< ಕೀರ್ತನೆಗಳು 103 >
1 ೧ ದಾವೀದನ ಕೀರ್ತನೆ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.
to/for David to bless soul my [obj] LORD and all entrails: among my [obj] name holiness his
2 ೨ ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.
to bless soul my [obj] LORD and not to forget all recompense his
3 ೩ ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ,
[the] to forgive to/for all iniquity: crime your [the] to heal to/for all disease your
4 ೪ ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ, ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.
[the] to redeem: redeem from Pit: hell life your [the] to crown you kindness and compassion ()
5 ೫ ಶ್ರೇಷ್ಠ ವರಗಳಿಂದ ನಿನ್ನ ಆಶೆಯನ್ನು ಪೂರ್ಣಗೊಳಿಸುತ್ತಾನೆ; ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರುಗಿ ಬರಮಾಡುತ್ತಾನೆ.
[the] to satisfy in/on/with good ornament your to renew like/as eagle youth your
6 ೬ ಯೆಹೋವನು ನೀತಿಯನ್ನು ಸಾಧಿಸುವವನಾಗಿ, ಕುಗ್ಗಿಹೋದವರೆಲ್ಲರ ನ್ಯಾಯವನ್ನು ಸ್ಥಾಪಿಸುತ್ತಾನೆ.
to make: do righteousness LORD and justice to/for all to oppress
7 ೭ ಆತನು ಮೋಶೆಗೆ ತನ್ನ ಮಾರ್ಗವನ್ನೂ, ಇಸ್ರಾಯೇಲರಿಗೆ ತನ್ನ ಕೃತ್ಯಗಳನ್ನೂ ಪ್ರಕಟಿಸಿದನು.
to know way: conduct his to/for Moses to/for son: descendant/people Israel wantonness his
8 ೮ ಯೆಹೋವನು ಕನಿಕರವೂ, ದಯೆಯೂ, ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು.
compassionate and gracious LORD slow face: anger and many kindness
9 ೯ ಆತನು ಯಾವಾಗಲೂ ತಪ್ಪು ಹುಡುಕುವವನಲ್ಲ; ನಿತ್ಯವೂ ಕೋಪಿಸುವವನಲ್ಲ.
not to/for perpetuity to contend and not to/for forever: enduring to keep
10 ೧೦ ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ.
not like/as sin our to make: do to/for us and not like/as iniquity: crime our to wean upon us
11 ೧೧ ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ.
for like/as to exult heaven upon [the] land: country/planet to prevail kindness his upon afraid his
12 ೧೨ ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ, ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.
like/as to remove east from west to remove from us [obj] transgression our
13 ೧೩ ತಂದೆಯು ಮಕ್ಕಳನ್ನು ಕನಿಕರಿಸುವಂತೆ, ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.
like/as to have compassion father upon son: child to have compassion LORD upon afraid his
14 ೧೪ ನಾವು ರೂಪಗೊಂಡಿದ್ದನ್ನು ಆತನು ಬಲ್ಲನು; ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ.
for he/she/it to know intention our to remember for dust we
15 ೧೫ ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ.
human like/as grass day his like/as flower [the] land: country so to blossom
16 ೧೬ ಗಾಳಿ ಬಡಿಯುತ್ತಲೇ ಅದು ಹೋಗುವುದು; ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ.
for spirit: breath to pass in/on/with him and nothing he and not to recognize him still place his
17 ೧೭ ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.
and kindness LORD from forever: enduring and till forever: enduring upon afraid his and righteousness his to/for son: child son: child
18 ೧೮ ಆತನ ನಿಬಂಧನೆಗಳನ್ನು ಕೈಕೊಂಡು, ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು.
to/for to keep: obey covenant his and to/for to remember precept his to/for to make: do them
19 ೧೯ ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ.
LORD in/on/with heaven to establish: establish throne his and royalty his in/on/with all to rule
20 ೨೦ ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.
to bless LORD messenger: angel his mighty man strength to make: do word his to/for to hear: obey in/on/with voice word his
21 ೨೧ ಆತನ ಸೈನ್ಯಗಳೇ, ಆತನ ಚಿತ್ತವನ್ನು ನೆರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ.
to bless LORD all army his to minister him to make: do acceptance his
22 ೨೨ ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ, ಯೆಹೋವನನ್ನು ಕೊಂಡಾಡಿರಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು.
to bless LORD all deed: work his in/on/with all place dominion his to bless soul my [obj] LORD