< ಜ್ಞಾನೋಕ್ತಿಗಳು 9 >

1 ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು, ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ.
חָ֭כְמוֹת בָּנְתָ֣ה בֵיתָ֑הּ חָצְבָ֖ה עַמּוּדֶ֣יהָ שִׁבְעָֽה׃
2 ಆಕೆ ಪಶುಗಳನ್ನು ಕೊಯಿಸಿ ಪಾನದ್ರವ್ಯಗಳೊಡನೆ ದ್ರಾಕ್ಷಾರಸವನ್ನು ಬೆರಸಿ, ಔತಣವನ್ನು ಸಿದ್ಧಪಡಿಸಿದ್ದಾಳೆ.
טָבְחָ֣ה טִ֭בְחָהּ מָסְכָ֣ה יֵינָ֑הּ אַ֝֗ף עָֽרְכָ֥ה שֻׁלְחָנָֽהּ׃
3 ಆಕೆಯು ತನ್ನ ದಾಸಿಯರನ್ನು ಕಳುಹಿಸಿ, ಪಟ್ಟಣದ ರಾಜಮಾರ್ಗಗಳ ಮುಖ್ಯಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ.
שָֽׁלְחָ֣ה נַעֲרֹתֶ֣יהָ תִקְרָ֑א עַל־גַּ֝פֵּ֗י מְרֹ֣מֵי קָֽרֶת׃
4 ಆಕೆಯು ಬುದ್ಧಿಹೀನರಿಗೆ, “ಮೂಢನಾಗಿರುವವನು ಈ ಕಡೆಗೆ ತಿರುಗಲಿ,
מִי־פֶ֭תִי יָסֻ֣ר הֵ֑נָּה חֲסַר־לֵ֝֗ב אָ֣מְרָה לּֽוֹ׃
5 ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.
לְ֭כוּ לַחֲמ֣וּ בְֽלַחֲמִ֑י וּ֝שְׁת֗וּ בְּיַ֣יִן מָסָֽכְתִּי׃
6 ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.
עִזְב֣וּ פְתָאיִ֣ם וִֽחְי֑וּ וְ֝אִשְׁר֗וּ בְּדֶ֣רֶךְ בִּינָֽה׃
7 ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.
יֹ֤סֵ֨ר ׀ לֵ֗ץ לֹקֵ֣חַֽ ל֣וֹ קָל֑וֹן וּמוֹכִ֖יחַ לְרָשָׁ֣ע מוּמֽוֹ׃
8 ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.
אַל־תּ֣וֹכַח לֵ֭ץ פֶּן־יִשְׂנָאֶ֑ךָּ הוֹכַ֥ח לְ֝חָכָ֗ם וְיֶאֱהָבֶֽךָּ׃
9 ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು.
תֵּ֣ן לְ֭חָכָם וְיֶחְכַּם־ע֑וֹד הוֹדַ֥ע לְ֝צַדִּ֗יק וְי֣וֹסֶף לֶֽקַח׃ פ
10 ೧೦ ಯೆಹೋವನ ಭಯವೇ ಜ್ಞಾನಕ್ಕೆ ಮೂಲವು, ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು.
תְּחִלַּ֣ת חָ֭כְמָה יִרְאַ֣ת יְהוָ֑ה וְדַ֖עַת קְדֹשִׁ֣ים בִּינָֽה׃
11 ೧೧ ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಷ್ಯದ ವರ್ಷಗಳು ವೃದ್ಧಿಯಾಗುವವು.
כִּי־בִ֭י יִרְבּ֣וּ יָמֶ֑יךָ וְיוֹסִ֥יפוּ לְּ֝ךָ֗ שְׁנ֣וֹת חַיִּֽים׃
12 ೧೨ ನೀನು ಜ್ಞಾನವಂತನಾದರೆ ನಿನ್ನ ಜ್ಞಾನವು ನಿನಗೇ ಲಾಭಕರ, ಧರ್ಮನಿಂದಕನಾದರೆ ನೀನೇ ಅದರ ಫಲವನ್ನು ಅನುಭವಿಸುವಿ.
אִם־חָ֭כַמְתָּ חָכַ֣מְתָּ לָּ֑ךְ וְ֝לַ֗צְתָּ לְֽבַדְּךָ֥ תִשָּֽׂא׃
13 ೧೩ ಅಜ್ಞಾನವೆಂಬವಳಾದರೋ ಕೂಗಾಟದವಳು, ಮೂಢಳು, ಏನೂ ತಿಳಿಯದವಳು.
אֵ֣שֶׁת כְּ֭סִילוּת הֹֽמִיָּ֑ה פְּ֝תַיּ֗וּת וּבַל־יָ֥דְעָה מָּֽה׃
14 ೧೪ ಅವಳು ತನ್ನ ಮನೆಯ ಬಾಗಿಲಿನಲ್ಲಿ, ಪಟ್ಟಣದ ರಾಜಮಾರ್ಗಗಳಲ್ಲಿ ಪೀಠದ ಮೇಲೆ ಕುಳಿತುಕೊಂಡವಳಾಗಿ,
וְֽ֭יָשְׁבָה לְפֶ֣תַח בֵּיתָ֑הּ עַל־כִּ֝סֵּ֗א מְרֹ֣מֵי קָֽרֶת׃
15 ೧೫ ತಮ್ಮ ಮಾರ್ಗವನ್ನು ಹಿಡಿದು, ಹೋಗಿ ಬರುವವರನ್ನು ನೋಡಿ,
לִקְרֹ֥א לְעֹֽבְרֵי־דָ֑רֶךְ הַֽ֝מְיַשְּׁרִ֗ים אֹֽרְחוֹתָֽם׃
16 ೧೬ “ಮೂಢನಾಗಿರುವವನು ಈ ಕಡೆಗೆ ತಿರುಗಲಿ” ಎಂದು ಕೂಗಿ,
מִי־פֶ֭תִי יָסֻ֣ר הֵ֑נָּה וַחֲסַר־לֵ֝֗ב וְאָ֣מְרָה לּֽוֹ׃
17 ೧೭ “ಕದ್ದ ನೀರು ಸಿಹಿಯಾಗಿದೆ, ಗುಟ್ಟಾಗಿ ತಿನ್ನುವ ತಿಂಡಿಯು ರುಚಿಯಾಗಿದೆ” ಎಂದು ಬುದ್ಧಿಹೀನನಿಗೆ ಹೇಳುತ್ತಾಳೆ.
מַֽיִם־גְּנוּבִ֥ים יִמְתָּ֑קוּ וְלֶ֖חֶם סְתָרִ֣ים יִנְעָֽם׃
18 ೧೮ ಆ ಮನೆಯು ಪ್ರೇತ ನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು. (Sheol h7585)
וְֽלֹא־יָ֭דַע כִּֽי־רְפָאִ֣ים שָׁ֑ם בְּעִמְקֵ֖י שְׁא֣וֹל קְרֻאֶֽיהָ׃ פ (Sheol h7585)

< ಜ್ಞಾನೋಕ್ತಿಗಳು 9 >