< ಜ್ಞಾನೋಕ್ತಿಗಳು 9 >
1 ೧ ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು, ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ.
Fa nandranjy i akiba’ey t’i Hihitse, fa rinamerame’e i faha’e fito rey.
2 ೨ ಆಕೆ ಪಶುಗಳನ್ನು ಕೊಯಿಸಿ ಪಾನದ್ರವ್ಯಗಳೊಡನೆ ದ್ರಾಕ್ಷಾರಸವನ್ನು ಬೆರಸಿ, ಔತಣವನ್ನು ಸಿದ್ಧಪಡಿಸಿದ್ದಾಳೆ.
Fa nandenta, fa linaro’e ty divai’e, fa hinalanka’e i fandambaña’ey.
3 ೩ ಆಕೆಯು ತನ್ನ ದಾಸಿಯರನ್ನು ಕಳುಹಿಸಿ, ಪಟ್ಟಣದ ರಾಜಮಾರ್ಗಗಳ ಮುಖ್ಯಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ.
Fa nirahe’e o anak’ampata’eo, hikaike boak’ an-digiligin-kaboa’ i rovay ey.
4 ೪ ಆಕೆಯು ಬುದ್ಧಿಹೀನರಿಗೆ, “ಮೂಢನಾಗಿರುವವನು ಈ ಕಡೆಗೆ ತಿರುಗಲಿ,
O ry tahitahiñe, mitsilea mb’etoa! le hoe re amy seretsey,
5 ೫ ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.
Mb’etoa ikamao o hanekoo naho inomo i divay linarokoy,
6 ೬ ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.
Apoho ty hagegeañe naho miveloma, mañaveloa an-dalan-kilala.
7 ೭ ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.
Mizò inje ty mañendake mpanivetive; tendreke joy ty mitrevoke ty lo-tsereke.
8 ೮ ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.
Ko mañendake ty mpamokafoka hera halaiñ’azo; Trevohe’o ty mahihitse le hikokoa’e.
9 ೯ ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು.
Anaro o mahihitseo le hiha-mahihitse avao; ampandrendreho ty vantañe le hitombo an-kilala.
10 ೧೦ ಯೆಹೋವನ ಭಯವೇ ಜ್ಞಾನಕ್ಕೆ ಮೂಲವು, ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು.
Ty fañeveñañe am’ Iehovà ro fifotoran-kihitse, vaho ty fahafohinañe i Masiñey ro faharendrehañe.
11 ೧೧ ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಷ್ಯದ ವರ್ಷಗಳು ವೃದ್ಧಿಯಾಗುವವು.
Izaho ty fampitomboañe o andro’oo, fampitompeañe taoñe o havelo’oo.
12 ೧೨ ನೀನು ಜ್ಞಾನವಂತನಾದರೆ ನಿನ್ನ ಜ್ಞಾನವು ನಿನಗೇ ಲಾಭಕರ, ಧರ್ಮನಿಂದಕನಾದರೆ ನೀನೇ ಅದರ ಫಲವನ್ನು ಅನುಭವಿಸುವಿ.
Ie mahihitse, hañimbañ’ azo i hihitsey; Ihe manivetive ty hivave izay.
13 ೧೩ ಅಜ್ಞಾನವೆಂಬವಳಾದರೋ ಕೂಗಾಟದವಳು, ಮೂಢಳು, ಏನೂ ತಿಳಿಯದವಳು.
Mamantsiñe ty rakemba gege, ie tsotra tsy mahafohin-draha,
14 ೧೪ ಅವಳು ತನ್ನ ಮನೆಯ ಬಾಗಿಲಿನಲ್ಲಿ, ಪಟ್ಟಣದ ರಾಜಮಾರ್ಗಗಳಲ್ಲಿ ಪೀಠದ ಮೇಲೆ ಕುಳಿತುಕೊಂಡವಳಾಗಿ,
Mitobok’ an-dalam-bein-akiba’e eo, am-pitobohañe amo haboa’ i rovaio,
15 ೧೫ ತಮ್ಮ ಮಾರ್ಗವನ್ನು ಹಿಡಿದು, ಹೋಗಿ ಬರುವವರನ್ನು ನೋಡಿ,
mikaike ze miary eo, amo mañavelo an-kavantañañeo:
16 ೧೬ “ಮೂಢನಾಗಿರುವವನು ಈ ಕಡೆಗೆ ತಿರುಗಲಿ” ಎಂದು ಕೂಗಿ,
O ry trentrañeo, mitsilea mb’etoa! le hoe re amy tsy aman-kilalay:
17 ೧೭ “ಕದ್ದ ನೀರು ಸಿಹಿಯಾಗಿದೆ, ಗುಟ್ಟಾಗಿ ತಿನ್ನುವ ತಿಂಡಿಯು ರುಚಿಯಾಗಿದೆ” ಎಂದು ಬುದ್ಧಿಹೀನನಿಗೆ ಹೇಳುತ್ತಾಳೆ.
Mamy ty rano nikamereñe, vaho mafiry ty mofo kamaeñe añ’etak’ ao.
18 ೧೮ ಆ ಮನೆಯು ಪ್ರೇತ ನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು. (Sheol )
Fe tsy apota’e te lolo ty ao, te an-tsikeokeok’ ao o nampihovae’eo. (Sheol )