< ಜ್ಞಾನೋಕ್ತಿಗಳು 30 >

1 ದೈವೋಕ್ತಿ. ಯಾಕೆ ಎಂಬುವವನ ಮಗನಾದ ಆಗೂರನ ಮಾತುಗಳು. ಇವನು ಇಥಿಯೇಲನಿಗೆ, ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು.
كَلَامُ أَجُورَ ٱبْنِ مُتَّقِيَةِ مَسَّا. وَحْيُ هَذَا ٱلرَّجُلِ إِلَى إِيثِيئِيلَ، إِلَى إِيثِيئِيلَ وَأُكَّالَ:١
2 ಮನುಷ್ಯರಲ್ಲಿ ನನ್ನಂಥ ಪಶುಪ್ರಾಯನು ಇಲ್ಲವಷ್ಟೆ, ಮಾನುಷ ವಿವೇಕವು ನನಗಿಲ್ಲ.
إِنِّي أَبْلَدُ مِن كُلِّ إِنْسَانٍ، وَلَيْسَ لِي فَهْمُ إِنْسَانٍ،٢
3 ನಾನು ಜ್ಞಾನವನ್ನು ಪಡೆದುಕೊಂಡಿಲ್ಲ, ಪರಿಶುದ್ಧನ ವಿಷಯವಾದ ತಿಳಿವಳಿಕೆಯನ್ನು ಹೊಂದಿಲ್ಲ.
وَلَمْ أَتَعَلَّمِ ٱلْحِكْمَةَ، وَلَمْ أَعْرِفْ مَعْرِفَةَ ٱلْقُدُّوسِ.٣
4 ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.
مَنْ صَعِدَ إِلَى ٱلسَّمَاوَاتِ وَنَزَلَ؟ مَنْ جَمَعَ ٱلرِّيحَ في حَفْنَتَيْهِ؟ مَنْ صَرَّ ٱلْمِيَاهَ في ثَوْبٍ؟ مَنْ ثَبَّتَ جَمِيعَ أَطْرَافِ ٱلْأَرْضِ؟ مَا ٱسْمُهُ؟ وَمَا ٱسْمُ ٱبْنِهِ إِنْ عَرَفْتَ؟٤
5 ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು, ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.
كُلُّ كَلِمَةٍ مِنَ ٱللهِ نَقِيَّةٌ. تُرْسٌ هُوَ لِلْمُحْتَمِينَ بِهِ.٥
6 ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.
لَا تَزِدْ عَلَى كَلِمَاتِهِ لِئَلَّا يُوَبِّخَكَ فَتُكَذَّبَ.٦
7 ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ, ಅನುಗ್ರಹಿಸದಿರಬೇಡ, ನಾನು ಸಾಯುವುದರೊಳಗಾಗಿ ಅವುಗಳನ್ನು ಕೈಗೂಡಿಸು.
اِثْنَتَيْنِ سَأَلْتُ مِنْكَ، فَلَا تَمْنَعْهُمَا عَنِّي قَبْلَ أَنْ أَمُوتَ:٧
8 ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.
أَبْعِدْ عَنِّي ٱلْبَاطِلَ وَٱلْكَذِبَ. لَا تُعْطِنِي فَقْرًا وَلَا غِنًى. أَطْعِمْنِي خُبْزَ فَرِيضَتِي،٨
9 ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು.
لِئَلَّا أَشْبَعَ وَأَكْفُرَ وَأَقُولَ: «مَنْ هُوَ ٱلرَّبُّ؟» أَوْ لِئَلَّا أَفْتَقِرَ وَأَسْرِقَ وَأَتَّخِذَ ٱسْمَ إِلَهِي بَاطِلًا.٩
10 ೧೦ ಆಳಿನ ಮೇಲೆ ದಣಿಗೆ ದೂರನ್ನು ಹೇಳಬೇಡ, ಅವನು ಶಪಿಸಾನು, ನಿನ್ನಲ್ಲೇ ದೋಷವು ಕಂಡು ಬಂದೀತು.
لَا تَشْكُ عَبْدًا إِلَى سَيِّدِهِ لِئَلَّا يَلْعَنَكَ فَتَأْثَمَ.١٠
11 ೧೧ ತಾಯಿಗೆ ಶುಭವನ್ನು ಕೋರದೆ, ತಂದೆಯನ್ನು ಶಪಿಸುವ ಒಂದು ತರದವರು ಉಂಟು.
جِيلٌ يَلْعَنُ أَبَاهُ وَلَا يُبَارِكُ أُمَّهُ.١١
12 ೧೨ ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು.
