< ಜ್ಞಾನೋಕ್ತಿಗಳು 3 >

1 ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.
בְּ֭נִי תּוֹרָתִ֣י אַל־תִּשְׁכָּ֑ח וּ֝מִצְוֺתַ֗י יִצֹּ֥ר לִבֶּֽךָ׃
2 ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ, ನಿನಗೆ ಸುಕ್ಷೇಮವನ್ನು ಉಂಟುಮಾಡುವವು.
כִּ֤י אֹ֣רֶךְ יָ֭מִים וּשְׁנ֣וֹת חַיִּ֑ים וְ֝שָׁל֗וֹם יוֹסִ֥יפוּ לָֽךְ׃
3 ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
חֶ֥סֶד וֶאֱמֶ֗ת אַֽל־יַעַ֫זְבֻ֥ךָ קָשְׁרֵ֥ם עַל־גַּרְגְּרוֹתֶ֑יךָ כָּ֝תְבֵ֗ם עַל־ל֥וּחַ לִבֶּֽךָ׃
4 ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, ಸಮ್ಮತಿಯನ್ನೂ ಪಡೆದುಕೊಳ್ಳುವಿ.
וּמְצָא־חֵ֖ן וְשֵֽׂכֶל־ט֑וֹב בְּעֵינֵ֖י אֱלֹהִ֣ים וְאָדָֽם׃ פ
5 ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.
בְּטַ֣ח אֶל־יְ֭הוָה בְּכָל־לִבֶּ֑ךָ וְאֶל־בִּֽ֝ינָתְךָ֗ אַל־תִּשָּׁעֵֽן׃
6 ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.
בְּכָל־דְּרָכֶ֥יךָ דָעֵ֑הוּ וְ֝ה֗וּא יְיַשֵּׁ֥ר אֹֽרְחֹתֶֽיךָ׃
7 ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.
אַל־תְּהִ֣י חָכָ֣ם בְּעֵינֶ֑יךָ יְרָ֥א אֶת־יְ֝הוָ֗ה וְס֣וּר מֵרָֽע׃
8 ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ, ಎಲುಬುಗಳಿಗೆ ಸಾರವೂ ಉಂಟಾಗುವವು.
רִ֭פְאוּת תְּהִ֣י לְשָׁרֶּ֑ךָ וְ֝שִׁקּ֗וּי לְעַצְמוֹתֶֽיךָ׃
9 ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.
כַּבֵּ֣ד אֶת־יְ֭הוָה מֵהוֹנֶ֑ךָ וּ֝מֵרֵאשִׁ֗ית כָּל־תְּבוּאָתֶֽךָ׃
10 ೧೦ ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು.
וְיִמָּלְא֣וּ אֲסָמֶ֣יךָ שָׂבָ֑ע וְ֝תִיר֗וֹשׁ יְקָבֶ֥יךָ יִפְרֹֽצוּ׃ פ
11 ೧೧ ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.
מוּסַ֣ר יְ֭הוָה בְּנִ֣י אַל־תִּמְאָ֑ס וְאַל־תָּ֝קֹ֗ץ בְּתוֹכַחְתּֽוֹ׃
12 ೧೨ ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ.
כִּ֤י אֶ֥ת אֲשֶׁ֣ר יֶאֱהַ֣ב יְהוָ֣ה יוֹכִ֑יחַ וּ֝כְאָ֗ב אֶת־בֵּ֥ן יִרְצֶֽה׃
13 ೧೩ ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು.
אַשְׁרֵ֣י אָ֭דָם מָצָ֣א חָכְמָ֑ה וְ֝אָדָ֗ם יָפִ֥יק תְּבוּנָֽה׃
14 ೧೪ ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ, ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ.
כִּ֤י ט֣וֹב סַ֭חְרָהּ מִסְּחַר־כָּ֑סֶף וּ֝מֵחָר֗וּץ תְּבוּאָתָֽהּ׃
15 ೧೫ ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.
יְקָ֣רָה הִ֭יא מפניים וְכָל־חֲ֝פָצֶ֗יךָ לֹ֣א יִֽשְׁווּ־בָֽהּ׃
16 ೧೬ ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ, ಘನತೆಯೂ ಉಂಟು.
אֹ֣רֶךְ יָ֭מִים בִּֽימִינָ֑הּ בִּ֝שְׂמֹאולָ֗הּ עֹ֣שֶׁר וְכָבֽוֹד׃
17 ೧೭ ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ.
דְּרָכֶ֥יהָ דַרְכֵי־נֹ֑עַם וְֽכָל־נְתִ֖יבוֹתֶ֣יהָ שָׁלֽוֹם׃
18 ೧೮ ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.
עֵץ־חַיִּ֣ים הִ֭יא לַמַּחֲזִיקִ֣ים בָּ֑הּ וְֽתֹמְכֶ֥יהָ מְאֻשָּֽׁר׃ פ
19 ೧೯ ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸ್ಥಾಪಿಸಿ, ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು.
יְֽהוָ֗ה בְּחָכְמָ֥ה יָֽסַד־אָ֑רֶץ כּוֹנֵ֥ן שָׁ֝מַ֗יִם בִּתְבוּנָֽה׃
20 ೨೦ ಭೂಮಿಯ ಕೆಳಗಿನ ಸಾಗರವು ಒಡೆದದ್ದಕ್ಕೂ, ಆಕಾಶವು ಇಬ್ಬನಿಯನ್ನು ಸುರಿಸುವುದಕ್ಕೂ ಆತನ ತಿಳಿವಳಿಕೆಯೇ ಸಾಧನ.
