< ಜ್ಞಾನೋಕ್ತಿಗಳು 4 >

1 ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ, ವಿವೇಕವನ್ನು ಗ್ರಹಿಸುವಂತೆ ಕಿವಿಗೊಡಿರಿ.
שִׁמְע֣וּ בָ֭נִים מ֣וּסַר אָ֑ב וְ֝הַקְשִׁ֗יבוּ לָדַ֥עַת בִּינָֽה׃
2 ನಾನು ನಿಮಗೆ ಸುಬೋಧೆಯನ್ನು ಮಾಡುವೆನು, ನನ್ನ ಉಪದೇಶವನ್ನು ಬಿಡಬೇಡಿರಿ.
כִּ֤י לֶ֣קַח ט֭וֹב נָתַ֣תִּי לָכֶ֑ם תּֽ֝וֹרָתִ֗י אַֽל־תַּעֲזֹֽבוּ׃
3 ನಾನೂ ನನ್ನ ತಂದೆಗೆ ಅಧೀನನಾದ ಮಗನೂ, ತಾಯಿಯ ದೃಷ್ಟಿಗೆ ಕೋಮಲನಾದ ಏಕಪುತ್ರನೂ ಆಗಿದ್ದೆನು.
כִּי־בֵ֭ן הָיִ֣יתִי לְאָבִ֑י רַ֥ךְ וְ֝יָחִ֗יד לִפְנֵ֥י אִמִּֽי׃
4 ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು, “ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.
וַיֹּרֵ֗נִי וַיֹּ֥אמֶר לִ֗י יִֽתְמָךְ־דְּבָרַ֥י לִבֶּ֑ךָ שְׁמֹ֖ר מִצְוֹתַ֣י וֶֽחְיֵֽה׃
5 ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ, ನನ್ನ ಮಾತುಗಳಿಗೆ ಅಸಡ್ಡೆ ತೋರಿಸಬೇಡ.
קְנֵ֣ה חָ֭כְמָה קְנֵ֣ה בִינָ֑ה אַל־תִּשְׁכַּ֥ח וְאַל־תֵּ֝֗ט מֵֽאִמְרֵי־פִֽי׃
6 ಜ್ಞಾನವನ್ನು ಬಿಡದಿದ್ದರೆ ಅದು ನಿನ್ನನ್ನು ಕಾಪಾಡುವುದು, ಪ್ರೀತಿಸಿದರೆ, ಅದು ನಿನ್ನನ್ನು ಕಾಯುವುದು.
אַל־תַּעַזְבֶ֥הָ וְתִשְׁמְרֶ֑ךָּ אֱהָבֶ֥הָ וְתִצְּרֶֽךָּ׃
7 ಜ್ಞಾನವನ್ನು ಪಡೆಯಬೇಕೆಂಬುದೇ ಜ್ಞಾನಬೋಧೆಯ ಪ್ರಥಮಪಾಠ, ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ.
רֵאשִׁ֣ית חָ֭כְמָה קְנֵ֣ה חָכְמָ֑ה וּבְכָל־קִ֝נְיָנְךָ֗ קְנֵ֣ה בִינָֽה׃
8 ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು, ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು.
סַלְסְלֶ֥הָ וּֽתְרוֹמְמֶ֑ךָּ תְּ֝כַבֵּ֗דְךָ כִּ֣י תְחַבְּקֶֽנָּה׃
9 ಆಕೆಯು ನಿನ್ನ ತಲೆಗೆ ಅಂದದ ಪುಷ್ಪಮಾಲೆಯನ್ನು ಇಟ್ಟು, ಸುಂದರ ಕಿರೀಟವನ್ನು ನಿನಗೆ ಒಪ್ಪಿಸುವಳು.”
תִּתֵּ֣ן לְ֭רֹאשְׁךָ לִוְיַת־חֵ֑ן עֲטֶ֖רֶת תִּפְאֶ֣רֶת תְּמַגְּנֶֽךָּ׃
10 ೧೦ ಕಂದಾ, ಗಮನಿಸಿ ನನ್ನ ಮಾತುಗಳನ್ನು ಕೇಳು, ಕೇಳಿದರೆ, ನಿನ್ನ ಜೀವಮಾನದ ವರ್ಷಗಳು ಹೆಚ್ಚುವವು.
שְׁמַ֣ע בְּ֭נִי וְקַ֣ח אֲמָרָ֑י וְיִרְבּ֥וּ לְ֝ךָ֗ שְׁנ֣וֹת חַיִּֽים׃
11 ೧೧ ನಾನು ಜ್ಞಾನಮಾರ್ಗವನ್ನು ಉಪದೇಶಿಸಿ, ಧರ್ಮಮಾರ್ಗದಲ್ಲಿ ನಿನ್ನನ್ನು ನಡೆಸುವೆನು.
בְּדֶ֣רֶךְ חָ֭כְמָה הֹרֵתִ֑יךָ הִ֝דְרַכְתִּ֗יךָ בְּמַעְגְּלֵי־יֹֽשֶׁר׃
12 ೧೨ ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಅಡ್ಡಿಯಾಗುವುದಿಲ್ಲ, ಓಡಿದರೆ ಮುಗ್ಗರಿಸುವುದಿಲ್ಲ.
בְּֽ֭לֶכְתְּךָ לֹא־יֵצַ֣ר צַעֲדֶ֑ךָ וְאִם־תָּ֝ר֗וּץ לֹ֣א תִכָּשֵֽׁל׃
13 ೧೩ ಸದುಪದೇಶವನ್ನು ಗ್ರಹಿಸಿಕೋ, ಸಡಿಲಬಿಡಬೇಡ, ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.
