12 ೧೨ ಯೆಹೋವನ ಕಣ್ಣು ತಿಳಿವಳಿಕೆಗೆ ಕಾವಲು, ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು.
Yehowa ƒe ŋkuwo le nugɔmesese ŋu, ke etrɔa gbo nuteƒemawɔlawo ƒe nyawo.
13 ೧೩ “ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದ್ದಿತು” ಎಂಬುದು ಸೋಮಾರಿಯ ನೆವ.
Kuviatɔ gblɔna be, “Dzata le gota!” alo “Woava wum le ablɔ dzi!”
14 ೧೪ ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ, ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು.
Nyɔnu ahasitɔ ƒe nu la, ʋe globo wònye eye ame si dzi Yehowa ƒe dziku le la eyae age adze eme.
15 ೧೫ ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.
Wobla bometsitsi ɖe ɖevi ƒe dzi ŋu, ke ɖɔɖɔɖo ƒe ameƒoti ana wòate ɖa xaa tso egbɔ.
16 ೧೬ ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.
Ame si tea ame dahewo ɖe anyi be yeadzi yeƒe kesinɔnuwo ɖe edzi kple ame si naa nu kesinɔtɔ la siaa age ɖe hiã me.
17 ೧೭ ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು, ನನ್ನ ಜ್ಞಾನಬೋಧೆಗೆ ಮನಸ್ಸು ಕೊಡು.
Ƒu to anyi eye nàse nunyalawo ƒe nyawo, na wò dzi naku ɖe nu si fiam mele ŋuti,
18 ೧೮ ನೀನು ಆ ಮಾತುಗಳನ್ನು ಅಂತರಂಗದಲ್ಲಿ ಕಾಪಾಡುತ್ತಾ, ತುಟಿಗಳಲ್ಲಿ ಸಿದ್ಧಪಡಿಸಿಕೊಂಡಿದ್ದರೆ ಎಷ್ಟೋ ರಮ್ಯ.
elabena edoa dzidzɔ na ame ne èɣla wo ɖe wò dzi me, eye wo katã nanɔ klalo le wò nuyiwo dzi.
19 ೧೯ ನೀನು ಯೆಹೋವನಲ್ಲಿ ಭರವಸವಿಡಬೇಕೆಂದು, ಅವುಗಳನ್ನು ಈ ದಿನ ನಿನಗೇ ತಿಳಿಯಪಡಿಸಿದ್ದೇನೆ.
Ale be nàɖo dzi ɖe Yehowa ŋu, esia ta mele nu fiam wò ɖo egbea, ɛ̃, wòe mele nu fiam.
20 ೨೦ ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು, ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆ ಮಾಡುವಂತೆ,
Ɖe nyemeŋlɔ nufiamenya blaetɔ̃ na wò, aɖaŋuɖonyawo kple nugɔmesenyawo
21 ೨೧ ಸತ್ಯ, ತಿಳಿವಳಿಕೆಯ ವಿಷಯವಾಗಿ ಇದಕ್ಕೆ ಮೊದಲೇ ನಿನಗಾಗಿ ಬರೆದಿರುವೆನಲ್ಲಾ.
be woafia nyateƒe kple kakaɖedzinyawo wò be nàtsɔ nunyanyawo aɖo nya ŋu na ame si dɔ wò la oa?
22 ೨೨ ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ.
Mègaba ame dahewo le esi woda ahe ta o eye mègate hiãtɔ ɖe to le ʋɔnu o,
23 ೨೩ ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, ಹಾಳುಮಾಡಿದವರ ಜೀವವನ್ನು ಹಾಳುಮಾಡುವನು.
elabena Yehowa axɔ nya ɖe wo nu eye wòaha ame si ha wo.
24 ೨೪ ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ.
Mègadze xɔ̃ ŋutsu dɔmedzoetɔ o eye mègade ha kple ame si doa dziku kabakaba o,
25 ೨೫ ಮಾಡಿದರೆ ಅವನ ದುರ್ನಡತೆಯನ್ನು ಅನುಸರಿಸಿ, ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ.
ne menye nenema o la, àva srɔ̃ eƒe mɔwo eye nàtsɔ ɖokuiwò ade mɔ me.
26 ೨೬ ಮಾತುಕೊಟ್ಟು ಸಾಲಕ್ಕೆ ಹೊಣೆಯಾಗುವವರಲ್ಲಿ, ನೀನೂ ಒಬ್ಬನಾಗಬೇಡ,
Mèganye ame si ƒua asi akɔ ɖe fenyila nu alo dea megbe na ame si do nugbana la o;
27 ೨೭ ಆ ಸಾಲವನ್ನು ತೀರಿಸುವುದಕ್ಕೆ ನಿನ್ನಿಂದಾಗದಿರಲು, ಸಾಲಕೊಟ್ಟವನು ನಿನ್ನ ಕೆಳಗಿನ ಹಾಸಿಗೆಯನ್ನು ಕಿತ್ತುಹಾಕುವುದು ಬೇಕೇ?
eye ne mèkpɔ ga axe fea o la, woaɖe aba si dzi nèmlɔna la gɔ̃ hã le tewò.
28 ೨೮ ನಿನ್ನ ಪೂರ್ವಿಕರು ಹಾಕಿದ ಪೂರ್ವಕಾಲದ ಮೇರೆಯನ್ನು ದಾಟಬೇಡ.
Mègaɖe blemaliƒokpe si fofowòwo ɖi la ɖa o.
29 ೨೯ ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.
Èkpɔ ame si bi ɖe eƒe dɔ me la le dɔ wɔma? Asubɔ le fiawo ŋgɔ eye menye le ame tsɛwo ŋgɔ o.

< ಜ್ಞಾನೋಕ್ತಿಗಳು 22 >