< ಕೀರ್ತನೆಗಳು 1 >
1 ೧ ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,
悪しき者のはかりごとに歩まず、罪びとの道に立たず、あざける者の座にすわらぬ人はさいわいである。
2 ೨ ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು.
このような人は主のおきてをよろこび、昼も夜もそのおきてを思う。
3 ೩ ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.
このような人は流れのほとりに植えられた木の時が来ると実を結び、その葉もしぼまないように、そのなすところは皆栄える。
4 ೪ ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ.
悪しき者はそうでない、風の吹き去るもみがらのようだ。
5 ೫ ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ, ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ.
それゆえ、悪しき者はさばきに耐えない。罪びとは正しい者のつどいに立つことができない。
6 ೬ ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.
主は正しい者の道を知られる。しかし、悪しき者の道は滅びる。