< ಜ್ಞಾನೋಕ್ತಿಗಳು 24 >
1 ೧ ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಅವರ ಸಹವಾಸವನ್ನು ಬಯಸಬೇಡ.
১যে খারাপ তার ওপরে ঈর্ষান্বিত হয়ো না, তাদের সঙ্গে থাকতেও ইচ্ছা কর না।
2 ೨ ಅವರ ಮನಸ್ಸು ಹಿಂಸೆಯನ್ನು ಯೋಚಿಸುತ್ತಿರುವುದು, ಅವರ ತುಟಿಯು ಹಾನಿಯನ್ನು ಪ್ರಸ್ತಾಪಿಸುತ್ತಿರುವುದು.
২কারণ তাদের হৃদয় অনিষ্টের পরিকল্পনা করে এবং তাদের ঠোঁট বিপদের বিষয়ে কথা বলে।
3 ೩ ಮನೆಯನ್ನು ಕಟ್ಟುವುದಕ್ಕೆ ಜ್ಞಾನವೇ ಸಾಧನ, ಅದನ್ನು ಸ್ಥಿರಪಡಿಸುವುದಕ್ಕೆ ವಿವೇಕವೇ ಆಧಾರ,
৩প্রজ্ঞার মাধ্যমে বাড়ি নির্মাণ হয় এবং বুদ্ধির মাধ্যমে তা প্রতিষ্ঠিত হয়;
4 ೪ ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ, ಇಷ್ಟ ಸಂಪತ್ತಿನಿಂದ ತುಂಬಿಸುವುದಕ್ಕೆ, ತಿಳಿವಳಿಕೆಯೇ ಉಪಕರಣ.
৪জ্ঞানের মাধ্যমে ঘরগুলি সব পরিপূর্ণ হয়, মূল্যবান ও সুন্দর সমস্ত সম্পদে।
5 ೫ ಜ್ಞಾನಿಗೆ ತ್ರಾಣ, ಬಲ್ಲವನಿಗೆ ಬಹು ಬಲ.
৫সাহসী লোক বলবান কিন্তু যার জ্ঞান আছে সে এক জন শক্তিশালী লোকের থেকে ভালো।
6 ೬ ಮಂತ್ರಾಲೋಚನೆಯಿಂದ ಯುದ್ಧವನ್ನು ನಡೆಸು, ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವುದು.
৬কারণ সুবিবেচনার নির্দেশে তুমি যুদ্ধ চালাবে এবং অনেকের উপদেশে বিজয় হয়।
7 ೭ ಜ್ಞಾನವು ಮೂರ್ಖನಿಗೆ ನಿಲುಕದು, ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು.
৭বোকার জন্য প্রজ্ঞা খুব উঁচু; সে দরজায় তার মুখ খোলে না।
8 ೮ ಕೇಡನ್ನು ಕಲ್ಪಿಸುವವನು, ಕುಯುಕ್ತಿಯುಳ್ಳವನು ಎನಿಸಿಕೊಳ್ಳುವನು.
৮যে মন্দের পরিকল্পনা করে, লোকে তাকে পরিকল্পনাকারীর গুরু বলবে।
9 ೯ ಮೂರ್ಖನ ಸಂಕಲ್ಪವು ಪಾಪವೇ, ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.
৯অজ্ঞানতার পরিকল্পনা পাপময় এবং লোকেরা উপহাসককে তুচ্ছ করে।
10 ೧೦ ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ, ನಿನ್ನ ಬಲವೂ ಇಕ್ಕಟ್ಟೇ.
১০বিপদের দিনের যদি কাপুরুষতা দেখাও, তবে তোমার শক্তি সামান্য।
11 ೧೧ ಕೊಲೆಗೆ ಸೆಳೆಯಲ್ಪಟ್ಟವರನ್ನು ರಕ್ಷಿಸು, ಸಂಹಾರಕ್ಕೆ ಗುರಿಯಾದವರನ್ನು ತಪ್ಪಿಸು.
