< ಜ್ಞಾನೋಕ್ತಿಗಳು 5 >
1 ೧ ಕಂದಾ, ನನ್ನ ಜ್ಞಾನೋಪದೇಶವನ್ನು ಆಲಿಸು, ವಿವೇಕದಿಂದ ಕೂಡಿದ ನನ್ನ ಬೋಧನೆಗೆ ಕಿವಿಗೊಡು.
Synu můj, pozoruj moudrosti mé, k opatrnosti mé nakloň ucha svého,
2 ೨ ಹೀಗಾದರೆ ನೀನು ವಿವೇಚನೆಯನ್ನು ಹೊಂದಿಕೊಳ್ಳುವಿ, ನಿನ್ನ ತುಟಿಗಳು ತಿಳಿವಳಿಕೆಯನ್ನು ಕಾಪಾಡುವವು.
Abys ostříhal prozřetelnosti, a rtové tvoji šetřili umění.
3 ೩ ವೇಶ್ಯಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವುದು, ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ.
Nebo rtové cizí ženy strdí tekou, a měkčejší nad olej ústa její.
4 ೪ ಅವಳು ಕಡೆಯಲ್ಲಿ ವಿಷದಂತೆ ಕಹಿಯೂ, ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು.
Poslední pak věci její hořké jsou jako pelyněk, ostré jako meč na obě straně ostrý.
5 ೫ ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು, ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು. (Sheol )
Nohy její sstupují k smrti, krokové její hrob uchvacují. (Sheol )
6 ೬ ಅವಳ ನಡತೆಯು ಚಂಚಲವಾಗಿರುವುದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು, ಅದು ಅವಳಿಗೆ ತಿಳಿದೇ ಇಲ್ಲ.
Stezku života snad bys zvážiti chtěl? Vrtkéť jsou cesty její, neseznáš.
7 ೭ ಹೀಗಿರಲು ಮಗನೇ, ನನ್ನ ಕಡೆಗೆ ಕಿವಿಗೊಡು, ನನ್ನ ಮಾತುಗಳಿಂದ ದೂರವಾಗಿರಬೇಡ.
Protož, synové, poslechněte mne, a neodstupujte od řečí úst mých.
8 ೮ ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ!
Vzdal od ní cestu svou, a nepřibližuj se ke dveřím domu jejího,
9 ೯ ಎಚ್ಚರವಹಿಸಿಕೋ, ನಿನ್ನ ಪುರುಷತ್ವವು ಪರಾಧೀನವಾಗುವುದು, ನಿನ್ನ ಆಯುಷ್ಯವು ಕ್ರೂರರ ವಶವಾಗುವುದು.
Abys snad nedal jiným slávy své, a let svých ukrutnému,
10 ೧೦ ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು, ನೀನು ಅನ್ಯನ ಮನೆಯಲ್ಲಿ ದುಡಿಯುವಿ.
Aby se nenasytili cizí úsilím tvým, a práce tvá nezůstala v domě cizím.
11 ೧೧ ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು,
I řval bys naposledy, když bys zhubil tělo své a čerstvost svou,
12 ೧೨ “ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,
A řekl bys: Jak jsem nenáviděl cvičení, a domlouváním pohrdalo srdce mé,
13 ೧೩ ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ, ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ!
A neposlouchal jsem hlasu vyučujících mne, a k učitelům svým nenaklonil jsem ucha svého!
14 ೧೪ ನಾನು ದೇವಜನರ ಸಭೆಯ ನಡುವೆ ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು” ಎಂದು ಅಂದುಕೊಳ್ಳುವಿ.
O málo, že jsem nevlezl ve všecko zlé u prostřed shromáždění a zástupu.
15 ೧೫ ಸ್ವಂತ ಕೊಳದ ನೀರನ್ನು, ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ.
Pí vodu z čisterny své, a prameny z prostředku vrchoviště svého.
16 ೧೬ ನಿನ್ನ ಒರತೆಗಳು ಬಯಲಿನಲ್ಲಿಯೂ, ನಿನ್ನ ಕಾಲುವೆಗಳು ಬೀದಿಗಳಲ್ಲಿಯೂ ಹರಡಿ ಹರಿಯುವುದು ಹಿತವೇ?
Nechť se rozlévají studnice tvé ven, a potůčkové vod na ulice.
17 ೧೭ ಅವು ನಿನಗೊಬ್ಬನಿಗೇ ಹರಿಯಲಿ, ಪರರು ನಿನ್ನೊಂದಿಗೆ ಸೇರಿ ಕುಡಿಯಬಾರದು.
Měj je sám sobě, a ne cizí s tebou.
18 ೧೮ ನಿನ್ನ ಬುಗ್ಗೆಯು ದೇವರ ಆಶೀರ್ವಾದವನ್ನು ಹೊಂದಲಿ, ನಿನ್ನ ಯೌವನಕಾಲದ ಪತ್ನಿಯಲ್ಲಿ ಆನಂದಿಸು.
Budiž požehnaný pramen tvůj, a vesel se z manželky mladosti své.
19 ೧೯ ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು.
Laně milostné a srny utěšené; prsy její ať tě opojují všelikého času, v milování jejím kochej se ustavičně.
20 ೨೦ ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ?
Nebo proč bys se kochal, synu můj, v cizí, a objímal život postranní,
21 ೨೧ ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ, ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.
Poněvadž před očima Hospodinovýma jsou cesty člověka, a on všecky stezky jeho váží?
22 ೨೨ ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.
Nepravosti vlastní jímají bezbožníka takového, a v provazích hříchu svého uvázne.
23 ೨೩ ಸದುಪದೇಶದ ಕೊರತೆಯಿಂದಲೇ ನಾಶವಾಗುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು.
Takovýť umře, proto že nepřijímal cvičení, a ve množství bláznovství svého blouditi bude.