הַחֲזֵ֣ק בַּמּוּסָ֣ר אַל־תֶּ֑רֶף נִ֝צְּרֶ֗הָ כִּי־הִ֥יא חַיֶּֽיךָ׃
14 ೧೪ ದುಷ್ಟರ ಮಾರ್ಗದಲ್ಲಿ ಸೇರಬೇಡ, ಕೆಟ್ಟವರ ದಾರಿಯಲ್ಲಿ ನಡೆಯಬೇಡ.
בְּאֹ֣רַח רְ֭שָׁעִים אַל־תָּבֹ֑א וְאַל־תְּ֝אַשֵּׁ֗ר בְּדֶ֣רֶךְ רָעִֽים׃
15 ೧೫ ಅದಕ್ಕೆ ದೂರವಾಗಿರು, ಅದರಲ್ಲಿ ನಡೆಯಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.
פְּרָעֵ֥הוּ אַל־תַּעֲבָר־בּ֑וֹ שְׂטֵ֖ה מֵעָלָ֣יו וַעֲבֽוֹר׃
16 ೧೬ ಕೇಡುಮಾಡದಿದ್ದರೆ ಅವರಿಗೆ ನಿದ್ರೆಬಾರದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವುದು.
כִּ֤י לֹ֣א יִֽ֭שְׁנוּ אִם־לֹ֣א יָרֵ֑עוּ וְֽנִגְזְלָ֥ה שְׁ֝נָתָ֗ם אִם־לֹ֥א יַכְשִֽׁילוּ׃
17 ೧೭ ದುಷ್ಟತನವೇ ಅವರ ಆಹಾರ; ಬಲಾತ್ಕಾರವೇ ಅವರ ದ್ರಾಕ್ಷಾರಸ ಪಾನ.
כִּ֣י לָ֭חֲמוּ לֶ֣חֶם רֶ֑שַׁע וְיֵ֖ין חֲמָסִ֣ים יִשְׁתּֽוּ׃
18 ೧೮ ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.
וְאֹ֣רַח צַ֭דִּיקִים כְּא֣וֹר נֹ֑גַהּ הוֹלֵ֥ךְ וָ֝א֗וֹר עַד־נְכ֥וֹן הַיּֽוֹם׃
19 ೧೯ ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.
דֶּ֣רֶךְ רְ֭שָׁעִים כָּֽאֲפֵלָ֑ה לֹ֥א יָ֝דְע֗וּ בַּמֶּ֥ה יִכָּשֵֽׁלוּ׃ פ
20 ೨೦ ಕಂದಾ, ನನ್ನ ಮಾತುಗಳನ್ನು ಆಲಿಸು, ನನ್ನ ನುಡಿಗಳಿಗೆ ಕಿವಿಗೊಡು.
בְּ֭נִי לִדְבָרַ֣י הַקְשִׁ֑יבָה לַ֝אֲמָרַ֗י הַט־אָזְנֶֽךָ׃
21 ೨೧ ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದಿರಲಿ, ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ.
אַל־יַלִּ֥יזוּ מֵעֵינֶ֑יךָ שָׁ֝מְרֵ֗ם בְּת֣וֹךְ לְבָבֶֽךָ׃
22 ೨೨ ಅವುಗಳನ್ನು ಹೊಂದುವವರಿಗೆ ಅವು ಜೀವವು, ದೇಹಕ್ಕೆಲ್ಲಾ ಅವೇ ಆರೋಗ್ಯವು.
כִּֽי־חַיִּ֣ים הֵ֭ם לְמֹצְאֵיהֶ֑ם וּֽלְכָל־בְּשָׂר֥וֹ מַרְפֵּֽא׃
23 ೨೩ ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.
מִֽכָּל־מִ֭שְׁמָר נְצֹ֣ר לִבֶּ֑ךָ כִּֽי־מִ֝מֶּ֗נּוּ תּוֹצְא֥וֹת חַיִּֽים׃
24 ೨೪ ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, ಕೆಟ್ಟ ನುಡಿಗಳನ್ನು ಬಾಯಿಂದ ದೂರಮಾಡು.
הָסֵ֣ר מִ֭מְּךָ עִקְּשׁ֣וּת פֶּ֑ה וּלְז֥וּת שְׂ֝פָתַ֗יִם הַרְחֵ֥ק מִמֶּֽךָּ׃
25 ೨೫ ನೆಟ್ಟಗೆ ದೃಷ್ಟಿಸು, ನಿನ್ನ ಕಣ್ಣುಗಳು ನಿನ್ನ ಮುಂದೆಯೇ ಇರಲಿ.
עֵ֭ינֶיךָ לְנֹ֣כַח יַבִּ֑יטוּ וְ֝עַפְעַפֶּ֗יךָ יַיְשִׁ֥רוּ נֶגְדֶּֽךָ׃
26 ೨೬ ನೀನು ನಡೆಯುವ ದಾರಿಯನ್ನು ಸಮಮಾಡು, ಆಗ ನಿನ್ನ ಮಾರ್ಗಗಳೆಲ್ಲಾ ದೃಢವಾಗಿರುವವು.
פַּ֭לֵּס מַעְגַּ֣ל רַגְלֶ֑ךָ וְֽכָל־דְּרָכֶ֥יךָ יִכֹּֽנוּ׃
27 ೨೭ ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗಬೇಡ, ನಿನ್ನ ಕಾಲನ್ನು ಕೇಡಿಗೆ ದೂರಮಾಡು.
אַֽל־תֵּט־יָמִ֥ין וּשְׂמֹ֑אול הָסֵ֖ר רַגְלְךָ֣ מֵרָֽע׃

< ಜ್ಞಾನೋಕ್ತಿಗಳು 4 >