< ಜ್ಞಾನೋಕ್ತಿಗಳು 28 >

1 ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.
The wicked flee when no man pursueth: but the righteous are bold as a lion.
2 ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು.
For the transgression of a land many [are] the princes thereof: but by a man of understanding [and] knowledge the state [thereof] shall be prolonged.
3 ಬಡವರನ್ನು ಹಿಂಸಿಸುವ ದರಿದ್ರನು, ಒಂದು ಕಾಳೂ ಉಳಿಯದಂತೆ ಪೈರನ್ನು ಬಡಿಯುವ ಮಳೆಯ ಹಾಗೆ.
A poor man that oppresseth the poor [is like] a sweeping rain which leaveth no food.
4 ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.
They that forsake the law praise the wicked: but such as keep the law contend with them.
5 ಕೆಟ್ಟವರು ನ್ಯಾಯವನ್ನು ಗ್ರಹಿಸರು, ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು.
Evil men understand not judgment: but they that seek the LORD understand all [things].
6 ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ, ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು.
Better [is] the poor that walketh in his uprightness, than [he that is] perverse [in his] ways, though he [be] rich.
7 ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು, ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು.
Whoso keepeth the law [is] a wise son: but he that is a companion of riotous [men] shameth his father.
8 ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.
He that by usury and unjust gain increaseth his substance, he shall gather it for him that will pity the poor.
9 ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.
He that turneth away his ear from hearing the law, even his prayer [shall be] abomination.
10 ೧೦ ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು, ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು, ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು.
Whoso causeth the righteous to go astray in an evil way, he shall fall himself into his own pit: but the upright shall have good [things] in possession.
11 ೧೧ ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು.
The rich man [is] wise in his own conceit; but the poor that hath understanding searcheth him out.
12 ೧೨ ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು, ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.
When righteous [men] do rejoice, [there is] great glory: but when the wicked rise, a man is hidden.
13 ೧೩ ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.
He that covereth his sins shall not prosper: but whoso confesseth and forsaketh [them] shall have mercy.
14 ೧೪ ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು.
Happy [is] the man that feareth alway: but he that hardeneth his heart shall fall into mischief.
15 ೧೫ ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ.
[As] a roaring lion, and a ranging bear; [so is] a wicked ruler over the poor people.
16 ೧೬ ವಿವೇಕಶೂನ್ಯನಾದ ಒಡೆಯನು ಮಹಾ ಹಿಂಸಕನು, ದೋಚಿಕೊಳ್ಳದವನು ದೀರ್ಘಾಯುಷ್ಯನು.
The prince that wanteth understanding [is] also a great oppressor: [but] he that hateth covetousness shall prolong [his] days.
17 ೧೭ ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು.
A man that doeth violence to the blood of [any] person shall flee to the pit; let no man stay him.
18 ೧೮ ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಸೋಲು.
Whoso walketh uprightly shall be saved: but [he that is] perverse [in his] ways shall fall at once.
19 ೧೯ ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ, ವ್ಯರ್ಥ ಕಾರ್ಯಾಸಕ್ತನಿಗೆ ಹೊಟ್ಟೆತುಂಬಾ ಬಡತನ.
He that tilleth his land shall have plenty of bread: but he that followeth after vain [persons] shall have poverty enough.
20 ೨೦ ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು, ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದೆ ಇರನು.
A faithful man shall abound with blessings: but he that maketh haste to be rich shall not be innocent.
21 ೨೧ ಪಕ್ಷಪಾತವು ಅಧರ್ಮ, ತುತ್ತು ಅನ್ನಕ್ಕಾಗಿಯೂ ಜನರು ದ್ರೋಹಮಾಡುವುದುಂಟು.
To have respect of persons [is] not good: for for a piece of bread [that] man will transgress.
22 ೨೨ ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು.
He that hasteth to be rich [hath] an evil eye, and considereth not that poverty shall come upon him.
23 ೨೩ ಮುಖಸ್ತುತಿ ಮಾಡುವವನಿಗಿಂತಲೂ, ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು.
He that rebuketh a man afterwards shall find more favour than he that flattereth with the tongue.
24 ೨೪ ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು, ಕೆಡುಕನಿಗೆ ಜೊತೆಗಾರನು.
Whoso robbeth his father or his mother, and saith, [It is] no transgression; the same [is] the companion of a destroyer.
25 ೨೫ ದುರಾಶೆಯುಳ್ಳವನು ಜಗಳವನ್ನೆಬ್ಬಿಸುವನು, ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.
He that is of a proud heart stirreth up strife: but he that putteth his trust in the LORD shall be made fat.
26 ೨೬ ತನ್ನಲ್ಲೇ ಭರವಸವಿಡುವವನು ಮೂಢನು, ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.
He that trusteth in his own heart is a fool: but whoso walketh wisely, he shall be delivered.
27 ೨೭ ಬಡವರಿಗೆ ದಾನಮಾಡುವವನು ಕೊರತೆಪಡನು, ಅವರನ್ನು ಕಂಡು ಕಾಣದಂತೆ ಇರುವವನು ಬಹುಶಾಪಕ್ಕೆ ಒಳಗಾಗುವನು.
He that giveth unto the poor shall not lack: but he that hideth his eyes shall have many a curse.
28 ೨೮ ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು, ನಾಶನವಾದರೆ ಶಿಷ್ಟರು ವೃದ್ಧಿಯಾಗುವರು.
When the wicked rise, men hide themselves: but when they perish, the righteous increase.

< ಜ್ಞಾನೋಕ್ತಿಗಳು 28 >