< ಜ್ಞಾನೋಕ್ತಿಗಳು 26 >
1 ೧ ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ, ಮೂಢನಿಗೆ ಮಾನವು ಹಾಗೆ ಸರಿಯಲ್ಲ.
Seperti salju di musim panas dan hujan pada waktu panen, demikian kehormatanpun tidak layak bagi orang bebal.
2 ೨ ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ, ಕಾರಣವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು.
Seperti burung pipit mengirap dan burung layang-layang terbang, demikianlah kutuk tanpa alasan tidak akan kena.
3 ೩ ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, ಮೂಢನ ಬೆನ್ನಿಗೆ ಬೆತ್ತ.
Cemeti adalah untuk kuda, kekang untuk keledai, dan pentung untuk punggung orang bebal.
4 ೪ ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡಬೇಡ, ನೀನೂ ಅವನಿಗೆ ಸಮಾನನಾದೀಯೆ.
Jangan menjawab orang bebal menurut kebodohannya, supaya jangan engkau sendiri menjadi sama dengan dia.
5 ೫ ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡು, ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.
Jawablah orang bebal menurut kebodohannya, supaya jangan ia menganggap dirinya bijak.
6 ೬ ಮೂಢನ ಮೂಲಕ ಮಾತನ್ನು ಹೇಳಿಕಳುಹಿಸುವವನು, ತನ್ನ ಕಾಲುಗಳನ್ನು ತಾನೇ ಕಡಿದುಕೊಂಡು ಕೇಡನ್ನು ಕುಡಿಯುವನು.
Siapa mengirim pesan dengan perantaraan orang bebal mematahkan kakinya sendiri dan meminum kecelakaan.
7 ೭ ಮೂಢನ ಬಾಯಿಯ ಜ್ಞಾನೋಕ್ತಿಯು, ಜೋಲಾಡುವ ಕುಂಟಕಾಲು.
Amsal di mulut orang bebal adalah seperti kaki yang terkulai dari pada orang yang lumpuh.
8 ೮ ಮೂಢನಿಗೆ ಕೊಡುವ ಮಾನವು, ಕವಣೆಯಲ್ಲಿಟ್ಟ ಕಲ್ಲಿನ ಹಾಗೆ.
Seperti orang menaruh batu di umban, demikianlah orang yang memberi hormat kepada orang bebal.
9 ೯ ಮೂಢನ ಬಾಯಿಗೆ ಸಿಕ್ಕಿದ ಜ್ಞಾನೋಕ್ತಿಯು, ಕುಡುಕನ ಕೈಗೆ ಸಿಕ್ಕಿದ ಮುಳ್ಳುಗೋಲಿನ ಹಾಗೆ.
Amsal di mulut orang bebal adalah seperti duri yang menusuk tangan pemabuk.
10 ೧೦ ಮೂಢರನ್ನೂ, ತಿರುಗಾಡುವವರನ್ನೂ ಕೂಲಿಗೆ ಕರೆಯುವವನು, ಯಾರಿಗೋ ತಗಲಲಿ ಎಂದು ಬಾಣವನ್ನು ಎಸೆಯುವವನಂತೆ.
Siapa mempekerjakan orang bebal dan orang-orang yang lewat adalah seperti pemanah yang melukai tiap orang.
11 ೧೧ ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಳ್ಳುವ ಹಾಗೆ, ಮೂಢನು ತಾನು ಮಾಡಿದ ಮೂರ್ಖತನವನ್ನೇ ಪುನಃ ಮಾಡುವನು.
Seperti anjing kembali ke muntahnya, demikianlah orang bebal yang mengulangi kebodohannya.
12 ೧೨ ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.
Jika engkau melihat orang yang menganggap dirinya bijak, harapan bagi orang bebal lebih banyak dari pada bagi orang itu.
13 ೧೩ “ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ತಿರುಗಾಡುತ್ತಿದೆ” ಎಂಬುದು ಸೋಮಾರಿಯ ನೆವ.
Berkatalah si pemalas: "Ada singa di jalan! Ada singa di lorong!"
14 ೧೪ ಕದವು ತಿರುಗುಣಿಯಲ್ಲಿ ಹೇಗೋ, ಹಾಗೆ ಸೋಮಾರಿಯು ಹಾಸಿಗೆಯಲ್ಲಿ ಹೊರಳಾಡುತ್ತಿರುವನು.
