< ಕೀರ್ತನೆಗಳು 10 >

1 ಯೆಹೋವನೇ, ನೀನು ಏಕೆ ದೂರವಾಗಿ ನಿಂತಿದ್ದೀ? ಕಷ್ಟಕಾಲದಲ್ಲಿ ಏಕೆ ಮರೆಯಾಗುತ್ತೀ?
לָמָ֣ה יְ֭הוָה תַּעֲמֹ֣ד בְּרָח֑וֹק תַּ֝עְלִ֗ים לְעִתּ֥וֹת בַּצָּרָֽה׃
2 ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ.
בְּגַאֲוַ֣ת רָ֭שָׁע יִדְלַ֣ק עָנִ֑י יִתָּפְשׂ֓וּ ׀ בִּמְזִמּ֖וֹת ז֣וּ חָשָֽׁבוּ׃
3 ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.
כִּֽי־הִלֵּ֣ל רָ֭שָׁע עַל־תַּאֲוַ֣ת נַפְשׁ֑וֹ וּבֹצֵ֥עַ בֵּ֝רֵ֗ךְ נִ֘אֵ֥ץ ׀ יְהוָֽה׃
4 ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.
רָשָׁ֗ע כְּגֹ֣בַהּ אַ֭פּוֹ בַּל־יִדְרֹ֑שׁ אֵ֥ין אֱ֝לֹהִ֗ים כָּל־מְזִמּוֹתָֽיו׃
5 ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ ಅದು ಅವನ ಗ್ರಹಿಕೆಗೆ ಬರುವುದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರಮಾಡುತ್ತಾನೆ.
יָ֘חִ֤ילוּ דְרָכָ֨יו בְּכָל־עֵ֗ת מָר֣וֹם מִ֭שְׁפָּטֶיךָ מִנֶּגְדּ֑וֹ כָּל־צ֝וֹרְרָ֗יו יָפִ֥יחַ בָּהֶֽם׃
6 ಅವನು, “ನಾನು ಕದಲುವುದೇ ಇಲ್ಲ; ನನಗೆ ವಿಪತ್ತು ಎಂದೆಂದಿಗೂ ಸಂಭವಿಸುವುದಿಲ್ಲ” ಅಂದುಕೊಂಡಿದ್ದಾನೆ.
אָמַ֣ר בְּ֭לִבּוֹ בַּל־אֶמּ֑וֹט לְדֹ֥ר וָ֝דֹ֗ר אֲשֶׁ֣ר לֹֽא־בְרָֽע׃
7 ಅವನ ಬಾಯಿಯು ಶಾಪ, ಬಲಾತ್ಕಾರ ಮತ್ತು ವಂಚನೆಗಳಿಂದ ತುಂಬಿದೆ; ಅವನ ನಾಲಿಗೆಯ ಕೆಳಗೆ ಹಾನಿಯೂ, ನಾಶನವೂ ಇವೆ.
אָלָ֤ה פִּ֣יהוּ מָ֭לֵא וּמִרְמ֣וֹת וָתֹ֑ךְ תַּ֥חַת לְ֝שׁוֹנ֗וֹ עָמָ֥ל וָאָֽוֶן׃
8 ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು, ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. ಅವನು ಗತಿಹೀನನನ್ನು ಹಿಡಿಯುವುದಕ್ಕೆ ಸಮಯ ನೋಡುತ್ತಾನೆ.
יֵשֵׁ֤ב ׀ בְּמַאְרַ֬ב חֲצֵרִ֗ים בַּֽ֭מִּסְתָּרִים יַהֲרֹ֣ג נָקִ֑י עֵ֝ינָ֗יו לְֽחֵלְכָ֥ה יִצְפֹּֽנוּ׃
9 ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು. ಅವನು ಬಲೆಯೊಡ್ಡಿ ಕಾದಿದ್ದು, ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ.