جِيلٌ طَاهِرٌ فِي عَيْنَيْ نَفْسِهِ، وَهُوَ لَمْ يَغْتَسِلْ مِنْ قَذَرِهِ.١٢
13 ೧೩ ಕಣ್ಣುರೆಪ್ಪೆಗಳನ್ನೆತ್ತಿಕೊಂಡು, ಎಷ್ಟೋ ಮೇಲೆ ಎಷ್ಟೋ ಮೇಲೆ ಮೇಲೆಯೇ ನೋಡುತ್ತಿರುವ ಇನ್ನೊಂದು ತರದವರು ಉಂಟು.
جِيلٌ مَا أَرْفَعَ عَيْنَيْهِ، وَحَوَاجِبُهُ مُرْتَفِعَةٌ.١٣
14 ೧೪ ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂಮಿಯೊಳಗಿಂದ ಬಡವರನ್ನೂ, ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ, ಅಗೆದು ನುಂಗಿಬಿಡುವ ಮತ್ತೊಂದು ತರದವರು ಉಂಟು.
جِيلٌ أَسْنَانُهُ سُيُوفٌ، وَأَضْرَاسُهُ سَكَاكِينُ، لِأَكْلِ ٱلْمَسَاكِينِ عَنِ ٱلْأَرْضِ وَٱلْفُقَرَاءِ مِنْ بَيْنِ ٱلنَّاسِ.١٤
15 ೧೫ ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು, ಹೌದು, ಸಾಕೆನ್ನದವುಗಳು ನಾಲ್ಕು ಉಂಟು.
لِلْعَلُوقَةِ بِنْتَانِ: «هَاتِ، هَاتِ!». ثَلَاثَةٌ لَا تَشْبَعُ، أَرْبَعَةٌ لَا تَقُولُ: «كَفَا»:١٥
16 ೧೬ ಯಾವುವೆಂದರೆ, ಪಾತಾಳ, ಹೆರದ ಗರ್ಭ, ನೀರಿನಿಂದ ತೃಪ್ತಿಪಡದ ಭೂಮಿ, ಸಾಕಾಯಿತೆಂದು ಹೇಳದ ಬೆಂಕಿ, ಇವೇ. (Sheol h7585)
ٱلْهَاوِيَةُ، وَٱلرَّحِمُ ٱلْعَقِيمُ، وَأَرْضٌ لَا تَشْبَعُ مَاءً، وَٱلنَّارُ لَا تَقُولُ: «كَفَا». (Sheol h7585)١٦
17 ೧೭ ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.
اَلْعَيْنُ ٱلْمُسْتَهْزِئَةُ بِأَبِيهَا، وَٱلْمُحْتَقِرَةُ إِطَاعَةَ أُمِّهَا، تُقَوِّرُهَا غُرْبَانُ ٱلْوَادِي، وَتَأْكُلُهَا فِرَاخُ ٱلنَّسْرِ.١٧
18 ೧೮ ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ, ಹೌದು, ನಾಲ್ಕನ್ನು ಗ್ರಹಿಸಲಾರೆನು;
ثَلَاثَةٌ عَجِيبَةٌ فَوْقِي، وَأَرْبَعَةٌ لَا أَعْرِفُهَا:١٨
19 ೧೯ ಯಾವುವೆಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ಧತಿ, ಇವೇ.
طَرِيقَ نَسْرٍ فِي ٱلسَّمَاوَاتِ، وَطَرِيقَ حَيَّةٍ عَلَى صَخْرٍ، وَطَرِيقَ سَفِينَةٍ فِي قَلْبِ ٱلْبَحْرِ، وَطَرِيقَ رَجُلٍ بِفَتَاةٍ.١٩
20 ೨೦ ಜಾರಳ ನಡತೆಯು ಹೀಗೆಯೇ ಸರಿ, ಅವಳು ತಿಂದು ಬಾಯಿ ಒರೆಸಿಕೊಂಡು, “ನಾನು ತಪ್ಪುಮಾಡಲಿಲ್ಲವಲ್ಲವೆ” ಅಂದುಕೊಳ್ಳುವಳು.
كَذَلِكَ طَرِيقُ ٱلْمَرْأَةِ ٱلزَّانِيَةِ. أَكَلَتْ وَمَسَحَتْ فَمَهَا وَقَالَتْ: «مَا عَمِلْتُ إِثْمًا!».٢٠
21 ೨೧ ಮೂರರ ಭಾರದಿಂದ ಭೂಮಿಯು ಕಂಪಿಸುತ್ತದೆ, ಹೌದು, ನಾಲ್ಕರ ಹೊರೆಯನ್ನು ತಾಳಲಾರದು.