Seperti pintu berputar pada engselnya, demikianlah si pemalas di tempat tidurnya.
15 ೧೫ ಸೋಮಾರಿಯು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರ ತರಲಾರದಷ್ಟು ಆಯಾಸಗೊಳ್ಳುತ್ತಾನೆ.
Si pemalas mencelupkan tangannya ke dalam pinggan, tetapi ia terlalu lelah untuk mengembalikannya ke mulutnya.
16 ೧೬ ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ, ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು.
Si pemalas menganggap dirinya lebih bijak dari pada tujuh orang yang menjawab dengan bijaksana.
17 ೧೭ ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವುದು, ನಾಯಿಯ ಕಿವಿಹಿಡಿದ ಹಾಗೆ.
Orang yang ikut campur dalam pertengkaran orang lain adalah seperti orang yang menangkap telinga anjing yang berlalu.
18 ೧೮ ನೆರೆಯವನನ್ನು ಮೋಸಗೊಳಿಸಿ, “ತಮಾಷೆಗೋಸ್ಕರ, ಮಾಡಿದೆನಲ್ಲಾ” ಎನ್ನುವವನು,
Seperti orang gila menembakkan panah api, panah dan maut,
19 ೧೯ ಕೊಳ್ಳಿಗಳನ್ನೂ, ಅಂಬುಗಳನ್ನೂ, ಸಾವನ್ನೂ ಬೀರುವ, ದೊಡ್ಡ ಹುಚ್ಚನ ಹಾಗೆ.
demikianlah orang yang memperdaya sesamanya dan berkata: "Aku hanya bersenda gurau."
20 ೨೦ ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವುದು, ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವುದು.
Bila kayu habis, padamlah api; bila pemfitnah tak ada, redalah pertengkaran.
21 ೨೧ ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ, ವ್ಯಾಜ್ಯದ ಕಿಚ್ಚನ್ನೆಬ್ಬಿಸುವುದಕ್ಕೆ ಜಗಳಗಂಟಿಗ.
Seperti arang untuk bara menyala dan kayu untuk api, demikianlah orang yang suka bertengkar untuk panasnya perbantahan.
22 ೨೨ ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಇವು ಹೊಟ್ಟೆಯೊಳಕ್ಕೇ ಇಳಿಯುವವು.
Seperti sedap-sedapan perkataan pemfitnah masuk ke lubuk hati.
23 ೨೩ ಕೆಟ್ಟ ಹೃದಯದಿಂದ ಪ್ರೀತಿಯನ್ನಾಡುವ ತುಟಿಯು, ಬೆಳ್ಳಿ ಲೇಪನ ಮಾಡಿದ ಮಣ್ಣಿನ ಮಡಿಕೆಯ ಹಾಗೆ.
Seperti pecahan periuk bersalutkan perak, demikianlah bibir manis dengan hati jahat.
24 ೨೪ ಶತ್ರುವು ಸ್ನೇಹಭಾವದಿಂದ ನಟಿಸುತ್ತಾನೆ, ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ.
Si pembenci berpura-pura dengan bibirnya, tetapi dalam hati dikandungnya tipu daya.
25 ೨೫ ಸವಿಮಾತನಾಡಿದರೂ ಅವನನ್ನು ನಂಬಬೇಡ, ಅವನ ಹೃದಯದಲ್ಲಿ ಎಷ್ಟೋ ಹೇಯ ಕೃತ್ಯಗಳು.
Kalau ia ramah, janganlah percaya padanya, karena tujuh kekejian ada dalam hatinya.
26 ೨೬ ತನ್ನ ಹಗೆಯನ್ನು ವಂಚನೆಯಿಂದ ಮರೆಮಾಚಿಕೊಂಡಿದ್ದರೂ, ಅವನ ಕೆಟ್ಟತನವು ಸಭೆಯಲ್ಲಿ ಬೈಲಾಗುವುದು.
Walaupun kebenciannya diselubungi tipu daya, kejahatannya akan nyata dalam jemaah.
27 ೨೭ ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವುದು.
Siapa menggali lobang akan jatuh ke dalamnya, dan siapa menggelindingkan batu, batu itu akan kembali menimpa dia.
28 ೨೮ ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ದ್ವೇಷಿಸುವನು, ಕಪಟದ ಬಾಯಿ ನಾಶಕರ.
Lidah dusta membenci korbannya, dan mulut licin mendatangkan kehancuran.