< ಜ್ಞಾನೋಕ್ತಿಗಳು 6 >

1 ಮಗನೇ, ನೀನು ನೆರೆಯವನ ಸಾಲಕ್ಕೆ ಹೊಣೆಯಾಗಿದ್ದರೆ, ಪರನೊಂದಿಗೆ ಪ್ರಮಾಣ ಮಾಡಿಕೊಂಡಿದ್ದರೆ,
בְּ֭נִי אִם־עָרַ֣בְתָּ לְרֵעֶ֑ךָ תָּקַ֖עְתָּ לַזָּ֣ר כַּפֶּֽיךָ׃
2 ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿಕೊಂಡಿದ್ದೀ, ನಿನ್ನ ವಾಗ್ದಾನವು ನಿನ್ನನ್ನು ಹಿಡಿದಿದೆ.
נוֹקַ֥שְׁתָּ בְאִמְרֵי־פִ֑יךָ נִ֝לְכַּ֗דְתָּ בְּאִמְרֵי־פִֽיךָ׃
3 ಹೀಗಿರಲು, ಮಗನೇ, ನೀನು ನೆರೆಯವನ ಕೈಗೆ ಸಿಕ್ಕಿಕೊಂಡದ್ದರಿಂದ ತಪ್ಪಿಸಿಕೊಳ್ಳುವ ಒಂದು ಕೆಲಸ ಮಾಡು, ನಡೆ, ತ್ವರೆಪಡು, ಆ ನೆರೆಯವನನ್ನು ಅಂಗಲಾಚಿ ಬೇಡಿಕೋ,
עֲשֵׂ֨ה זֹ֥את אֵפ֪וֹא ׀ בְּנִ֡י וְֽהִנָּצֵ֗ל כִּ֘י בָ֤אתָ בְכַף־רֵעֶ֑ךָ לֵ֥ךְ הִ֝תְרַפֵּ֗ס וּרְהַ֥ב רֵעֶֽיךָ׃
4 ನಿನ್ನ ಕಣ್ಣುಗಳಿಗೆ ನಿದ್ರೆಕೊಡಬೇಡ, ನಿನ್ನ ರೆಪ್ಪೆಗಳನ್ನು ಮುಚ್ಚಬೇಡ;
אַל־תִּתֵּ֣ן שֵׁנָ֣ה לְעֵינֶ֑יךָ וּ֝תְנוּמָ֗ה לְעַפְעַפֶּֽיךָ׃
5 ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ, ಪಕ್ಷಿಯು ಹಾರಿ ಹೋಗುವ ಹಾಗೂ ತಪ್ಪಿಸಿಕೋ.
הִ֭נָּצֵל כִּצְבִ֣י מִיָּ֑ד וּ֝כְצִפּ֗וֹר מִיַּ֥ד יָקֽוּשׁ׃ פ
6 ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ.
לֵֽךְ־אֶל־נְמָלָ֥ה עָצֵ֑ל רְאֵ֖ה דְרָכֶ֣יהָ וַחֲכָֽם׃
7 ಅದಕ್ಕೆ ನಾಯಕ, ಅಧಿಕಾರಿ ಹಾಗೂ ಪ್ರಭುಗಳಿಲ್ಲದಿದ್ದರೂ,
אֲשֶׁ֖ר אֵֽין־לָ֥הּ קָצִ֗ין שֹׁטֵ֥ר וּמֹשֵֽׁל׃
8 ಬೇಸಿಗೆಯಲ್ಲಿ ತನ್ನ ತೀನಿಯನ್ನು ಸಿದ್ಧಮಾಡುವುದು, ಸುಗ್ಗಿಯ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವುದು.
תָּכִ֣ין בַּקַּ֣יִץ לַחְמָ֑הּ אָגְרָ֥ה בַ֝קָּצִ֗יר מַאֲכָלָֽהּ׃
9 ಸೋಮಾರಿಯೇ, ಎಷ್ಟು ಹೊತ್ತು ನಿದ್ರೆ? ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವಿ?
עַד־מָתַ֖י עָצֵ֥ל ׀ תִּשְׁכָּ֑ב מָ֝תַ֗י תָּק֥וּם מִשְּׁנָתֶֽךָ׃
10 ೧೦ “ಇನ್ನು ಸ್ವಲ್ಪ ನಿದ್ದೆ, ಇನ್ನು ಸ್ವಲ್ಪ ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ” ಅಂದುಕೊಳ್ಳುವಿಯಾ?
מְעַ֣ט שֵׁ֭נוֹת מְעַ֣ט תְּנוּמ֑וֹת מְעַ֓ט ׀ חִבֻּ֖ק יָדַ֣יִם לִשְׁכָּֽב׃
11 ೧೧ ಬಡತನವು ದಾರಿಗಳ್ಳನ ಹಾಗೂ ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು.
