< ಕೀರ್ತನೆಗಳು 100 >
1 ೧ ಕೃತಜ್ಞತಾಯಜ್ಞ ಕೀರ್ತನೆ. ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.
Псалом хвали. Вигукни радісно Господеві, уся земле!
2 ೨ ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.
Служіть Господеві з радістю, прийдіть перед обличчя Його зі співом піднесеним.
3 ೩ ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ.
Пізнайте, що Господь є Бог, Він створив нас, і ми Йому належимо; ми – Його народ і вівці Його пасовища.
4 ೪ ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ.
Увійдіть у ворота Його з подякою, у двори Його – із хвалою; славте Його й благословляйте ім’я Його.
5 ೫ ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
Адже добрий Господь, милість Його навіки, із роду в рід вірність Його.