< ಜ್ಞಾನೋಕ್ತಿಗಳು 26 >

1 ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ, ಮೂಢನಿಗೆ ಮಾನವು ಹಾಗೆ ಸರಿಯಲ್ಲ.
Kā sniegs vasarai un lietus pļaujamam laikam, tā ģeķim nepieder gods.
2 ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ, ಕಾರಣವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು.
Kā putns nolidinājās, kā bezdelīga aizskrien, tā nenopelnīti lāsti neaizņem.
3 ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, ಮೂಢನ ಬೆನ್ನಿಗೆ ಬೆತ್ತ.
Zirgam pātaga, ēzelim iemaukti un ģeķa mugurai rīkste.
4 ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡಬೇಡ, ನೀನೂ ಅವನಿಗೆ ಸಮಾನನಾದೀಯೆ.
Neatbildi ģeķim pēc viņa ģeķības, ka tu viņam līdzi netopi.
5 ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡು, ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.
Atbildi ģeķim pēc viņa ģeķības, ka viņš pats neturās par gudru.
6 ಮೂಢನ ಮೂಲಕ ಮಾತನ್ನು ಹೇಳಿಕಳುಹಿಸುವವನು, ತನ್ನ ಕಾಲುಗಳನ್ನು ತಾನೇ ಕಡಿದುಕೊಂಡು ಕೇಡನ್ನು ಕುಡಿಯುವನು.
Darbu uzticēt nelgam rokā, ir nocirst kājas un izbaudīt briesmas.
7 ಮೂಢನ ಬಾಯಿಯ ಜ್ಞಾನೋಕ್ತಿಯು, ಜೋಲಾಡುವ ಕುಂಟಕಾಲು.
Kā klibam karājās kājas, tā ģeķa mutē gudrības vārdi.
8 ಮೂಢನಿಗೆ ಕೊಡುವ ಮಾನವು, ಕವಣೆಯಲ್ಲಿಟ್ಟ ಕಲ್ಲಿನ ಹಾಗೆ.
Kas ģeķim dod godu, ir kā kas akmeni piesien pie lingas.
9 ಮೂಢನ ಬಾಯಿಗೆ ಸಿಕ್ಕಿದ ಜ್ಞಾನೋಕ್ತಿಯು, ಕುಡುಕನ ಕೈಗೆ ಸಿಕ್ಕಿದ ಮುಳ್ಳುಗೋಲಿನ ಹಾಗೆ.
Kā ērkšķi, kas tikuši piedzēruša rokā, tāds ir sakāms vārds ģeķu mutē.
10 ೧೦ ಮೂಢರನ್ನೂ, ತಿರುಗಾಡುವವರನ್ನೂ ಕೂಲಿಗೆ ಕರೆಯುವವನು, ಯಾರಿಗೋ ತಗಲಲಿ ಎಂದು ಬಾಣವನ್ನು ಎಸೆಯುವವನಂತೆ.
Manīgs visu izdara; bet kas nelgu der, sader tekuli.
11 ೧೧ ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಳ್ಳುವ ಹಾಗೆ, ಮೂಢನು ತಾನು ಮಾಡಿದ ಮೂರ್ಖತನವನ್ನೇ ಪುನಃ ಮಾಡುವನು.
Kā suns atiet pie saviem vēmekļiem, tā pat ģeķis atgriežas atpakaļ pie savas ģeķības.
12 ೧೨ ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.
Kad tu redzi vīru, kas savās acīs gudrs, tad no muļķa vairāk cerības, nekā no tāda.
13 ೧೩ “ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ತಿರುಗಾಡುತ್ತಿದೆ” ಎಂಬುದು ಸೋಮಾರಿಯ ನೆವ.
Sliņķis saka: „Jauns lauva uz ceļa, lauva uz ielām!“
14 ೧೪ ಕದವು ತಿರುಗುಣಿಯಲ್ಲಿ ಹೇಗೋ, ಹಾಗೆ ಸೋಮಾರಿಯು ಹಾಸಿಗೆಯಲ್ಲಿ ಹೊರಳಾಡುತ್ತಿರುವನು.
Durvis grozās eņģēs, un sliņķis savā gultā.