וּבָֽא־כִמְהַלֵּ֥ךְ רֵאשֶׁ֑ךָ וּ֝מַחְסֹֽרְךָ֗ כְּאִ֣ישׁ מָגֵֽן׃ פ
12 ೧೨ ನೀಚನೂ, ದುಷ್ಟನೂ ಆಗಿರುವ ಮನುಷ್ಯನ ನಡತೆಯನ್ನು ನೋಡು, ಅವನು ವಕ್ರ ಮಾತಿನವನಾಗಿದ್ದಾನೆ,
אָדָ֣ם בְּ֭לִיַּעַל אִ֣ישׁ אָ֑וֶן ה֝וֹלֵ֗ךְ עִקְּשׁ֥וּת פֶּֽה׃
13 ೧೩ ಕಣ್ಣನ್ನು ಮಿಟಕಿಸುತ್ತಾನೆ, ಕಾಲಿನಿಂದ ಕೆರೆಯುತ್ತಾನೆ, ಬೆರಳ ಸನ್ನೆಮಾಡುತ್ತಾನೆ.
קֹרֵ֣ץ בְּ֭עֵינָיו מֹלֵ֣ל בְּרַגְלָ֑יו מֹ֝רֶ֗ה בְּאֶצְבְּעֹתָֽיו׃
14 ೧೪ ಅವನ ಮನಸ್ಸಿನಲ್ಲಿರುವುದು ದ್ರೋಹವೇ; ಯಾವಾಗಲೂ ಕೇಡನ್ನು ಕಲ್ಪಿಸುತ್ತಾನೆ, ಜಗಳದ ಬೀಜವನ್ನು ಬಿತ್ತುತ್ತಾನೆ.
תַּֽהְפֻּכ֨וֹת ׀ בְּלִבּ֗וֹ חֹרֵ֣שׁ רָ֣ע בְּכָל־עֵ֑ת מִדְיָנִ֥ים יְשַׁלֵּֽחַ׃
15 ೧೫ ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವುದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು.
עַל־כֵּ֗ן פִּ֭תְאֹם יָב֣וֹא אֵיד֑וֹ פֶּ֥תַע יִ֝שָּׁבֵ֗ר וְאֵ֣ין מַרְפֵּֽא׃ פ
16 ೧೬ ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ.
שֶׁשׁ־הֵ֭נָּה שָׂנֵ֣א יְהוָ֑ה וְ֝שֶׁ֗בַע תּוֹעֲבַ֥ת נַפְשֽׁוֹ׃
17 ೧೭ ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ,
עֵינַ֣יִם רָ֭מוֹת לְשׁ֣וֹן שָׁ֑קֶר וְ֝יָדַ֗יִם שֹׁפְכ֥וֹת דָּם־נָקִֽי׃
18 ೧೮ ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತ್ವರೆಪಡುವ ಕಾಲು,
לֵ֗ב חֹ֭רֵשׁ מַחְשְׁב֣וֹת אָ֑וֶן רַגְלַ֥יִם מְ֝מַהֲר֗וֹת לָר֥וּץ לָֽרָעָה׃
19 ೧೯ ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು ಇವುಗಳೇ.
יָפִ֣יחַ כְּ֭זָבִים עֵ֣ד שָׁ֑קֶר וּמְשַׁלֵּ֥חַ מְ֝דָנִ֗ים בֵּ֣ין אַחִֽים׃ פ
20 ೨೦ ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ.
נְצֹ֣ר בְּ֭נִי מִצְוַ֣ת אָבִ֑יךָ וְאַל־תִּ֝טֹּ֗שׁ תּוֹרַ֥ת אִמֶּֽךָ׃
21 ೨೧ ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ, ನಿನ್ನ ಕೊರಳಿಗೆ ಅವುಗಳನ್ನು ಧರಿಸಿಕೋ.
קָשְׁרֵ֣ם עַל־לִבְּךָ֣ תָמִ֑יד עָ֝נְדֵ֗ם עַל־גַּרְגְּרֹתֶֽךָ׃
22 ೨೨ ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು, ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು.
בְּהִתְהַלֶּכְךָ֨ ׀ תַּנְחֶ֬ה אֹתָ֗ךְ בְּֽ֭שָׁכְבְּךָ תִּשְׁמֹ֣ר עָלֶ֑יךָ וַ֝הֲקִיצ֗וֹתָ הִ֣יא תְשִׂיחֶֽךָ׃
23 ೨೩ ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.
כִּ֤י נֵ֣ר מִ֭צְוָה וְת֣וֹרָה א֑וֹר וְדֶ֥רֶךְ חַ֝יִּ֗ים תּוֹכְח֥וֹת מוּסָֽר׃
24 ೨೪ ಅದು ಕೆಟ್ಟ ಸ್ತ್ರೀಯಿಂದಲೂ, ವೇಶ್ಯೆಯ ಸಿಹಿನುಡಿಯಿಂದಲೂ ನಿನ್ನನ್ನು ರಕ್ಷಿಸತಕ್ಕದ್ದಾಗಿದೆ.