১১তাদেরকে উদ্ধার কর, যারা মৃত্যুর কাছ থেকে সরিয়ে নেওয়া হয়েছে, যারা বধের জন্য কম্পমান হয় তুমি তাদেরকে পিছনে ধরে রাখো।
12 ೧೨ “ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?
১২যদি বল, “দেখ, আমরা এই বিষয়ে জানতাম না,” তবে যিনি হৃদয় ওজন করেন, তিনি কি তা বোঝেন না যা তুমি বলছ? এবং যিনি তোমার প্রাণ রক্ষা করেন, তিনি কি তা জানেন না? এবং তিনি কি প্রত্যেককে তার কাজ অনুযায়ী পুরষ্কার দেবেন না?
13 ೧೩ ಕಂದಾ, ಜೇನು ಚೆನ್ನಾಗಿದೆಯಲ್ಲವೆ, ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಷ್ಟೆ, ಅದನ್ನು ತಿನ್ನು.
১৩আমার পুত্র, মধু খাও, কারণ তা ভালো, কারণ মধুর চাকের ক্ষরণ তোমার স্বাদে মিষ্টি লাগে;
14 ೧೪ ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವುದೆಂದು ತಿಳಿದುಕೋ, ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವುದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.
১৪তোমার প্রাণের জন্যে প্রজ্ঞা তেমন; যদি তুমি এটা খুঁজে পাও, তা ভবিষ্যতে হবে এবং তোমার আশা উছিন্ন হবে না।
15 ೧೫ ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ, ಅವನ ನಿವಾಸವನ್ನು ಸೂರೆಮಾಡಬೇಡ.
১৫দুষ্টের মতো অপেক্ষা করে বসে থেকো না, যে ধার্ম্মিকের বাড়িতে আক্রমণ করে। তার ঘর ধ্বংস কর না।
16 ೧೬ ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.
১৬কারণ ধার্মিক সাত বার পড়লেও সে আবার ওঠে; কিন্তু দুষ্টেরা বিপর্যয়ের দ্বারা পরাজিত হবে।
17 ೧೭ ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ, ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ.
১৭তোমার শত্রুর পতনে আনন্দ কর না এবং সে হোঁচট খেলে তোমার হৃদয় উল্লাসিত না হোক;
18 ೧೮ ಯೆಹೋವನು ನಿನ್ನ ಹರ್ಷವನ್ನು ಕಂಡು ಬೇಸರಗೊಂಡು, ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಾನು.
১৮অথবা সদাপ্রভু দেখবেন এবং অগ্রাহ্য করবেন এবং তার থেকে তার ক্রোধ সরিয়ে নেন।
19 ೧೯ ಕೆಡುಕರ ಮೇಲೆ ಉರಿಗೊಳ್ಳದಿರು, ದುಷ್ಟರನ್ನು ನೋಡಿ ಹೊಟ್ಟೆಕಿಚ್ಚುಪಡದಿರು.
১৯যারা খারাপ কাজ করে তাদের কারণে তুমি বিরক্ত হয়ো না এবং দুষ্টদের প্রতি ঈর্ষা কর না।
20 ೨೦ ಕೆಟ್ಟವನಿಗೆ ಶುಭಕಾಲವು ಬಾರದು, ದುಷ್ಟರ ದೀಪವು ಆರಿಯೇ ಹೋಗುವುದು.
২০কারণ খারাপ লোকের কোনো ভবিষ্যত নেই এবং দুষ্টদের বাতি নিভে যাবে।
21 ೨೧ ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.
২১আমার পুত্র, সদাপ্রভুকে ভয় কর এবং রাজাকে ভয় কর, যারা তাদের বিরুদ্ধে বিদ্রোহ করে তাদের সঙ্গে যোগ দিও না;
22 ೨೨ ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವುದು, ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?
২২কারণ হঠাৎ তাদের বিপদ আসবে এবং উভয়ের দ্বারা যে ধ্বংসের বিস্তার হবে তা কে জানে?
23 ೨೩ ಇವು ಕೂಡ ಜ್ಞಾನಿಗಳ ಮಾತುಗಳು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.
