< ಜ್ಞಾನೋಕ್ತಿಗಳು 25 >
1 ೧ ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳು, ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಇವುಗಳನ್ನು ಸಂಗ್ರಹಿಸಿ ಬರೆದರು.
ये भी सुलेमान की अम्साल हैं; जिनकी शाह — ए — यहूदाह हिज़क़ियाह के लोगों ने नक़ल की थी:
2 ೨ ವಿಷಯವನ್ನು ರಹಸ್ಯವಾಗಿಡುವುದು ದೇವರ ಮಹಿಮೆ, ವಿಷಯವನ್ನು ವಿಮರ್ಶೆಮಾಡುವುದು ರಾಜರ ಹಿರಿಮೆ.
ख़ुदा का जलाल राज़दारी में है, लेकिन बादशाहों का जलाल मुआ'मिलात की तफ़्तीश में।
3 ೩ ಆಕಾಶವು ಉನ್ನತ, ಭೂಮಿಯು ಅಗಾಧ, ರಾಜರ ಹೃದಯವು ಅಗೋಚರ.
आसमान की ऊँचाई और ज़मीन की गहराई, और बादशाहों के दिल की इन्तिहा नहीं मिलती।
4 ೪ ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ, ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯಾಗುವುದು.
चाँदी की मैल दूर करने से, सुनार के लिए बर्तन बन जाता है।
5 ೫ ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ, ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವುದು.
शरीरों को बादशाह के सामने से दूर करने से, उसका तख़्त सदाक़त पर क़ाईम हो जाएगा।
6 ೬ ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ, ಶ್ರೀಮಂತರಿಗೆ ಏರ್ಪಡಿಸಿರುವ ಸ್ಥಾನದಲ್ಲಿ ನಿಂತುಕೊಳ್ಳಬೇಡ.
बादशाह के सामने अपनी बड़ाई न करना, और बड़े आदमियों की जगह खड़ा न होना;
7 ೭ ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮದಲ್ಲಿ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವುದಕ್ಕಿಂತಲೂ, “ಇನ್ನೂ ಮೇಲಕ್ಕೆ ಬಾ” ಎಂದು ಕರೆಯಿಸಿಕೊಳ್ಳುವುದು ಲೇಸು.
क्यूँकिये बेहतर है कि हाकिम के आमने — सामने जिसको तेरी आँखों ने देखा है, तुझ से कहा जाए, आगे बढ़ कर बैठ। न कि तू पीछे हटा दिया जाए।
8 ೮ ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ, ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ.
झगड़ा करने में जल्दी न कर, आख़िरकार जब तेरा पड़ोसी तुझको ज़लील करे, तब तू क्या करेगा?
9 ೯ ವ್ಯಾಜ್ಯವಾಡಿದವನ ಸಂಗಡಲೇ ಅದನ್ನು ಚರ್ಚಿಸು, ಒಬ್ಬನ ಗುಟ್ಟನ್ನೂ ಬಯಲುಮಾಡಬೇಡ.
तू पड़ोसी के साथ अपने दा'वे का ज़िक्र कर, लेकिन किसी दूसरे का राज़ न खोल;
10 ೧೦ ಅದನ್ನು ಕೇಳುವವನು ನಿನ್ನನ್ನು ದೂಷಿಸಾನು, ನಿನಗೆ ಬಂದ ಅಪಕೀರ್ತಿಯು ಹೋಗದು.
ऐसा न हो जो कोई उसे सुने तुझे रुस्वा करे, और तेरी बदनामी होती रहे।
11 ೧೧ ಸಮಯೋಚಿತವಾದ ಮಾತುಗಳು ಬೆಳ್ಳಿಯ ಕಟ್ಟಿನಲ್ಲಿ ಖಚಿತವಾದ ಬಂಗಾರದ ಹಣ್ಣುಗಳಿಗೆ ಸಮಾನ.
बामौक़ा' बातें, रूपहली टोकरियों में सोने के सेब हैं।
12 ೧೨ ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.
'अक़्लमंद मलामत करने वाले की बात, सुनने वाले के कान में सोने की बाली और कुन्दन का ज़ेवर है।
13 ೧೩ ಸುಗ್ಗೀಕಾಲದಲ್ಲಿ ಹಿಮದ ಶೀತವು ಹೇಗೋ ಕಳುಹಿಸಿದ ಒಡೆಯರಿಗೆ ಆಪ್ತದೂತನು ಹಾಗೆಯೇ ಹಿತ.
वफ़ादार क़ासिद अपने भेजने वालों के लिए, ऐसा है जैसे फ़सल काटने के दिनों में बर्फ़ की ठंडक, क्यूँकि वह अपने मालिकों की जान को ताज़ा दम करता है।
14 ೧೪ ಬರೀ ಗಾಳಿಯ ಮೋಡಗಳು ಹೇಗೋ, ದಾನಕೊಡುತ್ತೇನೆಂದು ಸುಳ್ಳಾಡಿ ಜಂಬಮಾಡುವವನೂ ಹಾಗೆಯೇ.
