< ಜ್ಞಾನೋಕ್ತಿಗಳು 23 >

1 ನೀನು ಅಧಿಪತಿಯ ಸಂಗಡ ಊಟಕ್ಕೆ ಕುಳಿತುಕೊಂಡಿರುವಾಗ, ನಿನ್ನ ಮುಂದಿಟ್ಟಿರುವುದರ ಬಗ್ಗೆ ಎಚ್ಚರಿಕೆಯಾಗಿರು.
כִּֽי־תֵשֵׁב לִלְחוֹם אֶת־מוֹשֵׁל בִּין תָּבִין אֶת־אֲשֶׁר לְפָנֶֽיךָ׃
2 ನೀನು ಹೊಟ್ಟೆಬಾಕನಾಗಿದ್ದರೆ, ನಿನ್ನ ಗಂಟಲಿಗೆ ಕತ್ತಿಹಾಕಿಕೋ.
וְשַׂמְתָּ שַׂכִּין בְּלֹעֶךָ אִם־בַּעַל נֶפֶשׁ אָֽתָּה׃
3 ಅವನ ರುಚಿಪದಾರ್ಥಗಳನ್ನು ಬಯಸಬೇಡ, ಅದು ಮೋಸದ ಆಹಾರವೇ ಸರಿ.
אַל־תִּתְאָו לְמַטְעַמּוֹתָיו וְהוּא לֶחֶם כְּזָבִֽים׃
4 ದುಡ್ಡಿನಾಶೆಯಿಂದ ದುಡಿಯಬೇಡ, ಸ್ವಬುದ್ಧಿಯನ್ನೇ ಆಶ್ರಯಿಸಬೇಡ.
אַל־תִּיגַע לְֽהַעֲשִׁיר מִֽבִּינָתְךָ חֲדָֽל׃
5 ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.
(התעוף) [הֲתָעִיף] עֵינֶיךָ בּוֹ וְֽאֵינֶנּוּ כִּי עָשֹׂה יַעֲשֶׂה־לּוֹ כְנָפַיִם כְּנֶשֶׁר (ועיף) [יָעוּף] הַשָּׁמָֽיִם׃
6 ಲೋಭಿಯ ಅನ್ನವನ್ನು ಉಣ್ಣದಿರು, ಅವನ ರುಚಿಪದಾರ್ಥಗಳನ್ನು ಬಯಸಬೇಡ.
אַל־תִּלְחַם אֶת־לֶחֶם רַע עָיִן וְאַל־תִּתְאָו לְמַטְעַמֹּתָֽיו׃
7 ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.
כִּי ׀ כְּמוֹ שָׁעַר בְּנַפְשׁוֹ כֶּן־הוּא אֱכוֹל וּשְׁתֵה יֹאמַר לָךְ וְלִבּוֹ בַּל־עִמָּֽךְ׃
8 ನೀನು ತಿಂದ ತುತ್ತನ್ನು ಕಕ್ಕಿಬಿಡುವಿ, ನಿನ್ನ ಸವಿಮಾತುಗಳು ವ್ಯರ್ಥ.
פִּֽתְּךָ־אָכַלְתָּ תְקִיאֶנָּה וְשִׁחַתָּ דְּבָרֶיךָ הַנְּעִימִֽים׃
9 ಮೂಢನ ಸಂಗಡ ಮಾತನಾಡಬೇಡ, ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು.
בְּאׇזְנֵי כְסִיל אַל־תְּדַבֵּר כִּֽי־יָבוּז לְשֵׂכֶל מִלֶּֽיךָ׃
10 ೧೦ ಪೂರ್ವಕಾಲದ ಮೇರೆಯನ್ನು ತೆಗೆದುಹಾಕಬೇಡ, ಅನಾಥರ ಹೊಲಗಳಲ್ಲಿ ನುಗ್ಗಬೇಡ.
אַל־תַּסֵּג גְּבוּל עוֹלָם וּבִשְׂדֵי יְתוֹמִים אַל־תָּבֹֽא׃
11 ೧೧ ಅವರ ರಕ್ಷಕನು ಬಲಶಾಲಿಯಾಗಿದ್ದಾನೆ, ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು.
כִּֽי־גֹאֲלָם חָזָק הֽוּא־יָרִיב אֶת־רִיבָם אִתָּֽךְ׃
12 ೧೨ ಉಪದೇಶವನ್ನು ಮನಸ್ಸಿಗೆ ತೆಗೆದುಕೋ, ತಿಳಿವಳಿಕೆಯ ಮಾತುಗಳಿಗೆ ಕಿವಿಗೊಡು.