تَحْتَ ثَلَاثَةٍ تَضْطَرِبُ ٱلْأَرْضُ، وَأَرْبَعَةٌ لَا تَسْتَطِيعُ ٱحْتِمَالَهَا:٢١
22 ೨೨ ಯಾವುವೆಂದರೆ, ಪಟ್ಟಕ್ಕೆ ಬಂದ ದಾಸನು, ಹೊಟ್ಟೆತುಂಬಿದ ನೀಚನು,
تَحْتَ عَبْدٍ إِذَا مَلَكَ، وَأَحْمَقَ إِذَا شَبِعَ خُبْزًا،٢٢
23 ೨೩ ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ.
تَحْتَ شَنِيعَةٍ إِذَا تَزَوَّجَتْ، وَأَمَةٍ إِذَا وَرَثَتْ سَيِّدَتَهَا.٢٣
24 ೨೪ ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು.
أَرْبَعَةٌ هِيَ ٱلْأَصْغَرُ فِي ٱلْأَرْضِ، وَلَكِنَّهَا حَكِيمَةٌ جِدًّا:٢٤
25 ೨೫ ಇರುವೆಗಳು ದುರ್ಬಲಜಾತಿಯಾವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು.
ٱلنَّمْلُ طَائِفَةٌ غَيْرُ قَوِيَّةٍ، وَلَكِنَّهُ يُعِدُّ طَعَامَهُ فِي ٱلصَّيْفِ.٢٥
26 ೨೬ ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ, ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು.
ٱلْوِبَارُ طَائِفَةٌ ضَعِيفَةٌ، وَلَكِنَّهَا تَضَعُ بُيُوتَهَا فِي ٱلصَّخْرِ.٢٦
27 ೨೭ ಮಿಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.
ٱلْجَرَادُ لَيْسَ لَهُ مَلِكٌ، وَلَكِنَّهُ يَخْرُجُ كُلُّهُ فِرَقًا فِرَقًا.٢٧
28 ೨೮ ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ, ಅದು ಅರಮನೆಗಳಲ್ಲಿ ವಾಸಮಾಡುವುದು.
ٱلْعَنْكَبُوتُ تُمْسِكُ بِيَدَيْهَا، وَهِيَ فِي قُصُورِ ٱلْمُلُوكِ.٢٨
29 ೨೯ ಗಂಭೀರಾಗಮನದ ಮೂರು ಪ್ರಾಣಿಗಳುಂಟು, ಹೌದು, ಗಂಭೀರಗತಿಯ ನಾಲ್ಕುಂಟು.
ثَلَاثَةٌ هِيَ حَسَنَةُ ٱلتَّخَطِّي، وَأَرْبَعَةٌ مَشْيُهَا مُسْتَحْسَنٌ:٢٩
30 ೩೦ ಯಾವುದಕ್ಕೂ ಹೆದರಿ ಓರೆಯಾಗದ, ಮೃಗರಾಜನಾದ ಸಿಂಹ,
اَلْأَسَدُ جَبَّارُ ٱلْوُحُوشِ، وَلَا يَرْجِعُ مِنْ قُدَّامِ أَحَدٍ،٣٠
31 ೩೧ ಹೆಮ್ಮೆಯಿಂದ ನಡೆಯುವ ಹುಂಜ, ಹೋತವು ಸಹ, ಸೈನ್ಯಸಮೇತನಾದ ರಾಜ.
ضَامِرُ ٱلشَّاكِلَةِ، وَٱلتَّيْسُ، وَٱلْمَلِكُ ٱلَّذِي لَا يُقَاوَمُ.٣١
32 ೩೨ ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ, ಅಥವಾ ದುರಾಲೋಚನೆಮಾಡಿದ್ದರೆ ಬಾಯಿಯ ಮೇಲೆ ಕೈಯಿಟ್ಟುಕೋ.
إِنْ حَمِقْتَ بِٱلتَّرَفُّعِ وَإِنْ تَآمَرْتَ، فَضَعْ يَدَكَ عَلَى فَمِكَ،٣٢
33 ೩೩ ಹಾಲು ಕಡೆಯುವುದರಿಂದ ಬೆಣ್ಣೆ, ಮೂಗು ಹಿಂಡುವುದರಿಂದ ರಕ್ತ, ಕೋಪಕಲಕುವುದರಿಂದ ಜಗಳ.
لِأَنَّ عَصْرَ ٱللَّبَنِ يُخْرِجُ جُبْنًا، وَعَصْرَ ٱلْأَنْفِ يُخْرِجُ دَمًا، وَعَصْرَ ٱلْغَضَبِ يُخْرِجُ خِصَامًا.٣٣

< ಜ್ಞಾನೋಕ್ತಿಗಳು 30 >