< ಜ್ಞಾನೋಕ್ತಿಗಳು 3 >
1 ೧ ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.
Tulik nutik, nimet mulkunla ma nga luti nu sum. Esam ma nukewa ma nga fahk nu sum in oru.
2 ೨ ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ, ನಿನಗೆ ಸುಕ್ಷೇಮವನ್ನು ಉಂಟುಮಾಡುವವು.
Mwe luti luk ac fah akloesye moul lom ac akinsewowoye.
3 ೩ ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
Nimet lela kulang ac inse pwaye in wanginla liki kom. Kapriya inkwawom, ac simusla insiom.
4 ೪ ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, ಸಮ್ಮತಿಯನ್ನೂ ಪಡೆದುಕೊಳ್ಳುವಿ.
Kom fin oru ouinge, kom ac fah ohi yurin God ac mwet uh.
5 ೫ ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.
Lulalfongi LEUM GOD ke insiom kewa. Nimet lulalfongi etu lom sifacna.
6 ೬ ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.
Esam LEUM GOD in ma nukewa kom oru, ac El ac fah akkalemye inkanek suwohs nu sum.
7 ೭ ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.
Nimet sifacna nunku mu kom arulana fas in lalmwetmet lom; akos LEUM GOD ac fahsr liki ma koluk.
8 ೮ ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ, ಎಲುಬುಗಳಿಗೆ ಸಾರವೂ ಉಂಟಾಗುವವು.
Kom fin oru ouinge, ac fah akkeye monum, ac sot ku nu sum.
9 ೯ ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.
Akfulatye LEUM GOD ke mwe sang lom nu sel ke mwe kasrup lom, ac ke fahko se meet ke ima lom.
10 ೧೦ ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು.
Kom fin oru ouinge, nien filma lom ac fah nwanala ke wheat, ac nien wain lom ac fah kahkkakla ke wain.
11 ೧೧ ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.
Tulik nutik, nimet pilesru kas in kai lun LEUM GOD nu sum, a lohang nu kac ac eis mu mwe sensenkakin kom.
12 ೧೨ ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ.
LEUM GOD El kaelos su El lungse, oana ke sie papa kai tulik su el insewowo kac.
13 ೧೩ ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು.
Insewowo mwet se su konauk lalmwetmet, ac su sun etauk.
14 ೧೪ ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ, ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ.
Ma laesla kac yohk liki ma laesla ke silver, ac yohk sripa nu sum liki gold.
15 ೧೫ ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.
Lalmwetmet el saok liki wek saok. Wangin kutena ma kom lungse ku in lumweyuk nu kac.
16 ೧೬ ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ, ಘನತೆಯೂ ಉಂಟು.
Lalmwetmet uh ac akloesye moul lom, akkasrupye kom, ac oru in sunakinyuk kom.
17 ೧೭ ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ.
Inkanek lun lalmwetmet uh ac mwe engan nu sum, ac kol kom nu ke moul in misla.
18 ೧೮ ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.
Lalmwetmet uh oana sak in moul nu selos su eisal, ac mwe insewowo nu selos su akfulatyal.
19 ೧೯ ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸ್ಥಾಪಿಸಿ, ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು.
LEUM GOD El orala faclu ke lalmwetmet lal, Ke etu lal El oakiya ma oan inkusrao.
20 ೨೦ ಭೂಮಿಯ ಕೆಳಗಿನ ಸಾಗರವು ಒಡೆದದ್ದಕ್ಕೂ, ಆಕಾಶವು ಇಬ್ಬನಿಯನ್ನು ಸುರಿಸುವುದಕ್ಕೂ ಆತನ ತಿಳಿವಳಿಕೆಯೇ ಸಾಧನ.
Lalmwetmet lal uh oru kof ye faclu in unonak, Ac pukunyeng uh in kahkunma af nu fin faclu.
21 ೨೧ ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.
Tulik nutik, sruokya ku liyaten, ac lohang in wo nu ke ma kom oru.
22 ೨೨ ಅವು ನಿನಗೆ ಜೀವವೂ, ನಿನ್ನ ಕೊರಳಿಗೆ ಭೂಷಣವೂ ಆಗಿರುವವು.
Ma inge ac sot moul wo ac insewowo nu sum.
23 ೨೩ ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ.
Kom ac fah fahsr ke inkanek in misla, ac tiana tukulkul.
24 ೨೪ ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.
Kom ac fah tia sangeng ke kom motul, ac kom ac fah motul folosowosla ke fong uh.
25 ೨೫ ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ.
Kom ac tia sensen ke mwe fosrnga su ac sa sikyak, oana paka ma sun mwet koluk uh.
26 ೨೬ ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು, ನಿನ್ನ ಕಾಲು ಮೋಸದ ಬಲೆಗೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು.
LEUM GOD El ac karingin kom. El ac fah tia lela niom in sremla.
27 ೨೭ ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ.
In pacl nukewa ma kom ku, kom in kasrelos su fal in eis kasru, ac tia sruokya ma wo lukelos.
28 ೨೮ ಕೊಡತಕ್ಕದ್ದು ನಿನ್ನಲ್ಲಿದ್ದರೆ ನೆರೆಯವನಿಗೆ, “ಹೋಗಿ ಬಾ, ನಾಳೆ ಕೊಡುತ್ತೇನೆ” ಎಂದು ಹೇಳಬೇಡ.
Nimet fahk nu sin mwet tulan lom in soano nu ke len tok ah, kom fin ku in kasrel ingena.
29 ೨೯ ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು, ಅವನು ನಿನ್ನ ಪಕ್ಕದಲ್ಲಿ ನಂಬಿಕೆಯಿಂದ ವಾಸಮಾಡುತ್ತಾನಲ್ಲವೇ?
Nimet akoo kutena ma ac tuh akkolukye mwet tulan lom; el muta siskom ac lulalfongi kom.
30 ೩೦ ನಿನಗೆ ಅಪಕಾರ ಮಾಡದವನ ಸಂಗಡ ಸುಮ್ಮನೆ ಜಗಳವಾಡಬೇಡ.
Nimet akukuin nu sin sie mwet ke wangin sripa, fin wangin ma el oru in akkolukye kom.
31 ೩೧ ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.
Nimet mwel ma lun mwet sulallal, ku nunkauk in oru oana elos oru,
32 ೩೨ ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವುದು.
mweyen LEUM GOD El srunga mwet orekma koluk, a El insraelak nu sin mwet suwoswos.
33 ೩೩ ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, ನೀತಿವಂತರ ನಿವಾಸವನ್ನೋ ಆಶೀರ್ವದಿಸುವನು.
Mwe selnga lun LEUM GOD oan fin lohm sin mwet koluk, a mwe insewowo lal oan fin lohm sin mwet suwoswos.
34 ೩೪ ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು.
El tiana lohang nu sin mwet inse fulat, a El kulang nu sin mwet pusisel.
35 ೩೫ ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು, ಜ್ಞಾನಹೀನರಿಗಾಗುವ ಬಹುಮಾನವು ಅವಮಾನವೇ.
Mwet lalmwetmet uh ac akfulatyeyuk, a mwet lalfon uh ac yokelik mwekin lalos.