< ಕೀರ್ತನೆಗಳು 101 >
1 ೧ ದಾವೀದನ ಕೀರ್ತನೆ. ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು; ಯೆಹೋವನೇ, ನಿನ್ನನ್ನು ಕೊಂಡಾಡುವೆನು.
Af David. En Salme. Om Naade og Ret vil jeg synge, dig vil jeg lovsynge, Herre.
2 ೨ ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.
Jeg vil agte paa uskyldiges Vej, naar den viser sig for mig, vandre i Hjertets Uskyld bag Hjemmets Vægge,
3 ೩ ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ.
paa Niddingsdaad lader jeg aldrig mit Øje hvile. Jeg hader den, der gør ondt, han er ej i mit Følge;
4 ೪ ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ; ಕೆಟ್ಟತನವನ್ನು ಅರಿಯದಿರುವೆನು.
det falske Hjerte maa holde sig fra mig, den onde kender jeg ikke;
5 ೫ ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.
den, der sværter sin Næste, udrydder jeg; den opblæste og den hovmodige taaler jeg ikke.
6 ೬ ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು, ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು.
Til Landets trofaste søger mit Øje, hos mig skal de bo; den, der vandrer uskyldiges Vej, skal være min Tjener;
7 ೭ ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.
ingen, der øver Svig, skal bo i mit Hus, ingen, som farer med Løgn, bestaa for mit Øje.
8 ೮ ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.
Alle Landets gudløse gør jeg til intet hver Morgen for at udrydde alle Udaadsmænd af HERRENS By.