הָבִיאָה לַמּוּסָר לִבֶּךָ וְאׇזְנֶךָ לְאִמְרֵי־דָֽעַת׃
13 ೧೩ ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ, ಅವನು ಬೆತ್ತದ ಏಟಿಗೆ ಸಾಯನು.
אַל־תִּמְנַע מִנַּעַר מוּסָר כִּֽי־תַכֶּנּוּ בַשֵּׁבֶט לֹא יָמֽוּת׃
14 ೧೪ ಬೆತ್ತದಿಂದ ಹೊಡೆ, ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು. (Sheol h7585)
אַתָּה בַּשֵּׁבֶט תַּכֶּנּוּ וְנַפְשׁוֹ מִשְּׁאוֹל תַּצִּֽיל׃ (Sheol h7585)
15 ೧೫ ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ ನನ್ನ ಮನಸ್ಸಿಗೂ ಉಲ್ಲಾಸವಾಗುವುದು.
בְּנִי אִם־חָכַם לִבֶּךָ יִשְׂמַח לִבִּי גַם־אָֽנִי׃
16 ೧೬ ಹೌದು, ನಿನ್ನ ತುಟಿಗಳು ನೀತಿಯ ನುಡಿಗಳನ್ನಾಡಿದರೆ ನನ್ನ ಅಂತರಾತ್ಮವು ಹಿಗ್ಗುವುದು.
וְתַעְלֹזְנָה כִלְיוֹתָי בְּדַבֵּר שְׂפָתֶיךָ מֵישָׁרִֽים׃
17 ೧೭ ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು.
אַל־יְקַנֵּא לִבְּךָ בַּחַטָּאִים כִּי אִם־בְּיִרְאַת־יְהֹוָה כׇּל־הַיּֽוֹם׃
18 ೧೮ ಒಂದು ಕಾಲ ಉಂಟು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.
כִּי אִם־יֵשׁ אַחֲרִית וְתִקְוָתְךָ לֹא תִכָּרֵֽת׃
19 ೧೯ ಕಂದಾ, ಕೇಳು, ಜ್ಞಾನವಂತನಾಗಿರು, ನಿನ್ನ ಮನಸ್ಸನ್ನು ಜ್ಞಾನದ ಮಾರ್ಗದಲ್ಲಿ ಮುಂದೆ ನಡೆಯಿಸು.
שְׁמַע־אַתָּה בְנִי וַחֲכָם וְאַשֵּׁר בַּדֶּרֶךְ לִבֶּֽךָ׃
20 ೨೦ ಕುಡುಕರಲ್ಲಿಯೂ, ಅತಿಮಾಂಸಭಕ್ಷಕರಲ್ಲಿಯೂ ಸೇರದಿರು.
אַל־תְּהִי בְסֹֽבְאֵי־יָיִן בְּזֹלְלֵי בָשָׂר לָֽמוֹ׃
21 ೨೧ ಕುಡುಕರು, ಹೊಟ್ಟೆಬಾಕರು ದುರ್ಗತಿಗೆ ಬರುವರು, ನಿದ್ರಾಸಕ್ತಿಯು ಹರಕು ಬಟ್ಟೆಗಳನ್ನು ಹೊದಿಸುವುದು.
כִּֽי־סֹבֵא וְזוֹלֵל יִוָּרֵשׁ וּקְרָעִים תַּלְבִּישׁ נוּמָֽה׃
22 ೨೨ ಹೆತ್ತ ತಂದೆಯ ಮಾತಿಗೆ ಕಿವಿಗೊಡು, ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.
שְׁמַע לְאָבִיךָ זֶה יְלָדֶךָ וְאַל־תָּבוּז כִּֽי־זָקְנָה אִמֶּֽךָ׃
23 ೨೩ ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, ಮಾರಿ ಬಿಡಬೇಡ.
אֱמֶת קְנֵה וְאַל־תִּמְכֹּר חׇכְמָה וּמוּסָר וּבִינָֽה׃
24 ೨೪ ಧರ್ಮಿಯ ತಂದೆಯು ಅತಿ ಸಂತೋಷಪಡುವನು, ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು.
