< ಜ್ಞಾನೋಕ್ತಿಗಳು 7 >
1 ೧ ಕಂದಾ, ನನ್ನ ಮಾತುಗಳನ್ನು ಮನಸ್ಸಿನಲ್ಲಿಟ್ಟುಕೋ, ನನ್ನ ಆಜ್ಞೆಗಳನ್ನು ನಿಧಿಯಂತೆ ಕಾಪಾಡಿಕೋ.
ऐ मेरे बेटे, मेरी बातों को मान, और मेरे फ़रमान को निगाह में रख।
2 ೨ ನನ್ನ ಉಪದೇಶವನ್ನು ಕಣ್ಣುಗುಡ್ಡೆಯಂತೆ ಪಾಲಿಸು, ನನ್ನ ಆಜ್ಞೆಗಳನ್ನು ಕೈಕೊಂಡು ಬಾಳು.
मेरे फ़रमान को बजा ला और ज़िन्दा रह, और मेरी ता'लीम को अपनी आँख की पुतली जानः
3 ೩ ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿ ಧರಿಸಿಕೋ, ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆದುಕೋ.
उनको अपनी उँगलियों पर बाँध ले, उनको अपने दिल की तख़्ती पर लिख ले।
4 ೪ ಜ್ಞಾನವನ್ನು, “ನೀನು ನನ್ನ ಅಕ್ಕಾ” ಎಂದು ಹೇಳು, ವಿವೇಕವನ್ನು, “ಪ್ರಿಯೇ” ಎಂದು ಕರೆ.
हिकमत से कह, तू मेरी बहन है, और समझ को अपना रिश्तेदार क़रार दे;
5 ೫ ಅವು ಜಾರಳಿಂದ ಮತ್ತು ಸವಿಮಾತನಾಡುವ ಪರಸ್ತ್ರೀಯಿಂದ ನಿನ್ನನ್ನು ರಕ್ಷಿಸುವವು.
ताकि वह तुझ को पराई 'औरत से बचाएँ, या'नी बेगाना 'औरत से जो चापलूसी की बातें करती है।
6 ೬ ನಾನು ನನ್ನ ಮನೆಯ ಕಿಟಕಿಯ ಜಾಲರಿಯಿಂದ ಇಣಿಕಿ ನೋಡಲು
क्यूँकि मैंने अपने घर की खिड़की से, या'नी झरोके में से बाहर निगाह की,
7 ೭ ಅಲ್ಪಬುದ್ಧಿಯುಳ್ಳ ಅನೇಕ ಯುವಕರು ಕಾಣಿಸಿದರು. ಅವರಲ್ಲಿ ಜ್ಞಾನಹೀನನಾದ ಒಬ್ಬ ಯೌವನಸ್ಥನನ್ನು ಕಂಡೆನು.
और मैंने एक बे'अक़्ल जवान को नादानों के बीच देखा, या'नी नौजवानों के बीच वह मुझे नज़रआया,
8 ೮ ಅವನು ಸಂಜೆಯ ಮೊಬ್ಬಿನಲ್ಲಿ, ಮಧ್ಯರಾತ್ರಿಯ ಅಂಧಕಾರದಲ್ಲಿ,
कि उस 'औरत के घर के पास गली के मोड़ से जा रहा है, और उसने उसके घर का रास्ता लिया;
9 ೯ ಅವಳ ಮನೆಯ ಹತ್ತಿರ ಬೀದಿಯಲ್ಲಿ ಹಾದುಹೋಗುತ್ತಾ, ಅವಳ ಮನೆಯ ಕಡೆಗೆ ತಿರುಗಿದ್ದನ್ನು ಕಂಡೆನು.
दिन छिपे शाम के वक़्त, रात के अंधेरे और तारीकी में।
10 ೧೦ ಇಗೋ ವೇಶ್ಯಾರೂಪವನ್ನು ಧರಿಸಿಕೊಂಡಿದ್ದ ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರುಗೊಂಡಳು.
और देखो, वहाँ उससे एक 'औरत आ मिली, जो दिल की चालाक और कस्बी का लिबास पहने थी।
11 ೧೧ ಇವಳು ಕೂಗಾಟದವಳು, ಹಟಮಾರಿ, ಮನೆಯಲ್ಲಿ ನಿಲ್ಲತಕ್ಕವಳೇ ಅಲ್ಲ;
वह गौग़ाई और ख़ुदसर है, उसके पाँव अपने घर में नहीं टिकते;
12 ೧೨ ಒಂದು ವೇಳೆ ಬೀದಿಗಳಲ್ಲಿರುವಳು, ಮತ್ತೊಂದು ವೇಳೆ ಚೌಕಗಳಲ್ಲಿರುವಳು, ಅಂತು ಪ್ರತಿಯೊಂದು ಮೂಲೆಯಲ್ಲಿಯೂ ಹೊಂಚು ಹಾಕುವಳು.
अभी वह गली में है, अभी बाज़ारों में, और हर मोड़ पर घात में बैठती है।
13 ೧೩ ಅವನನ್ನು ಹಿಡಿದು, ಮುದ್ದಾಡಿ ನಾಚಿಕೆಗೆಟ್ಟವಳಾಗಿ,
इसलिए उसने उसको पकड़ कर चूमा, और बेहया मुँह से उससे कहने लगी,
14 ೧೪ “ಎಲೈ, ಈ ದಿನ ನನ್ನ ಹರಕೆಗಳನ್ನು ಸಲ್ಲಿಸಿದ್ದೇನೆ, ಸಮಾಧಾನ ಯಜ್ಞಶೇಷವು ನನ್ನಲ್ಲಿದೆ,
“सलामती की कु़र्बानी के ज़बीहे मुझ पर फ़र्ज़ थे, आज मैंने अपनी नज्रे़ अदा की हैं।
15 ೧೫ ಆದಕಾರಣ ನಿನ್ನನ್ನು ಎದುರುಗೊಳ್ಳಲು ಬಂದೆನು, ನಿನ್ನನ್ನು ಆತುರದಿಂದ ಹುಡುಕಿ ಕಂಡುಕೊಂಡೆನು.