בְּ֭דַעְתּוֹ תְּהוֹמ֣וֹת נִבְקָ֑עוּ וּ֝שְׁחָקִ֗ים יִרְעֲפוּ־טָֽל׃
21 ೨೧ ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.
בְּ֭נִי אַל־יָלֻ֣זוּ מֵעֵינֶ֑יךָ נְצֹ֥ר תֻּ֝שִׁיָּ֗ה וּמְזִמָּֽה׃
22 ೨೨ ಅವು ನಿನಗೆ ಜೀವವೂ, ನಿನ್ನ ಕೊರಳಿಗೆ ಭೂಷಣವೂ ಆಗಿರುವವು.
וְיִֽהְי֣וּ חַיִּ֣ים לְנַפְשֶׁ֑ךָ וְ֝חֵ֗ן לְגַרְגְּרֹתֶֽיךָ׃
23 ೨೩ ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ.
אָ֤ז תֵּלֵ֣ךְ לָבֶ֣טַח דַּרְכֶּ֑ךָ וְ֝רַגְלְךָ֗ לֹ֣א תִגּֽוֹף׃
24 ೨೪ ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.
אִם־תִּשְׁכַּ֥ב לֹֽא־תִפְחָ֑ד וְ֝שָׁכַבְתָּ֗ וְֽעָרְבָ֥ה שְׁנָתֶֽךָ׃
25 ೨೫ ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ.
אַל־תִּ֭ירָא מִפַּ֣חַד פִּתְאֹ֑ם וּמִשֹּׁאַ֥ת רְ֝שָׁעִ֗ים כִּ֣י תָבֹֽא׃
26 ೨೬ ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು, ನಿನ್ನ ಕಾಲು ಮೋಸದ ಬಲೆಗೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು.
כִּֽי־יְ֭הוָה יִהְיֶ֣ה בְכִסְלֶ֑ךָ וְשָׁמַ֖ר רַגְלְךָ֣ מִלָּֽכֶד׃
27 ೨೭ ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ.
אַל־תִּמְנַע־ט֥וֹב מִבְּעָלָ֑יו בִּהְי֨וֹת לְאֵ֖ל ידיך לַעֲשֽׂוֹת׃
28 ೨೮ ಕೊಡತಕ್ಕದ್ದು ನಿನ್ನಲ್ಲಿದ್ದರೆ ನೆರೆಯವನಿಗೆ, “ಹೋಗಿ ಬಾ, ನಾಳೆ ಕೊಡುತ್ತೇನೆ” ಎಂದು ಹೇಳಬೇಡ.
אַל־תֹּ֘אמַ֤ר לרעיך ׀ לֵ֣ךְ וָ֭שׁוּב וּמָחָ֥ר אֶתֵּ֗ן וְיֵ֣שׁ אִתָּֽךְ׃
29 ೨೯ ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು, ಅವನು ನಿನ್ನ ಪಕ್ಕದಲ್ಲಿ ನಂಬಿಕೆಯಿಂದ ವಾಸಮಾಡುತ್ತಾನಲ್ಲವೇ?
אַל־תַּחֲרֹ֣שׁ עַל־רֵעֲךָ֣ רָעָ֑ה וְהֽוּא־יוֹשֵׁ֖ב לָבֶ֣טַח אִתָּֽךְ׃
30 ೩೦ ನಿನಗೆ ಅಪಕಾರ ಮಾಡದವನ ಸಂಗಡ ಸುಮ್ಮನೆ ಜಗಳವಾಡಬೇಡ.
אַל־תרוב עִם־אָדָ֣ם חִנָּ֑ם אִם־לֹ֖א גְמָלְךָ֣ רָעָֽה׃
31 ೩೧ ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.
אַל־תְּ֭קַנֵּא בְּאִ֣ישׁ חָמָ֑ס וְאַל־תִּ֝בְחַ֗ר בְּכָל־דְּרָכָֽיו׃
32 ೩೨ ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವುದು.
כִּ֤י תוֹעֲבַ֣ת יְהוָ֣ה נָל֑וֹז וְֽאֶת־יְשָׁרִ֥ים סוֹדֽוֹ׃
33 ೩೩ ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, ನೀತಿವಂತರ ನಿವಾಸವನ್ನೋ ಆಶೀರ್ವದಿಸುವನು.
מְאֵרַ֣ת יְ֭הוָה בְּבֵ֣ית רָשָׁ֑ע וּנְוֵ֖ה צַדִּיקִ֣ים יְבָרֵֽךְ׃
34 ೩೪ ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು.
אִם־לַלֵּצִ֥ים הֽוּא־יָלִ֑יץ ולעניים יִתֶּן־חֵֽן׃
35 ೩೫ ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು, ಜ್ಞಾನಹೀನರಿಗಾಗುವ ಬಹುಮಾನವು ಅವಮಾನವೇ.
כָּ֭בוֹד חֲכָמִ֣ים יִנְחָ֑לוּ וּ֝כְסִילִ֗ים מֵרִ֥ים קָלֽוֹן׃ פ

< ಜ್ಞಾನೋಕ್ತಿಗಳು 3 >