< ಜ್ಞಾನೋಕ್ತಿಗಳು 27 >

1 ನಾಳೆ ಎಂದು ಕೊಚ್ಚಿಕೊಳ್ಳಬೇಡ, ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.
not to boast: boast in/on/with day tomorrow for not to know what? to beget day
2 ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ, ಮತ್ತೊಬ್ಬನು ಹೊಗಳಿದರೆ ಹೊಗಳಲಿ, ಆತ್ಮಸ್ತುತಿ ಬೇಡ, ಪರನು ನಿನ್ನನ್ನು ಸ್ತುತಿಸಿದರೆ ಸ್ತುತಿಸಲಿ.
to boast: praise you be a stranger and not lip your foreign and not lips your
3 ಕಲ್ಲು ಭಾರ, ಮರಳು ಭಾರ, ಎರಡಕ್ಕಿಂತಲೂ ಮೂಢನ ಕೋಪವು ಬಲು ಭಾರ.
heaviness stone and weight [the] sand and vexation fool(ish) heavy from two their
4 ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರಕ್ಕೆ ಎದುರಾಗಿ ಯಾರು ನಿಂತಾರು?
cruel rage and flood face: anger and who? to stand: stand to/for face: before jealousy
5 ಕಾರ್ಯದಿಂದ ಹೊರಪಡದ ಪ್ರೀತಿಗಿಂತಲೂ, ಬಹಿರಂಗವಾದ ಗದರಿಕೆಯು ಲೇಸು.
pleasant argument to reveal: uncover from love to hide
6 ಮಿತ್ರನು ಮಾಡುವ ಗಾಯಗಳು ಮೇಲಿಗಾಗಿಯೇ, ಶತ್ರುವಿನ ಮುದ್ದುಗಳು ಹೇರಳವಾಗಿವೆ.
be faithful wound to love: friend and be abundant kiss to hate
7 ಹೊಟ್ಟೆತುಂಬಿದವನಿಗೆ ಜೇನುತುಪ್ಪವೂ ಅಸಹ್ಯ, ಹೊಟ್ಟೆ ಹಸಿದವನಿಗೆ ಕಹಿಯೆಲ್ಲಾ ಸಿಹಿ.
soul: person sated to trample honey and soul: person hungry all bitter sweet
8 ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು, ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ.
like/as bird to wander from nest her so man to wander from place his
9 ತೈಲವೂ, ಸುಗಂಧದ್ರವ್ಯಗಳೂ ಹೇಗೋ, ಮಿತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.
oil and incense to rejoice heart and sweetness neighbor his from counsel soul: myself
10 ೧೦ ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು, ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.
neighbor your (and neighbor *Q(K)*) father your not to leave: forsake and house: home brother: male-sibling your not to come (in): come in/on/with day calamity your pleasant neighboring near from brother: male-sibling distant
11 ೧೧ ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಹೃದಯವನ್ನು ಸಂತೋಷಪಡಿಸು, ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವುದು.
be wise son: child my and to rejoice heart my and to return: reply to taunt me word
12 ೧೨ ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
prudent to see: see distress: harm to hide simple to pass to fine
13 ೧೩ ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆಮಾಡಿಕೋ.
to take: take garment his for to pledge be a stranger and about/through/for foreign to pledge him
14 ೧೪ ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನು, ಶಪಿಸುವವನೆನಿಸಿಕೊಳ್ಳುವನು.
to bless neighbor his in/on/with voice great: large in/on/with morning to rise curse to devise: count to/for him
15 ೧೫ ದೊಡ್ಡ ಮಳೆಯ ದಿನದಲ್ಲಿ ತಟತಟನೆ ತೊಟ್ಟಿಕ್ಕುವ ಹನಿ, ತಂಟೆಮಾಡುವ ಹೆಂಡತಿ, ಎರಡೂ ಒಂದೇ.
dripping to pursue in/on/with day rain and woman: wife (contention *Q(K)*) be like
16 ೧೬ ಅವಳನ್ನು ಅಡಗಿಸುವವನು ಗಾಳಿಯನ್ನು ಅಡಗಿಸುವನು, ಅವಳನ್ನು ಹಿಡಿಯುವ ಬಲಗೈ ಜಿಡ್ಡಿನ ವಸ್ತುವನ್ನು ಹಿಡಿಯುವುದು.