इसीलिए मैं तेरी मुलाक़ात को निकली, कि किसी तरह तेरा दीदार हासिल करूँ, इसलिए तू मुझे मिल गया।
16 ೧೬ ನನ್ನ ಮಂಚದಲ್ಲಿ ಸುಪ್ಪತ್ತಿಯನ್ನೂ, ಐಗುಪ್ತದೇಶದ ನೂಲಿನ ವಿಚಿತ್ರ ವಸ್ತ್ರಗಳನ್ನೂ ಹಾಸಿದ್ದೇನೆ.
मैंने अपने पलंग पर कामदार गालीचे, और मिस्र के सूत के धारीदार कपड़े बिछाए हैं।
17 ೧೭ ಹಾಸಿಗೆಯ ಮೇಲೆ ರಕ್ತಬೋಳ, ಅಗುರು, ಲವಂಗ, ಚಕ್ಕೆ ಇವುಗಳ ಚೂರ್ಣಗಳಿಂದ ಸುವಾಸನೆಗೊಳಿಸಿದ್ದೇನೆ.
मैंने अपने बिस्तर को मुर और ऊद, और दारचीनी से मु'अत्तर किया है।
18 ೧೮ ಬಾ, ಬೆಳಗಿನ ತನಕ ಬೇಕಾದಷ್ಟು ರಮಿಸುವ, ಕಾಮವಿಲಾಸಗಳಿಂದ ಸಂತೋಷಿಸುವ.
आ हम सुबह तक दिल भर कर इश्क़ बाज़ी करें और मुहब्बत की बातों से दिल बहलाएँ
19 ೧೯ ಯಜಮಾನನು ಮನೆಯಲ್ಲಿಲ್ಲ, ದೂರ ಪ್ರಯಾಣದಲ್ಲಿದ್ದಾನೆ.
क्यूँकि मेरा शौहर घर में नहीं, उसने दूर का सफ़र किया है।
20 ೨೦ ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ, ಹುಣ್ಣಿಮೆಗೆ ಮನೆಗೆ ಬರುವನು” ಎಂದು ಹೇಳುವಳು.
वह अपने साथ रुपये की थैली ले गया; और पूरे चाँद के वक़्त घर आएगा।”
21 ೨೧ ಅವಳು ಅವನನ್ನು ತನ್ನ ಸವಿಮಾತುಗಳಿಂದ ಮನವೊಲಿಸಿ, ಬಹಳವಾಗಿ ಪ್ರೇರೇಪಿಸಿ ಸಮ್ಮತಿಪಡಿಸುತ್ತಾಳೆ.
उसने मीठी मीठी बातों से उसको फुसला लिया, और अपने लबों की चापलूसी से उसको बहका लिया।
22 ೨೨ ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ, ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ,
वह फ़ौरन उसके पीछे हो लिया, जैसे बैल ज़बह होने को जाता है; या बेड़ियों में बेवक़ूफ़ सज़ा पाने को।
23 ೨೩ ಪಕ್ಷಿಯು ಬಲೆಯ ಕಡೆಗೆ ಓಡುವಂತೆಯೂ, ಅವನು ತನ್ನ ಪ್ರಾಣಾಪಾಯವನ್ನು ತಿಳಿಯದೆ, ಬಾಣವು ತನ್ನ ಕಾಳಿಜವನ್ನು ತಿವಿಯುವ ಮೇರೆಗೂ, ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
जैसे परिन्दा जाल की तरफ़ तेज़ जाता है, और नहीं जानता कि वह उसकी जान के लिए है, हत्ता कि तीर उसके जिगर के पार हो जाएगा।
24 ೨೪ ಈಗ, ಮಕ್ಕಳೇ, ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾತುಗಳನ್ನು ಆಲಿಸಿರಿ.
इसलिए अब ऐ बेटो, मेरी सुनो, और मेरे मुँह की बातों पर तवज्जुह करो।
25 ೨೫ ನಿನ್ನ ಹೃದಯವು ಅವಳ ನಡತೆಯ ಕಡೆಗೆ ತಿರುಗದಿರಲಿ, ತಪ್ಪಿಹೋಗಿಯೂ ಅವಳ ಮಾರ್ಗದಲ್ಲಿ ನಡೆಯಬೇಡ.
तेरा दिल उसकी राहों की तरफ़ मायल न हो, तू उसके रास्तों में गुमराह न होना;
26 ೨೬ ಅವಳಿಂದ ಗಾಯಪಟ್ಟು ಬಿದ್ದವರು ಬಹು ಜನರು, ಹತರಾದವರೋ ಲೆಕ್ಕವೇ ಇಲ್ಲ.
क्यूँकि उसने बहुतों को ज़ख़्मी करके गिरा दिया है, बल्कि उसके मक़्तूल बेशुमार हैं।
27 ೨೭ ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದುಹೋಗುತ್ತದೆ. (Sheol )
उसका घर पाताल का रास्ता है, और मौत की कोठरियों को जाता है। (Sheol )