जो किसी झूटी लियाक़त पर फ़ख़्र करता है, वह बेबारिश बादल और हवा की तरह है।
15 ೧೫ ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು, ಮೃದುವಚನವು ಎಲುಬನ್ನು ಮುರಿಯುವುದು.
तहम्मुल करने से हाकिम राज़ी हो जाता है, और नर्म ज़बान हड्डी को भी तोड़ डालती है।
16 ೧೬ ಜೇನು ಸಿಕ್ಕಿತೋ? ಮಿತವಾಗಿ ತಿನ್ನು, ಹೊಟ್ಟೆತುಂಬಾ ತಿಂದರೆ ಕಾರಿಬಿಟ್ಟೀಯೇ.
क्या तूने शहद पाया? तू इतना खा जितना तेरे लिए काफ़ी है। ऐसा न हो तू ज़्यादा खा जाए और उगल डाल्ले
17 ೧೭ ನೆರೆಯವನು ಬೇಸರಗೊಂಡು ಹಗೆಮಾಡದ ಹಾಗೆ, ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು.
अपने पड़ोसी के घर बार बार जाने से अपने पाँवों को रोक, ऐसा न हो कि वह दिक़ होकर तुझ से नफ़रत करे।
18 ೧೮ ನೆರೆಯವನ ಮೇಲೆ ಸುಳ್ಳುಸಾಕ್ಷಿಹೇಳುವವನು, ಚಮಟಿಕೆ, ಕತ್ತಿ, ಚೂಪಾದ ಬಾಣ ಇವುಗಳೇ.
जो अपने पड़ोसी के खिलाफ़ झूटी गवाही देता है वह गुर्ज़ और तलवार और तेज़ तीर है।
19 ೧೯ ಕಷ್ಟಕಾಲದಲ್ಲಿ ದ್ರೋಹಿಯಲ್ಲಿಡುವ ನಂಬಿಕೆಯು, ಮುರುಕಹಲ್ಲು ಮತ್ತು ಜಾರುವ ಕಾಲು.
मुसीबत के वक़्त बेवफ़ा आदमी पर 'ऐतमाद, टूटा दाँत और उखड़ा पाँव है।
20 ೨೦ ಮನಗುಂದಿದವನಿಗೆ ಸಂಗೀತಹಾಡುವುದು ಚಳಿದಿನದಲ್ಲಿ ಬಟ್ಟೆ ತೆಗೆದಂತೆ, ಗಾಯಕ್ಕೆ ಹುಳಿಹೊಯ್ದಂತೆ.
जो किसी ग़मगीन के सामने गीत गाता है, वह गोया जाड़े में किसी के कपड़े उतारता और सज्जी पर सिरका डालता है।
21 ೨೧ ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು,
अगर तेरा दुश्मन भूका हो तो उसे रोटी खिला, और अगर वह प्यासा हो तो उसे पानी पिला;
22 ೨೨ ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು. ಯೆಹೋವನೇ ನಿನಗೆ ಪ್ರತಿಫಲಕೊಡುವನು.
क्यूँकि तू उसके सिर पर अंगारों का ढेर लगाएगा, और ख़ुदावन्द तुझ को बदला देगा।
23 ೨೩ ಉತ್ತರದ ಗಾಳಿ ಮಳೆ ಬರಮಾಡುವುದು, ಚಾಡಿಯ ನಾಲಿಗೆ ಕೋಪದ ಮುಖ ಮಾಡುವುದು.
उत्तरी हवा मेह को लाती है, और ग़ैबत गो ज़बान तुर्शरूई को।
24 ೨೪ ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
घर की छत पर एक कोने में रहना, झगड़ालू बीवी के साथ कुशादा मकान में रहने से बेहतर है।
25 ೨೫ ಬಳಲಿ ಬಾಯಾರಿದವನಿಗೆ ತಣ್ಣೀರು ಹೇಗೋ, ದೇಶಾಂತರದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
वह ख़ुशख़बरी जो दूर के मुल्क से आए, ऐसी है जैसे थके मांदे की जान के लिए ठंडा पानी।
26 ೨೬ ದುಷ್ಟರಿಂದ ಸೋತ ಶಿಷ್ಟನು, ಹಾಳು ಬಾವಿ ಮತ್ತು ತುಳಿದಾಡಿದ ಒರತೆ.
सादिक़ का शरीर के आगे गिरना, गोया गन्दा नाला और नापाक सोता है।
27 ೨೭ ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಸ್ವಂತಮಾನವನ್ನು ಹೆಚ್ಚಾಗಿ ಯೋಚಿಸುವುದು ಮಾನವಲ್ಲ.
बहुत शहद खाना अच्छा नहीं, और अपनी बुज़ुर्गी का तालिब होना ज़ेबा नहीं है।
28 ೨೮ ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು ಗೋಡೆ ಬಿದ್ದ ಹಾಳೂರಿಗೆ ಸಮಾನ.
जो अपने नफ़्स पर ज़ाबित नहीं, वह बेफ़सील और मिस्मारशुदा शहर की तरह है।