< ಜ್ಞಾನೋಕ್ತಿಗಳು 4 >
1 ೧ ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ, ವಿವೇಕವನ್ನು ಗ್ರಹಿಸುವಂತೆ ಕಿವಿಗೊಡಿರಿ.
Oíd hijos la enseñanza del padre; y estád atentos, para que sepáis inteligencia.
2 ೨ ನಾನು ನಿಮಗೆ ಸುಬೋಧೆಯನ್ನು ಮಾಡುವೆನು, ನನ್ನ ಉಪದೇಶವನ್ನು ಬಿಡಬೇಡಿರಿ.
Porque os doy buen enseñamiento: no desamparéis mi ley.
3 ೩ ನಾನೂ ನನ್ನ ತಂದೆಗೆ ಅಧೀನನಾದ ಮಗನೂ, ತಾಯಿಯ ದೃಷ್ಟಿಗೆ ಕೋಮಲನಾದ ಏಕಪುತ್ರನೂ ಆಗಿದ್ದೆನು.
Porque yo fui hijo de mi padre, delicado y único delante de mi madre:
4 ೪ ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು, “ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.
Y enseñábame, y me decía: Sustente mis razones tu corazón: guarda mis mandamientos, y vivirás.
5 ೫ ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ, ನನ್ನ ಮಾತುಗಳಿಗೆ ಅಸಡ್ಡೆ ತೋರಿಸಬೇಡ.
Adquiere sabiduría, adquiere inteligencia: no te olvides, ni te apartes de las razones de mi boca.
6 ೬ ಜ್ಞಾನವನ್ನು ಬಿಡದಿದ್ದರೆ ಅದು ನಿನ್ನನ್ನು ಕಾಪಾಡುವುದು, ಪ್ರೀತಿಸಿದರೆ, ಅದು ನಿನ್ನನ್ನು ಕಾಯುವುದು.
No la dejes, y ella te guardará; ámala, y conservarte ha.
7 ೭ ಜ್ಞಾನವನ್ನು ಪಡೆಯಬೇಕೆಂಬುದೇ ಜ್ಞಾನಬೋಧೆಯ ಪ್ರಥಮಪಾಠ, ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ.
Primeramente sabiduría: adquiere sabiduría, y ante toda tu posesión adquiere inteligencia.
8 ೮ ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು, ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು.
Engrandécela, y ella te engrandecerá; ella te honrará, cuando tú la hubieres abrazado.
9 ೯ ಆಕೆಯು ನಿನ್ನ ತಲೆಗೆ ಅಂದದ ಪುಷ್ಪಮಾಲೆಯನ್ನು ಇಟ್ಟು, ಸುಂದರ ಕಿರೀಟವನ್ನು ನಿನಗೆ ಒಪ್ಪಿಸುವಳು.”
Dará a tu cabeza aumento de gracia: corona de hermosura te entregará.
10 ೧೦ ಕಂದಾ, ಗಮನಿಸಿ ನನ್ನ ಮಾತುಗಳನ್ನು ಕೇಳು, ಕೇಳಿದರೆ, ನಿನ್ನ ಜೀವಮಾನದ ವರ್ಷಗಳು ಹೆಚ್ಚುವವು.
Oye, hijo mío, y recibe mis razones; y multiplicársete han años de vida.
11 ೧೧ ನಾನು ಜ್ಞಾನಮಾರ್ಗವನ್ನು ಉಪದೇಶಿಸಿ, ಧರ್ಮಮಾರ್ಗದಲ್ಲಿ ನಿನ್ನನ್ನು ನಡೆಸುವೆನು.
Por el camino de la sabiduría te he encaminado; y por veredas derechas te he hecho andar.
12 ೧೨ ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಅಡ್ಡಿಯಾಗುವುದಿಲ್ಲ, ಓಡಿದರೆ ಮುಗ್ಗರಿಸುವುದಿಲ್ಲ.