יֶאֱרֹ֬ב בַּמִּסְתָּ֨ר ׀ כְּאַרְיֵ֬ה בְסֻכֹּ֗ה יֶ֭אֱרֹב לַחֲט֣וֹף עָנִ֑י יַחְטֹ֥ף עָ֝נִ֗י בְּמָשְׁכ֥וֹ בְרִשְׁתּֽוֹ׃
10 ೧೦ ಕುಗ್ಗಿದವನು ಜಜ್ಜಲ್ಪಟ್ಟು ಉರುಳಿಕೊಳ್ಳುತ್ತಾನೆ, ಗತಿಯಿಲ್ಲದವನು ಅವನ ಬಲಾತ್ಕಾರದಿಂದ ಬಿದ್ದು ಹೋಗುತ್ತಾನೆ.
יִדְכֶּ֥ה יָשֹׁ֑חַ וְנָפַ֥ל בַּ֝עֲצוּמָ֗יו חֵ֣יל כָּאִֽים׃
11 ೧೧ ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.
אָמַ֣ר בְּ֭לִבּוֹ שָׁ֣כַֽח אֵ֑ל הִסְתִּ֥יר פָּ֝נָ֗יו בַּל־רָאָ֥ה לָנֶֽצַח׃
12 ೧೨ ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ; ಅವನನ್ನು ರಕ್ಷಿಸುವುದಕ್ಕೆ ಕೈಚಾಚು.
קוּמָ֤ה יְהוָ֗ה אֵ֭ל נְשָׂ֣א יָדֶ֑ךָ אַל־תִּשְׁכַּ֥ח עֲנָוִֽים׃
13 ೧೩ “ದೇವರು ವಿಚಾರಿಸುವುದೇ ಇಲ್ಲ” ಎಂದು ಹೇಳುತ್ತಾ, ದುಷ್ಟನು ನಿನ್ನನ್ನು ಏಕೆ ಅಲಕ್ಷ್ಯಮಾಡಬೇಕು?
עַל־מֶ֤ה ׀ נִאֵ֖ץ רָשָׁ֥ע ׀ אֱלֹהִ֑ים אָמַ֥ר בְּ֝לִבּ֗וֹ לֹ֣א תִּדְרֹֽשׁ׃
14 ೧೪ ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.
רָאִ֡תָה כִּֽי־אַתָּ֤ה ׀ עָ֘מָ֤ל וָכַ֨עַס ׀ תַּבִּיט֮ לָתֵ֪ת בְּיָ֫דֶ֥ךָ עָ֭לֶיךָ יַעֲזֹ֣ב חֵלֶ֑כָה יָ֝ת֗וֹם אַתָּ֤ה ׀ הָיִ֬יתָ עוֹזֵֽר׃
15 ೧೫ ದುಷ್ಟನ ಭುಜಬಲವನ್ನು ಮುರಿದುಹಾಕು, ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲಮಾಡಿಬಿಡು.
שְׁ֭בֹר זְר֣וֹעַ רָשָׁ֑ע וָ֝רָ֗ע תִּֽדְרוֹשׁ־רִשְׁע֥וֹ בַל־תִּמְצָֽא׃
16 ೧೬ ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.
יְהוָ֣ה מֶ֭לֶךְ עוֹלָ֣ם וָעֶ֑ד אָבְד֥וּ ג֝וֹיִ֗ם מֵֽאַרְצֽוֹ׃
17 ೧೭ ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.
תַּאֲוַ֬ת עֲנָוִ֣ים שָׁמַ֣עְתָּ יְהוָ֑ה תָּכִ֥ין לִ֝בָּ֗ם תַּקְשִׁ֥יב אָזְנֶֽךָ׃
18 ೧೮ ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವುದಿಲ್ಲ.
לִשְׁפֹּ֥ט יָת֗וֹם וָ֫דָ֥ךְ בַּל־יוֹסִ֥יף ע֑וֹד לַעֲרֹ֥ץ אֱ֝נ֗וֹשׁ מִן־הָאָֽרֶץ׃

< ಕೀರ್ತನೆಗಳು 10 >