< ಕೀರ್ತನೆಗಳು 103 >

1 ದಾವೀದನ ಕೀರ್ತನೆ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.
達味作。我的靈魂,請向上主讚頌,我的五內,請向主名讚頌。
2 ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.
我的靈魂,請向上主讚頌,請你不要忘記他的恩寵。
3 ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ,
是他赦免了你的各種愆尤,是他治愈了你的一切病苦,
4 ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ, ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.
是他叫你的性命在死亡中得到保全,是他用仁慈以及愛情給你作了冠冕,
5 ಶ್ರೇಷ್ಠ ವರಗಳಿಂದ ನಿನ್ನ ಆಶೆಯನ್ನು ಪೂರ್ಣಗೊಳಿಸುತ್ತಾನೆ; ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರುಗಿ ಬರಮಾಡುತ್ತಾನೆ.
是他賞賜你一生幸福滿盈,是他使你的青春更新如鷹。
6 ಯೆಹೋವನು ನೀತಿಯನ್ನು ಸಾಧಿಸುವವನಾಗಿ, ಕುಗ್ಗಿಹೋದವರೆಲ್ಲರ ನ್ಯಾಯವನ್ನು ಸ್ಥಾಪಿಸುತ್ತಾನೆ.
上主常行正義的工作,為受壓迫者主持公道。
7 ಆತನು ಮೋಶೆಗೆ ತನ್ನ ಮಾರ್ಗವನ್ನೂ, ಇಸ್ರಾಯೇಲರಿಗೆ ತನ್ನ ಕೃತ್ಯಗಳನ್ನೂ ಪ್ರಕಟಿಸಿದನು.
上主曾將自己的道路告知梅瑟,給以色列子民彰顯自己的功績。
8 ಯೆಹೋವನು ಕನಿಕರವೂ, ದಯೆಯೂ, ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು.
上主富於仁慈寬恕,極其慈悲,遲於發怒。
9 ಆತನು ಯಾವಾಗಲೂ ತಪ್ಪು ಹುಡುಕುವವನಲ್ಲ; ನಿತ್ಯವೂ ಕೋಪಿಸುವವನಲ್ಲ.
他決不會常常責問,也決不會世世憤恨。
10 ೧೦ ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ.
他沒有按我們的罪惡對待我們,也沒有照我們的過犯報復我們。
11 ೧೧ ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ.
就如上天距離下地有多麼高,他待敬畏他者的慈愛也多高;
12 ೧೨ ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ, ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.
就如東方距離西方有多麼遠,他使我們的罪離我們也多遠;
13 ೧೩ ತಂದೆಯು ಮಕ್ಕಳನ್ನು ಕನಿಕರಿಸುವಂತೆ, ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.
就如父親怎樣憐愛自己兒女們,上主也怎樣憐愛敬畏自己的人們。
14 ೧೪ ನಾವು ರೂಪಗೊಂಡಿದ್ದನ್ನು ಆತನು ಬಲ್ಲನು; ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ.
他原知道我們怎樣形成,也記得我們不過是灰塵。
15 ೧೫ ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ.
世人的歲月與青草無異,又像田野的花,茂盛一時,
16 ೧೬ ಗಾಳಿ ಬಡಿಯುತ್ತಲೇ ಅದು ಹೋಗುವುದು; ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ.
只要輕風吹過,他就不復存在,沒有人認得出他原有的所在。
17 ೧೭ ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.
但上主的慈愛永遠臨於敬畏他的人,他的正義永遠臨於他們的子子孫孫:
18 ೧೮ ಆತನ ನಿಬಂಧನೆಗಳನ್ನು ಕೈಕೊಂಡು, ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು.
就是臨於那些遵守他盟約的人,和那些懷念並履行他誡命的人。
19 ೧೯ ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ.
上主在天上立定了自己的寶位,天下的萬物都屬他的王權統治。
20 ೨೦ ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.
上主的眾天使,請你們讚美上主,你們是執行他命令的大能臣僕,又是服從上主聖言的聽命公侯;
21 ೨೧ ಆತನ ಸೈನ್ಯಗಳೇ, ಆತನ ಚಿತ್ತವನ್ನು ನೆರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ.
上主的眾天使,請讚美上主,您們是奉行祂旨意的忠僕,
22 ೨೨ ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ, ಯೆಹೋವನನ್ನು ಕೊಂಡಾಡಿರಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು.
上主所有的一切受造物,在祂權限所達的各處,請您們大家都讚美上主。我的靈魂請您讚美上主!

< ಕೀರ್ತನೆಗಳು 103 >