(גול) [גִּיל] יָגִיל אֲבִי צַדִּיק (יולד) [וְיוֹלֵד] חָכָם (וישמח) [יִשְׂמַח־]בּֽוֹ׃
25 ೨೫ ನಿನ್ನ ತಂದೆತಾಯಿಗಳು ಉಲ್ಲಾಸಗೊಳ್ಳಲಿ, ನಿನ್ನನ್ನು ಹೆತ್ತವಳು ಆನಂದಪಡಲಿ.
יִֽשְׂמַח־אָבִיךָ וְאִמֶּךָ וְתָגֵל יוֹלַדְתֶּֽךָ׃
26 ೨೬ ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.
תְּנָה־בְנִי לִבְּךָ לִי וְעֵינֶיךָ דְּרָכַי (תרצנה) [תִּצֹּֽרְנָה]׃
27 ೨೭ ಸೂಳೆಯು ಆಳವಾದ ಹಳ್ಳ, ಜಾರಸ್ತ್ರೀಯು ಇಕ್ಕಟ್ಟಾದ ಗುಂಡಿ.
כִּֽי־שׁוּחָה עֲמֻקָּה זוֹנָה וּבְאֵר צָרָה נׇכְרִיָּֽה׃
28 ೨೮ ಹೌದು, ಕಳ್ಳನಂತೆ ಹೊಂಚುಹಾಕುತ್ತಾಳೆ, ಜನರಲ್ಲಿ ದ್ರೋಹಿಗಳನ್ನು ಹೆಚ್ಚಿಸುತ್ತಾಳೆ.
אַף־הִיא כְּחֶתֶף תֶּאֱרֹב וּבוֹגְדִים בְּאָדָם תּוֹסִֽף׃
29 ೨೯ ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು?
לְמִי אוֹי לְמִי אֲבוֹי לְמִי (מדונים) [מִדְיָנִים ׀] לְמִי שִׂיחַ לְמִי פְּצָעִים חִנָּם לְמִי חַכְלִלוּת עֵינָֽיִם׃
30 ೩೦ ಅವರು ಮಿಶ್ರಮದ್ಯಪಾನಾಸಕ್ತರಾಗಿ, ದ್ರಾಕ್ಷಾರಸವನ್ನು ಕುಡಿಯುತ್ತಾ, ಕಾಲಹರಣಮಾಡುವವರೇ.
לַֽמְאַחֲרִים עַל־הַיָּיִן לַבָּאִים לַחְקֹר מִמְסָֽךְ׃
31 ೩೧ ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅದು ಗಂಟಲಿನೊಳಗೆ ಮೆಲ್ಲಗೆ ಇಳಿದುಹೋಗಿ
אַל־תֵּרֶא יַּיִן כִּי יִתְאַדָּם כִּֽי־יִתֵּן (בכיס) [בַּכּוֹס] עֵינוֹ יִתְהַלֵּךְ בְּמֵֽישָׁרִֽים׃
32 ೩೨ ಆಮೇಲೆ ಹಾವಿನಂತೆ ಕಚ್ಚುತ್ತದೆ, ಹೌದು, ನಾಗರ ಹಾವಿನ ಹಾಗೆ ಕಡಿಯುತ್ತದೆ.
אַחֲרִיתוֹ כְּנָחָשׁ יִשָּׁךְ וּֽכְצִפְעֹנִי יַפְרִֽשׁ׃
33 ೩೩ ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವುದು, ಮನಸ್ಸು ವಿಪರೀತಗಳನ್ನು ಹೊರಪಡಿಸುವುದು.
עֵינֶיךָ יִרְאוּ זָרוֹת וְלִבְּךָ יְדַבֵּר תַּהְפֻּכֽוֹת׃
34 ೩೪ ನೀನು ಸಮುದ್ರದ ನಡುವೆಯಾಗಲಿ, ಹಡಗಿನ ಕಂಬದ ತುದಿಯಲ್ಲಿಯಾಗಲಿ ಮಲಗಿರುವವನಂತೆ ಇರುವಿ.
וְהָיִיתָ כְּשֹׁכֵב בְּלֶב־יָם וּכְשֹׁכֵב בְּרֹאשׁ חִבֵּֽל׃
35 ೩೫ ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ, ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.
הִכּוּנִי בַל־חָלִיתִי הֲלָמוּנִי בַּל־יָדָעְתִּי מָתַי אָקִיץ אוֹסִיף אֲבַקְשֶׁנּוּ עֽוֹד׃

< ಜ್ಞಾನೋಕ್ತಿಗಳು 23 >