Cuando por ellas anduvieres, no se estrecharán tus pasos; y si corrieres, no tropezarás.
13 ೧೩ ಸದುಪದೇಶವನ್ನು ಗ್ರಹಿಸಿಕೋ, ಸಡಿಲಬಿಡಬೇಡ, ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.
Ten asida la instrucción, no la dejes: guárdala, porque ella es tu vida.
14 ೧೪ ದುಷ್ಟರ ಮಾರ್ಗದಲ್ಲಿ ಸೇರಬೇಡ, ಕೆಟ್ಟವರ ದಾರಿಯಲ್ಲಿ ನಡೆಯಬೇಡ.
No entres por la vereda de los impíos: ni vayas por el camino de los malos:
15 ೧೫ ಅದಕ್ಕೆ ದೂರವಾಗಿರು, ಅದರಲ್ಲಿ ನಡೆಯಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.
Desampárala; no pases por ella: apártate de ella, y pasa.
16 ೧೬ ಕೇಡುಮಾಡದಿದ್ದರೆ ಅವರಿಗೆ ನಿದ್ರೆಬಾರದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವುದು.
Porque no duermen, si no hicieren mal; y pierden su sueño, si no han hecho caer.
17 ೧೭ ದುಷ್ಟತನವೇ ಅವರ ಆಹಾರ; ಬಲಾತ್ಕಾರವೇ ಅವರ ದ್ರಾಕ್ಷಾರಸ ಪಾನ.
Porque comen pan de maldad, y beben vino de robos.
18 ೧೮ ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.
Mas la vereda de los justos es como la luz del lucero: auméntase, y alumbra hasta que el día es perfecto.
19 ೧೯ ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.
El camino de los impíos es como la oscuridad: no saben en qué tropiezan.
20 ೨೦ ಕಂದಾ, ನನ್ನ ಮಾತುಗಳನ್ನು ಆಲಿಸು, ನನ್ನ ನುಡಿಗಳಿಗೆ ಕಿವಿಗೊಡು.
Hijo mío, está atento a mis palabras; y a mis razones inclina tu oreja:
21 ೨೧ ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದಿರಲಿ, ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ.
No se aparten de tus ojos: mas guárdalas en medio de tu corazón;
22 ೨೨ ಅವುಗಳನ್ನು ಹೊಂದುವವರಿಗೆ ಅವು ಜೀವವು, ದೇಹಕ್ಕೆಲ್ಲಾ ಅವೇ ಆರೋಗ್ಯವು.
Porque son vida a los que las hallan; y medicina a toda su carne.
23 ೨೩ ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.
Sobre toda cosa guardada, guarda tu corazón; porque de él mana la vida.
24 ೨೪ ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, ಕೆಟ್ಟ ನುಡಿಗಳನ್ನು ಬಾಯಿಂದ ದೂರಮಾಡು.
Aparta de ti la perversidad de la boca; y la iniquidad de labios aleja de ti.
25 ೨೫ ನೆಟ್ಟಗೆ ದೃಷ್ಟಿಸು, ನಿನ್ನ ಕಣ್ಣುಗಳು ನಿನ್ನ ಮುಂದೆಯೇ ಇರಲಿ.
Tus ojos miren lo recto; y tus párpados enderecen tu camino delante de ti.
26 ೨೬ ನೀನು ನಡೆಯುವ ದಾರಿಯನ್ನು ಸಮಮಾಡು, ಆಗ ನಿನ್ನ ಮಾರ್ಗಗಳೆಲ್ಲಾ ದೃಢವಾಗಿರುವವು.
Pesa la vereda de tus pies; y todos tus caminos sean ordenados.
27 ೨೭ ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗಬೇಡ, ನಿನ್ನ ಕಾಲನ್ನು ಕೇಡಿಗೆ ದೂರಮಾಡು.
No te apartes a diestra, ni a siniestra: aparta tu pie del mal.