15 ೧೫ ಸೋಮಾರಿಯು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರ ತರಲಾರದಷ್ಟು ಆಯಾಸಗೊಳ್ಳುತ್ತಾನೆ.
Sliņķis slēpj savu roku azotē, un tam grūti to atkal pie mutes likt.
16 ೧೬ ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ, ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು.
Sliņķis savā prātā gudrāks nekā septiņi, kas runā prātīgi.
17 ೧೭ ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವುದು, ನಾಯಿಯ ಕಿವಿಹಿಡಿದ ಹಾಗೆ.
Kas garām ejot iejaucās citu ķildā, ir kā kas suni ņem aiz ausīm.
18 ೧೮ ನೆರೆಯವನನ್ನು ಮೋಸಗೊಳಿಸಿ, “ತಮಾಷೆಗೋಸ್ಕರ, ಮಾಡಿದೆನಲ್ಲಾ” ಎನ್ನುವವನು,
Tā kā, kad (ārprātīgs) par smieklu šautu ar šķēpiem un nāvīgām bultām,
19 ೧೯ ಕೊಳ್ಳಿಗಳನ್ನೂ, ಅಂಬುಗಳನ್ನೂ, ಸಾವನ್ನೂ ಬೀರುವ, ದೊಡ್ಡ ಹುಚ್ಚನ ಹಾಗೆ.
Tā pat ir, kas savu tuvāko pievīlis saka: Vai to par smieklu vien nedarīju?
20 ೨೦ ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವುದು, ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವುದು.
Kad malkas nav, tad uguns izdziest, un kad lišķa nav, tad ķilda rimst.
21 ೨೧ ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ, ವ್ಯಾಜ್ಯದ ಕಿಚ್ಚನ್ನೆಬ್ಬಿಸುವುದಕ್ಕೆ ಜಗಳಗಂಟಿಗ.
Kā ogles liesmu un malka uguni, tā rējējs cilvēks saceļ ķildu.
22 ೨೨ ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಇವು ಹೊಟ್ಟೆಯೊಳಕ್ಕೇ ಇಳಿಯುವವು.
Lišķa vārdi ir kā saldi kumosi un iet visai pie sirds.
23 ೨೩ ಕೆಟ್ಟ ಹೃದಯದಿಂದ ಪ್ರೀತಿಯನ್ನಾಡುವ ತುಟಿಯು, ಬೆಳ್ಳಿ ಲೇಪನ ಮಾಡಿದ ಮಣ್ಣಿನ ಮಡಿಕೆಯ ಹಾಗೆ.
Dedzīgi vārdi, bet neganta sirds ir poda gabals pārvilkts ar netīru sudrabu.
24 ೨೪ ಶತ್ರುವು ಸ್ನೇಹಭಾವದಿಂದ ನಟಿಸುತ್ತಾನೆ, ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ.
Kas tevi ienīst, ir ar muti draugs, bet savā sirdī viņš domā uz viltu.
25 ೨೫ ಸವಿಮಾತನಾಡಿದರೂ ಅವನನ್ನು ನಂಬಬೇಡ, ಅವನ ಹೃದಯದಲ್ಲಿ ಎಷ್ಟೋ ಹೇಯ ಕೃತ್ಯಗಳು.
Kad tas mīlīgi runā, tad netici viņam, jo septiņas negantības viņa sirdī.
26 ೨೬ ತನ್ನ ಹಗೆಯನ್ನು ವಂಚನೆಯಿಂದ ಮರೆಮಾಚಿಕೊಂಡಿದ್ದರೂ, ಅವನ ಕೆಟ್ಟತನವು ಸಭೆಯಲ್ಲಿ ಬೈಲಾಗುವುದು.
Lai gan ienaidu aizsedz ar viltu, tomēr viņa niknums ļaužu priekšā nāks gaismā.
27 ೨೭ ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವುದು.
Kas bedri rok, tas tanī iekritīs, un kas akmeni veļ uz to tas atvelsies.
28 ೨೮ ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ದ್ವೇಷಿಸುವನು, ಕಪಟದ ಬಾಯಿ ನಾಶಕರ.
Viltus mēle ienīst to, kam pati dzēlusi, un mīksta mute padara nelaimi.

< ಜ್ಞಾನೋಕ್ತಿಗಳು 26 >