לִ֭שְׁמָרְךָ מֵאֵ֣שֶׁת רָ֑ע מֵֽ֝חֶלְקַ֗ת לָשׁ֥וֹן נָכְרִיָּֽה׃
25 ೨೫ ನಿನ್ನ ಹೃದಯವು ಅವಳ ಸೌಂದರ್ಯವನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣುರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ.
אַל־תַּחְמֹ֣ד יָ֭פְיָהּ בִּלְבָבֶ֑ךָ וְאַל־תִּ֝קָּֽחֲךָ֗ בְּעַפְעַפֶּֽיהָ׃
26 ೨೬ ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವುದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.
כִּ֤י בְעַד־אִשָּׁ֥ה זוֹנָ֗ה עַֽד־כִּכַּ֫ר לָ֥חֶם וְאֵ֥שֶׁת אִ֑ישׁ נֶ֖פֶשׁ יְקָרָ֣ה תָצֽוּד׃ פ
27 ೨೭ ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ ಬಟ್ಟೆ ಸುಡುವುದಿಲ್ಲವೋ?
הֲיַחְתֶּ֤ה אִ֓ישׁ אֵ֬שׁ בְּחֵיק֑וֹ וּ֝בְגָדָ֗יו לֹ֣א תִשָּׂרַֽפְנָה׃
28 ೨೮ ಧಗಧಗಿಸುವ ಕೆಂಡದ ಮೇಲೆ ನಡೆದರೆ ಕಾಲು ಬೇಯುವುದಿಲ್ಲವೋ?
אִם־יְהַלֵּ֣ךְ אִ֭ישׁ עַל־הַגֶּחָלִ֑ים וְ֝רַגְלָ֗יו לֹ֣א תִכָּוֶֽינָה׃
29 ೨೯ ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು, ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು.
כֵּ֗ן הַ֭בָּא אֶל־אֵ֣שֶׁת רֵעֵ֑הוּ לֹ֥א יִ֝נָּקֶ֗ה כָּֽל־הַנֹּגֵ֥עַ בָּֽהּ׃
30 ೩೦ ಕಳ್ಳನು ಹೊಟ್ಟೆಗಿಲ್ಲದೆ ಹಸಿವೆಯನ್ನು ನೀಗಿಸಲು ಕಳವು ಮಾಡಿದರೆ ಜನರು ಅಷ್ಟೇನೂ ಹೀಯಾಳಿಸರು.
לֹא־יָב֣וּזוּ לַ֭גַּנָּב כִּ֣י יִגְנ֑וֹב לְמַלֵּ֥א נַ֝פְשׁ֗וֹ כִּ֣י יִרְעָֽב׃
31 ೩೧ ಅವನ ತಪ್ಪು ಬಯಲಾದರೆ ಅವನು ಏಳರಷ್ಟು ಕೊಡಬೇಕಾಗುವುದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ಕೊಟ್ಟು ತೀರಿಸಲೇಬೇಕು.
וְ֭נִמְצָא יְשַׁלֵּ֣ם שִׁבְעָתָ֑יִם אֶת־כָּל־ה֖וֹן בֵּית֣וֹ יִתֵּֽן׃
32 ೩೨ ವ್ಯಭಿಚಾರಿಯೋ ಕೇವಲ ಬುದ್ಧಿಹೀನನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.
נֹאֵ֣ף אִשָּׁ֣ה חֲסַר־לֵ֑ב מַֽשְׁחִ֥ית נַ֝פְשׁ֗וֹ ה֣וּא יַעֲשֶֽׂנָּה׃
33 ೩೩ ಅವನಿಗೆ ಗಾಯವೂ, ಅವಮಾನವೂ ಆಗುವವು, ಅವನ ಕೆಟ್ಟ ಹೆಸರು ಎಂದಿಗೂ ಅಳಿಸಲ್ಪಡದು.
נֶֽגַע־וְקָל֥וֹן יִמְצָ֑א וְ֝חֶרְפָּת֗וֹ לֹ֣א תִמָּחֶֽה׃
34 ೩೪ ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ, ಅವನು ಮುಯ್ಯಿತೀರಿಸತಕ್ಕ ದಿನದಲ್ಲಿ ವ್ಯಭಿಚಾರಿಯನ್ನು ಉಳಿಸನು.
כִּֽי־קִנְאָ֥ה חֲמַת־גָּ֑בֶר וְלֹֽא־יַ֝חְמ֗וֹל בְּי֣וֹם נָקָֽם׃
35 ೩೫ ಅವನು ಯಾವ ಈಡನ್ನೂ ಮುಟ್ಟನು; ಎಷ್ಟು ಲಂಚಕೊಟ್ಟರೂ ಒಪ್ಪನು.
לֹא־יִ֭שָּׂא פְּנֵ֣י כָל־כֹּ֑פֶר וְלֹֽא־יֹ֝אבֶ֗ה כִּ֣י תַרְבֶּה־שֹֽׁחַד׃ פ

< ಜ್ಞಾನೋಕ್ತಿಗಳು 6 >