to treasure her to treasure spirit: breath and oil right his to encounter: toward
17 ೧೭ ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ, ಮಿತ್ರನು ಮಿತ್ರನ ಬುದ್ಧಿಯನ್ನು ಹಾಗೆಯೇ ಹರಿತಮಾಡುವನು.
iron in/on/with iron to sharpen and man: anyone to sharpen face neighbor his
18 ೧೮ ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು, ಯಜಮಾನನ ಮಾತಿನಂತೆ ನಡೆಯುವವನು ಸನ್ಮಾನವನ್ನು ಅನುಭವಿಸುವನು.
to watch fig to eat fruit her and to keep: guard lord his to honor: honour
19 ೧೯ ನೀರು ಮುಖಕ್ಕೆ ಮುಖವನ್ನು ಹೇಗೆ ಪ್ರತಿಬಿಂಬಿಸುತ್ತದೋ, ಹಾಗೆಯೇ ಮನುಷ್ಯನಿಗೆ ಮನುಷ್ಯನ ಹೃದಯವು ತೋರ್ಪಡಿಸುತ್ತದೆ.
like/as water [the] face to/for face so heart [the] man to/for man
20 ೨೦ ಪಾತಾಳಕ್ಕೂ, ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ, ಹಾಗೆಯೇ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ. (Sheol h7585)
hell: Sheol (and destruction his *Q(K)*) not to satisfy and eye [the] man not to satisfy (Sheol h7585)
21 ೨೧ ಪುಟಕುಲುಮೆಗಳಿಂದ ಬೆಳ್ಳಿಬಂಗಾರಗಳಿಗೆ ಶೋಧನೆಯು ಹೇಗೋ, ಹೊಗಳಿಕೆಯಿಂದ ಮನುಷ್ಯನಿಗೆ ಶೋಧನೆಯು ಹಾಗೆಯೇ.
crucible to/for silver: money and furnace to/for gold and man to/for lip praise his
22 ೨೨ ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ, ಮೂರ್ಖತನವು ಅವನಿಂದ ತೊಲಗದು.
if to pound [obj] [the] fool(ish) in/on/with hollow in/on/with midst [the] grain in/on/with pestle not to turn aside: depart from upon him folly his
23 ೨೩ ನಿನ್ನ ಹಿಂಡುಗಳ ಸ್ಥಿತಿಯನ್ನು ಚೆನ್ನಾಗಿ ತಿಳಿದುಕೊಂಡಿರು, ನಿನ್ನ ಮಂದೆಗಳ ಮೇಲೆ ಮನಸ್ಸಿಡು.
to know to know face flock your to set: put heart your to/for flock
24 ೨೪ ಸಂಪತ್ತು ಶಾಶ್ವತವಾಗಿರುವುದಿಲ್ಲವಷ್ಟೆ, ಕಿರೀಟವು ತಲತಲಾಂತರಗಳ ವರೆಗೆ ನಿಂತೀತೋ?
for not to/for forever: enduring wealth and if: surely yes consecration: crown to/for generation (and generation *Q(K)*)
25 ೨೫ ಹುಲ್ಲನ್ನು ಕೊಯ್ದು ಹೊತ್ತುಕೊಂಡು ಬಂದ ಮೇಲೆ ಹಸಿಹುಲ್ಲು ತಲೆದೋರುವುದು, ಬೆಟ್ಟಗಳ ಸೊಪ್ಪನ್ನೂ ಕೂಡಿಸಿಡುವರು.
to reveal: remove grass and to see: see grass and to gather vegetation mountain: mount
26 ೨೬ ಕುರಿಗಳಿಂದ ನಿನಗೆ ಉಡುಪಾಗುವುದು, ಆಡುಗಳಿಂದ ಹೊಲದ ಕ್ರಯ ಹೆಚ್ಚುವುದು.
lamb to/for clothing your and price land: country goat
27 ೨೭ ನಿನ್ನ ಊಟಕ್ಕೂ, ಮನೆಯವರ ಆಹಾರಕ್ಕೂ ಮೇಕೆಯ ಹಾಲು ಬೇಕಾದಷ್ಟಾಗುವುದು, ಅದು ನಿನ್ನ ದಾಸಿಯರಿಗೆ ಜೀವನವಾಗುವುದು.
and sufficiency milk goat to/for food your to/for food house: household your and life to/for maiden your

< ಜ್ಞಾನೋಕ್ತಿಗಳು 27 >