২৩এইগুলিও জ্ঞানবানদের উক্তি। বিচারে পক্ষপাত করা ভাল নয়।
24 ೨೪ ಯಾವನು ಅಧರ್ಮಿಗೆ, “ನೀನು ಧರ್ಮಾತ್ಮನು” ಎಂದು ಹೇಳುತ್ತಾನೋ, ಅವನನ್ನು ಜನರು ಶಪಿಸುವರು, ಪ್ರಜೆಗಳು ದೂಷಿಸುವರು.
২৪যে দুষ্টকে বলে, “তুমি ধার্মিক,” লোকদের দ্বারা অভিশপ্ত এবং জাতির দ্বারা ঘৃণিত হবে।
25 ೨೫ ದುಷ್ಟನನ್ನು ಗದರಿಸುವವರಿಗಾದರೋ ಶುಭವಾಗುವುದು, ಸುಖಕರವಾದ ಆಶೀರ್ವಾದವೂ ಲಭಿಸುವುದು.
২৫কিন্তু যারা তাকে তিরষ্কার করে, তারা আনন্দিত হবে এবং তাদের প্রতি ধার্মিকতার উপহার আসবে।
26 ೨೬ ಯಥಾರ್ಥವಾದ ಉತ್ತರವು, ತುಟಿಗೆ ಮುದ್ದು.
২৬যে ব্যক্তি সৎ উত্তর দেয়, সে ঠোঁটে চুম্বন দেয়।
27 ೨೭ ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು, ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು.
২৭বাইরে তোমার কাজ প্রস্তুত কর এবং ক্ষেত্রে নিজের জন্য সব প্রস্তুত কর এবং পরে তোমার ঘর নির্মাণ কর।
28 ೨೮ ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ, ಮಾತಿನಿಂದ ಮೋಸಮಾಡಬೇಡ.
২৮অকারণে তোমার প্রতিবেশীর বিরুদ্ধে সাক্ষী হয়ো না; এবং তুমি কি ঠোঁটের দ্বারা প্রতারণা কর না?
29 ೨೯ “ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆನು, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು” ಅಂದುಕೊಳ್ಳಬೇಡ.
২৯বল না, “সে আমার প্রতি যেমন করেছে, আমিও তার প্রতি তেমনি করব; যা সে করেছে আমি তার ফল ফিরিয়ে দেব।”
30 ೩೦ ಸೋಮಾರಿಯ ಹೊಲದ ಮೇಲೆಯೂ, ಬುದ್ಧಿಹೀನನ ದ್ರಾಕ್ಷಿಯ ತೋಟದ ಮೇಲೆಯೂ ಹಾದು ಹೋದೆನು.
৩০আমি অলসের ক্ষেতের কাছ দিয়ে গেলাম, নির্বোধের দ্রাক্ষাক্ষেতের কাছ দিয়ে গেলাম;
31 ೩೧ ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು, ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.
৩১সব জায়গার কাঁটাবন বেড়ে উঠেছে, ভূমি বিছুটিতে ঢাকা রয়েছে এবং তার পাথরের পাঁচিল ভেঙে গিয়েছে।
32 ೩೨ ಆಗ ನಾನು ನೋಡಿ ಆಲೋಚಿಸಿದೆನು, ದೃಷ್ಟಿಸಿ ಶಿಕ್ಷಿತನಾದೆನು.
৩২আমি দেখলাম এবং বিবেচনা করলাম, তা দেখলাম এবং উপদেশ গ্রহণ করলাম;
33 ೩೩ ಇನ್ನು ಸ್ವಲ್ಪ ನಿದ್ದೆ, ಇನ್ನು ತುಸ ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ ಅಂದುಕೊಳ್ಳುವಿಯಾ?
৩৩আর একটু ঘুম, আর একটু তন্দ্রা, আর একটু শুয়ে হাত ভাঁজ করব,
34 ೩೪ ಬಡತನವು ದಾರಿಗಳ್ಳನ ಹಾಗೂ, ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು.
৩৪এবং তোমার দরিদ্রতা ডাকাতের মতো আসবে, তোমার প্রয়োজনীয়তা সশস্ত্র সৈনিকের মতো আসবে।